Home
ಸುದ್ದಿಜಾಲ

ಶೀಘ್ರದಲ್ಲೇ ಮಾರುಕಟ್ಟೆಗೆ ಎಂಟ್ರಿ ನೀಡಲಿದೆ ಮೋಟೋ E7 ಸ್ಮಾರ್ಟ್‌ಫೋನ್‌!

ಜನಪ್ರಿಯ ಸ್ಮಾರ್ಟ್‌ಫೋನ್‌ ತಯಾರಕ ಮೊಟೊರೊಲಾ ಸಂಸ್ಥೆ ತನ್ನ ಬಜೆಟ್‌ ಬೆಲೆಯ ಸ್ಮಾರ್ಟ್‌ಫೋನ್‌ಗಳಿಗೆ ಪ್ರಸಿದ್ಧಿ ಪಡೆದುಕೊಂಡಿದೆ. ಈಗಾಲೇ ಹಲವು ಬಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನ ಪರಿಚಯಿಸಿ ಸ್ಮಾರ್ಟ್‌ಫೋನ್‌ ಪ್ರಿಯರಿಂದ ಸೈ ಎನಿಸಿಕೊಂಡಿದೆ. ಸದ್ಯ ಇದೀಗ ತನ್ನ ಮತ್ತೊಂದು ಹೊಸ ಎಂಟ್ರಿ ಲೆವೆಲ್ ಫೋನ್ ಮೋಟೋ E7 ಅನ್ನು ಬಿಡುಗಡೆ ಮಾಡಲು ಸಿದ್ಧತೆ ನಡೆಸಿದೆ. ಇದು ಮೊಟೊರೊಲಾ ಕಂಪನಿಯು ಕಳೆದ ವರ್ಷ ಬಿಡುಗಡೆ ಮಾಡಿದ ಮೋಟೋ E6 ಸ್ಮಾರ್ಟ್‌ಫೋನ್‌ ಉತ್ತರಾಧಿಕಾರಿಯಾಗಲಿದೆ ಎನ್ನಲಾಗಿದೆ.

ಮೊಟೊರೊಲಾ

ಹೌದು, ಮೊಟೊರೊಲಾ ಕಂಪೆನಿ ತನ್ನ ಹೊಸ ಎಂಟ್ರಿ ಲೆವೆಲ್ ಫೋನ್ ಮೋಟೋ E7 ಅನ್ನು ಬಿಡುಗಡೆ ಮಾಡಲು ಸಿದ್ಧತೆ ನಡೆಸಿದೆ. ಸದ್ಯ ಈ ಸ್ಮಾರ್ಟ್‌ಫೋನ್‌ ವಾಟರ್‌ ಡ್ರಾಪ್‌ ನಾಚ್‌ ವಿನ್ಯಾಶವನ್ನು ಹೊಂದಿರಲಿದೆ ಎನ್ನಲಾಗಿದೆ. ಜೊತೆಗೆ ಇದು 6.5-ಇಂಚಿನ ಹೆಚ್‌ಡಿ + ಡಿಸ್‌ಪ್ಲೇ ಹೊಂದಿರಬಹುದು ಎಂದು ಅಂದಾಜಿಸಲಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಫೀಚರ್ಸ್‌ ಆನ್‌ಲೈನ್‌ ನಲ್ಲಿ ಲೀಕ್‌ ಆಗಿದೆ. ಲೀಕ್‌ ಮಾಹಿತಿ ಪ್ರಕಾರ ಇದು ಯಾವೆಲ್ಲಾ ಫೀಚರ್ಸ್‌ ಹೊಂದಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಮೋಟೋ E7

ಮೊಟೊರೊಲಾ ಮೋಟೋ E7 ಸ್ಮಾರ್ಟ್‌ಫೋನ್‌ 720 x 1560 ಪಿಕ್ಸೆಲ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5 ಇಂಚಿನ ಹೆಚ್‌ಡಿ+ ಡಿಸ್‌ಪ್ಲೇ ಹೊಂದಿರಲಿದೆ ಎಂದು ಅಂದಾಜಿಸಲಾಗಿದೆ. ಅಲ್ಲದೆ ಈ ಡಿಸ್‌ಪ್ಲೇಯು 19.5:9 ರಚನೆಯ ಅನುಪಾತವನ್ನು ಒಳಗೊಂಡಿದೆ. ಜೊತೆಗೆ ಈ ಡಿಸ್‌ಪ್ಲೇ 264 ppi ಸಾಂದ್ರತೆಯನ್ನು ಒಳಗೊಂಡಿರಲಿದೆ ಎಂದು ನಿರೀಕ್ಷಿಸಲಾಗಿದೆ. ಅಲ್ಲದೆ ಈ ಫೋನ್ ಆಂಡ್ರಾಯ್ಡ್ 10 ಆಪರೇಟಿಂಗ್ ಸಿಸ್ಟಂನಲ್ಲಿ ಕಾರ್ಯನಿರ್ವಹಿಸಬಹುದು ಎಂದು ಅಂದಾಜಿಸಲಾಗಿದೆ.

ಸ್ಮಾರ್ಟ್‌ಫೋನ್

ಇನ್ನು ಈ ಸ್ಮಾರ್ಟ್‌ಫೋನ್‌ ಡ್ಯುಯಲ್ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್‌ ಸೆನ್ಸಾರ್‌, 2 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿರಬಹುದು ಎನ್ನಲಾಗಿದೆ. ಇದಲ್ಲದೆ ವೀಡಿಯೊ ಕರೆಗಾಗಿ 5 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿರಲಿದೆ. ಕ್ಯಾಮೆರಾ ಫೀಚರ್ಸ್‌ಗಳಲ್ಲಿ ಎಲ್ಇಡಿ ಫ್ಲ್ಯಾಷ್, ಹೆಚ್‌ಡಿಆರ್, ಪನೋರಮಾ ಮೋಡ್‌ ಅನ್ನು ಹೊಂದಿರಲಿದೆ ಎಂದು ನಿರೀಕ್ಷಿಸಲಾಗಿದೆ.

ಸ್ಮಾರ್ಟ್‌ಫೋನ್‌

ಇದು 4,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿರಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಬ್ಲೂಟೂತ್‌, ಹಾಟ್‌ಸ್ಪಾಟ್‌,ವೈಫೈ, 3.5mm ಹೆಡ್‌ಫೋನ್‌ ಜ್ಯಾಕ್‌ ಅನ್ನು ಬೆಂಬಲಿಸಲಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್‌ ಪವರ್ ಮತ್ತು ವಾಲ್ಯೂಮ್ ಬಟನ್‌ಗಳನ್ನು ಒಳಗೊಂಡಿರುತ್ತವೆ. ಇನ್ನು ಈ ಮೋಟೋ E7 ಸ್ಮಾರ್ಟ್‌ಫೋನ್‌ ನೀಲಿ ಮತ್ತು ಬೂದು ಬಣ್ಣಗಳ ಆಯ್ಕೆಗಳಲ್ಲಿ ಲಬ್ಯವಾಗಲಿದೆ ಎಂದು ಹೇಳಲಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಯಾವಾಗ ಬಿಡುಗಡೆ ಆಗಲಿದೆ, ಇದರ ಬೆಲೆ ಎಷ್ಟಿರಲಿದೆ ಎನ್ನುವ ಮಾಹಿತಿ ಇನ್ನು ಲಭ್ಯವಾಗಿಲ್ಲ.

Best Mobiles in India

English summary
Motorola is reportedly preparing to launch its new entry-level phone called the Moto E7.to know more visit to kannada.gizbot.com
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+