Motorola: 108MP ಕ್ಯಾಮೆರಾ ಆಯ್ಕೆಯ ಈ ಮೊಟೊರೊಲಾ ಫೋನ್‌ಗೆ ಬಿಗ್ ಆಫರ್!
ಮೊಟೊರೊಲಾ (Motorola) ಫೋನ್‌ಗಳು ತನ್ನ ವಿಶೇಷ ಫೀಚರ್ಸ್ ಆಯ್ಕೆ ಮೂಲಕ ಜನರನ್ನು ಆಕರ್ಷಿಸುತ್ತವೆ. ಅದರಂತೆ ಪ್ರಮುಖ ಇ-ಕಾಮರ್ಸ್ ಸೈಟ್ ನಲ್ಲಿ ಬಹುಬೇಡಿಕೆಯ ಸ್ಮಾರ್ಟ್‌ಫೋನ್‌ವೊಂದಕ್ಕೆ ಭರ್ಜರಿ ಆಫರ್ ನೀಡಲಾಗಿದ್ದು, ಈ ಮೂಲಕ ಭಾರೀ ಹಣ ಉಳಿತಾಯ ಮಾಡಬಹುದಾಗಿದೆ.
ಹೌದು, ಮೊಟೊರೊಲಾ G60 ಸ್ಮಾರ್ಟ್‌ಫೋನ್‌ಗೆ (Motorola G60 Smartphone) ಇದೀಗ ಬಂಫರ್ ಆಫರ್ ಘೋಷಣೆ ಮಾಡಲಾಗಿದೆ. ಈ ಸ್ಮಾರ್ಟ್‌ಫೋನ್ 128 GB ಇಂಟರ್ ಸ್ಟೋರೇಜ್ ಆಯ್ಕೆ ಪಡೆದಿದ್ದು, ಉತ್ತಮವಾಗಿ ಕೆಲಸ ಮಾಡಲಿದೆ. ಇದರೊಂದಿಗೆ 6000 mAh ಸಾಮರ್ಥ್ಯದ ಬ್ಯಾಟರಿ ಆಯ್ಕೆ ಪಡೆದಿದೆ. ಹಾಗಿದ್ರೆ ಈ ಸ್ಮಾರ್ಟ್‌ಫೋನ್‌ಗೆ ಇರುವ ಆಫರ್ ಬೆಲೆ ಹಾಗೂ ಇದರ ಪ್ರಮುಖ ಫೀಚರ್ಸ್ ಏನು ಅನ್ನೋ ಮಾಹಿತಿ ಇಲ್ಲಿದೆ ನೋಡಿ.

ಮೊಟೊರೊಲಾ G60 ಸ್ಮಾರ್ಟ್‌ಫೋನ್ ಆಫರ್ ಮಾಹಿತಿ: ಈ ಸ್ಮಾರ್ಟ್‌ಫೋನ್ 21,999 ರೂ.ಗಳ ಸಾಮಾನ್ಯ ಬೆಲೆ ಹೊಂದಿದ್ದು, ನೀವೀಗ ಇದನ್ನು 14,999 ರೂ.ಗಳಿಗೆ ಖರೀದಿ ಮಾಡಬಹುದಾಗಿದೆ. ಯಾಕೆಂದರೆ ಈ ಫೋನ್ ಮೇಲೆ ಭರ್ಜರಿ 31% ರಿಯಾಯಿತಿ ನೀಡಲಾಗಿದೆ. ಅಲ್ಲದೆ ನೀವು ಬ್ಯಾಂಕ್ ಆಫರ್ ಬಳಕೆ ಮಾಡಿಕೊಂಡು ಇನ್ನೂ ಕಡಿಮೆ ಬೆಲೆಗೆ ಖರೀದಿ ಮಾಡಬಹುದಾಗಿದೆ.
ಬ್ಯಾಂಕ್ ಆಫರ್ ವಿಚಾರಕ್ಕೆ ಬಂದರೆ ಈ ಫೋನ್ ಅನ್ನು ಫ್ಲಿಪ್‌ಕಾರ್ಟ್ ಆಕ್ಸಿಸ್ ಬ್ಯಾಂಕ್ ಕಾರ್ಡ್ ಬಳಕೆ ಮಾಡಿಕೊಂಡು ಖರೀದಿ ಮಾಡಿದ್ರೆ 5% ಕ್ಯಾಶ್‌ಬ್ಯಾಕ್ ಸಿಗಲಿದೆ. ಇದರೊಂದಿಗೆ ನೀವು ಎಸಿ ಖರೀದಿ ಮಾಡಲು ಇಚ್ಚಿಸಿದ್ರೆ ಅದರಲ್ಲೂ ಹೆಚ್ಚುವರಿ ಆಫರ್ ನೀಡಲಾಗುತ್ತದೆ. ಇಷ್ಟು ಹಣ ನೀಡಿ ಖರೀದಿ ಮಾಡಲು ಆಗುವುದಿಲ್ಲ ಎಂದಾದರೆ ನೀವು ತಿಂಗಳಿಗೆ 528ರೂ.ಗಳ ಇಎಮ್‌ಐ ಆಯ್ಕೆ ಮೂಲಕವೂ ಖರೀದಿ ಮಾಡಬಹುದಾಗಿದೆ.

ಮೊಟೊರೊಲಾ G60 ಸ್ಮಾರ್ಟ್‌ಫೋನ್ ಡಿಸ್‌ಪ್ಲೇ ಮಾಹಿತಿ: ಈ ಸ್ಮಾರ್ಟ್‌ಫೋನ್ 6.8 ಇಂಚಿನ IPS LCD ಡಿಸ್‌ಪ್ಲೇ ಹೊಂದಿದ್ದು, ಇದು 1080 x 2460 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯ ಹಾಗೂ 120Hz ರಿಫ್ರೆಶ್ ರೇಟ್, HDR10 ಸೌಲಭ್ಯದೊಂದಿಗೆ ಪ್ರೀಮಿಯಂ ಅನುಭವ ನೀಡಲಿದೆ.
ಮೊಟೊರೊಲಾ G60 ಸ್ಮಾರ್ಟ್‌ಫೋನ್ ಪ್ರೊಸೆಸರ್ ವಿವರ: ಈ ಫೋನ್ ಆಂಡ್ರಾಯ್ಡ್ 11 ಓಎಸ್‌ನಲ್ಲಿ ರನ್ ಆಗಲಿದ್ದು, ಆಂಡ್ರಾಯ್ಡ್ 12 ಗೆ ಅಪ್‌ಗ್ರೇಡ್ ಮಾಡಬಹುದಾಗಿದೆ. ಇದರೊಂದಿಗೆ ಕ್ವಾಲ್ಕಾಮ್ SM7150 ಸ್ನಾಪ್ಡ್ರಾಗನ್ 732G (8 nm) ಪ್ರೊಸೆಸರ್ ಬಲ ಪಡೆದಿದ್ದು, ಅಡ್ರಿನೊ 618 ಗ್ರಾಫಿಕ್ಸ್ ಕಾರ್ಡ್ ಬೆಂಬಲದೊಂದಿಗೆ ಉತ್ತಮವಾಗಿ ಕಾರ್ಯನಿರ್ವಹಿಸಲಿದೆ. ಅಲ್ಲದೆ
ಆಫರ್ ಬೆಲೆಗೆ ಲಭ್ಯ ಇರುವ ಫೋನ್ 6GB RAM ಹಾಗೂ 128GB ಇಂಟರ್ ಸ್ಟೋರೇಜ್ ಆಯ್ಕೆ ಪಡೆದಿದ್ದು, ಹೆಚ್ಚುವರಿ ಸ್ಟೋರೇಜ್‌ಗಾಗಿ ಮೈಕ್ರೋ ಎಸ್‌ಡಿ ಕಾರ್ಡ್‌ಗೆ ಬೆಂಬಲ ನೀಡಲಿದೆ.
ಮೊಟೊರೊಲಾ G60 ಸ್ಮಾರ್ಟ್‌ಫೋನ್ ಕ್ಯಾಮೆರಾ ರಚನೆ: ಈ ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಆಯ್ಕೆ ಪಡೆದಿದೆ. ಅದರಲ್ಲಿ ಪ್ರಮುಖವಾಗಿ 108 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಹಾಗೂ 8 ಮೆಗಾಪಿಕ್ಸೆಲ್ ಅಲ್ಟ್ರಾವೈಡ್ ಸೆನ್ಸರ್ ಮತ್ತು 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸರ್ ಹೊಂದಿದ್ದು, ಈ ಕ್ಯಾಮೆರಾಗಳು ಎಲ್‌ಇಡಿ ಫ್ಲ್ಯಾಶ್, ಹೆಚ್‌ಡಿಆರ್, ಪನೋರಮಾ ಫೀಚರ್ಸ್ ಆಯ್ಕೆ ಪಡೆದಿವೆ. ಇದರೊಂದಿಗೆ 32 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಈ ಫೋನ್‌ನಲ್ಲಿ ಕಾಣಬಹುದಾಗಿದೆ.

ಮೊಟೊರೊಲಾ G60 ಸ್ಮಾರ್ಟ್‌ಫೋನ್ ಬ್ಯಾಟರಿ ಹಾಗೂ ಇತರೆ: ಈ ಫೋನ್ 6000 mAh ಸಾಮರ್ಥ್ಯದ ಬ್ಯಾಟರಿ ಆಯ್ಕೆ ಪಡೆದಿದ್ದು, 20W ವೈರ್ಡ ಚಾರ್ಜಿಂಗ್ ಬೆಂಬಲ ಪಡೆದಿದೆ. ಒದರೊಂದಿಗೆ 3.5 ಎಂಎಂ ಜ್ಯಾಕ್, ವೈ-ಫೈ 802.11 a/b/g/n/ac, ಡ್ಯುಯಲ್-ಬ್ಯಾಂಡ್, ವೈ-ಫೈ ಡೈರೆಕ್ಟ್, ಬ್ಲೂಟೂತ್ ಆವೃತ್ತಿ 5.0, A2DP, LE, ಜಿಪಿಎಸ್, ಗ್ಲೋನಾಸ್, ಗೆಲಿಲಿಯೋ ಸ್ಥಾನೀಕರಣ ಸೇರಿದಂತೆ ಅನೇಕ ಕನೆಕ್ಟಿವಿಟಿ ಫೀಚರ್ಸ್ ಪಡೆದಿದೆ.


Click it and Unblock the Notifications








