ಮೊಟೊರೊಲಾ ಎಡ್ಜ್‌ (2022) ಫೋನ್‌ ಲಾಂಚ್‌! ವಿಶೇಷತೆ ಏನು?

|

ಮೊಬೈಲ್‌ ಮಾರುಕಟ್ಟೆಯಲ್ಲಿ ಮೊಟೊರೊಲಾ ಕಂಪೆನಿಯ ಫೋನ್‌ಗಳಿಗೆ ತನ್ನದೇ ಆದ ಪ್ರಾಬಲ್ಯವಿದೆ. ತನ್ನ ಆಕರ್ಷಕ ಸ್ಮಾರ್ಟ್‌ಫೋನ್‌ಗಳ ಮೂಲಕ ಸ್ಮಾರ್ಟ್‌ಫೋನ್‌ ಪ್ರಿಯರ ಗಮನಸೆಳೆದಿದೆ. ಸದ್ಯ ಇದೀಗ ತನ್ನ ಹೊಸ ಮೊಟೊರೊಲಾ ಎಡ್ಜ್‌ (2022) ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್‌ ಡೈಮೆನ್ಸಿಟಿ 1050 ಪ್ರೊಸೆಸರ್‌ ಹೊಂದಿರುವ ಮೊದಲ ಫೋನ್ ಆಗಿದೆ. ಇದು ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಒಳಗೊಂಡಿದೆ.

ಮೊಟೊರೊಲಾ

ಹೌದು, ಮೊಟೊರೊಲಾ ಕಂಪೆನಿ ಹೊಸ ಮೊಟೊರೊಲಾ ಎಡ್ಜ್‌ (2022) ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿದೆ. ಇದು ಮೊಟೊರೊಲಾ ಎಡ್ಜ್ (2021) ಫೋನಿನ ಉತ್ತರಾಧಿಕಾರಿಯಾಗಿದ್ದು, ಮಧ್ಯಮ ಶ್ರೇಣಿಯ ಫೋನ್‌ ಆಗಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 30W ಟರ್ಬೋಪವರ್ ಚಾರ್ಜಿಂಗ್ ಮತ್ತು 15W ವೈರ್‌ಲೆಸ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನಿನ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಮೊಟೊರೊಲಾ ಎಡ್ಜ್‌ (2022) ಸ್ಮಾರ್ಟ್‌ಫೋನ್‌ 6.6 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ OLED ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್ ಸಾಮರ್ಥ್ಯವನ್ನು ಹೊಂದಿದೆ. ಇದು 20:9 ರಚನೆಯ ಅನುಪಾತವನ್ನು ಪಡೆದಿದ್ದು, 144Hz ವರೆಗೆ ರಿಫ್ರೆಶ್ ರೇಟ್‌ ಅನ್ನು ಹೊಂದಿದೆ. ಈ ಡಿಸ್‌ಪ್ಲೇ 10 ಬಿಟ್ ಬಣ್ಣಗಳು ಮತ್ತು HDR10+ ಅನ್ನು ಬೆಂಬಲಿಸುತ್ತದೆ.

ಪ್ರೊಸೆಸರ್‌ ಯಾವುದು?

ಪ್ರೊಸೆಸರ್‌ ಯಾವುದು?

ಮೊಟೊರೊಲಾ ಎಡ್ಜ್‌ (2022) ಮೀಡಿಯಾ ಟೆಕ್ ಡೈಮೆನ್ಸಿಟಿ 1050 ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದೆ. ಇದು ಆಂಡ್ರಾಯ್ಡ್‌ 12 ನಲ್ಲಿ My UX ನೊಂದಿಗೆ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 6GB RAM ಮತ್ತು 128GB ಹಾಗೂ 8GB RAM ಮತ್ತು 256 GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ.

ಕ್ಯಾಮೆರಾ ಹೇಗಿದೆ?

ಕ್ಯಾಮೆರಾ ಹೇಗಿದೆ?

ಮೊಟೊರೊಲಾ ಎಡ್ಜ್ (2022) ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 13 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಲೆನ್ಸ್‌ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಒಳಗೊಂಡಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಮೊಟೊರೊಲಾ ಎಡ್ಜ್ (2022) ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 30W ಟರ್ಬೋಪವರ್ ಚಾರ್ಜಿಂಗ್ ಮತ್ತು 15W ವಾಯರ್‌ಲೆಸ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಡ್ಯುಯಲ್ ಸ್ಟಿರಿಯೊ ಸ್ಪೀಕರ್‌ಗಳು, USB-C ಪೋರ್ಟ್, 5G, Wi-Fi 6E, ಬ್ಲೂಟೂತ್ 5.2, GPS ಮತ್ತು NFCಯನ್ನು ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಮೊಟೊರೊಲಾ ಎಡ್ಜ್‌ 2022 ಸ್ಮಾರ್ಟ್‌ಫೋನ್‌ US ನಲ್ಲಿ ಬಿಡುಗಡೆಯಾಗಿದೆ. ಇದರ ಬೆಲೆ ಯುಎಸ್‌ನಲ್ಲಿ $498 ಆಗಿದೆ. ಇದನ್ನು ಮೊದಲು T-ಮೊಬೈಲ್ ಮೂಲಕ ಮಾರಾಟ ಮಾಡಲಾಗುವುದು ಮತ್ತು ನಂತರ ಅದನ್ನು ವೆರಿಝೋನ್, AT&T, ಸ್ಪೆಕ್ಟ್ರಮ್ ಮೊಬೈಲ್, US ಸೆಲ್ಯುಲಾರ್ ಮತ್ತು ವಿಸಿಬಲ್ ಮೂಲಕ ಬಿಡುಗಡೆ ಮಾಡಲಾಗುವುದು ಎನ್ನಲಾಗಿದೆ. ಇದಲ್ಲದೆ ಅನ್‌ಲಾಕ್ ಮಾಡಲಾದ ಎಡ್ಜ್ (2022) ಅನ್ನು ಮೊಟೊರೊಲಾ ವೆಬ್‌ಸೈಟ್, ಅಮೆಜಾನ್‌ ಮತ್ತು ಬೆಸ್ಟ್‌ಬೈ ಮೂಲಕ ಸೀಮಿತ ಅವಧಿಗೆ $499 ಬೆಲೆಯೊಂದಿಗೆ ಮಾರಾಟ ಮಾಡಲಾಗುತ್ತದೆ. ಇದು ಮಿನರಲ್ ಗ್ರೇ ಬಣ್ಣದಲ್ಲಿ ಮಾತ್ರ ಬರುತ್ತದೆ.

Best Mobiles in India

English summary
Motorola Edge (2022) is the first-ever phone to feature the Dimensity 1050 chipset.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X