ಹೊಸ ಫೋನ್ ಖರೀದಿಸುವ ಪ್ಲ್ಯಾನ್ ಇದ್ರೆ, ಈ ಆಫರ್ ಬಿಡಬೇಡಿ!
ಸದ್ಯ ನೀವೇನಾದರೂ ಆಫರ್‌ನಲ್ಲಿ ಹೊಸ ಫೋನ್ ಖರೀದಿಸುವ ಯೋಚನೆ ಮಾಡಿದ್ರೆ, ನಿಮಗೆ ಇದು ಖುಷಿ ಸುದ್ದಿ. ಜನಪ್ರಿಯ ಮೊಟೊರೊಲಾ ಸಂಸ್ಥೆಯ ಪ್ರಮುಖ ಫೋನ್‌ಗಳಲ್ಲಿ ಒಂದಾದ ಮೊಟೊ G62 5G ಮೊಬೈಲ್ ಫೀಚರ್ಸ್‌ಗಳಿಂದ ಗ್ರಾಹಕರಿಂದ ಗಮನ ಸೆಳೆದಿದೆ. ಈ ಫೋನ್ ಫ್ಲಿಪ್‌ಕಾರ್ಟ್ ತಾಣದಲ್ಲಿ ಸಖತ್ ಡಿಸ್ಕೌಂಟ್ ಪಡೆದಿದ್ದು, ಫೋನ್ ಖರೀದಿಗೆ ಸುಸಮಯ ಆಗಿದೆ.
ಹೌದು, ಮೊಟೊರೊಲಾ ಸಂಸ್ಥೆಯ ಇತ್ತೀಚಿನ ಫೋನ್‌ಗಳಲ್ಲಿ ಒಂದಾದ ಮೊಟೊ G62 5G ಮೊಬೈಲ್ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ನಲ್ಲಿ ಈಗ 29% ರಷ್ಟು ಡಿಸ್ಕೌಂಟ್ ಪಡೆದುಕೊಂಡಿದೆ. ಈ ಮೊಬೈಲ್ 6 GB RAM + 128 GB ಸ್ಟೋರೇಜ್‌ನ ಆಯ್ಕೆಯ ಮಾಡೆಲ್ ದರವು 21,999ರೂ. ಆಗಿದ್ದು, ಆದ್ರೆ, ಕೊಡುಗೆಯಲ್ಲಿ ಗ್ರಾಹಕರು ಈ ಮೊಬೈಲ್ ಅನ್ನು 15,499 ರೂ. ಗಳ ಬೆಲೆಯಲ್ಲಿ ಖರೀದಿ ಮಾಡಲು ಅವಕಾಶ ಇದೆ.

ಮೊಟೊ G62 5G ಮೊಬೈಲ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 695 SoC ಪ್ರೊಸೆಸರ್ ಸಾಮರ್ಥ್ಯದಲ್ಲಿ ಕೆಲಸ ನಿರ್ವಹಿಸುತ್ತದೆ. ಅಲ್ಲದೇ ಈ ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಬಲವನ್ನು ಹೊಂದಿದ್ದು, 20W ಫಾಸ್ಟ್ ಚಾರ್ಜಿಂಗ್ ವ್ಯವಸ್ಥೆಯ ಸಪೋರ್ಟ್ ಹೊಂದಿದೆ. ಇನ್ನುಳಿದಂತೆ ಮೊಟೊ G62 5G ಮೊಬೈಲ್‌ನ ಇತರೆ ಫೀಚರ್ಸ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಮೊಟೊ G62 ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ : ಮೊಟೊ G62 ಸ್ಮಾರ್ಟ್‌ಫೋನ್ 6.5 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಎಲ್‌ಸಿಡಿ ಡಿಸ್‌ಪ್ಲೇ ಅನ್ನು ಹೊಂದಿದ್ದು, ಈ ಡಿಸ್‌ಪ್ಲೇ 1,080 x 2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದಿದೆ. ಜೊತೆಗೆ ಇದು 120Hz ರಿಫ್ರೆಶ್ ರೇಟ್ ಅನ್ನು ಪಡೆದಿದ್ದು, 405ppi ಪಿಕ್ಸೆಲ್ ಸಾಂದ್ರತೆಯನ್ನು ಹೊಂದಿದೆ. ಅಲ್ಲದೇ ಈ ಮೊಬೈಲ್ ಡಿಸ್‌ಪ್ಲೇ 20:9 ರಚನೆಯ ಅನುಪಾತ ಪಡೆದಿದೆ.
ಮೊಟೊ G62 ಪ್ರೊಸೆಸರ್ ಪವರ್ ಏನು : ಮೊಟೊ G62 ಮೊಬೈಲ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 695 SoC ಪ್ರೊಸೆಸರ್‌ನಲ್ಲಿ ಕೆಲಸ ಮಾಡಲಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 12 ಸಪೋರ್ಟ್ ಸಹ ಪಡೆದಿದೆ. ಇದು 8GB RAM ಮತ್ತು 128GB ಆಂತರೀಕ ಸ್ಟೋರೇಜ್ ಬಲವನ್ನು ಒಳಗೊಂಡಿದೆ. ಹಾಗೆಯೇ ಮೆಮೊರಿ ಕಾರ್ಡ್ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವ ಆಯ್ಕೆಯನ್ನು ಪಡೆದಿದೆ.
ಮೊಟೊ G62 ಕ್ಯಾಮೆರಾ ರಚನೆ ಎಷ್ಟಿದೆ : ಮೊಟೊ G62 ಮೊಬೈಲ್ ಟ್ರಿಪಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಹೊಂದಿದ್ದು, ಇದರಲ್ಲಿ ಪ್ರಾಥಮಿಕ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ f/1.8 ಅಪರ್ಚರ್ ಲೆನ್ಸ್ ಅನ್ನು ಹೊಂದಿದೆ. ಇದು ಕ್ವಾಡ್-ಪಿಕ್ಸೆಲ್ ತಂತ್ರಜ್ಞಾನ ಮತ್ತು PDAF ಅನ್ನು ಹೊಂದಿದೆ.
ಹಾಗೆಯೇ ಇದರ ಸೆಕೆಂಡರಿ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ಸೆನ್ಸಾರ್ ಅನ್ನು ಪಡೆದಿದ್ದು, ಇನ್ನು ತೃತೀಯ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಸೆನ್ಸಾರ್ ಅನ್ನು ಒಳಗೊಂಡಿದೆ. ಇದರ ಜೊತೆಗೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಅನ್ನು ಪಡೆದಿದೆ.
ಮೊಟೊ G62 ಬ್ಯಾಟರಿ ಮತ್ತು ಇತರೆ ಆಯ್ಕೆಗಳ ಮಾಹಿತಿ: ಮೊಟೊ G62 ಮೊಬೈಲ್ 5,000mAh ಸಾಮರ್ಥ್ಯದ ಬ್ಯಾಟರಿ ಅನ್ನು ಪಡೆದಿದ್ದು, ಈ ಫೋನ್ 20W ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ಸಹ ಒಳಗೊಂಡಿದೆ.
ಹಾಗೆಯೇ ಕನೆಕ್ಟಿವಿಟಿ ಆಯ್ಕೆಗಳಲ್ಲಿ ಡ್ಯುಯಲ್-ಬ್ಯಾಂಡ್ ವೈಫೈ, 5G, 4G LTE, ಬ್ಲೂಟೂತ್ v5.1, 3.5mm ಹೆಡ್‌ಫೋನ್ ಪೋರ್ಟ್ ಮತ್ತು USB ಟೈಪ್-C ಅನ್ನು ಒಳಗೊಂಡಿದೆ. ಇದಲ್ಲದೆ ಫಿಂಗರ್‌ಪ್ರಿಂಟ್ ರೀಡರ್, ಪ್ರಾಕ್ಸಿಮಿಟಿ ಸೆನ್ಸಾರ್, ಆಂಬಿಯೆಂಟ್ ಲೈಟ್ ಸೆನ್ಸಾರ್, ಗೈರೊಸ್ಕೋಪ್ ಮತ್ತು ಇ-ದಿಕ್ಸೂಚಿಯನ್ನು ಸಪೋರ್ಟ್ ಇದೆ. ಇದು ಸ್ಟಿರಿಯೊ ಸ್ಪೀಕರ್‌ಗಳು ಮತ್ತು ಡ್ಯುಯಲ್ ಮೈಕ್ರೊಫೋನ್ ಸೌಲಭ್ಯ ಪಡೆದಿದೆ
ಮೊಟೊ G62 ಕಲರ್ ಹಾಗೂ ಮೆಮೊರಿ : ಮೊಟೊ G62 ಮೊಬೈಲ್ 6GB RAM + 128GB ಸ್ಟೋರೇಜ್ ವೇರಿಯಂಟ್ ಹಾಗೂ 8GB RAM + 128GB ಸ್ಟೋರೇಜ್ ವೇರಿಯಂಟ್ ಆಯ್ಕೆ ಪಡೆದಿದೆ. ಹಾಗೆಯೇ ಈ ಫೋನ್ ಫ್ರಾಸ್ಟೆಡ್ ಬ್ಲೂ ಮತ್ತು ಮಿಡ್ನೈಟ್ ಗ್ರೇ ಬಣ್ಣದ ಆಯ್ಕೆಗಳ ಆಯ್ಕೆಯಲ್ಲಿ ಖರೀದಿಸಬಹುದಾಗಿದೆ.


Click it and Unblock the Notifications








