Home
ಸುದ್ದಿಜಾಲ

Motorola: ಟ್ರಿಪಲ್ ಕ್ಯಾಮೆರಾ ಆಯ್ಕೆಯ ಈ ಫೋನ್‌ಗೆ 48% ರಿಯಾಯಿತಿ, ಮುಗಿ ಬಿದ್ದು ಖರೀದಿಸುತ್ತಿದ್ದಾರೆ

ಸ್ಮಾರ್ಟ್‌ಫೋನ್‌ಗಳ ವಿಭಾಗದಲ್ಲಿ ಮೊಟೊರೊಲಾ (Motorola) ಫೋನ್‌ಗಳಿಗೆ ಭಾರತದಲ್ಲಿ ಬಹು ಬೇಡಿಕೆ ಇದೆ. ಈ ಫೋನ್‌ಗಳು ಅಗ್ಗದ ದರದಿಂದ ಹಿಡಿದು ದುಬಾರಿ ಬೆಲೆಯಲ್ಲಿ ಲಭ್ಯ ಇದ್ದು, ಈ ಮೂಲಕ ತಮ್ಮದೇ ಆದ ಗ್ರಾಹಕರನ್ನು ಪಡೆದುಕೊಂಡಿವೆ. ಇದರೊಂದಿಗೆ ಇದೀಗ ಪ್ರಮುಖ ಇ-ಕಾಮರ್ಸ್‌ ಸೈಟ್‌ನಲ್ಲಿ ಈ ಮೊಟೊ ಫೋನ್‌ಗೆ 48% ರಿಯಾಯಿತಿ ಘೋಷಣೆ ಮಾಡಲಾಗಿದೆ.

ಹೌದು, ಮೊಟೊ ಫೋನ್‌ಗಳು ಭಿನ್ನ ಫೀಚರ್ಸ್‌ನೊಂದಿಗೆ ವಿಶೇಷ ಸೌಕರ್ಯಗಳನ್ನು ನೀಡುವ ಕೆಲಸ ಮಾಡುತ್ತಿದ್ದು, ಈ ನಡುವೆ ಮೊಟೊರೊಲಾ ಮೊಟೊ G51 5G ಸ್ಮಾರ್ಟ್‌ಫೋನ್‌ಗೆ (Motorola Moto G51 5G smartphone) ಆಫರ್ ನೀಡುವ ಮೂಲಕ ಗ್ರಾಹಕರಿಗೆ ಈ ಫೋನ್‌ಗಳನ್ನ ಇನ್ನಷ್ಟು ಹತ್ತಿರವಾಗುವಂತೆ ಮಾಡಲಾಗಿದೆ. ಈ ಫೋನ್ ಟ್ರಿಪಲ್‌ ರಿಯರ್‌ ಆಯ್ಕೆಯ 5G ಫೋನ್‌ ಆಗಿದ್ದು, ಈ ಮೂಲಕ ಬಳಕೆದಾರರಿಗೆ ಹಲವಾರು ರೀತಿಯಲ್ಲಿ ಅನುಕೂಲಕರ ಫೋನ್ ಆಗಿರಲಿದೆ. ಹಾಗಿದ್ರೆ, ಈ ಸ್ಮಾರ್ಟ್‌ಫೋನ್‌ನ ಪ್ರಮುಖ ಫೀಚರ್ಸ್‌ ಹಾಗೂ ಬೆಲೆ ವಿವರ ಎಷ್ಟು ಅನ್ನೋದನ್ನು ಈ ಲೇಖನದಲ್ಲಿ ತಿಳಿಸಿಕೊಡಲಾಗಿದೆ ಓದಿರಿ.

ಟ್ರಿಪಲ್ ಕ್ಯಾಮೆರಾ ಆಯ್ಕೆಯ ಈ ಫೋನ್‌ಗೆ 48% ರಿಯಾಯಿತಿ...

ಮೊಟೊರೊಲಾ ಮೊಟೊ G51 5G ಸ್ಮಾರ್ಟ್‌ಫೋನ್‌ ಆಫರ್ ವಿವರ: ಈ ಸ್ಮಾರ್ಟ್‌ಫೋನ್‌ 29,999 ರೂ.ಗಳ ಸಾಮಾನ್ಯ ಬೆಲೆ ಹೊಂದಿದ್ದು, ನೀವೀಗ ಇದನ್ನು 15,499 ರೂ.ಗಳಿಗೆ ಖರೀದಿ ಮಾಡಬಹುದಾಗಿದೆ. ಯಾಕೆಂದರೆ ಈ ಫೋನ್‌ಗೆ ಅಮೆಜಾನ್‌ನಲ್ಲಿ (Amazon) 48% ರಿಯಾಯಿತಿ ಘೋಷಣೆ ಮಾಡಲಾಗಿದೆ. ಅದಾಗ್ಯೂ ನೀವು ಇನ್ನೂ ಕಡಿಮೆ ಬೆಲೆಗೆ ಖರೀದಿ ಮಾಡಲು ಇಚ್ಚಿಸಿದ್ರೆ ಕೆಲವು ಬ್ಯಾಂಕ್‌ ಆಪರ್ ಅನುಕೂಲ ಪಡೆದುಕೊಳ್ಳಬಹುದಾಗಿದೆ. ಈ ಮೂಲಕ ಭಾರೀ ಹಣ ಉಳಿತಾಯ ಮಾಡಬಹುದಾಗಿದೆ.

ಮೊಟೊರೊಲಾ ಮೊಟೊ G51 5G ಸ್ಮಾರ್ಟ್‌ಫೋನ್‌ ಡಿಸ್‌ಪ್ಲೇ ಮಾಹಿತಿ: ಈ ಸ್ಮಾರ್ಟ್‌ಫೋನ್ ಇಷ್ಟು ಕಡಿಮೆ ಬೆಲೆಯಲ್ಲಿ ಲಭ್ಯ ಇದೆ ಎಂದ ಮಾತ್ರಕ್ಕೆ ಕಣ್ಣುಮುಚ್ಚಿಕೊಂಡು ಖರೀದಿ ಮಾಡಲು ಮುಂದಾಗಬೇಡಿ. ಬದಲಾಗಿ ಈ ಬೆಲೆಗೆ ತಕ್ಕ ಫೀಚರ್ಸ್‌ ಅನ್ನು ಈ ಫೋನ್‌ ಹೊಂದಿದೆಯಾ ಅನ್ನೋದನ್ನು ಸಹ ಗಣನೆಗೆ ತೆಗೆದುಕೊಳ್ಳಬೇಕಾಗುತ್ತದೆ. ಅದರಂತೆ ಈ ಸ್ಮಾರ್ಟ್‌ಫೋನ್ 6.8 ಇಂಚಿನ ಪಂಚ್ ಹೋಲ್ ಡಿಸ್‌ಪ್ಲೇ ಆಯ್ಕೆ ಪಡೆದಿದ್ದು, ಇದು 269ppi ಪಿಕ್ಸೆಲ್ ಸಾಂದ್ರತೆ ಮತ್ತು 720x1600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಆಯ್ಕೆ ಇರುವ HD+ IPS LCD ಡಿಸ್ಪ್ಲೇ ಹೊಂದಿದೆ. ಇದರೊಂದಿಗೆ 120Hz ಸ್ಕ್ರೀನ್ ರಿಫ್ರೆಶ್ ರೇಟ್‌ ಆಯ್ಕೆ ಈ ಫೋನ್‌ನಲ್ಲಿದೆ.

ಟ್ರಿಪಲ್ ಕ್ಯಾಮೆರಾ ಆಯ್ಕೆಯ ಈ ಫೋನ್‌ಗೆ 48% ರಿಯಾಯಿತಿ...

ಮೊಟೊರೊಲಾ ಮೊಟೊ G51 5G ಸ್ಮಾರ್ಟ್‌ಫೋನ್‌ ಪ್ರೊಸೆಸೆರ್ ಮಾಹಿತಿ: ಈ ಕಡಿಮೆ ಬೆಲೆಯ 5G ಸ್ಮಾರ್ಟ್‌ಫೋನ್ ಆಕ್ಟಾ ಕೋರ್ ಸ್ನಾಪ್‌ಡ್ರಾಗನ್ 480+ ಪ್ರೊಸೆಸರ್ ಮೂಲಕ ಕಾರ್ಯನಿರ್ವಹಿಸಲಿದೆ. ಇದರೊಂದಿಗೆ ಅಡ್ರಿನೋ 619 GPU ಬಲದೊಂದಿಗೆ ಅತ್ಯುತ್ತಮವಾಗಿ ಕೆಲಸ ಮಾಡಲಿದ್ದು, ಇದಕ್ಕೆ 4GB RAM ಇನ್ನಷ್ಟು ಶಕ್ತಿ ನೀಡಲಿದೆ. ಹಾಗೆಯೇ ಈ ಫೋನ್ ಉತ್ತಮ ದೈನಂದಿನ ಕಾರ್ಯಕ್ಷಮತೆ ಮತ್ತು ಅತ್ಯುತ್ತಮ ಗೇಮಿಂಗ್ ಅನುಭವ ನೀಡುತ್ತದೆ. ಉಳಿದಂತೆ ಇದು ಆಂಡ್ರಾಯ್ಡ್ v11 ಆಪರೇಟಿಂಗ್ ಸಿಸ್ಟಂ ಅನ್ನು ರನ್‌ ಮಾಡುತ್ತದೆ.

ಟ್ರಿಪಲ್ ಕ್ಯಾಮೆರಾ ಆಯ್ಕೆಯ ಈ ಫೋನ್‌ಗೆ 48% ರಿಯಾಯಿತಿ...

ಮೊಟೊರೊಲಾ ಮೊಟೊ G51 5G ಸ್ಮಾರ್ಟ್‌ಫೋನ್‌ ಕ್ಯಾಮೆರಾ ಮಾಹಿತಿ: ಇನ್ನು ಈ ಸ್ಮಾರ್ಟ್‌ಫೋನ್ ಟ್ರಿಪಲ್‌ ರಿಯರ್ ಕ್ಯಾಮೆರಾ ಆಯ್ಕೆ ಪಡೆದಿದ್ದು, ಅದರಲ್ಲಿ 50 ಮೆಗಾಪಿಕ್ಸೆಲ್‌ ಮುಖ್ಯ ಕ್ಯಾಮೆರಾ, 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಸೆನ್ಸರ್‌ ಮತ್ತು ಛಾಯಾಗ್ರಹಣಕ್ಕಾಗಿ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಸೆನ್ಸರ್‌ ಆಯ್ಕೆ ಪಡೆದಿದೆ. ಇದರೊಂದಿಗೆ ವೀಡಿಯೊ ಮತ್ತು ಸೆಲ್ಫಿ ತೆಗೆದುಕೊಳ್ಳಲು 13 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ನೀಡಲಾಗಿದೆ. ಕೊನೆಯದಾಗಿ ಈ ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಆಯ್ಕೆ ಪಡೆದಿದ್ದು, ದೀರ್ಘ ಬ್ಯಾಕಪ್‌ ಪಡೆದುಕೊಳ್ಳಬಹುದಾಗಿದೆ.

Best Mobiles in India

English summary
Motorola Moto G51 5G smartphone is available in offer on Amazon. This triple rear is a 5G phone of choice.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+