Home
ಸುದ್ದಿಜಾಲ

ಮೊಟೊರೊಲಾ G64 5G ಸ್ಮಾರ್ಟ್‌ಫೋನ್‌ ಈಗ ಬಿಗ್‌ ಡಿಸ್ಕೌಂಟ್‌ನಲ್ಲಿ ಲಭ್ಯ!

ಇ ಕಾಮರ್ಸ್‌ ದೊಡ್ಡಣ್ಣ ಎಂದು ಗುರುತಿಸಿಕೊಂಡಿರುವ ಫ್ಲಿಪ್‌ಕಾರ್ಟ್‌ ಆಯ್ದ ಸ್ಮಾರ್ಟ್‌ಫೋನ್‌ಗಳಿಗೆ ಜಬರ್ದಸ್ತ್‌ ಕೊಡುಗೆ ಲಭ್ಯ ಮಾಡುತ್ತದೆ. ಈ ಪ್ಲಾಟ್‌ಫಾರ್ಮ್ ಎಲ್ಲ ಪ್ರೈಸ್‌ರೇಂಜ್‌ನ ಮೊಬೈಲ್‌ಗಳಿಗೂ ಬೊಂಬಾಟ್‌ ರಿಯಾಯಿತಿ ಲಭ್ಯ ಮಾಡುತ್ತದೆ. ಇದೀಗ ಫ್ಲಿಪ್‌ಕಾರ್ಟ್‌ನಲ್ಲಿ ಮೊಟೊರೊಲಾ G64 5G ಮೊಬೈಲ್‌ ಭರ್ಜರಿ ಡಿಸ್ಕೌಂಟ್‌ ದರದಲ್ಲಿ ಖರೀದಿಗೆ ಲಭ್ಯ ಇದೆ.

ಹೌದು, ಫ್ಲಿಪ್‌ಕಾರ್ಟ್‌ ಪ್ಲಾಟ್‌ಫಾರ್ಮ್ನಲ್ಲಿ ಮೊಟೊರೊಲಾ G64 5G ಮೊಬೈಲ್ ಶೇ. 16% ರಷ್ಟು ನೇರ ಡಿಸ್ಕೌಂಟ್‌ ಪಡೆದಿದೆ. ಈ ಫೋನಿನ 8GB RAM + 128 GB ಸ್ಟೋರೇಜ್‌ ವೇರಿಯಂಟ್‌ ಅನ್ನು ಖರೀದಿದಾರರು 14,999ರೂ. ಗಳ ಆಫರ್‌ ಬೆಲೆಯಲ್ಲಿ ಖರೀದಿ ಮಾಡಬಹುದು. ಇದಲ್ಲದೇ ಹೆಚ್ಚುವರಿಯಾಗಿ ಕೆಲವು ಆಯ್ದ ಬ್ಯಾಂಕ್‌ಗಳಿಂದ ಎಕ್ಸ್‌ಟ್ರಾ ರಿಯಾಯಿತಿ ಕೂಡಾ ಲಭ್ಯ.

ಮೊಟೊರೊಲಾ G64 5G ಸ್ಮಾರ್ಟ್‌ಫೋನ್‌ ಈಗ ಬಿಗ್‌ ಡಿಸ್ಕೌಂಟ್‌ನಲ್ಲಿ ಲಭ್ಯ!

ಹಾಗೆಯೇ ಈ ಮೊಬೈಲ್‌ಮೀಡಿಯಾ ಟೆಕ್ ಡೈಮೆನ್ಸಿಟಿ 7025 ಪ್ರೊಸೆಸರ್‌ ಸೌಲಭ್ಯ ಪಡೆದಿದ್ದು, ಇದರೊಂದಿಗೆ 6,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸಹ ಪಡೆದಿದೆ. ಇನ್ನು ಇದು ಐಸ್ ಲಿಲಾಕ್, ಮಿಂಟ್ ಗ್ರೀನ್ ಮತ್ತು ಪರ್ಲ್ ಬ್ಲೂ ಬಣ್ಣದ ಆಯ್ಕೆಯಲ್ಲಿ ಖರೀದಿಗೆ ಲಭ್ಯ. ಹಾಗಾದರೇ ಮೊಟೊರೊಲಾ G64 5G ಮೊಬೈಲ್‌ನ ಇತರೆ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ ಓದಿರಿ.

ಮೊಟೊರೊಲಾ G64 5G - ಫೀಚರ್ಸ್‌

ಮೊಟೊರೊಲಾ G64 5G ಮೊಬೈಲ್‌ 6.5 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ LCD ಅನ್ನು ಡಿಸ್‌ಪ್ಲೇ ಹೊಂದಿದ್ದು, ಈ ಫೋನಿನ ಡಿಸ್‌ಪ್ಲೇಯು 2400 x 1080 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್ ಸಪೋರ್ಟ್‌ ಹೊಂದಿದೆ. ಇದಲ್ಲದೆ ಸ್ಕ್ರೀನ್‌ ಕಡಿಮೆ ಅಂಚಿನ ರಚನೆ ಪಡೆದಿದ್ದು, ಈ ಡಿಸ್‌ಪ್ಲೇ 120 Hz ರಿಫ್ರೆಶ್‌ ರೇಟ್‌ ಸೌಲಭ್ಯ ಒಳಗೊಂಡಿದೆ. ಅಲ್ಲದೇ ಡಿಸ್‌ಪ್ಲೇ ಗೊರಿಲ್ಲಾ ಗ್ಲಾಸ್‌ ಸಪೋರ್ಟ್‌ ಕೂಡಾ ಪಡೆದುಕೊಂಡಿದೆ.

ಮೊಟೊರೊಲಾ G64 5G ಮೊಬೈಲ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 7025 ಪ್ರೊಸೆಸರ್‌ ಸಾಮರ್ಥ್ಯದಲ್ಲಿ ಕೆಲಸ ಮಾಡಲಿದ್ದು, ಇದಕ್ಕೆ ಸಪೋರ್ಟ್‌ ಆಗಿ ಆಂಡ್ರಾಯ್ಡ್‌ 14 ಓಎಸ್‌ ಕೆಲಸ ಮಾಡಲಿದೆ. ಹಾಗೆಯೇ ಇದು 8GB + 128GB ಸ್ಟೋರೇಜ್‌ ಹಾಗೂ 12 GB RAM + 256 GB ಆಂತರೀಕ ಸ್ಟೋರೇಜ್‌ ಆಯ್ಕೆಗಳನ್ನು ಕೂಡಾ ಒಳಗೊಂಡಿದ್ದು, 24GB ವರೆಗೂ RAM ಬೂಸ್ಟ್‌ ಸೌಲಭ್ಯ ಸಹ ಇದೆ.

ಮೊಟೊರೊಲಾ G64 5G ಮೊಬೈಲ್‌ ಮೂರು ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, ಇದರ ಪ್ರಾಥಮಿಕ ಕ್ಯಾಮೆರಾ 50 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸೌಲಭ್ಯ ಪಡೆದಿದೆ. ದ್ವಿತೀಯ ಹಾಗೂ ತೃತೀಯ ಕ್ಯಾಮೆರಾಗಳು ಕ್ರಮವಾಗಿ 8 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಹಾಗೂ 8 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ನಲ್ಲಿ ಇವೆ. ಇನ್ನು ಮುಂಭಾಗದಲ್ಲಿ 16 ಮೆಗಾ ಪಿಕ್ಸೆಲ್‌ ಸೆನ್ಸಾರ್‌ನ ಸೆಲ್ಫಿ ಕ್ಯಾಮೆರಾ ಒದಗಿಸಲಾಗಿದೆ.

ಮೊಟೊರೊಲಾ G64 5G ಮೊಬೈಲ್‌ 6000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯವನ್ನು ಪಡೆದುಕೊಂಡಿದ್ದು, ಇದು ಹೈಲೈಟ್‌ ಫೀಚರ್‌ ಎನಿಸಿದೆ. ಇದಕ್ಕೆ ಪೂರಕವಾಗಿ 33W ಟರ್ಬೋ ಪವರ್‌ ಚಾರ್ಜಿಂಗ್ ಸೌಲಭ್ಯ ಸಹ ಒದಗಿಸಲಾಗಿದೆ.

ಇದಲ್ಲದೇ ಕನೆಕ್ಟಿವಿಟಿ ಸೌಲಭ್ಯಗಳಲ್ಲಿ 5GG, 4G LTE, Wi-Fi, ಬ್ಲೂಟೂತ್ 5.3, NFC, GPS ಮತ್ತು USB ಟೈಪ್-C ಪೋರ್ಟ್ ಸೇರಿವೆ. ಫೋನ್ ಧೂಳು ಮತ್ತು ಸ್ಪ್ಲಾಶ್ ಪ್ರತಿರೋಧಕ್ಕಾಗಿ IP52 ರೇಟಿಂಗ್ ಅನ್ನು ಪಡೆದಿದೆ. ಇನ್ನು ಮೊಟೊರೊಲಾ G64 5G ಮೊಬೈಲ್‌ ಐಸ್ ಲಿಲಾಕ್, ಮಿಂಟ್ ಗ್ರೀನ್ ಮತ್ತು ಪರ್ಲ್ ಬ್ಲೂ ಬಣ್ಣದ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ.

Best Mobiles in India

English summary
Motorola G64 5G receives another price cut in India. check out offer price and more details.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+