Home
ಸುದ್ದಿಜಾಲ

ಬಜೆಟ್‌ ಬೆಲೆಯಲ್ಲಿ ದೂಳೆಬ್ಬಿಸಲು ಮೊಟೊ E13 ತಯಾರಿ! ಲಾಂಚ್‌ ಯಾವಾಗ!

ಸ್ಮಾರ್ಟ್‌ಫೋನ್‌ ಪ್ರಿಯರ ನೆಚ್ಚಿನ ಬ್ರ್ಯಾಂಡ್‌ಗಳಲ್ಲಿ ಮೊಟೊರೊಲಾ ಕಂಪೆನಿ ಕೂಡ ಒಂದಾಗಿದೆ. ಮೊಟೊರೊಲಾ ಕಂಪೆನಿಯು ಸ್ಮಾರ್ಟ್‌ಫೋನ್‌ಗಳ ಸ್ಟೈಲಿಶ್‌ ವಿನ್ಯಾಸ, ಆಕರ್ಷಕ ಫೀಚರ್ಸ್‌ಗಳಿಗೆ ಹೆಸರು ಪಡೆದುಕೊಂಡಿದೆ. ಅದಕ್ಕೆ ತಕ್ಕಂತೆ ಮೊಟೊರೊಲಾ ಕಂಪೆನಿ ವಿಭಿನ್ನ ಬೆಲೆ ಮಾದರಿಯಲ್ಲಿ ಅನೇಕ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿದೆ. ಸದ್ಯ ಇದೀಗ ಭಾರತದಲ್ಲಿ ಅತಿ ಶೀಘ್ರದಲ್ಲೇ ಮತ್ತೊಂದು ಹೊಸ ಸ್ಮಾರ್ಟ್‌ಫೋನ್‌ ಪರಿಚಯಿಸಲು ಸಿದ್ಧತೆ ನಡೆಸಿದೆ. ಈ ಸ್ಮಾರ್ಟ್‌ಫೋನ್‌ ಅನ್ನು ಮೊಟೊ E13 ಎಂದು ಹೆಸರಿಸಲಾಗಿದೆ.

ಬಜೆಟ್‌ ಬೆಲೆಯಲ್ಲಿ ದೂಳೆಬ್ಬಿಸಲು ಮೊಟೊ E13 ತಯಾರಿ! ಲಾಂಚ್‌ ಯಾವಾಗ!

ಹೌದು, ಮೊಟೊರೊಲಾ ಕಂಪೆನಿ ಭಾರತದಲ್ಲಿ ಮೊಟೊ E13 ಬಿಡುಗಡೆಗೆ ತಯಾರಿ ನಡೆಸಿದೆ. ಈ ಸ್ಮಾರ್ಟ್‌ಫೋನ್‌ ಶೀಘ್ರದಲ್ಲೇ ಭಾರತಕ್ಕೆ ಎಂಟ್ರಿ ನೀಡಲಿದ್ದು, ಸಿಂಗಲ್‌ ವೇರಿಯೆಂಟ್‌ ಆಯ್ಕೆಯಲ್ಲಿ ಲಭ್ಯವಾಗಲಿದೆ ಎಂಬ ವಿಚಾರ ಬಹಿರಂಗವಾಗಿದೆ. ಇದರೊಂದಿಗೆ ಈ ಸ್ಮಾರ್ಟ್‌ಫೋನ್‌ ಅರೋರಾ ಗ್ರೀನ್‌ ಬಣ್ಣದ ಆಯ್ಕೆಯಲ್ಲಿ ದೊರೆಯಲಿದೆ ಎನ್ನಲಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಯುನಿಸಾಕ್ T606 ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ ಎಂದು ವರದಿಯಾಗಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ಗಳೊಂದಿಗೆ ಬರಬಹುದು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಮೊಟೊ E13 ಡಿಸ್‌ಪ್ಲೇ ರಚನೆ ಹೇಗಿರಲಿದೆ?
ಮೊಟೊ E13 ಸ್ಮಾರ್ಟ್‌ಫೋನ್‌ 6.5 ಇಂಚಿನ IPS LCD ಡಿಸ್‌ಪ್ಲೇಯನ್ನು ಹೊಂದಿರಲಿದೆ. ಈ ಡಿಸ್‌ಪ್ಲೇ 720 x 1600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದೊಂದಿಗೆ ಬರಲಿದೆ ಎಂದು ಹೇಳಲಾಗಿದೆ. ಇನ್ನು ಡಿಸ್‌ಪ್ಲೇ 60Hz ರಿಫ್ರೆಶ್ ರೇಟ್ ಬೆಂಬಲಿಸುವ ಸಾಧ್ಯತೆಯಿದ್ದು, ವಾಟರ್‌ಡ್ರಾಪ್ ನಾಚ್ ವಿನ್ಯಾಸವನ್ನು ಪಡೆದಿರಬಹುದು ಎಂದು ಅಂದಾಜಿಸಲಾಗಿದೆ.

ಮೊಟೊ E13 ಪ್ರೊಸೆಸರ್‌ ಯಾವುದು? ನಿರೀಕ್ಷೆ ಏನು?
ಮೊಟೊ E13 ಸ್ಮಾರ್ಟ್‌ಫೋನ್‌ ಯುನಿಸಾಕ್ T606 ಪ್ರೊಸೆಸರ್‌ ವೇಗವನ್ನು ಹೊಂದಿರಲಿದೆ ಎಂದು ಅಂದಾಜಿಸಲಾಗಿದೆ. ಇದು ಎಂಟ್ರಿ ಲೆವೆಲ್‌ ಪ್ರೊಸೆಸರ್‌ ಆಗಿರಲಿದೆ ಎಂದು ಹೇಳಲಾಗಿದೆ. ಜೊತೆಗೆ ಆಂಡ್ರಾಯ್ಡ್‌ 3 (ಗೋ ಎಡಿಷನ್‌) ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 2GB RAM ಮತ್ತು 64GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯದಲ್ಲಿ ಬರಲಿದೆ ಎಂದು ಅಂದಾಜಿಸಲಾಗಿದೆ. ಇದಲ್ಲದೆ ಮೆಮೊರಿ ಕಾರ್ಡ್‌ ಬೆಂಬಲದೊಂದಿಗೆ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವುದಕ್ಕೆ ಸಾಧ್ಯವಾಗಲಿದೆ ಎಂದು ಹೇಳಲಾಗಿದೆ.

ಬಜೆಟ್‌ ಬೆಲೆಯಲ್ಲಿ ದೂಳೆಬ್ಬಿಸಲು ಮೊಟೊ E13 ತಯಾರಿ! ಲಾಂಚ್‌ ಯಾವಾಗ!

ಮೊಟೊ E13 ಕ್ಯಾಮೆರಾ ಸೆಟ್‌ಅಪ್‌ ಏನಿರಬಹುದು?
ಮೊಟೊ E13 ಸ್ಮಾರ್ಟ್‌ಫೋನ್‌ ಹಿಂಭಾಗದಲ್ಲಿ ಸಿಂಗಲ್‌ ಕ್ಯಾಮೆರಾ ಹೊಂದಿರಬಹುದು ಎಂದು ವರದಿಯಾಗಿದೆ. ಇದು 13 ಮೆಗಾಪಿಕ್ಸೆಲ್‌ ಸೆನ್ಸಾರ್‌ ಕ್ಯಾಮೆರಾ ಆಗಿರಲಿದೆ ಎಂದು ಹೇಳಲಾಗಿದೆ. ಜೊತೆಗೆ ಎಲ್‌ಇಡಿ ಫ್ಲ್ಯಾಷ್‌ ಅನ್ನು ಸಹ ನೀಡಲಾಗಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್‌ 5 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ನೀಡಲಾಗಿದೆ.

ಮೊಟೊ E13 ಬ್ಯಾಟರಿ ಬ್ಯಾಕ್‌ಅಪ್‌ ಎಷ್ಟಿರಬಹುದು?
ಇನ್ನು ಈ ಸ್ಮಾರ್ಟ್‌ಫೋನ್‌ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿರಬಹುದು ಎಂದು ಹೇಳಲಾಗಿದೆ. ಇದು ವೇಗದ ಚಾರ್ಜಿಂಗ್‌ ಬೆಂಬಲಿಸುವುದರ ಬಗ್ಗೆ ಯಾವುದೇ ಮಾಹಿತಿ ಬಹಿರಂಗವಾಗಿಲ್ಲ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ವೈಫೈ, ಬ್ಲೂಟೂತ್‌, ಯುಎಸ್‌ಬಿ ಸಿ ಪೋರ್ಟ್‌ ಮತ್ತು ಹೆಡ್‌ಫೋನ್‌ ಜ್ಯಾಕ್‌ ಅನ್ನು ಬೆಂಬಲಿಸಲಿದೆ ಎಂದು ನಿರೀಕ್ಷಿಸಲಾಗಿದೆ.

ಬಜೆಟ್‌ ಬೆಲೆಯಲ್ಲಿ ದೂಳೆಬ್ಬಿಸಲು ಮೊಟೊ E13 ತಯಾರಿ! ಲಾಂಚ್‌ ಯಾವಾಗ!

ಮೊಟೊ E13 ಬೆಲೆ ನಿರೀಕ್ಷೆ ಏನು? ಲಭ್ಯತೆ ಯಾವಾಗ?
ಮೊಟೊ E13 ಸ್ಮಾರ್ಟ್‌ಫೋನ್‌ ಭಾರತದಲ್ಲಿ ಇದೇ ಫೆಬ್ರವರಿ 8 ರಂದು ಬಿಡುಗಡೆಯಾಗುವ ನಿರೀಕ್ಷೆಯಿದೆ. ಈ ಸ್ಮಾರ್ಟ್‌ಫೋನ್‌ ಬಜೆಟ್‌ ಬೆಲೆಯ ಸ್ಮಾರ್ಟ್‌ಫೋನ್‌ ಆಗಿದ್ದು, 10,000ರೂ.ಗಿಂತ ಕಡಿಮೆ ಬೆಲೆಯಲ್ಲಿ ಲಭ್ಯವಾಗುವ ಸಾಧ್ಯತೆಯಿದೆ. ಇದು ಪೊಕೊ C50, ರಿಯಲ್‌ಮಿ C33 ನಂತಹ ಬಜೆಟ್‌ ಫೋನ್‌ಗಳಿಗೆ ಭಾರಿ ಪೈಪೋಟಿ ನೀಡಲಿದೆ ಎಂದು ನಿರೀಕ್ಷಿಸಲಾಗಿದೆ.

ಇದಲ್ಲದೆ ಮೊಟೊರೊಲಾ ಕಂಪೆನಿ ಇತ್ತೀಚಿಗೆ ತನ್ನ G ಸರಣಿಯಲ್ಲಿ ಮೊಟೊ G13, ಮೊಟೊ G23, ಮೊಟೊ G53 ಮತ್ತು ಮೊಟೊ G73 5G ಸ್ಮಾರ್ಟ್‌ಫೋನ್‌ಗಳನ್ನು ಬಿಡುಗಡೆ ಮಾಡಿತ್ತು. ಈ ಸ್ಮಾರ್ಟ್‌ಫೋನ್‌ಗಳು ವಿಭಿನ್ನ ಬೆಲೆಯ ವಿಭಾಗದಲ್ಲಿ ಎಂಟ್ರಿ ನೀಡಿದ್ದು, ಮಾರುಕಟ್ಟೆಯಲ್ಲಿ ಹೊಸ ಅಲೆಯನ್ನು ಎಬ್ಬಿಸಿವೆ. ಇದರಲ್ಲಿ ಮೊಟೊ G23 ಮತ್ತು ಮೊಟೊ G13 ಸ್ಮಾರ್ಟ್‌ಫೋನ್‌ಗಳು 6.5 ಇಂಚಿನ ಐಪಿಎಸ್‌ ಎಲ್‌ಸಿಡಿ ಡಿಸ್‌ಪ್ಲೇಯನ್ನು ಹೊಂದಿವೆ. ಈ ಡಿಸ್‌ಪ್ಲೇ 720 x 1600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದಿವೆ. ಇದು 90Hz ರಿಫ್ರೆಶ್‌ ರೇಟ್‌, 400 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ಹೊಂದಿದ್ದು, 83.9% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಒಳಗೊಂಡಿದೆ. ಜೊತೆಗೆ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಪಡೆದಿದೆ.

Best Mobiles in India

English summary
The smartphone will come with a 6.5-inch IPS LCD. Since it is a budget phone, the E13 4G has a 60Hz refresh rate panel.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+