ಮೊಟೊರೊಲಾ ಸಂಸ್ಥೆಯ ಈ ಮೊಬೈಲ್ ಬೆಲೆಯಲ್ಲಿ ಈಗ ಬಿಗ್ ಡಿಸ್ಕೌಂಟ್!
ಪ್ರಮುಖ ಇ ಕಾಮರ್ಸ್ ವೆಬ್‌ಸೈಟ್‌ಗಳಲ್ಲಿ ಒಂದಾದ ಫ್ಲಿಪ್‌ಕಾರ್ಟ್ ಮೊಟೊರೊಲಾ ಸಂಸ್ಥೆಯ ಮೊಟೊರೊಲಾ G62 5G ಸ್ಮಾರ್ಟ್‌ಫೋನಿಗೆ ಈಗ ಭರ್ಜರಿ ರಿಯಾಯಿತಿ ತಿಳಿಸಿದೆ. ಈ ಮೊಬೈಲ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 695 SoC ಪ್ರೊಸೆಸರ್ ಸಾಮರ್ಥ್ಯವನ್ನು ಪಡೆದಿದ್ದು, 8GB RAM ಮತ್ತು 128 GB ಸ್ಟೋರೇಜ್ ಸೌಲಭ್ಯ ಸಹ ಒಳಗೊಂಡು ಗ್ರಾಹಕರನ್ನು ಆಕರ್ಷಿಸಿದೆ.
ಹೌದು, ಫ್ಲಿಪ್‌ಕಾರ್ಟ್ ವೆಬ್‌ಸೈಟ್ ನಲ್ಲಿ ಮೊಟೊರೊಲಾ G62 5G ಫೋನ್ ಶೇ. 32% ರಷ್ಟು ಡಿಸ್ಕೌಂಟ್ ಪಡೆದಿದೆ. ಈ ಫೋನಿನ 8 GB RAM + 128 GB ಸ್ಟೋರೇಜ್ ವೇರಿಯಂಟ್ 16,999ರೂ. ಗಳಿಗೆ ಖರೀದಿ ಮಾಡಲು ಚಾನ್ಸ್ ಇದೆ. ಇದರೊಂದಿಗೆ ಇತರೆ ಕೆಲವು ಆಫರ್‌ಗಳನ್ನು ಸೇರಿದರೆ, ಮತ್ತಷ್ಟು ರಿಯಾತಿಯಿ ಪಡೆಯುವ ಅವಕಾಶ ಸಹ ಇದೆ.

ಮೊಟೊರೊಲಾ G62 5G ಮೊಬೈಲ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 695 SoC ಪ್ರೊಸೆಸರ್ ಸಾಮರ್ಥ್ಯದಲ್ಲಿ ಕಾರ್ಯ ನಿರ್ವಹಿಸುತ್ತದೆ. ಅಲ್ಲದೇ ಈ ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಕೂಡಾ ಹೊಂದಿದ್ದು, 20W ಫಾಸ್ಟ್ ಚಾರ್ಜಿಂಗ್ ಸಪೋರ್ಟ್ ಒಳಗೊಂಡಿದೆ. ಇನ್ನುಳಿದಂತೆ ಮೊಟೊರೊಲಾ G62 5G ಮೊಬೈಲ್‌ನ ಇತರೆ ಫೀಚರ್ಸ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ರಚನೆ ಮತ್ತು ವಿನ್ಯಾಸ
ಮೊಟೊ G62 ಸ್ಮಾರ್ಟ್‌ಫೋನ್ 6.5 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಎಲ್‌ಸಿಡಿ ಡಿಸ್‌ಪ್ಲೇ ಅನ್ನು ಹೊಂದಿದ್ದು, ಈ ಡಿಸ್‌ಪ್ಲೇ 1,080 x 2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದಿದೆ. ಜೊತೆಗೆ ಇದು 120Hz ರಿಫ್ರೆಶ್ ರೇಟ್ ಅನ್ನು ಪಡೆದಿದ್ದು, 405ppi ಪಿಕ್ಸೆಲ್ ಸಾಂದ್ರತೆಯನ್ನು ಹೊಂದಿದೆ. ಅಲ್ಲದೇ ಈ ಮೊಬೈಲ್ ಡಿಸ್‌ಪ್ಲೇ 20:9 ರಚನೆಯ ಅನುಪಾತ ಪಡೆದಿದೆ.
ಪ್ರೊಸೆಸರ್ ಪವರ್
ಮೊಟೊ G62 ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 695 SoC ಪ್ರೊಸೆಸರ್‌ನಲ್ಲಿ ಕೆಲಸ ಮಾಡಲಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 12 ಸಪೋರ್ಟ್ ಸಹ ಪಡೆದಿದೆ. ಇದು 8GB RAM ಮತ್ತು 128GB ಆಂತರೀಕ ಸ್ಟೋರೇಜ್ ಬಲವನ್ನು ಒಳಗೊಂಡಿದೆ. ಹಾಗೆಯೇ ಮೆಮೊರಿ ಕಾರ್ಡ್ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವ ಆಯ್ಕೆಯನ್ನು ಪಡೆದಿದೆ.

ಕ್ಯಾಮೆರಾ ರಚನೆ ಮಾಹಿತಿ
ಈ ಮೊಬೈಲ್ ಟ್ರಿಪಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಹೊಂದಿದ್ದು, ಇದರಲ್ಲಿ ಪ್ರಾಥಮಿಕ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಇದು ಕ್ವಾಡ್-ಪಿಕ್ಸೆಲ್ ತಂತ್ರಜ್ಞಾನ ಮತ್ತು PDAF ಅನ್ನು ಹೊಂದಿದೆ. ಹಾಗೆಯೇ ಇದರ ಸೆಕೆಂಡರಿ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದ್ದು, ಇನ್ನು ತೃತೀಯ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಸೆನ್ಸಾರ್ ಅನ್ನು ಒಳಗೊಂಡಿದೆ. ಇದರ ಜೊತೆಗೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಅನ್ನು ಪಡೆದಿದೆ.
ಬ್ಯಾಟರಿ ಸಾಮರ್ಥ್ಯದ ಮಾಹಿತಿ
ಮೊಟೊ G62 ಮೊಬೈಲ್ 5,000mAh ಸಾಮರ್ಥ್ಯದ ಬ್ಯಾಟರಿ ಅನ್ನು ಪಡೆದಿದ್ದು, ಈ ಫೋನ್ 20W ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ಸಹ ಪಡೆದಿದೆ. ಹಾಗೆಯೇ ಕನೆಕ್ಟಿವಿಟಿ ಆಯ್ಕೆಗಳಲ್ಲಿ ಡ್ಯುಯಲ್-ಬ್ಯಾಂಡ್ ವೈಫೈ, 5G, 4G LTE, ಬ್ಲೂಟೂತ್ v5.1, 3.5mm ಹೆಡ್‌ಫೋನ್ ಪೋರ್ಟ್ ಮತ್ತು USB ಟೈಪ್-C ಅನ್ನು ಒಳಗೊಂಡಿದೆ.
ಮೊಟೊ G62 ಕಲರ್ ಹಾಗೂ ಮೆಮೊರಿ
ಮೊಟೊ G62 ಮೊಬೈಲ್ 6GB RAM + 128GB ಸ್ಟೋರೇಜ್ ವೇರಿಯಂಟ್ ಹಾಗೂ 8GB RAM + 128GB ಸ್ಟೋರೇಜ್ ವೇರಿಯಂಟ್ ಆಯ್ಕೆ ಪಡೆದಿದೆ. ಹಾಗೆಯೇ ಈ ಫೋನ್ ಫ್ರಾಸ್ಟೆಡ್ ಬ್ಲೂ ಮತ್ತು ಮಿಡ್ನೈಟ್ ಗ್ರೇ ಬಣ್ಣದ ಆಯ್ಕೆಗಳ ಆಯ್ಕೆಯಲ್ಲಿ ಖರೀದಿಸಬಹುದಾಗಿದೆ.


Click it and Unblock the Notifications








