ಮತ್ತೆ Moto G45 5G ಸೇಲ್ ಶುರು: ಕಡಿಮೆ ಬೆಲೆ.. ಜೊತೆಗೆ ಭರ್ಜರಿ ಡಿಸ್ಕೌಂಟ್!
ಮೊಟೊರೊಲಾ (Motorola) ಕಂಪನಿಯ ಮೊಟೊ G45 5G (Moto G45 5G) ಫೋನ್ ಇತ್ತೀಚೆಗೆ ಭಾರತದಲ್ಲಿ ಬಿಡುಗಡೆಯಾಗಿದೆ. ಇದು Moto 'G' ಸರಣಿಯ ಮತ್ತೊಂದು ಬಜೆಟ್ ಸ್ಮಾರ್ಟ್‌ಫೋನ್ ಆಗಿದೆ. ಈಗಾಗಲೇ, ಮಾರುಕಟ್ಟೆಯಲ್ಲಿ ಭಾರೀ ಸದ್ದು ಮಾಡಿದೆ. ವಿಶೇಷವೆಂದರೆ, ಈ ಮೊಬೈಲ್ ಇಂದು (ಸೆಪ್ಟೆಂಬರ್ 4) ಫ್ಲಿಪ್‌ಕಾರ್ಟ್ ಇ ಕಾಮರ್ಸ್ ತಾಣದ ಮೂಲಕ ಮತ್ತೆ ಮಾರಾಟ ಪ್ರಾರಂಭಿಸಿದೆ. ಈ ಫೋನಿನ ಬೆಲೆ, ವೈಶಿಷ್ಟ್ಯಗಳು ಮತ್ತು ಕಂಪನಿಯು ಯಾವೆಲ್ಲಾ ಆಫರ್‌ಗಳನ್ನು ಘೋಷಿಸಿದೆ ಎನ್ನುವುದನ್ನು ತಿಳಿಯೋಣ ಬನ್ನಿ.
ಮೊಟೊ ಮೊಬೈಲ್‌ಗಳನ್ನು ಗ್ರಾಹಕರು ಮುಗಿಬಿದ್ದು ಖರೀದಿಸುತ್ತಾರೆ. ಇದೀಗ, ಮೊಟೊ G45 5G ಖರೀದಿಗೆ ಉತ್ಸುಕರಾಗಿದ್ದಾರೆ. ಇದು 6.5 ಇಂಚಿನ ಡಿಸ್ಲ್ಪೇಯನ್ನು ಹೊಂದಿದೆ. ಸ್ನಾಪ್‌ಡ್ರಾಗನ್ 6s Gen 3 SoC ಪ್ರೊಸೆಸರ್ ಪಡೆದಿದೆ. 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ, 16 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಮತ್ತು 5000mAh ಬ್ಯಾಟರಿ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ. ನೀವು, ಬಜೆಟ್ ಬೆಲೆಯಲ್ಲಿ ಉತ್ತಮ ಫೋನ್ ಹುಡುಕುತ್ತಿದ್ದರೆ ಮೊಟೊ G45 5G ಉತ್ತಮ ಆಯ್ಕೆಯಾಗಿದೆ.

ಮೊಟೊ G45 5G ಫೋನಿನ ಬೆಲೆ
4GB + 128GB ಸ್ಟೋರೇಜ್ ಬೆಲೆ = 10,999 ರೂ.
8GB + 128GB ಸ್ಟೋರೇಜ್ ಬೆಲೆ = 12,999 ರೂ.
ಮೊಟೊ G45 5G ಫೋನನ್ನು ಎರಡು ಸ್ಟೋರೇಜ್ ರೂಪಾಂತರಗಳಲ್ಲಿ ಬಿಡುಗಡೆ ಮಾಡಲಾಗಿದೆ. ಈ ಫೋನಿನ 4GB ಮತ್ತು 128GB ಸ್ಟೋರೇಜ್ ಬೆಲೆ 10,999 ರೂ.ಗೆ ಲಭ್ಯವಿದೆ. 8GB ಮತ್ತು 128GB ಸ್ಟೋರೇಜ್ ಬೆಲೆ 12,999 ರೂ. ಇದೆ. ಈ ಫೋನ್ ಮೂರು ಬಣ್ಣ ಆಯ್ಕೆಗಳಲ್ಲಿ ಖರೀದಿಗೆ ಲಭ್ಯವಿದೆ. ವಿವಾ ಮೆಜೆಂಟಾ, ಬ್ರಿಲಿಯಂಟ್ ಬ್ಲೂ ಮತ್ತು ಬ್ರಿಲಿಯಂಟ್ ಗ್ರೀನ್ ಬಣ್ಣಗಳಲ್ಲಿ ಮಾರಾಟವಾಗಲಿದೆ.
ಮೊಟೊ G45 5G ಫೋನಿನ ಡಿಸ್ಕೌಂಟ್ ಬೆಲೆ
4GB + 128GB ಸ್ಟೋರೇಜ್ ಬೆಲೆ = 9,999 ರೂ.
8GB + 128GB ಸ್ಟೋರೇಜ್ ಬೆಲೆ = 11,999 ರೂ.
ಮೊಟೊ G45 5G ಫೋನ್ ಫ್ಲಿಪ್‌ಕಾರ್ಟ್, Motorola.in ಮತ್ತು ಪ್ರಮುಖ ಚಿಲ್ಲರೆ ಅಂಗಡಿಗಳಲ್ಲಿ ಖರೀದಿಸಬಹುದು. ಕಂಪನಿಯು ಈ ಫೋನ್ ಖರೀದಿ ಮೇಲೆ ಕೆಲವು ಬ್ಯಾಂಕ್ ಆಫರ್‌ಗಳನ್ನು ನೀಡುತ್ತಿದೆ. ಆಕ್ಸಿಸ್ ಬ್ಯಾಂಕ್, ಐಡಿಎಫ್‌ಸಿ ಫಸ್ಟ್ ಬ್ಯಾಂಕ್ ಕ್ರೆಡಿಟ್ ಕಾರ್ಡ್ ಮತ್ತು ಕ್ರೆಡಿಟ್ ಕಾರ್ಡ್ ಇಎಂಐ ವಹಿವಾಟುಗಳ ಮೇಲೆ 1,000 ರೂ.ಗಳ ಡಿಸ್ಕೌಂಟ್ ಘೋಷಿಸಲಾಗಿದೆ. ರಿಯಾಯಿತಿಯೊಂದಿಗೆ ಈ ಫೋನನ್ನು ಕ್ರಮವಾಗಿ 9,999 ರೂ. ಮತ್ತು 11,999 ರೂ.ಗೆ ಖರೀದಿಸಬಹುದು.

ಮೊಟೊ G45 5G ಫೋನಿನ ಫೀಚರ್ಸ್
ಮೊಟೊ G45 5G ಫೋನ್ 120Hz ರಿಫ್ರೆಶ್ ದರದೊಂದಿಗೆ 6.5 ಇಂಚಿನ ಡಿಸ್ಲ್ಪೇಯನ್ನು ಹೊಂದಿದೆ. ಇದು 500 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್, 1600x720 ಪಿಕ್ಸೆಲ್ ರೆಸಲ್ಯೂಶನ್ ಮತ್ತು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 3 ರಕ್ಷಣೆ ಪಡೆದಿದೆ. ಈ ಫೋನ್ ಆಕ್ಟಾ-ಕೋರ್ Qualcomm Snapdragon 6s Gen 3 ಪ್ರೊಸೆಸರ್ ಅನ್ನು ಹೊಂದಿದೆ. ಜೊತೆಗೆ, ಆಂಡ್ರಾಯ್ಡ್ 14 ನಲ್ಲಿ ಕೆಲಸ ಮಾಡಲಿದೆ. ಮೈಕ್ರೊ SD ಜೊತೆಗೆ 1TB ವರೆಗೆ ವಿಸ್ತರಿಸಬಹುದಾದ ಮೆಮೊರಿ ಇದೆ.
ಮೊಟೊ G45 5G ಮೊಬೈಲ್ 50 ಮೆಗಾಪಿಕ್ಸೆಲ್ ಕ್ವಾಡ್ ಪಿಕ್ಸೆಲ್ ಮುಖ್ಯ ಕ್ಯಾಮೆರಾ ಮತ್ತು 2 ಮೆಗಾಪಿಕ್ಸೆಲ್ ಮ್ಯಾಕ್ರೋ ಕ್ಯಾಮೆರಾವನ್ನು ಹೊಂದಿದೆ. ಸೆಲ್ಫಿಗಳು ಮತ್ತು ವಿಡಿಯೋ ಕರೆಗಳಿಗಾಗಿ, 16 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾವನ್ನು ಹೊಂದಿದೆ. ಈ ಹೊಸ ಮೊಟೊ ಫೋನ್ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 18W ಚಾರ್ಜಿಂಗ್ ಬೆಂಬಲದೊಂದಿಗೆ ಬರತ್ತದೆ. ಜೊತೆಗೆ, ಟರ್ಬೋಪವರ್ ವೇಗದ ಚಾರ್ಜಿಂಗ್ ತಂತ್ರವನ್ನು ಸಹ ಒಳಗೊಂಡಿದೆ.
ಮೊಟೊ G45 5G ಫೋನ್ ನೀರು ಮತ್ತು ಧೂಳು ನಿರೋಧಕ IP52 ರೇಟಿಂಗ್ ಪಡೆದಿದೆ. 162.7 x 74.64 x 8.03mm ದಪ್ಪ ಮತ್ತು 18 ಗ್ರಾಂ ತೂಕ ಹೊಂದಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ, ಇದು ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್, ಡಾಲ್ಬಿ ಅಟ್ಮಾಸ್ ಸ್ಟೀರಿಯೋ ಸ್ಪೀಕರ್‌ಗಳು, 13 5G ಬ್ಯಾಂಡ್‌ಗಳು, ಡ್ಯುಯಲ್ ಸಿಮ್ 5G, ಬ್ಲೂಟೂತ್ 5.2, ವೈ-ಫೈ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ.


Click it and Unblock the Notifications








