Home
ಸುದ್ದಿಜಾಲ

ಮೊಟೊ G85 5G ಮೊಬೈಲ್‌ ಬೆಲೆಯಲ್ಲಿ ಜಬರ್ದ್ತಸ್‌ ಇಳಿಕೆ; ಈ ಅವಕಾಶ ಕಳ್ಕೋಬೇಡಿ!

ಜನಪ್ರಿಯ ಫ್ಲಿಪ್‌ಕಾರ್ಟ್‌ ( Flipkart ) ಇ ಕಾಮರ್ಸ್‌ ಪ್ಲಾಟ್‌ಫಾರ್ಮ್‌ನಲ್ಲಿ ಇದೀಗ ಬಿಗ್‌ ಸೇವಿಂಗ್‌ ಡೇಸ್‌ ಸೇಲ್‌ ಲೈವ್‌ ಆಗಿದ್ದು, ಆಯ್ದ ಮೊಬೈಲ್‌ಗಳಿಗೆ ಭರ್ಜರಿ ಡಿಸ್ಕೌಂಟ್‌ ಘೋಷಿಸಿದೆ. ಆ ಪೈಕಿ ಸದ್ಯ ಮೊಟೊ G85 5G (Motorola G85 5G) ಸ್ಮಾರ್ಟ್‌ಫೋನ್‌ ಗಮನಾರ್ಹ ರಿಯಾಯಿತಿ ಪಡೆದಿದ್ದು, ಹೊಸ ಫೋನ್‌ ಖರೀದಿಸಬೇಕು ಎಂದು ಕೊಂಡಿರುವ ಗ್ರಾಹಕರು ವಾವ್‌ ಎನ್ನುವಂತೆ ಆಗಿದೆ.

ಹೌದು, ಫ್ಲಿಪ್‌ಕಾರ್ಟ್‌ ತಾಣದ ಬಿಗ್‌ ಸೇವಿಂಗ್‌ ಡೇಸ್‌ ಸೇಲ್‌ನಲ್ಲಿ ಮೊಟೊ G85 5G (Motorola G85 5G) ಫೋನ್‌ ಶೇ. 14% ರಷ್ಟು ರಿಯಾಯಿತಿ ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ. ಇನ್ನು ಈ ಫೋನಿನ 8 GB RAM + 128 GB ಸ್ಟೋರೇಜ್‌ನ ವೇರಿಯಂಟ್‌ ಅನ್ನು ಗ್ರಾಹಕರು 17,999ರೂ. ಗಳ ಆಫರ್‌ ಬೆಲೆಯಲ್ಲಿ ಖರೀದಿ ಮಾಡಬಹುದು.

ಮೊಟೊ G85 5G ಮೊಬೈಲ್‌ ಬೆಲೆಯಲ್ಲಿ ಜಬರ್ದ್ತಸ್‌ ಇಳಿಕೆ; ಈ ಅವಕಾಶ ಕಳ್ಕೋಬೇಡಿ!

ಅಂದಹಾಗೆ ಈ ಫೋನ್‌ ಸ್ನಾಪ್‌ಡ್ರಾಗನ್‌ 8 ಜೆನ್‌ 3 SoC ಪ್ರೊಸೆಸರ್‌ ಪವರ್‌ನಲ್ಲಿ ಕೆಲಸ ಮಾಡಲಿದೆ. ಅಲ್ಲದೇ ಇದು ಕೋಬಾಲ್ಟ್ ಬ್ಲೂ, ಅರ್ಬನ್ ಗ್ರೇ ಮತ್ತು ಆಲಿವ್ ಗ್ರೀನ್ ಕಲರ್‌ ಆಯ್ಕೆ ಖರೀದಿಗೆ ಲಭ್ಯ. ಇನ್ನು ಈ ಫೋನಿನ ಸೆಲ್ಫಿ ಕ್ಯಾಮೆರಾವು 32 ಮೆಗಾ ಪಿಕ್ಸಲ್‌ ಸೆನ್ಸಾರ್‌ ಸಾಮರ್ಥ್ಯದಲ್ಲಿ ಇದೆ. ಇನ್ನುಳಿದಂತೆ ಮೊಟೊ G85 5G ಫೋನ್‌ ಇತರೆ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ ಓದಿರಿ.

ಡಿಸ್‌ಪ್ಲೇ ರಚನೆ ಹೇಗಿದೆ

ಮೊಟೊ G85 5G ಸ್ಮಾರ್ಟ್‌ಫೋನ್‌ 6.7 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ pOLED ಡಿಸ್‌ಪ್ಲೇ ಅನ್ನು ಹೊಂದಿದ್ದು, ಇದು 2712 × 1220 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್ ಬೆಂಬಲ ಹೊಂದಿದೆ. ಇದರ ಜೊತೆಗೆ 120Hz ರಿಫ್ರೆಶ್ ರೇಟ್‌ ಅನ್ನು ಪಡೆದಿದ್ದು, ಹಾಗೆಯೇ ಡಿಸ್‌ಪ್ಲೇ 1600 nits ಬ್ರೈಟ್‌ನೆಸ್‌ ಸಪೋರ್ಟ್‌ ಸಹ ಪಡೆದಿದ್ದು, ಕರ್ವ್‌ ಡಿಸ್‌ಪ್ಲೇ ರಚನೆ ಇದೆ. ಅಲ್ಲದೇ ಗೊರಿಲ್ಲಾ ಗ್ಲಾಸ್‌ 5 ಅನ್ನು ಒಳಗೊಂಡಿದೆ.

ಪ್ರೊಸೆಸರ್‌ ಪವರ್ ಯಾವುದು

ಮೊಟೊ G85 5G ಸ್ಮಾರ್ಟ್‌ಫೋನ್‌ ಕ್ವಾಲ್ಕಮ್‌ ಸ್ನಾಪ್‌ಡ್ರಾಗನ್‌ 8 ಜೆನ್‌ 3 SoC ಪ್ರೊಸೆಸರ್‌ ಸಾಮರ್ಥ್ಯದಲ್ಲಿ ಕಾರ್ಯ ನಿರ್ವಹಣೆ ಮಾಡಲಿದ್ದು, ಇದಕ್ಕೆ ಸಪೋರ್ಟ್‌ ಆಗಿ ಆಂಡ್ರಾಯ್ಡ್‌ 14 ಓಎಸ್‌ ಸೌಲಭ್ಯ ಸಹ ಇದೆ. ಹಾಗೆಯೇ ಈ ಮೊಬೈಲ್‌ 8GB RAM + 128GB ಹಾಗೂ 12GB RAM + 256GB ಸ್ಟೋರೇಜ್‌ ಅನ್ನು ಪಡೆದುಕೊಂಡಿದೆ.

ಕ್ಯಾಮೆರಾ ಸೆನ್ಸಾರ್‌ ಮಾಹಿತಿ

ಮೊಟೊ G85 5G ಸ್ಮಾರ್ಟ್‌ಫೋನ್‌ ಡ್ಯುಯಲ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಒಳಗೊಂಡಿದೆ. ಇದರ ಮೊದಲ ಕ್ಯಾಮೆರಾ 50 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸೌಲಭ್ಯ ಪಡೆದಿದ್ದು, ದ್ವಿತೀಯ ಕ್ಯಾಮೆರಾವು 8 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯ ಹೊಂದಿದೆ. ಇನ್ನು ಮುಂಭಾಗದಲ್ಲಿ 32 ಮೆಗಾ ಪಿಕ್ಸೆಲ್‌ ಸೆನ್ಸಾರ್‌ನ ಸೆಲ್ಫಿ ಕ್ಯಾಮೆರಾ ಒದಗಿಸಲಾಗಿದೆ.

ಬಿಗ್ ಬ್ಯಾಟರಿ ಸಾಮರ್ಥ್ಯ

ಮೊಟೊ G85 5G ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸಾಮರ್ಥ್ಯ ಹೊಂದಿದ್ದು, ಇದಕ್ಕೆ ಸಪೋರ್ಟ್‌ ಆಗಿ 33W ಟರ್ಬೋಪವರ್‌ ಫಾಸ್ಟ್‌ ಚಾರ್ಜಿಂಗ್‌ ಆಯ್ಕೆ ಇದೆ. ಹಾಗೆಯೇ ಕನೆಕ್ಟಿವಿಟಿ ಆಯ್ಕೆಗಳಲ್ಲಿ ಇದು 4G, 5G, VoLTE, Vo5G, ಬ್ಲೂಟೂತ್ v5.3, ವೈಫೈ, NFC, USB-C v3.2 ಆಯ್ಕೆಗಳನ್ನು ಪಡೆದುಕೊಂಡಿದೆ. ಅಲ್ಲದೇ ಇನ್‌ ಡಿಸ್‌ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸಾರ್‌, ಡಾಲ್ಬಿ ಅಟ್ಮೋಸ್‌ ಆಯ್ಕೆಗಳು ಇವೆ.

Best Mobiles in India

English summary
Motorola G85 5G price in India reduced by Rs 3000: should you buy? Check offer Price, specifications and more.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+