ಬಹುನಿರೀಕ್ಷಿತ ಮೋಟೋ ಜಿ ಸ್ಟೈಲಸ್ 2022 ಸ್ಮಾರ್ಟ್‌ಫೋನ್ ಅನಾವರಣ!
ಮೊಟೊರೊಲಾ ಕಂಪೆನಿಯ ಬಹು ನಿರೀಕ್ಷಿತ ಮೋಟೋ ಜಿ ಸ್ಟೈಲಸ್ 2022 ಸ್ಮಾರ್ಟ್‌ಫೋನ್ ಅನಾವರಣಗೊಂಡಿದೆ. ಈ ಸ್ಮಾರ್ಟ್‌ಫೋನ್ ಮೋಟೋ ಜಿ ಸ್ಟೈಲಸ್ 2021ರ ಉತ್ತರಾಧಿಕಾರಿಯಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್ 90hz ರಿಫ್ರೆಶ್ ರೇಟ್ ಒಳಗೊಂಡ 6.8 ಇಂಚಿನ ಎಲ್‌ಸಿಡಿ ಡಿಸ್‌ಪ್ಲೇಯನ್ನು ಹೊಂದಿದೆ. ಜೊತೆಗೆ , 5000mAh ಸಾಮರ್ಥ್ಯದ ಬ್ಯಾಟರಿ ಹೊಂದಿದ್ದು, 10W ವೇಗದ ಚಾರ್ಜಿಂಗ್ ಬೆಂಬಲಿಸಲಿದೆ. ಇದಲ್ಲದೆ ಈ ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ.

ಹೌದು, ಮೊಟೊರೊಲಾ ಕಂಪೆನಿ ತನ್ನ ಹೊಸ ಮೋಟೋ ಜಿ ಸ್ಟೈಲಸ್ 2022 ಸ್ಮಾರ್ಟ್‌ಫೋನ್ ಲಾಂಚ್ ಮಾಡಿದೆ. ಇದು ಮೀಡಿಯಾಟೆಕ್ ಹಿಲಿಯೋ G88 SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್ ಪಂಚ್ ಹೋಲ್ ಡಿಸ್ಪ್ಲೇ ವಿನ್ಯಾಸವನ್ನು ಒಳಗೊಂಡಿದೆ. ಈ ಫೋನ್ ರಿಯರ್ ಫಿಂಗರ್‌ಪ್ರಿಂಟ್ ಸೆನ್ಸಾರ್ ಅನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್ ಮಾರುಕಟ್ಟೆಗೆ ಟ್ವಿಲೈಟ್ ಬ್ಲೂ ಮತ್ತು ಮೆಟಾಲಿಕ್ ರೋಸ್ ಬಣ್ಣಗಳ ಆಯ್ಕೆಯಲ್ಲಿ ಬರಲಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ವಿಶೇಷ
ಮೋಟೋ ಜಿ ಸ್ಟೈಲಸ್ 2022 ಸ್ಮಾರ್ಟ್‌ಫೋನ್ 1080x2460 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಹೊಂದಿರುವ 6.78 ಇಂಚಿನ ಎಲ್‌ಸಿಡಿ ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಡಿಸ್‌ಪ್ಲೇ 20:9 ರಚನೆಯ ಅನುಪಾತ ಮತ್ತು 90hz ರಿಫ್ರೆಶ್ ರೇಟ್ ಒಳಗೊಂಡಿದೆ. ಇದು ವೀಡಿಯೋ ವೀಕ್ಷಣೆ ಹಾಗೂ ವೀಡಿಯೊ ಕರೆಗಳಿಗೆ ಯೋಗ್ಯವಾದ ಡಿಸ್‌ಪ್ಲೇ ಮಾದರಿ ಹೊಂದಿದೆ.

ಪ್ರೊಸೆಸರ್ ಯಾವುದು?
ಈ ಸ್ಮಾರ್ಟ್‌ಫೋನ್ ಮೀಡಿಯಾಟೆಕ್ ಹಿಲಿಯೋ G88 SoC ಪ್ರೊಸೆಸರ್ ಬಲವನ್ನು ಪಡೆದಿದ್ದು, ಆಂಡ್ರಾಯ್ಡ್ 11 ಒಎಸ್ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 6GB RAM ಮತ್ತು 128GB ಇಂಟರ್ ಸ್ಟೋರೇಜ್ ಅನ್ನು ಹೊಂದಿದೆ. ಮೆಮೊರಿ ಕಾರ್ಡ್ ಮೂಲಕ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವ ಅವಕಾಶಗಳ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.

ಕ್ಯಾಮೆರಾ ವಿಶೇಷ
ಮೋಟೋ ಜಿ ಸ್ಟೈಲಸ್ 2022 ಸ್ಮಾರ್ಟ್‌ಫೋನ್ ಹಿಂಭಾಗದಲ್ಲಿ ತ್ರಿವಳಿ ಕ್ಯಾಮೆರಾ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸ್ಯಾಮ್ಸಂಗ್ ಐಸೊಸೆಲ್ ಜೆಎನ್ 1 ಸೆನ್ಸಾರ್ ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸ್ಯಾಮ್ಸಂಗ್ ಐಸೊಸೆಲ್ ಅಲ್ಟ್ರಾವೈಡ್ ಸೆನ್ಸಾರ್ ಮತ್ತು 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮರಾ ಹೊಂದಿದೆ.

ಬ್ಯಾಟರಿ ಮತ್ತು ಇತರೆ
ಮೋಟೋ ಜಿ ಸ್ಟೈಲಸ್ 2022 ಸ್ಮಾರ್ಟ್‌ಫೋನ್ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 10W ಚಾರ್ಜಿಂಗ್ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್, ವೈಫೈ, ಬ್ಲೂಟೂತ್, 3.5 ಮಿಮೀ ಜ್ಯಾಕ್, ಫಿಂಗರ್‌ಪ್ರಿಂಟ್ ಸೆನ್ಸಾರ್, ಸಿಂಗಲ್ ಬಾಟಮ್-ಫೈರಿಂಗ್ ಸ್ಪೀಕರ್ ಅನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್ ಮುಂದಿನ ದಿನಗಳಲ್ಲಿ ಆಂಡ್ರಾಯ್ಡ್ 12 ಗೆ ಅಪ್ಗ್ರೇಡ್ ಆಗಿರುತ್ತದೆ.

ಬೆಲೆ ಮತ್ತು ಲಭ್ಯತೆ
ಮೋಟೋ ಜಿ ಸ್ಟೈಲಸ್ 2022 ಸ್ಮಾರ್ಟ್‌ಫೋನ್ ಯುಎಸ್‌ನಲ್ಲಿ $ 399 ಬೆಲೆಗೆ ಲಭ್ಯವಾಗಲಿದೆ. ಭಾರತದಲ್ಲಿ ಇದರ ಬೆಲೆಯ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಇನ್ನು ಈ ಫೋನ್ ಟ್ವಿಲೈಟ್ ಬ್ಲೂ ಮತ್ತು ಮೆಟಾಲಿಕ್ ರೋಸ್ ಬಣ್ಣಗಳ ಆಯ್ಕೆಯಲ್ಲಿ ಲಭ್ಯವಾಗಲಿದೆ.ಈ ಸ್ಮಾರ್ಟ್‌ಫೋನ್ ಯುಎಸ್‌ನಲ್ಲಿ ಫೆಬ್ರವರಿ 17 ರಿಂದ ಫ್ರಿ ಆರ್ಡರ್‌ಗೆ ಲಭ್ಯವಾಗಲಿದೆ.


Click it and Unblock the Notifications








