ಭಾರತದಲ್ಲಿ ಮೋಟೋ E40 ಸ್ಮಾರ್ಟ್‌ಫೋನ್ ಬಿಡುಗಡೆ! ಬೆಲೆ ಎಷ್ಟು?
ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳಿಗೆ ಮೊಟೊರೊಲಾ ಕಂಪೆನಿ ಪ್ರಸಿದ್ಧಿ ಪಡೆದಿದೆ. ಬಳಕೆದಾರರ ಆಶಯಗಳಿಗೆ ತಕ್ಕಂತೆ ಆಕರ್ಷಕ ವಿನ್ಯಾಸದ ಸ್ಮಾರ್ಟ್‌ಫೋನ್ ಪರಿಚಯಿಸುವಲ್ಲಿ ಸೈ ಎನಿಸಿಕೊಂಡಿದೆ. ಸದ್ಯ ಇದೀಗ ಮೊಟೊರೊಲಾ ಕಂಪೆನಿ ಹೊಸ ಮೋಟೋ E40 ಸ್ಮಾರ್ಟ್‌ಫೋನ್ ಅನ್ನು ಭಾರತದಲ್ಲಿ ಲಾಂಚ್ ಮಾಡಿದೆ. ಇನ್ನು ಈ ಸ್ಮಾರ್ಟ್‌ಫೋನ್ 90Hz ಡಿಸ್‌ಪ್ಲೇಯನ್ನು ಪಡೆದುಕೊಂಡಿದ್ದು, ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ.

ಹೌದು, ಮೊಟರೊಲಾ ಕಂಪೆನಿ ಭಾರತದಲ್ಲಿ ಹೊಸ ಮೋಟೋ E40 ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದೆ. ಇದು ಆಕ್ಟಾ-ಕೋರ್ ಯೂನಿಸೋಕ್ T700 SoC ಪ್ರೊಸೆಸರ್ ಬಲವನ್ನು ಪಡೆದಿದೆ. ಜೊತೆಗೆ 10W ಚಾರ್ಜಿಂಗ್ ಬೆಂಬಲಿಸುವ 5,000 mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್ ಕಾರ್ಬನ್ ಗ್ರೇ ಮತ್ತು ಪಿಂಕ್ ಕ್ಲೇ ಬಣ್ಣಗಳ ಆಯ್ಕೆಯಲ್ಲಿ ಬರುತ್ತದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ ರಚನೆ
ಮೋಟೋ E40 ಸ್ಮಾರ್ಟ್‌ಫೋನ್ 720x1,600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.5-ಇಂಚಿನ ಮ್ಯಾಕ್ಸ್ ವಿಷನ್ ಹೆಚ್‌ಡಿ+ ಪ್ಲಸ್ ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಡಿಸ್‌ಪ್ಲೇ IPS LCD ಡಿಸ್‌ಪ್ಲೇ ಆಗಿದ್ದು, 20:9 ರಚನೆಯ ಅನುಪಾತವನ್ನು ಪಡೆದುಕೊಂಡಿದೆ. ಈ ಡಿಸ್‌ಪ್ಲೇ 81.6% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಹೊಂದಿದೆ. ಅಲ್ಲದೆ ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್ ಅನ್ನು ಹೊಂದಿದೆ. ಹಾಗೆಯೇ ಈ ಡಿಸ್‌ಪ್ಲೇ 270ಪಿಪಿಐ ಸಾಂದ್ರತೆಯನ್ನು ಒಳಗೊಂಡಿದೆ.

ಪ್ರೊಸೆಸರ್ ಯಾವುದು?
ಮೋಟೋ E40 ಸ್ಮಾರ್ಟ್‌ಫೋನ್ ಯೂನಿಸೋಕ್ T700 SoC ಪ್ರೊಸೆಸರ್ ಸಾಮರ್ಥ್ಯವನ್ನು ಹೊಂದಿದ್ದು, ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಜೊತೆಗೆ 4GB RAM ಮತ್ತು 64GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಮೈಕ್ರೋ ಎಸ್‌ಡಿ ಕಾರ್ಡ್ ಬಳಸಿ ಸಂಗ್ರಹ ಸಾಮರ್ಥ್ಯವನ್ನು 1TB ವರೆಗೆ ವಿಸ್ತರಿಸಬಹುದಾಗಿದೆ.

ಟ್ರಿಪಲ್ ರಿಯರ್ ಕ್ಯಾಮೆರಾ
ಇನ್ನು ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಪ್ರಾಥಮಿಕ ಸೆನ್ಸಾರ್ ಜೊತೆಗೆ f/1.79 ಲೆನ್ಸ್ ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸರ್ ಜೊತೆಗೆ f/2.4 ಲೆನ್ಸ್ ಹೊಂದಿದೆ. ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಅನ್ನು ಹೊಂದಿದೆ. ಇನ್ನು ರಿಯರ್ ಕ್ಯಾಮೆರಾಗಳು ಪೋರ್ಟ್ರೇಟ್ ಮೋಡ್, ಪನೋರಮಾ, ಫೇಸ್ ಬ್ಯೂಟಿ, ಎಚ್‌ಡಿಆರ್ ನೈಟ್ ವಿಷನ್, ಮ್ಯಾಕ್ರೋ ವಿಷನ್ ಮತ್ತು ಪ್ರೊ ಮೋಡ್ ಫೀಚರ್ಸ್‌ಗಳನ್ನು ಬೆಂಬಲಿಸುತ್ತವೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಹೊಂದಿದೆ.

ಬ್ಯಾಟರಿ ಮತ್ತು ಇತರೆ
ಮೋಟೋ E40 ಸ್ಮಾರ್ಟ್‌ಫೋನ್ 5,000 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 10W ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE, Wi-Fi 802.11 a/b/g, ಬ್ಲೂಟೂತ್ v5.0, GPS/A-GPS, FM ರೇಡಿಯೋ ಮತ್ತು USB ಟೈಪ್-ಸಿ ಪೋರ್ಟ್ ಅನ್ನು ಬೆಂಬಲಿಸಲಿದೆ. ಇದಲ್ಲದೆ ಅಕ್ಸೆಲೆರೊಮೀಟರ್, ಆಂಬಿಯೆಂಟ್ ಲೈಟ್ ಮತ್ತು ಸಾಮೀಪ್ಯ ಸೆನ್ಸರ್ ಅನ್ನು ಒಳಗೊಂಡಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್ ರಿಯರ್ ಫಿಂಗರ್‌ಪ್ರಿಂಟ್ ಸೆನ್ಸಾರ್ ಹೊಂದಿದೆ.

ಬೆಲೆ ಮತ್ತು ಲಭ್ಯತೆ
ಭಾರತದಲ್ಲಿ ಮೊಟೊರೊಲಾ ಮೋಟೋ E40 ಸ್ಮಾರ್ಟ್‌ಫೋನ್ 4GB RAM + 64GB ಸ್ಟೋರೇಜ್ ರೂಪಾಂತರಕ್ಕೆ 9,499.ರೂ ಬೆಲೆ ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್ ಕಾರ್ಬನ್ ಗ್ರೇ ಮತ್ತು ಪಿಂಕ್ ಕ್ಲೇ ಬಣ್ಣಗಳಲ್ಲಿ ಲಭ್ಯವಾಗಲಿದೆ. ಇದು ಫ್ಲಿಪ್‌ಕಾರ್ಟ್ ಮೂಲಕ ಅಕ್ಟೋಬರ್ 17 ರಂದು ಫಸ್ಟ್ ಸೇಲ್ ಆರಂಭಿಸಲಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್ ಅನ್ನು ಕಳೆದ ವಾರ ಯುರೋಪ್‌ನಲ್ಲಿ ಸಹ ಬಿಡುಗಡೆ ಮಾಡಲಾಗಿದೆ. ಯುರೋಪ್‌ನಲ್ಲಿ ಕೂಡ 4GB RAM + 64GB ಆಯ್ಕೆಯಲ್ಲಿ ಬಿಡುಗಡೆ ಮಾಡಲಾಗಿದ್ದು, ಯುರೋಪ್‌ನಲ್ಲಿ ಯುರೋ 149 (ಅಂದಾಜು ರೂ. 13,000) ಬೆಲೆ ಹೊಂದಿದೆ.


Click it and Unblock the Notifications








