3D ಕರ್ವ್ಡ್ ಡಿಸ್‌ಪ್ಲೇ ಇರುವ ಈ Motorola ಫೋನ್ ಬೆಲೆಯಲ್ಲಿ ಭಾರೀ ಇಳಿಕೆ!
ಲೀಡಿಂಗ್ ಇ ಕಾಮರ್ಸ್ ಫ್ಲಿಪ್‌ಕಾರ್ಟ್ ತಾಣದಲ್ಲಿ ಈಗ ಬಿಗ್ ಬಿಲಿಯನ್ ಡೇಸ್ 2024 (Flipkart Big Billion Days Sale 2024) ಸೇಲ್ ಲೈವ್ ಇದ್ದು, ಸ್ಮಾರ್ಟ್‌ಫೋನ್‌ಗಳು ಬೊಂಬಾಟ್ ಡಿಸ್ಕೌಂಟ್ ಬೆಲೆಯಲ್ಲಿ ಖರೀದಿಗೆ ಲಭ್ಯ ಇವೆ. ಇನ್ನು ಮೊಬೈಲ್ ಖರೀದಿಸುವ ಗ್ರಾಹಕರು ಲಭ್ಯ ಇರುವ ಬ್ಯಾಂಕ್ ಆಫರ್‌ಗಳನ್ನು ಪಡೆದುಕೊಂಡರೆ, ಮತ್ತಷ್ಟು ರಿಯಾಯಿತಿ ಪಡೆಯಬಹುದು. ಇದೀಗ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ವೆಬ್‌ಸೈಟ್‌ನಲ್ಲಿ ಮೊಟೊರೊಲಾ G85 5G ಮೊಬೈಲ್ ಗ್ರಾಹಕರು ಸಖತ್ ಆಫರ್ ಪ್ರೈಸ್‌ಟ್ಯಾಗ್‌ನಲ್ಲಿ ಖರೀದಿಗೆ ಸಿಗಲಿದೆ.
ಹೌದು, ದೈತ್ಯ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್‌ನಲ್ಲಿ ಮೊಟೊರೊಲಾ G85 5G (Motorola G85 5G) ಮೊಬೈಲ್ ಶೇ. 19% ರಷ್ಟು ಡಿಸ್ಕೌಂಟ್ ಪಡೆದಿದೆ. ಈ ಫೋನಿನ 8 GB RAM + 128 GB ಸ್ಟೋರೇಜ್ ವೇರಿಯಂಟ್ ಅನ್ನು ಖರೀದಿದಾರರು 16,999ರೂ. ಗಳ ಕೊಡುಗೆಯ ಬೆಲೆಯಲ್ಲಿ ಖರೀದಿ ಮಾಡಬಹುದು. ಅಲ್ಲದೇ ಹೆಚ್ಚುವರಿಯಾಗಿ ಆಯ್ದ ಬ್ಯಾಂಕ್‌ಗಳ ಆಫರ್ ಪಡೆದುಕೊಂಡರೆ, 15,999ರೂ. ಗಳಿಗೆ ಸಹ ಲಭ್ಯವಾಗಲಿವೆ.

ಮೊಟೊರೊಲಾ G85 5G ಫೋನ್ ಸೆಲ್ಫಿ ಕ್ಯಾಮೆರಾವು 32 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ. ಅಲ್ಲದೇ ಇದು ಕೋಬಾಲ್ಟ್ ಬ್ಲೂ, ಅರ್ಬನ್ ಗ್ರೇ ಮತ್ತು ಆಲಿವ್ ಗ್ರೀನ್ ಕಲರ್ ಆಯ್ಕೆಯಲ್ಲಿ ಖರೀದಿಗೆ ಲಭ್ಯ. ಹಾಗೆಯೇ ಈ ಫೋನಿನ ಇನ್ನುಳಿದಂತೆ ಮೊಟೊರೊಲಾ G85 5G ಫೋನ್ ಇತರೆ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ ಓದಿರಿ.
ಮೊಟೊರೊಲಾ G85 5G - ಫೀಚರ್ಸ್ ಮಾಹಿತಿ
ಮೊಟೊರೊಲಾ G85 5G ಮೊಬೈಲ್ 6.7 ಇಂಚಿನ ಫುಲ್ ಹೆಚ್‌ಡಿ ಪ್ಲಸ್ pOLED ಡಿಸ್‌ಪ್ಲೇ ಅನ್ನು ಪಡೆದುಕೊಂಡಿದ್ದು, ಇದು 2712 × 1220 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಪೋರ್ಟ್ ಪಡೆದಿದೆ. ಇದರೊಂದಿಗೆ 120Hz ರಿಫ್ರೆಶ್ ರೇಟ್ ಅನ್ನು ಪಡೆದಿದ್ದು, ಹಾಗೆಯೇ ಡಿಸ್‌ಪ್ಲೇ 1600 nits ಬ್ರೈಟ್‌ನೆಸ್ ಸಪೋರ್ಟ್ ಸಹ ಪಡೆದಿದ್ದು, ಕರ್ವ್ ಡಿಸ್‌ಪ್ಲೇ ರಚನೆ ಹೊಂದಿದ್ದು, ಗೊರಿಲ್ಲಾ ಗ್ಲಾಸ್ 5 ಅನ್ನು ಒಳಗೊಂಡಿದೆ.
ಮೊಟೊರೊಲಾ G85 5G ಮೊಬೈಲ್ ಕ್ವಾಲ್ಕಮ್ ಸ್ನಾಪ್‌ಡ್ರಾಗನ್ 8 ಜೆನ್ 3 SoC ಪ್ರೊಸೆಸರ್ ಸಾಮರ್ಥ್ಯದಲ್ಲಿ ಕೆಲಸ ನಿರ್ವಹಣೆ ಮಾಡಲಿದ್ದು, ಇದಕ್ಕೆ ಸಪೋರ್ಟ್ ಆಗಿ ಆಂಡ್ರಾಯ್ಡ್ 14 ಓಎಸ್ ಸೌಲಭ್ಯ ಸಹ ಇದೆ. ಹಾಗೆಯೇ ಈ ಫೋನ್ 8GB RAM + 128GB ಹಾಗೂ 12GB RAM + 256GB ಸ್ಟೋರೇಜ್ ಅನ್ನು ಪಡೆದುಕೊಂಡಿದೆ.
ಮೊಟೊರೊಲಾ G85 5G ಮೊಬೈಲ್ ಡ್ಯುಯಲ್ ಕ್ಯಾಮೆರಾ ರಚನೆ ಅನ್ನು ಪಡೆದಿದುಕೊಂಡಿದೆ. ಇದರ ಪ್ರಾಥಮಿಕ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಸೌಲಭ್ಯ ಪಡೆದಿದ್ದು, ಎರಡನೇ ಕ್ಯಾಮೆರಾವು 8 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯ ಪಡೆದಿದೆ. ಇನ್ನು ಮುಂಭಾಗದಲ್ಲಿ 32 ಮೆಗಾ ಪಿಕ್ಸೆಲ್ ಸೆನ್ಸಾರ್‌ನ ಸೆಲ್ಫಿ ಕ್ಯಾಮೆರಾ ಒದಗಿಸಲಾಗಿದೆ.
ಮೊಟೊರೊಲಾ G85 5G ಮೊಬೈಲ್ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸಾಮರ್ಥ್ಯ ಹೊಂದಿದ್ದು, ಇದಕ್ಕೆ ಸಪೋರ್ಟ್ ಆಗಿ 33W ಟರ್ಬೋಪವರ್ ಫಾಸ್ಟ್ ಚಾರ್ಜಿಂಗ್ ಆಯ್ಕೆ ಇದೆ. ಹಾಗೆಯೇ ಕನೆಕ್ಟಿವಿಟಿ ಸೌಲಭ್ಯಗಳಲ್ಲಿ ಇದು 4G, 5G, VoLTE, Vo5G, ಬ್ಲೂಟೂತ್ v5.3, ವೈಫೈ, NFC, USB-C v3.2 ಆಯ್ಕೆಗಳನ್ನು ಪಡೆದುಕೊಂಡಿದೆ. ಅಲ್ಲದೇ ಇನ್ ಡಿಸ್‌ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸಾರ್, ಡಾಲ್ಬಿ ಅಟ್ಮೋಸ್ ಆಯ್ಕೆಗಳನ್ನು ಕಾಣಬಹುದು.


Click it and Unblock the Notifications








