Just In
Don't Miss
- News
ಕರ್ನಾಟಕದ 25 ಜಿಲ್ಲೆಗಳಲ್ಲಿ ಒಂದಂಕಿ ಕೊರೊನಾವೈರಸ್ ಕೇಸ್!
- Movies
'ತಲೆದಂಡ' ಸಿನಿಮಾಕ್ಕೆ ಅನ್ಯಾಯ: ಮನವಿ ಮಾಡಿದ ಸಂಚಾರಿ ವಿಜಯ್
- Finance
ಅಡಿಕೆ, ಕಾಫೀ, ಮೆಣಸು ಹಾಗೂ ರಬ್ಬರ್ನ ಮಾ. 08ರ ಮಾರುಕಟ್ಟೆ ದರ ಇಲ್ಲಿದೆ
- Automobiles
ಸ್ಕ್ರ್ಯಾಪೇಜ್ ನೀತಿ ಅಳವಡಿಸಿಕೊಳ್ಳುವ ವಾಹನ ಮಾಲೀಕರಿಗೆ ಸಿಹಿಸುದ್ದಿ ನೀಡಿದ ಕೇಂದ್ರ ಸರ್ಕಾರ
- Sports
ಸೌತಾಂಪ್ಟನ್ನಲ್ಲಿ ಭಾರತ-ನ್ಯೂಜಿಲೆಂಡ್ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್
- Lifestyle
ಹೀಗೆ ಆಯ್ಕೆ ಮಾಡಿದರೆ ನೀವು ಬಯಸಿದಂಥ ಸಂಗಾತಿಯೇ ಸಿಗುವರು
- Education
Indian Postal Circle Recruitment 2021: 1421 ಬಿಪಿಎಂ, ಅಬಿಪಿಎಂ ಮತ್ತು ದಖ್ ಸೇವಕ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಶೀಘ್ರದಲ್ಲೇ ಲಾಂಚ್ ಆಗಲಿದೆ ಮೊಟೊರೊಲಾ IBIZA ಸ್ಮಾರ್ಟ್ಫೋನ್!
ಹೊಸ ವರ್ಷ ಶುರುವಾಗ್ತಿದ್ದ ಹಾಗೇ ಸ್ಮಾರ್ಟ್ಫೋನ್ ಕಂಪೆನಿಗಳು ತಮ್ಮ ಹೊಸ ಸ್ಮಾರ್ಟ್ಫೋನ್ಗಳನ್ನು ಬಿಡುಗಡೆ ಮಾಡಲು ಒಂದರ ಮೆಲೊಂದರಂತೆ ಮುಂದಾಗಿವೆ. ಸದ್ಯ ಇದೀಗ ತನ್ನ ಬಿನ್ನ ಮಾದರಿಯ ಸ್ಮಾರ್ಟ್ಫೋನ್ಗಳಿಂದ ಗುರುತಿಸಿಕೊಂಡಿರುವ ಮೊಟೊರೊಲಾ ಕಂಪೆನಿ ತನ್ನ ಹೊಸ ಮೊಟೊರೊಲಾ 5G ಸ್ಮಾರ್ಟ್ಫೋನ್ ಅನ್ನು ಬಿಡುಗಡೆ ಮಾಡಲು ಸಿದ್ದತೆ ನಡೆಸಿದೆ. ಈ ಸ್ಮಾರ್ಟ್ಫೋನ್ ಅನ್ನು ಮೊಟೊರೊಲಾ IBIZA ಎಂಬ ಸಂಕೇತನಾಮವನ್ನು ನೀಡಲಾಗಿದೆ.

ಹೌದು, ಮೊಟೊರೊಲಾ ಕಂಪೆನಿ ತನ್ನ ಹೊಸ 5G- ಬೆಂಬಲಿಸುವ ಮೊಟೊರೊಲಾ IBIZA ಸ್ಮಾರ್ಟ್ಫೋನ್ ಅನ್ನು ಬಿಡುಗಡೆಗೆ ಸಿದ್ದತೆ ನಡೆಸಿದೆ. ಇದು ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 400 SoC ಪ್ರೊಸೆಸರ್ ಒಳಗೊಂಡ ಸ್ಮಾರ್ಟ್ಫೋನ್ ಆಗಿರಲಿದೆ ಎಂದು ನಿರೀಕ್ಷಿಸಲಾಗಿದೆ. ಇನ್ನು ಈ ಸ್ಮಾರ್ಟ್ಫೋನ್ 90Hz ಡಿಸ್ಪ್ಲೇ ರಿಫ್ರೆಶ್ ರೇಟ್ ಅನ್ನು ಒಳೊಂಡಿದೆ. ಇನ್ನುಳಿದಂತೆ ಈ ಸ್ಮಾರ್ಟ್ಫೋನ್ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್ಪ್ಲೇ ಹೇಗಿರಲಿದೆ?
ಮೊಟೊರೊಲಾ IBIZA ಸ್ಮಾರ್ಟ್ಫೋನ್ Q1 2021 ರಲ್ಲಿ ಬಿಡುಗಡೆಯಾಗುವ ಸಾಧ್ಯತೆಯಿದೆ. ಈ ಸ್ಮಾರ್ಟ್ಫೋನ್ 720x1,600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ ಹೆಚ್ಡಿ ಪ್ಲಸ್ ಡಿಸ್ಪ್ಲೇ ಹೊಂದಿರುವ ನಿರೀಕ್ಷೆಯಿದೆ. ಜೊತೆಗೆ ಇದು 90Hz ಡಿಸ್ಪ್ಲೇ ರಿಫ್ರೆಶ್ ರೇಟ್ ಅನ್ನು ಹೊಂದಿರಲಿದೆ ಎಂದು ಅಂದಾಜಿಸಲಾಗಿದೆ. ಈ ಡಿಸ್ಪ್ಲೇ ವಾಟರ್ಡ್ರಾಪ್ ನಾಚ್ ಶೈಲಿಯನ್ನು ಹೊಂದಿರಲಿದೆ ಎನ್ನಲಾಗಿದೆ.

ಪ್ರೊಸೆಸರ್ ಯಾವುದು?
ಇನ್ನು ಈ ಸ್ಮಾರ್ಟ್ಫೋನ್ ಕ್ವಾಲ್ಕಾಮ್ ಸ್ನಾಪ್ ಡ್ರಾಗನ್ 400SoC ಪ್ರೊಸೆಸರ್ ಅನ್ನು ಹೊಂದಿರಲಿದ್ದು, ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೇಯೇ 4GB RAM + 128 GB ಸಂಗ್ರಹದೊಂದಿಗೆ ಬರುವ ಸಾಧ್ಯತೆಯಿದೆ. ಆದರೂ ಇತರ ವೇರಿಯೆಂಟ್ ಆಯ್ಕೆಗಳಲ್ಲೂ ಲಭ್ಯವಾಗುವ ನಿರೀಕ್ಷೆ ಇದೆ.

ಕ್ಯಾಮೆರಾ ವಿನ್ಯಾಸ
ಮೊಟೊರೊಲಾ IBIZA ಸ್ಮಾರ್ಟ್ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಹೊಂದಿರುವ ಸಾಧ್ಯತೆ ಇದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಮ್ಯಾಕ್ರೋ ಸೆನ್ಸಾರ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿರಲಿದೆ. ಇದಲ್ಲದೆ 13 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿರಬಹುದು ಎಂದು ಅಂದಾಜಿಸಲಾಗಿದೆ.

ಬ್ಯಾಟರಿ ಮತ್ತು ಇತರೆ ಫೀಚರ್ಸ್
ಈ ಸ್ಮಾರ್ಟ್ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್ಅಪ್ ಅನ್ನು ಹೊಂದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್ಸ್ಪಾಟ್, ವೈಫೈ, ಬ್ಲೂಟೂತ್, ಯುಎಸ್ಬಿ ಟೈಪ್ ಸಿ ಪೋರ್ಟ್ ಅನ್ನು ಬೆಂಬಲಿಸಲಿದೆ ಎನ್ನಲಾಗಿದೆ. ಸದ್ಯ ಈ ಸ್ಮಾರ್ಟ್ಫೋನ್ ಬೆಲೆ ಹಾಗೂ ಕಲರ್ ಆಯ್ಕೆಗಳ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.
-
92,999
-
17,999
-
39,999
-
29,400
-
38,990
-
29,999
-
16,999
-
23,999
-
18,170
-
21,900
-
14,999
-
17,999
-
42,099
-
16,999
-
23,999
-
29,495
-
18,580
-
64,900
-
34,980
-
45,900
-
17,999
-
54,153
-
7,000
-
13,999
-
38,999
-
29,999
-
20,599
-
43,250
-
32,440
-
16,190