ಮೊಟೊರೊಲಾದ ಈ 5G ಫೋನಿಗೆ ಬಿಗ್ ಡಿಸ್ಕೌಂಟ್!..ಇದರ ಡಿಸೈನ್ ಸೂಪರ್!
ಮೊಟೊರೊಲಾ ಮೊಬೈಲ್ ಕಂಪನಿಯು ದೇಶಿಯ ಮಾರುಕಟ್ಟೆಯಲ್ಲಿ ಇತ್ತೀಚಿಗೆ ಮತ್ತೆ ಮುನ್ನಲೆಯಲ್ಲಿ ಕಾಣಿಸಿಕೊಂಡಿದೆ. ಸಂಸ್ಥೆಯು ಮೊಟೊ G ಸರಣಿಯ ಸ್ಮಾರ್ಟ್‌ಫೋನ್ ಡಿಸೈನ್ ಹಾಗೂ ಫೀಚರ್ಸ್‌ಗಳಿಂದ ಈಗಾಗಲೇ ಸದ್ದು ಮಾಡಿದ್ದು, ಆ ಪೈಕಿ ಮೊಟೊ G62 ಸ್ಮಾರ್ಟ್‌ಫೋನ್ ಕೂಡಾ ಆಕರ್ಷಕ ಎನಿಸಿದೆ. ಸದ್ಯ ಈ ಫೋನ್ ಅಮೆಜಾನ್ ತಾಣದಲ್ಲಿ ಸಖತ್ ರಿಯಾಯಿತಿ ಪಡೆದುಕೊಂಡಿದೆ.
ಹೌದು, ಅಮೆಜಾನ್ ಇ ಕಾಮರ್ಸ್ ತಾಣದಲ್ಲಿ ಮೊಟೊರೊಲಾ G62 (Motorola G62 5G) ಮೊಬೈಲ್ ಶೇ. 24% ರಷ್ಟು ರಿಯಾಯಿತಿ ಪಡೆದಿದೆ. ಈ ಫೋನಿನ 8GB + 128GB ವೇರಿಯಂಟ್ ಸದ್ಯ ಕೊಡುಗೆಯಲ್ಲಿ 18,999ರೂ. ಗಳ ಬಿಗ್ ಡಿಸ್ಕೌಂಟ್ ದರದಲ್ಲಿ ಕಾಣಿಸಿಕೊಂಡಿದೆ. ಇದರೊಂದಿಗೆ ನೋ ಕಾಸ್ಟ್ ಇಎಮ್‌ಐ ಹಾಗೂ ಇತರೆ ರಿಯಾಯಿತಿ ಸೌಲಭ್ಯಗಳು ಕೂಡಾ ಲಭ್ಯ ಆಗಲಿವೆ.

ಅಂದಹಾಗೆ ಈ ಫೋನ್ 6GB + 128GB ಮತ್ತು 8GB + 128GB ಸ್ಟೋರೇಜ್ ವೇರಿಯಂಟ್ ಆಯ್ಕೆಗಳನ್ನು ಪಡೆದಿದೆ. ಹಾಗೆಯೇ ಈ ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 695 SoC ಪ್ರೊಸೆಸರ್ ನಲ್ಲಿ ಕೆಲಸ ನಿರ್ವಹಿಸಲಿದೆ. ಇನ್ನುಳಿದಂತೆ ಈ ಮೊಬೈಲ್‌ನ ಇತರೆ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಮೊಟೊರೊಲಾ G62 - ಫೀಚರ್ಸ್
ಮೊಟೊರೊಲಾ G62 ಮೊಬೈಲ್ 6.5 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಎಲ್‌ಸಿಡಿ ಡಿಸ್‌ಪ್ಲೇ ಅನ್ನು ಪಡೆದಿದ್ದು, ಈ ಡಿಸ್‌ಪ್ಲೇ 1,080x2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಒಳಗೊಂಡಿದೆ. ಇದು 120Hz ರಿಫ್ರೆಶ್ ರೇಟ್ ಅನ್ನು ಹೊಂದಿದ್ದು, 405ppi ಪಿಕ್ಸೆಲ್ ಸಾಂದ್ರತೆಯನ್ನು ಒಳಗೊಂಡಿರುವ ಜೊತೆಗೆ ಈ ಸ್ಮಾರ್ಟ್‌ಫೋನ್ ಡಿಸ್‌ಪ್ಲೇ 20:9 ರಚನೆಯ ಅನುಪಾತದೊಂದಿಗೆ ಪಡೆದಿದೆ.

ಮೊಟೊ G62 ಮೊಬೈಲ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 695 SoC ಪ್ರೊಸೆಸರ್‌ನಲ್ಲಿ ಕೆಲಸ ನಿರ್ವಹಿಸಲಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 12 ಓಎಸ್ ಸಪೋರ್ಟ್ ಪಡೆದಿದೆ. ಹಾಗೆಯೇ 8GB RAM ಮತ್ತು 128GB ಆಂತರೀಕ ಸ್ಟೋರೇಜ್ ಬಲವನ್ನು ಒಳಗೊಂಡಿದೆ. ಇದಲ್ಲದೆ ಮೆಮೊರಿ ಕಾರ್ಡ್ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವ ಆಯ್ಕೆಯನ್ನು ನೀಡಲಿದೆ.
ಮೊಟೊ G62 ಮೊಬೈಲ್ ಟ್ರಿಪಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, ಪ್ರಾಥಮಿಕ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ f/1.8 ಅಪರ್ಚರ್ ಲೆನ್ಸ್ ಅನ್ನು ಹೊಂದಿದೆ. ಇದು ಕ್ವಾಡ್-ಪಿಕ್ಸೆಲ್ ತಂತ್ರಜ್ಞಾನ ಮತ್ತು PDAF ಅನ್ನು ಹೊಂದಿದೆ. ದ್ವಿತೀಯ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಪಡೆದಿದೆ. ಅದೇ ರೀತಿ ತೃತೀಯ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಸೆನ್ಸಾರ್ ಅನ್ನು ಒಳಗೊಂಡಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಪಡೆದಿದೆ.
ಇನ್ನು ಮೊಟೊ G62 ಮೊಬೈಲ್ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಹೊಂದಿದ್ದು, ಇದು 20W ವೇಗದ ಚಾರ್ಜಿಂಗ್ ಟೆಕ್ನಾಲಜಿಯನ್ನು ಒಳಗೊಂಡಿದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ ಡ್ಯುಯಲ್-ಬ್ಯಾಂಡ್ ವೈಫೈ, 5G, 4G LTE, ಬ್ಲೂಟೂತ್ v5.1, 3.5mm ಹೆಡ್‌ಫೋನ್ ಪೋರ್ಟ್ ಮತ್ತು USB ಟೈಪ್-C ಅನ್ನು ಒಳಗೊಂಡಿದೆ.
ಮೊಟೊ G62 ಮೊಬೈಲ್ ಬೇಸ್ ಮಾಡೆಲ್ 6GB RAM + 128GB ಸ್ಟೋರೇಜ್ ರೂಪಾಂತರ ಮತ್ತು 8GB RAM + 128GB ಸ್ಟೋರೇಜ್ ಆವೃತ್ತಿಯ ಆಯ್ಕೆ ಪಡೆದಿದೆ. ಇದು ಫ್ರಾಸ್ಟೆಡ್ ಬ್ಲೂ ಮತ್ತು ಮಿಡ್ನೈಟ್ ಗ್ರೇ ಬಣ್ಣದ ಆಯ್ಕೆಗಳಲ್ಲಿ ಖರೀದಿ ಮಾಡಬಹುದು.


Click it and Unblock the Notifications








