ಮೋಟೋ G8 ಪವರ್ ಲೈಟ್ ಸ್ಮಾರ್ಟ್‌ಫೋನ್ ಬಿಡುಗಡೆ!
ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ವಿಭಿನ್ನ ವಿಶೇಷ ಸ್ಮಾರ್ಟ್‌ಫೋನ್‌ಗಳ ಪರಿಚಯಿಸಿ ಸೈ ಎನಿಸಿಕೊಂಡಿರುವ ಕಂಪೆನಿಗಳಲ್ಲಿ ಮೊಟೊರೊಲಾ ಕಂಪೆನಿ ಕೂಡ ಒಂದಾಗಿದೆ. ಸದ್ಯ ಸ್ಮಾರ್ಟ್‌ಫೋನ್ ಪ್ರಿಯರ ನೆಚ್ಚಿನ ಬ್ರ್ಯಾಂಡ್ ಆಗಿರುವ ಮೊಟೊರೊಲಾ ತನ್ನ ಹೊಸ ಮಾದರಿಯ ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಿದೆ. ಈಗಾಗಲೇ ಹಲವು ಮಾದರಿಯ ಸ್ಮಾರ್ಟ್‌ಫೋನ್‌ಗಳ ಮೂಲಕ ಮಾರುಕಟ್ಟೆಯಲ್ಲಿ ಸಂಚಲನ ಸೃಷ್ಟಿಸಿದೆ. ಸದ್ಯ ಇದೀಗ ಮತ್ತೇ ಸಂಚಲನ ಸೃಷ್ಟಿಸುವ ಸಾದ್ಯತೆಯನ್ನ ಮೂಡಿಸಿದೆ.

ಹೌದು, ಮೊಟೊರೊಲಾ ಕಂಪೆನಿ ತನ್ನ ಹೊಸ ಮೋಟೋ G8 ಪವರ್ ಲೈಟ್ ಸ್ಮಾರ್ಟ್‌ಫೊನ್ ಅನ್ನು ಬಿಡುಗಡೆ ಮಾಡಿದೆ. ಸದ್ಯ ಈ ಸ್ಮಾರ್ಟ್‌ಫೋನ್ ಭಾರತದಲ್ಲಿ ಬಿಡುಗಡೆ ಮಾಡಿದೆ. ಇನ್ನು ಈ ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಮೀಡಿಯಾ ಟೆಕ್ ಹಿಲಿಯೊ P35 ಪ್ರೊಸೆಸರ್ ಅನ್ನು ಹೊಂದಿದ್ದು, ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್ ಅನ್ನು ಹೊಂದಿರಲಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ
ಮೋಟೋ G8 ಪವರ್ ಲೈಟ್ ಸ್ಮಾರ್ಟ್‌ಫೋನ್ 720x1,600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.5-ಇಂಚಿನ ಡಿಸ್‌ಪ್ಲೇಯನ್ನ ಹೊಂದಿದೆ. ಇನ್ನು ಈ ಡಿಸ್‌ಪ್ಲೇಯು ಎಚ್‌ಡಿ + ಐಪಿಎಸ್ ಎಲ್‌ಸಿಡಿ ಡಿಸ್‌ಪ್ಲೇ ವಿನ್ಯಾಸವನ್ನ ಹೊಂದಿದೆ. ಈ ಡಿಸ್‌ಪ್ಲೇಯು 20: 9 ರಚನೆಯ ಅನುಪಾತವನ್ನು ಹೊಂದಿದೆ. ಇದಲ್ಲದೆ ಈ ಡಿಸ್‌ಪ್ಲೇ 269PPI ಪಿಕ್ಸೆಲ್ ಸಾಂದ್ರತೆಯನ್ನು ಹೊಂದಿದೆ.

ಪ್ರೊಸೆಸರ್
ಮೋಟೋ G8 ಪವರ್ ಲೈಟ್ ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಹಿಲಿಯೊ P35 SoC ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೇಯೇ 4GB RAM ಮತ್ತು 64GB ಆಂತರಿಕ ಸಂಗ್ರಹ ಸಾಮರ್ಥ್ಯವನ್ನ ಹೊಂದಿದೆ. ಇದಲ್ಲದೆ ಮೆಮೊರಿ ಕಾರ್ಡ್ ಮೂಲಕ 256GB ವರೆಗೆ ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ವಿನ್ಯಾಸ
ಇನ್ನು ಈ ಸ್ಮಾರ್ಟ್‌ಫೋನ್ ಟ್ರಿಪಲ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 16 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಸೆನ್ಸಾರ್, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿರುವ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಲಭ್ಯತೆ
ಮೊಟೋ G8 ಪವರ್ ಲೈಟ್ ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್ ಹೊಂದಿದ್ದು, 10W ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಬ್ಲೂಟೂತ್ ವಿ 4.2, ವೈ-ಫೈ, ಮೈಕ್ರೋ-ಯುಎಸ್‌ಬಿ ಪೋರ್ಟ್, ಮತ್ತು 3.5 ಎಂಎಂ ಆಡಿಯೊ ಜ್ಯಾಕ್ ಅನ್ನು ಬೆಂಬಲಿಸಲಿದೆ. ಜೊತೆಗೆ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಅನ್ನು ಸಹ ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ
ಇನ್ನು ಈ ಸ್ಮಾರ್ಟ್‌ಫೋನ್ 8,999ರೂ, ಬೆಲೆ ಮತ್ತು ಫ್ಲಿಪ್ಕಾರ್ಟ್ ಮೂಲಕ ಮೇ 29 ರಿಂದ ಮಧ್ಯಾಹ್ನ 12 ಗಂಟೆಗೆ ಮಾರಾಟವಾಗಲಿದೆ. ಇದು ಆರ್ಕ್ಟಿಕ್ ಬ್ಲೂ ಮತ್ತು ರಾಯಲ್ ಬ್ಲೂ ಬಣ್ಣದ ಆಯ್ಕೆಗಳಲ್ಲಿ ಲಭ್ಯವಾಗಲಿದೆ.


Click it and Unblock the Notifications