ಕೈ ಗೆಟಕುವ ಬೆಲೆಯಲ್ಲಿ ಭಾರತಕ್ಕೆ ಎಂಟ್ರಿ ಕೊಟ್ಟ ಮೋಟೋ g14; ಫೀಚರ್ಸ್ ವಿವರ ಇಲ್ಲಿದೆ
ಭಾರತದ ಮೊಬೈಲ್ ಮಾರುಕಟ್ಟೆಯಲ್ಲಿ ಮೊಟೊರೊಲಾ ಕಂಪೆನಿ ತನ್ನದೆ ಆದ ಪ್ರಾಬಲ್ಯವನ್ನು ಸಾಧಿಸಿದೆ. ಸ್ಮಾರ್ಟ್‌ಫೋನ್ ಪ್ರಿಯರಿಗೆ ವಿಶೇಷ ಸ್ಮಾರ್ಟ್‌ಫೋನ್ ಆಯ್ಕೆಗಳನ್ನು ನೀಡುವ ಮೂಲಕ ಆಗಾಗ ಸದ್ದು ಮಾಡುತ್ತಾ ಬಂದಿದೆ. ಇದೀಗ ತನ್ನ G ಸರಣಿಯಲ್ಲಿ ಹೊಸ ಮೋಟೋ g14 ಸ್ಮಾರ್ಟ್‌ಫೋನ್ ಮೂಲಕ ಮತ್ತೊಮ್ಮೆ ಸಂಚಲನ ಸೃಷ್ಟಿಸಿದೆ.
ಹೌದು, ಮೋಟೋ g14 ಸ್ಮಾರ್ಟ್‌ಫೋನ್ ಬಜೆಟ್ ಬೆಲೆಯಲ್ಲಿ ಭಾರತಕ್ಕೆ ಎಂಟ್ರಿ ನೀಡಿದೆ. ಅತಿ ಕಡಿಮೆ ಬೆಲೆಯಲ್ಲಿ ಪ್ರೀಮಿಯಂ ಅನುಭವ ನೀಡುವ ಈ ಸ್ಮಾರ್ಟ್‌ಫೋನ್ ಭಾರಿ ಕುತೂಹಲವನ್ನು ಹುಟ್ಟುಹಾಕಿದೆ. ಅದರಲ್ಲೂ ಈ ಸ್ಮಾರ್ಟ್‌ಫೋನ್ ಯುನಿಸೋಕ್ T616 SoC ಪ್ರೊಸೆಸರ್ ಹೊಂದಿರುವುದು ವಿಶೇಷವಾಗಿದೆ. ಹಾಗಾದ್ರೆ ಮೋಟೋ g14 ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಮೋಟೋ g14 ಡಿಸ್‌ಪ್ಲೇ ಹೇಗಿದೆ?
ಮೋಟೋ g14 ಸ್ಮಾರ್ಟ್‌ಫೋನ್ 6.5-ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 2400×1080 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದಿದೆ. ಇನ್ನು ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಒಳಗೊಂಡಿದೆ. ಇದಲ್ಲದೆ ಡಿಸ್‌ಪ್ಲೇ 60Hz ರಿಫ್ರೆಶ್ ರೇಟ್, 120Hz ಟಚ್ ಸ್ಯಾಪ್ಲಿಂಗ್ ರೇಟ್ ಅನ್ನು ಒಳಗೊಂಡಿದೆ. ಜೊತೆಗೆ ಡಿಸ್‌ಪ್ಲೇ 89.47% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಪಡೆದಿದೆ.
ಮೋಟೋ g14 ಪ್ರೊಸೆಸರ್ ಯಾವುದು?
ಮೋಟೋ g14 ಸ್ಮಾರ್ಟ್‌ಫೋನ್ ಯುನಿಸೋಕ್ T616 SoC ಪ್ರೊಸೆಸರ್ ವೇಗವನ್ನು ಪಡೆದಿದೆ. ಇದಕ್ಕೆ ಪೂರಕವಾಗಿ Mali-G57 GPU ಸಪೋರ್ಟ್ ಪಡೆದಿದೆ. ಇದು ಆಂಡ್ರಾಯ್ಡ್ 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 4GB RAM ಮತ್ತು 128GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಮೆಮೊರಿ ಕಾರ್ಡ್ ಬೆಂಬಲದೊಂದಿಗೆ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.
ಮೋಟೋ g14 ಕ್ಯಾಮೆರಾ ವಿವರ
ಮೋಟೋ g14 ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್ಅಪ್ ಅನ್ನು ಪಡೆದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಪಡೆದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಮ್ಯಾಕ್ರೋ ಲೆನ್ಸ್ ಅನ್ನು ಒಳಗೊಂಡಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಪಡೆದುಕೊಂಡಿದೆ.
ಮೋಟೋ g14 ಬ್ಯಾಟರಿ ಮತ್ತು ಇತರೆ ಸೌಲಭ್ಯ
ಮೋಟೋ g14 ಸ್ಮಾರ್ಟ್‌ಫೋನ್ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದು 20W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G VoLTE, Wi-Fi 802.11 ac (2.4GHz + 5GHz), ಬ್ಲೂಟೂತ್ 5.0, GPS, USB ಟೈಪ್-C, 3.5 ಎಂಎಂ ಆಡಿಯೊ ಜಾಕ್ ಅನ್ನು ಹೊಂದಿದೆ. ಇದಲ್ಲದೆ ಸ್ಟಿರಿಯೊ ಸ್ಪೀಕರ್‌ಗಳು, ಡಾಲ್ಬಿ ಅಟ್ಮಾಸ್, ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಅನ್ನು ಸಹ ಪಡೆದುಕೊಂಡಿದೆ.
ಮೋಟೋ g14 ಬೆಲೆ ಮತ್ತು ಲಭ್ಯತೆ
ಮೋಟೋ g14 ಸ್ಮಾರ್ಟ್‌ಫೋನ್ ಭಾರತದಲ್ಲಿ ಬಜೆಟ್ ಬೆಲೆಯಲ್ಲಿ ಎಂಟ್ರಿ ನೀಡಿದೆ. ಈ ಸ್ಮಾರ್ಟ್‌ಫೋನ್ ಏಕೈಕ 4GB + 128GB ಸ್ಟೋರೇಜ್ ಆಯ್ಕೆಗೆ 9,999ರೂ ಬೆಲೆಯನ್ನು ಪಡೆದುಕೊಂಡಿದೆ. ಇನ್ನು ಸ್ಮಾರ್ಟ್‌ಫೋನ್ ಸ್ಕೈ ಬ್ಲೂ ಮತ್ತು ಸ್ಟೀಲ್ ಗ್ರೇ ಬಣ್ಣಗಳಲ್ಲಿ ಬರುತ್ತದೆ. ಇದನ್ನು ನೀವು ಫ್ಲಿಪ್‌ಕಾರ್ಟ್ ಮೂಲಕ ಪ್ರಿ ಬುಕ್ಕಿಗ್ ಮಾಡುವುದಕ್ಕೆ ಕೂಡ ಅವಕಾಶ ನೀಡಲಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್ ಆಗಸ್ಟ್ 8 ರಿಂದ ಸೇಲ್ ಆಗಲಿದೆ.
ಲಾಂಚ್ ಆಫರ್ ಏನಿದೆ?
ಮೋಟೋ g14 ಸ್ಮಾರ್ಟ್‌ಫೋನ್ ಅನ್ನು ನೀವು ICICI ಕ್ರೆಡಿಟ್ ಕಾರ್ಡ್ ಮೂಲಕ ಖರೀದಿಸಿದರೆ 10% ಡಿಸ್ಕೌಂಟ್ ಸಿಗಲಿದೆ. ಅಂದರೆ 750ರೂ. ರಿಯಾಯಿತಿ ದೊರೆಯಲಿದೆ. ಇದಲ್ಲದೆ ಪ್ರಿ ಆರ್ಡರ್ ಮಾಡುವ ಮೂಲಕ ಸ್ಮಾರ್ಟ್‌ಫೋನ್ ಖರೀದಿಸಿದರೆ 3,200ರೂ ಮೌಲ್ಯದ ಸ್ಕ್ರೀನ್ ಡ್ಯಾಮೇಜ್ ಪ್ರೊಟೆಕ್ಷನ್ ಪಡೆದುಕೊಳ್ಳಬಹುದಾಗಿದೆ.


Click it and Unblock the Notifications








