Home
ಸುದ್ದಿಜಾಲ

ಮೊಟೊರೊಲಾ ಸಂಸ್ಥೆಯಿಂದ ಮೋಟೋ G 5G ಪ್ಲಸ್ ಸ್ಮಾರ್ಟ್‌ಫೋನ್‌ ಬಿಡುಗಡೆ!

ಟೆಕ್‌ ವಲಯದಲ್ಲಿ ಹಲವು ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳು ಲಭ್ಯವಿವೆ. ಈಗಾಗಲೇ ಹಲವು ಕಂಪೆನಿಗಳು ತಮ್ಮ ಭಿನ್ನ ಮಾದರಿಯ ಸ್ಮಾರ್ಟ್‌ಫೋನ್ಗಳನ್ನ ಪರಿಚಯಿಸಿದ್ದು ಬಳಕೆದಾರರ ಕೈ ನಲ್ಲಿ ಸ್ಮಾರ್ಟ್‌ಫೋನ್‌ಗಳು ರಿಂಗಣಿಸುತ್ತಿವೆ. ಇನ್ನು ಮಾರುಕಟ್ಟೆಯಲ್ಲಿ ಹಲವು ಕಂಪೆನಿಗಳಿದ್ದರೂ ಸಹ ಗ್ರಾಹಕರು ಮಾತ್ರ ನೆಚ್ಚಿನ ಬ್ರ್ಯಾಂಡ್‌ಗಳನ್ನ ಆಯ್ಕೆ ಮಾಡಿಕೊಳ್ಳುತ್ತಾರೆ. ಸದ್ಯ ಇವುಗಳಲ್ಲಿ ಮೊಟೊರೊಲಾ ಕಂಪೆನಿ ಕೂಡ ಒಂದಾಗಿದ್ದು, ತನ್ನ ವಿಭಿನ್ನ ಸ್ಮಾರ್ಟ್‌ಫೋನ್‌ಗಳ ಮೂಲಕ ಗುರುತಿಸಿಕೊಂಡಿದೆ. ಸದ್ಯ ಇದೀಗ ತನ್ನ ಮತ್ತೊಂದು ಹೊಸ ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿದೆ.

ಮೊಟೊರೊಲಾ

ಹೌದು, ಮೊಟೊರೊಲಾ ಕಂಪೆನಿ ತನ್ನ ಹೊಸ ಮೋಟೋ G ಪ್ಲಸ್ ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಿದೆ. ಸದ್ಯ ಈ ಸ್ಮಾರ್ಟ್‌ಫೋನ್‌ ಭಾರತದ ಮಾರುಕಟ್ಟೆಯಲ್ಲಿ ಬಿಡುಗಡೆ ಆಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಡ್ಯುಯಲ್-ಪಂಚ್-ಹೋಲ್ ಡಿಸ್‌ಪ್ಲೇ ವಿನ್ಯಾಸ ಮತ್ತು ಬಿಗ್‌ ಸ್ಕ್ರೀನ್‌ ಅನ್ನು ಒಳಗೊಂಡಿದೆ. ಸದ್ಯ ಮೋಟೋ G5 G ಪ್ಲಸ್ ಬೆಲೆ € 349 ರಿಂದ ಪ್ರಾರಂಭವಾಗಲಿದ್ದು, ಭಾರತದಲ್ಲಿ ಇದು ಸುಮಾರು 29,500 ರೂ. ಬೆಲೆಯಲ್ಲಿ, ಲಭ್ಯವಾಗಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ನ ವಿಶೇಷತೆ ಏನು ಹಾಗೂ ವಿನ್ಯಾಸ ಹೇಗಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ

ಡಿಸ್‌ಪ್ಲೇ

ಮೋಟೋ G 5G ಪ್ಲಸ್‌ ಸ್ಮಾರ್ಟ್‌ಫೋನ್‌ 1080 x 2520 ಪಿಕ್ಸೆಲ್‌ ರೆಸಲ್ಯೂಶನ್‌ ಸಾಮರ್ಥ್ಯದ 6.7 ಇಂಚಿನ ಫುಲ್‌ಹೆಚ್‌ಡಿ ಡಿಸ್‌ಪ್ಲೇಯನ್ನ ಹೊಂದಿದೆ. ಇನ್ನು ಈ ಡಿಸ್‌ಪ್ಲೇಯು 21:9 ರಚನೆಯ ಅನುಪಾತವನ್ನ ಹೊಂದಿದ್ದು, 409PPI ಪಿಕ್ಸೆಲ್‌ ಸಾಂದ್ರತೆಯನ್ನ ಹೊಂದಿದ್ದೆ. ಇದಲ್ಲದೆ ಈ ಡಿಸ್‌ಪ್ಲೇಯು 90Hz ರಿಫ್ರೆಶ್ ರೇಟ್‌ ಅನ್ನು ಹೊಂದಿದ್ದು, ಎಚ್‌ಡಿಆರ್ 10 ಅನ್ನು ಬೆಂಬಲಿಸಲಿದೆ. ಅಲ್ಲದೆ ಇದು ಪಂಚ್-ಹೋಲ್ ಡಿಸ್‌ಪ್ಲೇ ವಿನ್ಯಾಸವನ್ನು ಹೊಂದಿದೆ.

ಪ್ರೊಸೆಸರ್‌

ಪ್ರೊಸೆಸರ್‌

ಇನ್ನು ಈ ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 765 5G ಪ್ರೊಸೆಸರ್‌ ವೇಗವನ್ನು ಹೊಂದಿದ್ದು, ಇದು ಆಂಡ್ರಾಯ್ಡ್‌ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೇ ಈ ಸ್ಮಾರ್ಟ್‌ಫೋನ್‌ 4GB RAM + 64GB, 6GB RAM + 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯ ಹೊಂದಿರುವ ಎರಡು ವೇರಿಯೆಂಟ್‌ ಆಯ್ಕೆಯನ್ನ ಹೊಂದಿದೆ.

ಕ್ಯಾಮೆರಾ ವಿನ್ಯಾಸ

ಕ್ಯಾಮೆರಾ ವಿನ್ಯಾಸ

ಮೋಟೋ G 5G ಪ್ಲಸ್‌ ಸ್ಮಾರ್ಟ್‌ಫೋನ್‌ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾವೈಡ್‌ ಕ್ಯಾಮೆರಾ, ಮೂರನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಮ್ಯಾಕ್ರೋ ಸೆನ್ಸಾರ್‌, ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್‌ ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್‌ ಸೆನ್ಸಾರ್‌ ಮತ್ತು 8 ಮೆಗಾಪಿಕ್ಸೆಲ್‌ ಅಲ್ಟ್ರಾವೈಡ್‌ ಸೆನ್ಸಾರ್‌ ಸಾಮರ್ಥ್ಯದ ಡ್ಯುಯೆಲ್‌ ಸೆಲ್ಫಿ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಇನ್ನು ಈ ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದ್ದು, ಇದು 20W ಯುಎಸ್‌ಬಿ-ಸಿ ಟರ್ಬೊಪವರ್ ಫಾಸ್ಟ್ ಚಾರ್ಜಿಂಗ್ ಮತ್ತು ಎನ್‌ಎಫ್‌ಸಿ ಯನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಬ್ಲೂಟೂತ್‌, ವೈಫೈ, ಹಾಟ್‌ಸ್ಪಾಟ್‌, 3.5 ಎಂಎಂ ಹೆಡ್‌ಫೋನ್ ಜ್ಯಾಕ್ ಮತ್ತು ಯುಎಸ್‌ಬಿ-ಟೈಪ್ ಸಿ ಯನ್ನು ಬೆಂಬಲಿಸಲಿದೆ. ಅಲ್ಲದೆ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್‌ ಸೆನ್ಸಾರ್ ಅನ್ನು ಸಹ ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಮೊಟೋ G 5G ಪ್ಲಸ್‌ ಸ್ಮಾರ್ಟ್‌ಫೋನ್‌ನಲ್ಲಿ 4GB RAM + 64GB ಆಂತರಿಕ ಸಾಮರ್ಥ್ಯದ ಆಯ್ಕೆಗೆ € 349 ಕ್ಕೆ ಬೆಲೆ ನಿಗದಿಪಡಿಸಲಾಗಿದ್ದು, ಇದು ಭಾರತದಲ್ಲಿ ಸುಮಾರು 29,500 ರೂ.ಬೆಲೆಗೆ ಲಭ್ಯವಾಗಲಿದೆ. ಇನ್ನು 6GB RAM + 128GB ಇಂಟರ್ ಸ್ಟೋರೇಜ್ ರೂಪಾಂತರದ ಸ್ಮಾರ್ಟ್‌ಫೋನ್‌ ಬೆಲೆ € 399 (ಅಂದಾಜು ರೂ 33,730) ಆಗಿದೆ.

Best Mobiles in India

English summary
The newly launched Motorola Moto G 5G Plus price starts from €349, which is around Rs 29,500 in India.to know more visit to kannada.gizbot.com
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+