ಶೀಘ್ರದಲ್ಲೇ ಎಂಟ್ರಿ ನೀಡಲಿದೆ ಮೋಟೋ G84 5G ಫೋನ್; ಜಬರ್ದಸ್ತ್ ಫೀಚರ್ಸ್!
ಮೊಟೊರೊಲಾ ಕಂಪೆನಿಯ ಸ್ಮಾರ್ಟ್‌ಫೋನ್‌ಗಳಿಗೆ ಮಾರುಕಟ್ಟೆಯಲ್ಲಿ ಭಾರಿ ಕ್ರೇಜ್ ಇದೆ. ತನ್ನ ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳ ಮೂಲಕ ಮೊಟೊರೊಲಾ ಕಂಪೆನಿ ಸೈ ಎನಿಸಿಕೊಂಡಿದೆ. ಅದರಂತೆ ಇದೀಗ ಮೊಟೊರೊಲಾ ಕಂಪೆನಿ G ಸರಣಿಯ ಹೊಸ ಸ್ಮಾರ್ಟ್‌ಫೋನ್‌ನಲ್ಲಿ ಕಾರ್ಯನಿರ್ವಹಿಸುತ್ತಿದೆ ಎಂದು ವರದಿಯಾಗಿದೆ.
ಹೌದು, ಮೊಟೊರೊಲಾ ಕಂಪೆನಿ G ಸರಣಿಯಲ್ಲಿ ಹೊಸ ಸ್ಮಾರ್ಟ್‌ಫೋನ್ ಬಿಡುಗಡೆಗೆ ತಯಾರಿ ನಡೆಸಿದೆ. ಈ ಸ್ಮಾರ್ಟ್‌ಫೋನ್ ಅನ್ನು ಮೋಟೋ G84 5G ಎಂದು ಹೆಸರಿಸಲಾಗಿದೆ. ಇದು ಕಳೆದ ವರ್ಷ ಬಿಡುಗಡೆಯಾದ ಮೋಟೋ G82 5G ಸ್ಮಾರ್ಟ್‌ಫೋನ್‌ಗೆ ಉತ್ತರಾಧಿಕಾರಿಯಾಗಿ ಬರುವ ನಿರೀಕ್ಷೆಯಿದೆ. ಸದ್ಯ ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್ ಒಳಗೊಂಡಿರಲಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಮೋಟೋ G84 5G ಡಿಸ್‌ಪ್ಲೇ ನಿರೀಕ್ಷೆ?
ಮೋಟೋ G84 5G ಫೋನ್ 6.55 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿರಲಿದೆ. ಇದು 1080 x 2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಬೆಂಬಲಿಸಲಿದೆ. ಇದರಿಂದ ಈ ಸ್ಮಾರ್ಟ್‌ಫೋನ್‌ನಲ್ಲಿ ಚಲನಚಿತ್ರಗಳನ್ನು ವೀಕ್ಷಿಸಲು ಅಥವಾ ಗೇಮ್‌ಗಳನ್ನು ಆಡುವಾಗ ಅತ್ಯುತ್ತಮ ಅನುಭವ ದೊರೆಯಲಿದೆ.
ಮೋಟೋ G84 5G ಪ್ರೊಸೆಸರ್ ಸಾಧ್ಯತೆ
ಮೋಟೋ G84 5G ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 778G SoC ಪ್ರೊಸೆಸರ್ ಸಾಮರ್ಥ್ಯದಲ್ಲಿ ಬರಲಿದೆ. ಇದು ಆಂಡ್ರಾಯ್ಡ್ 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸುವ ಸಾಧ್ಯತೆಯಿದೆ. ಹಾಗೆಯೇ 6GB RAM ಮತ್ತು 128GB ಇಂಟರ್ ಸ್ಟೋರೇಜ್ ಆಯ್ಕೆಯಲ್ಲಿ ಬರುವ ನಿರೀಕ್ಷೆಯಿದೆ. ಈ ಸ್ಮಾರ್ಟ್‌ಫೋನ್ ಮೆಮೊರಿ ಕಾರ್ಡ್ ಬೆಂಬಲದೊಂದಿಗೆ ಬರುವ ಬಗ್ಗೆ ಯಾವುದೇ ಮಾಹಿತಿ ಬಹಿರಂಗವಾಗಿಲ್ಲ.
ಮೋಟೋ G84 5G ಕ್ಯಾಮೆರಾ ಸೆಟ್‌ಅಪ್
ಮೋಟೋ G84 5G ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾದೊಂದಿಗೆ ಬರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿರಲಿದೆ ಎಂದು ಅಂದಾಜಿಸಲಾಗಿದೆ. ಹಿಂಬದಿಯ ಕ್ಯಾಮೆರಾದಲ್ಲಿ ಡಿಜಿಟಲ್ ಜೂಮ್, ಆಟೋ ಫ್ಲ್ಯಾಶ್, ಫೇಸ್ ಡಿಟೆಕ್ಷನ್, ಫೋಕಸ್ ದಿ ಟಚ್‌ನಂತಹಹ ಫೀಚರ್ಸ್ ನೀಡಲಾಗಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸೆಲ್ಫಿ ಕ್ಯಾಮೆರಾವನ್ನು ಸಹ ನಿರೀಕ್ಷಿಸಲಾಗಿದೆ.
ಮೋಟೋ G84 5G ಬ್ಯಾಟರಿ ಮತ್ತು ಇತರೆ ಸೌಲಭ್ಯ
ಮೋಟೋ G84 5G ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 33W ವೇಗದ ಚಾರ್ಜಿಂಗ್ ಬೆಂಬಲದೊಂದಿಗೆ ಬರಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ USB-C ಪೋರ್ಟ್, 3.5mm ಹೆಡ್‌ಫೋನ್ ಜ್ಯಾಕ್ ಮತ್ತು ಸ್ಪೀಕರ್ ಗ್ರಿಲ್ ಅನ್ನು ಬೆಂಬಲಿಸಲಿದೆ. ಇದಲ್ಲದೆ ಲೈಟ್ ಸೆನ್ಸರ್, ಪ್ರಾಕ್ಸಿಮಿಟಿ ಸೆನ್ಸರ್, ಅಕ್ಸಿಲೆರೊಮೀಟರ್, ಕಂಪಾಸ್, ಗೈರೋಸ್ಕೋಪ್ ಸೆನ್ಸಾರ್‌ಗಳನ್ನು ಒಳಗೊಂಡಿದೆ.
ಮೋಟೋ G84 5G ಬೆಲೆ ನಿರೀಕ್ಷೆ?
ಮೋಟೋ G84 5G ಸ್ಮಾರ್ಟ್‌ಫೋನ್ 23,990ರೂ. ಬೆಲೆಯಲ್ಲಿ ಬರಲಿದೆ ಎಂದು ಅಂದಾಜಿಸಲಾಗಿದೆ. ಈ ಸ್ಮಾರ್ಟ್‌ಫೋನ್ ಬಿಡುಗಡೆ ಯಾವಾಗ ಅನ್ನೋದು ಇನ್ನು ಕೂಡ ಬಹಿರಂಗವಾಗಿಲ್ಲ. ಆದರೆ ಈ ಸ್ಮಾರ್ಟ್‌ಫೋನ್ ಕೆಂಪು, ಕಪ್ಪು ಮತ್ತು ಬೆಳ್ಳಿ ಬಣ್ಣದ ಆಯ್ಕೆಗಳಲ್ಲಿ ಬರಲಿದೆ ಎಂದು ನಿರೀಕ್ಷಿಸಲಾಗಿದೆ.
ಇನ್ನು ಇತ್ತೀಚಿಗೆ ಮೊಟೊರೊಲಾ ಕಂಪೆನಿ ಭಾರತದಲ್ಲಿ ಮೋಟೋ G42 ಫೋನ್ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್ 60Hz ರಿಫ್ರೆಶ್ ರೇಟ್ ಬೆಂಬಲಿಸುವ ಅಮೋಲೆಡ್ ಡಿಸ್‌ಪ್ಲೇ ಹೊಂದಿದೆ. ಇದು ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 680 SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಒಳಗೊಂಡಿದೆ. ಜೊತೆಗೆ 20W ವೇಗದ ಚಾರ್ಜಿಂಗ್ ಬೆಂಬಲಿಸುವ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಪಡೆದುಕೊಂಡಿದೆ.


Click it and Unblock the Notifications








