ಶೀಘ್ರದಲ್ಲೇ ಭಾರತದಕ್ಕೆ ಎಂಟ್ರಿ ನೀಡಲಿದೆ ಮೋಟೋ G22 ಸ್ಮಾರ್ಟ್‌ಫೋನ್‌!

|

ಮೊಟೊರೊಲಾ ಕಂಪೆನಿ ಸ್ಮಾರ್ಟ್‌ಫೋನ್‌ ಮಾರುಕಟ್ಟೆಯಲ್ಲಿ ವಿಶೇಷ ಸ್ಥಾನವನ್ನು ಪಡೆದುಕೊಂಡಿದೆ. ತನ್ನ ವಿಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸುವ ಮೂಲಕ ತನ್ನ ಸ್ಥಾನವನ್ನು ಭದ್ರಪಡಿಸಿಕೊಂಡಿದೆ. ಸದ್ಯ ಇದೀಗ ಭಾರತದಲ್ಲಿ ಹೊಸ ಮೋಟೋ G22 ಬಿಡುಗಡೆ ಮಾಡಲು ಸಿದ್ಧತೆ ನಡೆಸಿದೆ. ಈ ಸ್ಮಾರ್ಟ್‌ಫೋನ್‌ ಇದೇ ಏಪ್ರಿಲ್ 8 ರಂದು ಲಾಂಚ್‌ ಆಗಲಿದೆ ಎಂದು ಹೇಳಲಾಗಿದೆ. ಇದು ಮೀಡಿಯಾಟೆಕ್‌ ಹಿಲಿಯೋ G37 SoC ಪ್ರೊಸೆಸರ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ.

ಮೊಟೊರೊಲಾ

ಹೌದು, ಮೊಟೊರೊಲಾ ಕಂಪೆನಿ ಭಾರತದಲ್ಲಿ ಮೋಟೋ G22 ಸ್ಮಾರ್ಟ್‌ಫೋನ್‌ ಲಾಂಚ್‌ ಡೇಟ್‌ ಫಿಕ್ಸ್‌ ಮಾಡಿದೆ. ಈ ಸ್ಮಾರ್ಟ್‌ಫೋನ್‌ 6.6 ಇಂಚಿನ LCD ಡಿಸ್‌ಪ್ಲೇ ಹೊಂದಿರಲಿದೆ. ಇದು ಕ್ವಾಡ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದ್ದು, ಮುಖ್ಯ ಕ್ಯಾಮೆರಾ 50MP ಸೆನ್ಸಾರ್‌ ಇರಲಿದೆ. ಜೊತೆಗೆ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದ್ದು,20W ಟರ್ಬೋಚಾರ್ಜಿಂಗ್ ಬೆಂಬಲಿಸಲಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಮೊಟೊರೊಲಾ ಮೋಟೋ G22 ಸ್ಮಾರ್ಟ್‌ಫೋನ್‌ 720 x 1600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5 ಇಂಚಿನ IPS LCD ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಡಿಸ್‌ಪ್ಲೇ 90Hz ರಿಫ್ರೆಶ್‌ ರೇಟ್‌ ಹೊಂದಿರಲಿದೆ. ಇದಲ್ಲದೆ ಈ ಡಿಸ್‌ಪ್ಲೇ 84.2% ಸ್ಕ್ರೀನ್ ಟು ಬಾಡಿ ಅನುಪಾತವನ್ನು ಹೊಂದಿದ್ದು, ರಚನೆಯ ಅನುಪಾತ 20:9 ಹೊಂದಿದೆ.

ಪ್ರೊಸೆಸರ್‌ ಯಾವುದು?

ಪ್ರೊಸೆಸರ್‌ ಯಾವುದು?

ಇನ್ನು ಈ ಸ್ಮಾರ್ಟ್‌ಫೋನ್ ಮೀಡಿಯಾಟೆಕ್‌ ಹಿಲಿಯೋ G37 SoC ಪ್ರೊಸೆಸರ್‌ ಹೊಂದಿದೆ. ಇದು ಆಂಡ್ರಾಯ್ಡ್ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 4GB RAM ಮತ್ತು 64GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಮೆಮೊರಿ ಕಾರ್ಡ್‌ ಮೂಲಕ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವುದಕ್ಕೆ ಅವಕಾಶವನ್ನು ನೀಡಿದೆ.

ಕ್ಯಾಮೆರಾ ವಿಶೇಷ

ಕ್ಯಾಮೆರಾ ವಿಶೇಷ

ಮೋಟೋ G22 ಸ್ಮಾರ್ಟ್‌ಫೋನ್‌ ಕ್ವಾಡ್ ಕ್ಯಾಮೆರಾ ಸೆಟಪ್ ಅನ್ನು ಒಳಗೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯವನ್ನು ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್‌ ಅಲ್ಟ್ರಾ-ವೈಡ್-ಆಂಗಲ್ ಲೆನ್ಸ್, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಮ್ಯಾಕ್ರೋ ಲೆನ್ಸ್ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಡೆಪ್ತ್ ಸೆನ್ಸಾರ್ ಅನ್ನು ಒಳಗೊಂಡಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಮೋಟೋ G22 ಸ್ಮಾರ್ಟ್‌ಫೋನ್‌ 20W ಟರ್ಬೋಚಾರ್ಜಿಂಗ್ ಬೆಂಬಲಿಸುವ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇನ್ನು ಈ ಫೋನ್ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್‌ ಅನ್ನು ಸಹ ಹೊಂದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ವೈಫೈ, ಬ್ಲೂಟೂತ್‌ ಬೆಂಬಲಿಸಲಿದೆ. ಇದಲ್ಲದೆ ಅಕ್ಸಿಲೆರೊಮೀಟರ್, ಗೈರೊ ಮೀಟರ್‌, ಪ್ರಾಕ್ಸಿಮಿಟಿ ಸೆನ್ಸಾರ್‌, ಕಂಪಾಸ್‌ ಅನ್ನು ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಮೊಟೊರೊಲಾ ಇದುವರೆಗೆ ಸ್ಮಾರ್ಟ್‌ಫೋನ್‌ನ ಬಿಡುಗಡೆ ದಿನಾಂಕವನ್ನು ಮಾತ್ರ ದೃಢಪಡಿಸಿದೆ. ಆದರೆ ಇನ್ನೂ ಈ ಸ್ಮಾರ್ಟ್‌ಫೋನ್‌ನ ಬೆಲೆಯನ್ನು ಬಹಿರಂಗಪಡಿಸಿಲ್ಲ. ಆದರೆ ಅಂದಾಜು 14,999 ರೂ. ಅಥವಾ ಇದಕ್ಕಿಂತ ಕಡಿಮೆ ಬೆಲೆಯಲ್ಲಿ ಬರುವ ನಿರೀಕ್ಷೆಯಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಅನ್ನು ಯುರೋಪಿಯನ್ ಮಾರುಕಟ್ಟೆಗಳಲ್ಲಿ ಅಧಿಕೃತಗೊಳಿಸಲಾಗಿದೆ. ಯುರೋಪ್‌ನಲ್ಲಿ ಮೋಟೋ G22 ಫೋನ್‌ ಯುರೋ 169.99 ಬೆಲೆಯಲ್ಲಿ ಬಿಡುಗಡೆ ಮಾಡಲಾಗಿದೆ. ಆದರೆ ಭಾರತದಲ್ಲಿ ಫೋನ್ ಇದಕ್ಕಿಂತ ಕಡಿಮೆ ಬೆಲೆಯನ್ನು ನಿರೀಕ್ಷಿಸಬಹುದು. ಈ ಫೋನ್‌ ನೀಲಿ ಮತ್ತು ಕಪ್ಪು ಬಣ್ಣಗಳ ಆಯ್ಕೆಯಲ್ಲಿ ಲಭ್ಯವಾಗಲಿದೆ.

Best Mobiles in India

English summary
Motorola has confirmed the India launch date of the Moto G22.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X