Motorola: ಮೊಟೊರೊಲಾದ ಈ ಕಡಿಮೆ ಬೆಲೆಯ ಫೋನ್ ಇನ್ನೂ ಕಡಿಮೆಗೆ ಲಭ್ಯ! 64 GB ಸ್ಟೋರೇಜ್
ಮೊಟೊರೊಲಾ ಸ್ಮಾರ್ಟ್‌ಫೋನ್‌ಗಳು (Motorola smartphones) ಕಡಿಮೆ ಬೆಲೆಗೆ ಉತ್ತಮ ಫೀಚರ್ಸ್ ಸೌಲಭ್ಯ ನೀಡುತ್ತವೆ. ಈ ಕಾರಣಕ್ಕೆ ಈ ಫೋನ್‌ಗಳಿಗೆ ದೊಡ್ಡ ಬೇಡಿಕೆ ಇದೆ. ಈ ನಡುವೆ ಮೊಟೊರೊಲಾ ಈ ಬಜೆಟ್ ಬೆಲೆಯ ಫೋನ್‌ಗೆ ಆಫರ್ ನೀಡಲಾಗಿದ್ದು, ಈ ಮೂಲಕ ಭಾರೀ ಹಣ ಉಳಿತಾಯ ಮಾಡಬಹುದಾಗಿದೆ.
ಹೌದು, ಮೊಟೊರೊಲಾ ಸ್ಮಾರ್ಟ್‌ಫೋನ್‌ಗಳ ವಿಭಾಗದಲ್ಲಿ ಬಜೆಟ್ ಬೆಲೆಯ ಮೊಟೊರೊಲಾ G8 ಪವರ್ ಲೈಟ್ ಸ್ಮಾರ್ಟ್‌ಫೋನ್ (Motorola G8 Power Lite Smartphone) ಇದೀಗ ಆಫರ್ ಬೆಲೆಗೆ ಲಭ್ಯ ಇದೆ. ಈ ಫೋನ್ 64 ಇಂಟರ್ ಸ್ಟೋರೇಜ್ ಆಯ್ಕೆ ಹಾಗೂ 16 ಮೆಗಾಪಿಕ್ಸೆಲ್ ಕ್ಯಾಮೆರಾ ಹೊಂದಿದೆ. ಹಾಗಿದ್ರೆ, ಈ ಫೋನ್‌ಗೆ ಇರುವ ಆಫರ್ ಬೆಲೆ ಹಾಗೂ ಪ್ರಮುಖ ಫೀಚರ್ಸ್ ಬಗ್ಗೆ ಈ ಲೇಖನದಲ್ಲಿ ತಿಳಿಸಿಕೊಡಲಾಗಿದೆ ಓದಿರಿ.

ಮೊಟೊರೊಲಾ G8 ಪವರ್ ಲೈಟ್ ಸ್ಮಾರ್ಟ್‌ಫೋನ್ ಆಪರ್ ಮಾಹಿತಿ: ಈ ಫೋನ್ 9,999 ರೂ.ಗಳ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದು, ಇದೀಗ ಆಫರ್ ಬೆಲೆಯಾದ 7,899 ರೂ.ಗಳಿಗೆ ಇದನ್ನು ಖರೀದಿ ಮಾಡಬಹುದಾಗಿದೆ. ಯಾಕೆಂದರೆ ಈ ಫೋನ್‌ಗೆ ಫ್ಲಿಪ್‌ಕಾರ್ಟ್(Flipkart) 21% ರಿಯಾಯಿತಿ ಘೋಷಣೆ ಮಾಡಿದೆ. ಅದಾಗ್ಯೂ ಕೆಲವು ಕೊಡುಗೆಗಳ ಮೂಲಕ ಇನ್ನೂ ಕಡಿಮೆ ಬೆಲೆಗೆ ಇದನ್ನು ಖರೀದಿ ಮಾಡಬಹುದಾಗಿದೆ.
ಈ ಫೋನ್ ಅನ್ನು ಫ್ಲಿಪ್‌ಕಾರ್ಟ್ ಆಕ್ಸಿಸ್ ಬ್ಯಾಂಕ್ ಕಾರ್ಡ್ ಬಳಕೆ ಮಾಡಿಕೊಂಡು ಖರೀದಿ ಮಾಡಿದ್ರೆ 5% ಕ್ಯಾಶ್‌ಬ್ಯಾಕ್ ಸಿಗಲಿದೆ. ಇದರೊಂದಿಗೆ ನೀವು ಎಸಿ ಖರೀದಿ ಮಾಡಲು ಮುಂದಾದ್ರೆ ಅದರಲ್ಲೂ ಸಹ ಆಫರ್ ಪಡೆಯಬಹುದಾಗಿದೆ. ಅಲ್ಲದೆ ಭಾರೀ ಕಡಿಮೆ ಬೆಲೆಯ ಇಎಮ್‌ಐ ಆಯ್ಕೆ ಸಹ ಇದೆ. ಅಂದರೆ ತಿಂಗಳಿಗೆ ನೀವು 278 ರೂ.ಗಳನ್ನು ಪಾವತಿ ಮಾಡುವ ಮೂಲಕ ಈ ಫೋನ್ ಅನ್ನು ನಿಮ್ಮದಾಗಿಸಿಕೊಳ್ಳಬಹುದಾಗಿದೆ.

ಮೊಟೊರೊಲಾ G8 ಪವರ್ ಲೈಟ್ ಸ್ಮಾರ್ಟ್‌ಫೋನ್ ಡಿಸ್‌ಪ್ಲೇ ಮಾಹಿತಿ: ಈ ಫೋನ್ 6.5 ಇಂಚಿನ IPS LCD ಡಿಸ್‌ಪ್ಲೇ ಹೊಂದಿದ್ದು, ಇದು 720 x 1600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯ ಪಡೆದುಕೊಂಡಿದೆ. ಅಲ್ಲದೆ 82.2% ಸ್ಕ್ರೀನ್-ಟು-ಬಾಡಿ ಅನುಪಾತ, 269 ppi ಸಾಂದ್ರತೆಯೊಂದಿಗೆ ಈ ಬೆಲೆಯಲ್ಲಿ ಉತ್ತಮ ಫೋನ್ ಎನ್ನಬಹುದಾಗಿದೆ.
ಮೊಟೊರೊಲಾ G8 ಪವರ್ ಲೈಟ್ ಸ್ಮಾರ್ಟ್‌ಫೋನ್ ಪ್ರೊಸೆಸರ್ ವಿವರ: ಇನ್ನು ಈ ಫೋನ್ ಮೀಡಿಯಾಟೆಕ್ MT6765 ಹಿಲಿಯೋ P35 (12nm) ಪ್ರೊಸೆಸರ್ ಬಲ ಪಡೆದಿದ್ದು, ಓಎಸ್ ಆಂಡ್ರಾಯ್ಡ್ 9.0 (ಪೈ) ಅನ್ನು ರನ್ ಮಾಡಲಿದೆ. ಇದರೊಂದಿಗೆ ಪವರ್ ವಿಆರ್ GE8320 ಗ್ರಾಪಿಕ್ ಕಾರ್ಡ್ ಬೆಂಬಲ ಪಡೆದಿದ್ದು, 64GB ಇಂಟರ್ ಸ್ಟೋರೇಜ್ ಹಾಗೂ 4GB RAM ನೊಂದಿಗೆ ಉತ್ತಮವಾಗಿ ಕಾರ್ಯನಿರ್ವಹಿಸಲಿದೆ.
ಮೊಟೊರೊಲಾ G8 ಪವರ್ ಲೈಟ್ ಸ್ಮಾರ್ಟ್‌ಫೋನ್ ಕ್ಯಾಮೆರಾ ರಚನೆ: ಈ ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಹೊಂದಿದೆ. ಅದರಲ್ಲಿ 16 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ, 2 ಮೆಗಾಪಿಕ್ಸೆಲ್ ಮ್ಯಾಕ್ರೋ ಹಾಗೂ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸರ್ ಆಯ್ಕೆ ಪಡೆದಿದೆ. ಇದರೊಂದಿಗೆ 8 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಈ ಫೋನ್‌ನಲ್ಲಿ ಕಾಣಬಹುದಾಗಿದೆ. ಇದು ಎಲ್‌ಇಡಿ ಫ್ಲ್ಯಾಶ್, ಹೆಚ್‌ಡಿಆರ್, ಪನೋರಮಾ ಫೀಚರ್ಸ್ ಅನ್ನು ಬೆಂಬಲಿಸಲಿದೆ.

ಮೊಟೊರೊಲಾ G8 ಪವರ್ ಲೈಟ್ ಸ್ಮಾರ್ಟ್‌ಫೋನ್ ಬ್ಯಾಟರಿ ಹಾಗೂ ಇತರೆ: 5000 mAh ಸಾಮರ್ಥ್ಯದ ಬ್ಯಾಟರಿ ಆಯ್ಕೆ ಪಡೆದಿದ್ದು, ಇದು 10W ವೈರ್ಡ್ ಚಾರ್ಜಿಂಗ್ ಬೆಂಬಲ ಪಡೆದಿದೆ. ಇದರೊಂದಿಗೆ 3.5 ಎಂಎಂ ಜ್ಯಾಕ್, ವೈ-ಫೈ 802.11 b/g/n, ವೈ-ಫೈ ಡೈರೆಕ್ಟ್, ಬ್ಲೂಟೂತ್ ಆವೃತ್ತಿ 4.2, A2DP, LE, ಜಿಪಿಎಸ್, ಗ್ಲೋನಾಸ್, ಗೆಲಿಲಿಯೋ ಸ್ಥಾನೀಕರಣ ಹಾಗೂ ಮೈಕ್ರೋ ಯುಎಸ್‌ವಿ-2.0 ಸೇರಿದಂತೆ ಅನೇಕ ಕನೆಕ್ಟಿವಿಟಿ ಸೌಲಭ್ಯವನ್ನು ಈ ಫೋನ್‌ನಲ್ಲಿ ಕಾಣಬಹುದಾಗಿದೆ.


Click it and Unblock the Notifications








