ಈ ಸ್ಟೈಲಿಶ್ ಫೋನ್ ಬೆಲೆ ಇಳಿಕೆ!..ಅಧಿಕ RAM ಹಾಗೂ ಬಿಗ್ ಬ್ಯಾಟರಿ ಸೌಲಭ್ಯ ಇದೆ!
ಜನಪ್ರಿಯ ಇ ಕಾಮರ್ಸ್ ತಾಣ ಫ್ಲಿಪ್‌ಕಾರ್ಟ್ ಏನಾದರೊಂದು ಮಾರಾಟ ಮೇಳ ಆಯೋಜಿಸುವ ಮೂಲಕ ಗ್ರಾಹಕರನ್ನು ಆಕರ್ಷಿಸುತ್ತದೆ. ಇದೀಗ ಫ್ಲಿಪ್‌ಕಾರ್ಟ್ ಸಂಸ್ಥೆಯು 'ಸೂಪರ್ ವ್ಯಾಲ್ಯೂ ಸೇಲ್' ಸೇಲ್ ಮೇಳವನ್ನು ಲೈವ್ ಮಾಡಿದ್ದು, ಇದರಲ್ಲಿ ಕೆಲವು ಸ್ಮಾರ್ಟ್‌ಫೊನ್‌ಗಳಿಗೆ ಅತ್ಯಾಕರ್ಷಕ ಕೊಡುಗೆ ತಿಳಿಸಿದೆ. ಈ ಸೇಲ್‌ನಲ್ಲಿ ಮೊಟೊರೊಲಾ ಸಂಸ್ಥೆಯ ಮೊಟೊರೊಲಾ G54 5G ಫೋನ್ ವಾವ್ ಎನಿಸುವ ಆಫರ್ ಪಡೆದಿದೆ.
ಹೌದು, ಫ್ಲಿಪ್‌ಕಾರ್ಟ್ ಇ ಕಾಮರ್ಸ್ ಸಂಸ್ಥೆಯ 'ಸೂಪರ್ ವ್ಯಾಲ್ಯೂ ಸೇಲ್' ನಲ್ಲಿ ಮೊಟೊರೊಲಾ G54 5G ಮೊಬೈಲ್ ಬರೋಬ್ಬರಿ ಶೇ. 22% ರಷ್ಟು ನೇರ ರಿಯಾಯಿತಿ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಈ ಫೋನಿನ 8 GB RAM + 128 GB ವೇರಿಯಂಟ್ 13,999ರೂ. ಗಳ ಆಫರ್ ಬೆಲೆಯಲ್ಲಿ ಖರೀದಿಗೆ ಸಿಗಲಿದೆ. ಇದರೊಂದಿಗೆ ಕೆಲವು ಬ್ಯಾಂಕ್ ಮತ್ತು ಇತರೆ ಆಫರ್ ಪಡೆದುಕೊಂಡರೆ, ಮತ್ತಷ್ಟು ಡಿಸ್ಕೌಂಟ್‌ನಲ್ಲಿ ಫೋನ್ ಖರೀದಿ ಮಾಡಬಹುದಾಗಿದೆ.

ಅಂದಹಾಗೆ ಮೊಟೊರೊಲಾದ ಈ 5G ಮೊಬೈಲ್ ಮೀಡಿಯಾ ಟೆಕ್ ಡೈಮೆನ್ಸಿಟಿ 7020 SoC ಪ್ರೊಸೆಸರ್ ಸಾಮರ್ಥ್ಯದಲ್ಲಿ ಕೆಲಸ ಮಾಡಲಿದ್ದು, ಇದಕ್ಕೆ ಪೂರಕವಾಗಿ ಎರಡು ಸ್ಟೋರೇಜ್ ವೇರಿಯಂಟ್ ಆಯ್ಕೆ ಪಡೆದುಕೊಂಡಿದೆ. ಹಾಗೆಯೇ ಈ ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಒಳಗೊಂಡಿದ್ದು, ಮೊದಲ ಕ್ಯಾಮೆರಾ 50 ಮೆಗಾ ಪಿಕ್ಸಲ್ ಸೆನ್ಸಾರ್ ಅನ್ನು ಪಡೆದಿದೆ. ಹಾಗಾದರೆ ಮೊಟೊರೊಲಾ G54 5G ಮೊಬೈಲ್ ಇತರೆ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಮೊಟೊರೊಲಾ G54 5G ಸ್ಮಾರ್ಟ್‌ಫೋನ್ ಫೀಚರ್ಸ್
ಮೊಟೊರೊಲಾದ ಈ ಫೋನ್ 6.5 ಇಂಚಿನ ಫುಲ್ ಹೆಚ್‌ಡಿ+ LED ಡಿಸ್‌ಪ್ಲೇ ಅನ್ನು ಪಡೆದಿದ್ದು, ಹಾಗೆಯೇ 2400 x 1080 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯ ಒಳಗೊಂಡಿದೆ. ಇದರೊಂದಿಗೆ HDR10 ಸಪೋರ್ಟ್ ಹೊಂದಿದ್ದು, 1000 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಆಯ್ಕೆ ಪಡೆದುಕೊಂಡಿದೆ. ಇದರ ಜೊತೆಗೆ ಪಾಂಡಾ ಗ್ಲಾಸ್ ಮೂಲಕ ರಕ್ಷಣೆ ಹೊಂದಿದ್ದು, ಇದು ಗೊರಿಲ್ಲಾ ಗ್ಲಾಸ್‌ನಂತೆ ಅಲ್ಯೂಮಿನೋಸಿಲಿಕೇಟ್ ಗ್ಲಾಸ್ ಆಗಿದೆ.
ಇನ್ನು ಮೊಟೊರೊಲಾ G54 5G ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 7020 ಪ್ರೊಸೆಸರ್‌ನಲ್ಲಿ ಕಾರ್ಯ ನಿರ್ವಹಿಸುತ್ತದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 14 ಓಎಸ್ ಅಪ್‌ಡೇಟ್‌ಗೂ ಸಪೋರ್ಟ್ ಹೊಂದಿದೆ. ಈ ಫೋನ್ ಎರಡು ಸ್ಟೋರೇಜ್ ಆಯ್ಕೆಗಳನ್ನು ಪಡೆದಿದ್ದು, ಅವುಗಳು ಕ್ರಮವಾಗಿ 8GB RAM + 128GB ಹಾಗೂ 12GB RAM + 256GB ಆಂತರೀಕ ಸ್ಟೋರೇಜ್ ಆಯ್ಕೆ ಪಡೆದಿದೆ.
ಅಂದಹಾಗೆ ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ರಚನೆ ಪಡೆದಿದ್ದು, 50 ಮೆಗಾ ಪಿಕ್ಸೆಲ್ OIS ಪ್ರಾಥಮಿಕ ಕ್ಯಾಮೆರಾ ಹಾಗೂ ಆಟೋ ಫೋಕಸ್‌ಗಾಗಿ 8 ಮೆಗಾ ಪಿಕ್ಸೆಲ್ ಎರಡನೇ ಕ್ಯಾಮೆರಾ ಆಯ್ಕೆ ಪಡೆದಿದೆ. ಆದರೆ ಈ ವಿಭಾಗದಲ್ಲಿ ಹೆಚ್ಚುವರಿ ಮ್ಯಾಕ್ರೋ ಅಥವಾ ಡೆಪ್ತ್ ಸೆನ್ಸರ್ ಆಯ್ಕೆ ಪಡೆದಿಲ್ಲ. ಹಾಗೆಯೇ ಸೆಲ್ಫಿ ಉದ್ದೇಶಕ್ಕೆ 16 ಮೆಗಾ ಪಿಕ್ಸೆಲ್ ಕ್ಯಾಮೆರಾ ಆಯ್ಕೆ ಒದಗಿಸಲಾಗಿದೆ.
ಈ ಫೋನ್ 33W ಚಾರ್ಜಿಂಗ್ ಸಪೋರ್ಟ್ ನೊಂದಿಗೆ 6000 mAh ಸಾಮರ್ಥ್ಯದ ಬ್ಯಾಟರಿಯಿಂದ ಪ್ಯಾಕ್ ಆಗಿದ್ದು, ಈ ಮೂಲಕ ದೀರ್ಘ ಬ್ಯಾಕಪ್ ನೀಡಲಿದೆ. ಇದು 8GB RAM ಹಾಗೂ 128GB ಸ್ಟೋರೇಜ್ ವೇರಿಯಂಟ್ ಹಾಗೂ 12GB RAM ಜೊತೆಗೆ 256GB ಸ್ಟೋರೇಜ್ ವೇರಿಯಂಟ್ ಆಯ್ಕೆ ಪಡೆದಿದೆ.


Click it and Unblock the Notifications








