Motorola: ಮೊಟೊರೊಲಾದ ಈ ಹೊಸ 5G ಫೋನ್‌ಗೆ ಬೊಂಬಾಟ್ ಡಿಸ್ಕೌಂಟ್! 12GB RAM... 50MP ಕ್ಯಾಮೆರಾ
ಮೊಟೊರೊಲಾ (Motorola) ಸ್ಮಾರ್ಟ್‌ಫೋನ್‌ಗಳು ಸುಧಾರಿತ ಫೀಚರ್ಸ್‌ನೊಂದಿಗೆ ಕಾಣಿಸಿಕೊಳ್ಳುತ್ತಿದ್ದು, ಈ ಮೂಲಕ ಗ್ರಾಹಕರ ಅಗತ್ಯತೆಗಳನ್ನು ಪೂರೈಸುತ್ತಿವೆ. ಈ ನಡುವೆ ಪ್ರಮುಖ ಇ- ಕಾಮರ್ಸ್ ಸೈಟ್‌ನಲ್ಲಿ ಈ ಫೋನ್‌ಗಳಿಗೆ ಭರ್ಜರಿ ರಿಯಾಯಿತಿ ನೀಡಲಾಗುತ್ತಿದ್ದು, ಈ ರಿಯಾಯಿತಿ ಸಾಲಿನಲ್ಲಿ ಇತ್ತೀಚೆಗಷ್ಟೇ ಲಾಂಚ್ ಆದ ಹೊಸ ಫೋನ್ ಸಹ ಇದೆ.
ಹೌದು, ಮೊಟೊರೊಲಾ ಫೋನ್‌ಗಳಿಗೆ ಭಾರತದಲ್ಲಿ ದೊಡ್ಡ ಬೇಡಿಕೆ ಇದ್ದು, ಈ ನಡುವೆ ಮೊಟೊರೊಲಾ G84 5G ಸ್ಮಾರ್ಟ್‌ಫೋನ್ (Motorola G84 5G smartphone) ಅನ್ನು ಆಫರ್ ಬೆಲೆಗೆ ಖರೀದಿ ಮಾಡಬಹುದಾಗಿದೆ. ಈ ಸ್ಮಾರ್ಟ್‌ಫೋನ್ 12 GB RAM ಆಯ್ಕೆ ಹಾಗೂ 50MP ಮುಖ್ಯ ಕ್ಯಾಮೆರಾ ಸೇರಿದಂತೆ ಅನೇಕ ಆಕರ್ಷಕ ಫೀಚರ್ಸ್ ಅನ್ನು ಪಡೆದುಕೊಂಡಿದೆ. ಹಾಗಿದ್ರೆ ಈ ಸ್ಮಾರ್ಟ್‌ಫೋನ್‌ನ ಪ್ರಮುಖ ಫೀಚರ್ಸ್ ಹಾಗೂ ಈ ಫೋನ್‌ಗೆ ನೀಡಲಾದ ಆಫರ್ ವಿವರಗಳನ್ನು ತಿಳಿಸಿಕೊಡಲಾಗಿದೆ ಓದಿರಿ.

ಮೊಟೊರೊಲಾ G84 5G ಸ್ಮಾರ್ಟ್‌ಫೋನ್ ಡಿಸ್‌ಪ್ಲೇ ವಿವರ: ಈ ಸ್ಮಾರ್ಟ್‌ಫೋನ್ ಅನ್ನು ಆಫರ್ ಬೆಲೆಗೆ ಖರೀದಿ ಮಾಡುವ ಮುನ್ನ ಇದು ಈ ಬೆಲೆಗೆ ಯೋಗ್ಯವೇ ಎಂದು ತಿಳಿದುಕೊಳ್ಳುವುದು ಮುಖ್ಯವಾದ ಕೆಲಸವಾಗಿದೆ. ಅದರಂತೆ ಈ ಸ್ಮಾರ್ಟ್‌ಫೋನ್ 6.55 ಇಂಚಿನ ಫುಲ್ ಹೆಚ್‌ಡಿ+ ಪೋಲೆಡ್ ಡಿಸ್‌ಪ್ಲೇ ಆಯ್ಕೆ ಪಡೆದುಕೊಂಡಿದ್ದು, ಇದು 2400 x 1080 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯ ಹೊಂದಿದೆ. ಉಳಿದಂತೆ 120Hz ರಿಫ್ರೆಶ್ ರೇಟ್, 20:9 ಆಕಾರ ಅನುಪಾತ, 1300 ನಿಟ್ಸ್ ಪೀಕ್ ಬ್ರೈಟ್‌ನೆಸ್, 240Hz ಟಚ್ ಸ್ಯಾಂಪ್ಲಿಂಗ್ ರೇಟ್ ಹೊಂದಿದೆ.
ಮೊಟೊರೊಲಾ G84 5G ಸ್ಮಾರ್ಟ್‌ಫೋನ್ ಪ್ರೊಸೆಸರ್ ಮಾಹಿತಿ: ಈ ಫೋನ್ ಸ್ನಾಪ್‌ಡ್ರಾಗನ್ 695 ಪ್ರೊಸೆಸರ್‌ನಲ್ಲಿ (Snapdragon 695 processor) ಕಾರ್ಯನಿರ್ವಹಿಸಲಿದ್ದು, ಇದು ಆಕ್ಟಾ ಕೋರ್ ಬಲ ಪಡೆದಿದೆ. ಇದರೊಂದಿಗೆ ಆಂಡ್ರಾಯ್ಡ್ 13 ಆಪರೇಟಿಂಗ್ ಸಿಸ್ಟಮ್ ಹಾಗೂ ಅಡ್ರಿನೊ 619 ಜಿಪಿಯು ಆಯ್ಕೆ ಪಡೆಯುವ ಮೂಲಕ ಗೇಮಿಂಗ್‌ನಲ್ಲಿ ಹಾಗೂ ವಿಡಿಯೋ ವೀಕ್ಷಣೆಯಲ್ಲಿ ಅತ್ಯುತ್ತಮ ಅನುಭವ ಪಡೆದುಕೊಳ್ಳಬಹುದಾಗಿದೆ. ಇದರ ಜೊತೆಗೆ 12 GB RAM ಆಯ್ಕೆ ಹಾಗೂ 256 GB ಇಂಟರ್ ಸ್ಟೋರೇಜ್‌ನಲ್ಲಿ ಈ ಫೋನ್ ಕಾಣಿಸಿಕೊಂಡಿದೆ.

ಮೊಟೊರೊಲಾ G84 5G ಸ್ಮಾರ್ಟ್‌ಫೋನ್ ಕ್ಯಾಮೆರಾ ರಚನೆ: ಈ ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಹೊಂದಿದೆ. ಅಂದರೆ 50 ಮೆಗಾಪಿಕ್ಸೆಲ್ ಪ್ರಮುಖ ಕ್ಯಾಮೆರಾ ಹಾಗೂ 8 ಮೆಗಾಪಿಕ್ಸೆಲ್ ಸೆಕೆಂಡರಿ ಕ್ಯಾಮೆರಾ ಇದ್ದು, ಈ ಸೆನ್ಸರ್‌ಗಳು ಎಲ್‌ಇಡಿ ಪ್ಲ್ಯಾಶ್ ಲೈಟ್ ಆಯ್ಕೆಯೊಂದಿಗೆ ಅತ್ಯುತ್ತಮ ಫೀಚರ್ಸ್ ಅನ್ನು ಪಡೆದುಕೊಂಡಿವೆ. ಹಾಗೆಯೇ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಈ ಫೋನ್ 16 ಮೆಗಾಪಿಕ್ಸೆಲ್ ಕ್ಯಾಮೆರಾ ಹೊಂದಿದೆ.
ಮೊಟೊರೊಲಾ G84 5G ಸ್ಮಾರ್ಟ್‌ಫೋನ್ ಬ್ಯಾಟರಿ ಹಾಗೂ ಇತರೆ: ಈ ಸ್ಮಾರ್ಟ್‌ಫೋನ್ 5000 mAh ಸಾಮರ್ಥ್ಯ ಬ್ಯಾಟರಿಯಿಂದ ಪ್ಯಾಕ್ ಆಗಿದ್ದು, ಈ ಮೂಲಕ ಉತ್ತಮ ಬ್ಯಾಕಪ್ ಅನ್ನು ನಿರೀಕ್ಷೆ ಮಾಡಬಹುದಾಗಿದೆ. ಇನ್ನು ಕನೆಕ್ಟಿವಿಟಿ ವಿಚಾರಕ್ಕೆ ಬಂದರೆ ಈ ಫೋನ್ 5G ಬೆಂಬಲಿತ ನೆಟ್‌ವರ್ಕ್, 4G LTE, 5G, GSM, UMTS, ಬ್ಲೂಟೂತ್ ಆವೃತ್ತಿ v5.1, ವೈ ಫೈ ಆವೃತ್ತಿ802.11 a/b/g/n/ac (2.4 GHz | 5 GHz), ಆಡಿಯೋ ಜ್ಯಾಕ್ ಸೇರಿದಂತೆ ವಿವಿಧ ಕನೆಕ್ಟಿವಿಟಿ ಸೌಲಭ್ಯ ಪಡೆದಿದೆ.
ಮೊಟೊರೊಲಾ G84 5G ಸ್ಮಾರ್ಟ್‌ಫೋನ್ ಆಫರ್ ವಿವರ: ಈ ಫೋನ್‌ನ ಮುಖ್ಯ ವಿಚಾರಕ್ಕೆ ಈಗ ಬರೋಣ. ಈ ಫೋನ್ 22,999ರೂ.ಗಳ ಸಾಮಾನ್ಯ ಬೆಲೆ ಹೊಂದಿದ್ದು, ನೀವೀಗ ಇದನ್ನು 19,999 ರೂ.ಗಳಿಗೆ ಖರೀದಿ ಮಾಡಬಹುದಾಗಿದೆ. ಯಾಕೆಂದರೆ ಫ್ಲಿಪ್‌ಕಾರ್ಟ್‌ನಲ್ಲಿ ಈ ಫೋನ್‌ಗೆ 13% ರಿಯಾಯಿತಿ ನೀಡಲಾಗಿದೆ. ಇದರೊಂದಿಗೆ ಇನ್ನೂ ಕಡಿಮೆ ಬೆಲೆಗೆ ಈನ ಫೋನ್ ಬೇಕು ಎಂದರೆ ನೀವು ಬ್ಯಾಂಕ್ ಆಫರ್ ಬಳಕೆ ಮಾಡಬಹುದು.

ಈ ಫೋನ್ ಖರೀದಿ ವೇಳೆ ಫ್ಲಿಪ್‌ಕಾರ್ಟ್ ಆಕ್ಸಿಸ್ ಬ್ಯಾಂಕ್ ಕಾರ್ಟ್ ಬಳಕೆ ಮಾಡಿದ್ರೆ 5% ಕ್ಯಾಶ್‌ಬ್ಯಾಕ್, ಪಾಲುದಾರ ಆಫರ್‌ಗೆ ಸೈನ್ ಅಪ್ ಮಾಡಿ ಫ್ಲಿಪ್‌ಕಾರ್ಟ್ ಪೇ ಲೇಟರ್ ಮೂಲಕ ಖರೀದಿ ಮಾಡಿದ್ರೆ 20,000 ಮೌಲ್ಯದ ಉಚಿತ ಟೈಮ್ಸ್ ಪ್ರೈಮ್ ಬೆನಿಫಿಟ್‌ಗಳನ್ನು ಪಡೆದುಕೊಳ್ಳಬಹುದು. ಇದರೊಂದಿಗೆ ತಿಂಗಳಿಗೆ 704ರೂ.ಗಳನ್ನು ಪಾವತಿ ಮಾಡುವ ಮೂಲಕವೂ ಈ ಫೋನ್ ಖರೀದಿ ಮಾಡಬಹುದಾಗಿದೆ.


Click it and Unblock the Notifications








