ಭಾರತದಲ್ಲಿ ಮೋಟೋ G71 5G ಸ್ಮಾರ್ಟ್‌ಫೋನ್ ಲಾಂಚ್ ಡೇಟ್ ಫಿಕ್ಸ್!
ಭಾರತದ ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ಮೊಟೊರೊಲಾ ಕಂಪೆನಿ ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳಿಗೆ ಪ್ರಸಿದ್ಧಿ ಪಡೆದಿದೆ. ಈಗಾಗಲೇ ಹಲವು ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಸದ್ಯ ಇದೀಗ ಭಾರತದಲ್ಲಿ ತನ್ನ ಹೊಸ ಮೋಟೋ G71 5G ಸ್ಮಾರ್ಟ್‌ಫೋನ್ ಬಿಡುಗಡೆ ದಿನಾಂಕವನ್ನು ಸೆಟ್ ಮಾಡಿದೆ. ಈ ಸ್ಮಾರ್ಟ್‌ಫೋನ್ ಭಾರತೀಯ ಮಾರುಕಟ್ಟೆಯಲ್ಲಿ ಇದೇ ಜನವರಿ 10 ರಂದು ಬಿಡುಗಡೆ ಆಗಲಿದೆ ಎಂದು ಕಂಪನಿಯು ಅಧಿಕೃತವಾಗಿ ಘೋಷಿಸಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್ ಕುರಿತು ಫ್ಲಿಪ್‌ಕಾರ್ಟ್‌ನಲ್ಲಿ ಹಲವು ಮಾಹಿತಿ ಬಿಡುಗಡೆ ಆಗಿದ್ದು, ಫ್ಲಿಪ್‌ಕಾರ್ಟ್ ಮೂಲಕ ಮಾರಾಟಕ್ಕೆ ಲಭ್ಯವಿರುತ್ತದೆ ಎಂಬುದು ಸ್ಪಷ್ಟವಾಗಿದೆ.

ಹೌದು, ಮೊಟೊರೊಲಾ ಕಂಪೆನಿ ಭಾರತದಲ್ಲಿ ಮೋಟೋ G71 5G ಸ್ಮಾರ್ಟ್‌ಫೋನ್ ಬಿಡುಗಡೆ ದಿನಾಂಕ ಬಹಿರಂಗವಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್ ಭಾರತದಲ್ಲಿ 18,999 ರೂ. ಬೆಲೆ ಹೊಂದಿರಲಿದೆ ಎನ್ನುವ ಮಾಹಿತಿ ಕೂಡ ಬಹಿರಂಗವಾಗಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್ 6.4-ಇಂಚಿನ ಫುಲ್ ಹೆಚ್‌ಡಿ + OLED ಡಿಸ್ಪ್ಲೇಯನ್ನು ಬೆಂಬಲಿಸುತ್ತದೆ ಎನ್ನಲಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 695 ಚಿಪ್‌ಸೆಟ್ ಹೊಂದಿದ್ದು, ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ವಿಶೇಷ
ಮೋಟೋ G71 5G ಸ್ಮಾರ್ಟ್‌ಫೋನ್ 1080 x 2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.4 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಡಿಸ್‌ಪ್ಲೇ 83.0% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಪಡೆದುಕೊಂಡಿದೆ. ಇದಲ್ಲದೆ ಈ ಡಿಸ್‌ಪ್ಲೇ 20:9ರಚನೆಯ ಅನುಪಾತವನ್ನು ಒಳಗೊಂಡಿದೆ.

ಪ್ರೊಸೆಸರ್ ಯಾವುದು?
ಈ ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 695 ಚಿಪ್‌ಸೆಟ್ ಪ್ರೊಸೆಸರ್ ಬಲವನ್ನು ಪಡೆದುಕೊಂಡಿದೆ. ಇದು ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 6GB RAM ಮತ್ತು 128GB, 8GB RAM ಮತ್ತು 128GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಪಡೆದಿದೆ. ಇದಲ್ಲದೆ 3GB ವರ್ಚುವಲ್ RAM ತಂತ್ರಜ್ಞಾನವನ್ನು ಹೊಂದಿದೆ.

ಕ್ಯಾಮೆರಾ
ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿರಲಿದೆ ಎನ್ನಲಾಗಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯವನ್ನು ಪಡೆದಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಆಂಗಲ್ ಸೆನ್ಸಾರ್ ಹಾಗೂ ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಶೂಟರ್ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ
ಇನ್ನು ಈ ಸ್ಮಾರ್ಟ್‌ಫೋನ್ 5000mAh ಬ್ಯಾಟರಿಯನ್ನು ಹೊಂದಿದ್ದು, 30W ಟರ್ಬೊ ಪವರ್ ಫಾಸ್ಟ್ ಚಾರ್ಜಿಂಗ್ ಬೆಂಬಲವನ್ನು ಹೊಂದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi, ಬ್ಲೂಟೂತ್ 5, GPS / A-GPS, USB ಟೈಪ್-C ಪೋರ್ಟ್ ಮತ್ತು 3.5mm ಹೆಡ್‌ಫೋನ್ ಜ್ಯಾಕ್‌ನಂತಹ ಆಯ್ಕೆಗಳನ್ನು ಒದಗಿಸುತ್ತದೆ.

ಬೆಲೆ ಮತ್ತು ಲಭ್ಯತೆ
ಮೋಟೋ G71 5G ಸ್ಮಾರ್ಟ್‌ಫೋನ್ ಭಾರತದಲ್ಲಿ 18,999 ರೂ. ಬೆಲೆ ಎನ್ನಲಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್ ಇದೇ ಜನವರಿ 10 ರಂದು ಬಿಡುಗಡೆ ಆಗಲಿದೆ ಎಂದು ಕಂಪನಿಯು ಅಧಿಕೃತವಾಗಿ ಘೋಷಿಸಿದೆ.

ಇದಲ್ಲದೆ ಇತ್ತಿಚಿಗಷ್ಟೇ ಮೊಟೊರೊಲಾ ಕಂಪೆನಿ ತನ್ನ ಹೊಸ ಮೋಟೋ G51 5G ಸ್ಮಾರ್ಟ್‌ಫೋನ್ ಭಾರತದಲ್ಲಿ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್ 6.8-ಇಂಚಿನ ಫುಲ್ HD+ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ ಮ್ಯಾಕ್ಸ್ ವಿಷನ್ ಡಿಸ್‌ಪ್ಲೇ ಆಗಿದ್ದು, 120Hz ರಿಫ್ರೇಶ್ ರೇಟ್ ಪಡೆದಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 480 ಪ್ಲಸ್ SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್11 ನಲ್ಲಿ My UX ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 4GB RAM ಮತ್ತು 64GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 20W ರಾಪಿಡ್ ಚಾರ್ಜಿಂಗ್ ಬೆಂಬಲಿಸಲಿದೆ.


Click it and Unblock the Notifications








