Home
ಸುದ್ದಿಜಾಲ

6000mAh ಬ್ಯಾಟರಿಯ ಈ ಫೋನ್‌ ಶೀಘ್ರದಲ್ಲೇ ಖರೀದಿಗೆ ಲಭ್ಯ!..ಬೆಲೆ ಎಷ್ಟು?

ಮೊಟೊರೊಲಾ ಕಂಪನಿಯು ನೂತನವಾಗಿ ಲಾಂಚ್ ಮಾಡಿರುವ ಮೊಟೊ g64 5g ಸ್ಮಾರ್ಟ್‌ಫೋನ್‌ ಈಗಾಗಲೇ ಮಾರುಕಟ್ಟೆಯಲ್ಲಿ ಗಮನ ಸೆಳೆದಿದೆ. ಬಜೆಟ್‌ ಬೆಲೆಯಲ್ಲಿ ಎಂಟ್ರಿ ಕೊಟ್ಟಿರುವ ಈ ಫೋನಿನ ಮಾರಾಟ ಇದೇ ಏಪ್ರಿಲ್‌ 23 ರಂದು ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ಪ್ಲಾಟ್‌ಫಾರ್ಮ್ ಮೂಲಕ ಮಾರಾಟ ಪ್ರಾರಂಭಿಸಲಿದೆ.

ಹೌದು, ಮೊಟೊರೊಲಾ ಸಂಸ್ಥೆಯ ಮೊಟೊ g64 5g ಸ್ಮಾರ್ಟ್‌ಫೋನ್‌ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ಮೂಲಕ ಏಪ್ರಿಲ್‌ 23 ರಂದು ಮಾರಾಟ ಶುರು ಮಾಡಲಿದೆ. ಈ ಫೋನ್‌ ಮೀಡಿಯಾಟೆಕ್ ಡೈಮೆನ್ಸಿಟಿ 7025 ಪ್ರೊಸೆಸರ್‌ ಸಾಮರ್ಥ್ಯ ಸೌಲಭ್ಯ ಪಡೆದಿದ್ದು, ಇದರ ಜೊತೆಗೆ 50 ಮೆಗಾ ಪಿಕ್ಸಲ್‌ ಪ್ರಾಥಮಿಕ ಕ್ಯಾಮೆರಾ ರಚನೆ ಸಹ ಪಡೆದಿದೆ. ಇನ್ನು ಈ ಫೋನಿನ ಆರಂಭಿಕ ಆಫರ್‌ ಬೆಲೆಯು 15,999ರೂ. ಗಳು ಆಗಿದೆ.

6000mAh ಬ್ಯಾಟರಿಯ ಈ ಫೋನ್‌ ಶೀಘ್ರದಲ್ಲೇ ಖರೀದಿಗೆ ಲಭ್ಯ!..ಬೆಲೆ ಎಷ್ಟು?

ಮೊಟೊ g64 5g ಫೋನ್‌ 6000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯ ಪಡೆದಿದ್ದು, ಜೊತೆಗೆ 8GB + 128GB ಸ್ಟೋರೇಜ್‌ ಹಾಗೂ 12 GB RAM + 256 GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆಗಳನ್ನು ಪಡೆದುಕೊಂಡಿದೆ. ಇನ್ನುಳಿದಂತೆ ಮೊಟೊ g64 5g ಸ್ಮಾರ್ಟ್‌ಫೋನ್‌ ಇತರೆ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ ಓದಿರಿ.

ಮೊಟೊ g64 5g ಫೋನ್‌ - ಫೀಚರ್ಸ್‌

ಮೊಟೊ g64 5g ಫೋನ್‌ 6.5 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ LCD ಅನ್ನು ಡಿಸ್‌ಪ್ಲೇ ಪಡೆದುಕೊಂಡಿದ್ದು, ಈ ಡಿಸ್‌ಪ್ಲೇಯು 2400 x 1080 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್ ಸಪೋರ್ಟ್‌ ಹೊಂದಿದೆ. ಇದಲ್ಲದೆ ಸ್ಕ್ರೀನ್‌ ಕಡಿಮೆ ಅಂಚಿನ ರಚನೆ ಪಡೆದಿದ್ದು, ಈ ಡಿಸ್‌ಪ್ಲೇ 120 Hz ರಿಫ್ರೆಶ್‌ ರೇಟ್‌ ಸೌಲಭ್ಯ ಒಳಗೊಂಡಿದೆ.

ಮೊಟೊ g64 5g ಮೊಬೈಲ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 7025 ಪ್ರೊಸೆಸರ್‌ ಸಾಮರ್ಥ್ಯದಲ್ಲಿ ಕೆಲಸ ಮಾಡಲಿದ್ದು, ಇದಕ್ಕೆ ಸಪೋರ್ಟ್‌ ಆಗಿ ಆಂಡ್ರಾಯ್ಡ್‌ 14 ಓಎಸ್‌ ಬೆ,ಬಲ ಇದೆ. ಇದರೊಂದಿಗೆ ಇದು 8GB + 128GB ಸ್ಟೋರೇಜ್‌ ಹಾಗೂ 12 GB RAM + 256 GB ಆಂತರೀಕ ಸ್ಟೋರೇಜ್‌ ಆಯ್ಕೆಗಳನ್ನು ಕೂಡಾ ಒಳಗೊಂಡಿದೆ.

ಮೊಟೊ g64 5g ಮೊಬೈಲ್‌ ಡ್ಯುಯಲ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದಿದ್ದು, ಇದರ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸೌಲಭ್ಯ ಹೊಂದಿದೆ. ಇದರ ದ್ವಿತೀಯ ಕ್ಯಾಮೆರಾ ಕ್ರಮವಾಗಿ 8 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಹಾಗೂ 8 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ನಲ್ಲಿ ಇವೆ. ಇನ್ನು ಮುಂಭಾಗದಲ್ಲಿ 16 ಮೆಗಾ ಪಿಕ್ಸೆಲ್‌ ಸೆನ್ಸಾರ್‌ನ ಸೆಲ್ಫಿ ಕ್ಯಾಮೆರಾ ನೀಡಲಾಗಿದೆ.

ಮೊಟೊ g64 5g ಮೊಬೈಲ್‌ 6000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಪಡೆದಿದ್ದು, ಇದಕ್ಕೆ ಪೂರಕವಾಗಿ 33W ಟರ್ಬೋ ಪವರ್‌ ಚಾರ್ಜಿಂಗ್ ಸೌಲಭ್ಯ ಸಹ ಇದೆ. ಇದಲ್ಲದೇ ಕನೆಕ್ಟಿವಿಟಿ ಸೌಲಭ್ಯಗಳಲ್ಲಿ 5GG, 4G LTE, Wi-Fi, ಬ್ಲೂಟೂತ್ 5.3, NFC, GPS ಮತ್ತು USB ಟೈಪ್-C ಪೋರ್ಟ್ ಸೇರಿವೆ. ಫೋನ್ ಧೂಳು ಮತ್ತು ಸ್ಪ್ಲಾಶ್ ಪ್ರತಿರೋಧಕ್ಕಾಗಿ IP52 ರೇಟಿಂಗ್ ಅನ್ನು ಹೊಂದಿದೆ.

ಸ್ಟೋರೇಜ್‌ ಹಾಗೂ ಕಲರ್‌ ಆಯ್ಕೆ

ಇನ್ನು ಈ ಫೋನ್‌ 8GB RAM + 128GB ಸ್ಟೋರೇಜ್‌ ಹಾಗೂ 12 GB RAM + 256 GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆಗಳನ್ನು ಪಡೆದಿದೆ. ಹಾಗೆಯೇ ಈ ಫೋನ್‌ ಐಸ್ ಲಿಲಾಕ್, ಮಿಂಟ್ ಗ್ರೀನ್ ಮತ್ತು ಪರ್ಲ್ ಬ್ಲೂ ಬಣ್ಣದ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ.

Best Mobiles in India

English summary
Motorola g64 5G sale starts from april 23 in india. check out offer price, features and more.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+