ಸದ್ಯದಲ್ಲೇ ಮೊಟೊ G60 ಫೋನ್ ಲಾಂಚ್: 108ಎಂಪಿ ಕ್ಯಾಮೆರಾ!
ಪ್ರತಿಷ್ಠಿತ ಮೊಬೈಲ್ ತಯಾರಿಕಾ ಸಂಸ್ಥೆಗಳಲ್ಲಿ ಒಂದಾದ ಮೊಟೊರೊಲಾ ಕಂಪೆನಿಯ ತನ್ನ ಮೊಟೊ G ಸರಣಿಯಲ್ಲಿ ಈಗಾಗಲೇ ಕೆಲವು ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಸೈ ಅನಿಸಿಕೊಂಡಿದೆ. ಇದೀಗ ಅದೇ ಸರಣಿಯಲ್ಲಿ ಈಗ ಹೊಸದಾಗಿ ಮೊಟೊ G60 ಸ್ಮಾರ್ಟ್‌ಫೋನ್ ಅನ್ನು ಅನಾವರಣ ಮಾಡಲು ಸಜ್ಜಾಗಿದೆ. ಬರಲಿರುವ ಈ ಹೊಸ ಸ್ಮಾರ್ಟ್‌ಫೋನಿನ ಮುಖ್ಯ ಕ್ಯಾಮೆರಾವು 108 ಮೆಗಾ ಪಿಕ್ಸಲ್ ಸೆನ್ಸಾರ್ ನಲ್ಲಿರಲಿದೆ ಎಂದು ಹೇಳಲಾಗಿದೆ.

ಹೌದು, ಮೊಟೊರೊಲಾ ಕಂಪೆನಿ ನೂತನವಾಗಿ ಮೊಟೊ G60 ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಲು ತಯಾರಿ ನಡೆಸಿದೆ. ಈ ಸ್ಮಾರ್ಟ್‌ಫೋನ್ ಕ್ವಾಡ್ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದಿದ್ದು, ಮುಖ್ಯ ಕ್ಯಾಮೆರಾವು 108 ಎಂಪಿ ಸೆನ್ಸಾರ್‌ನಲ್ಲಿರಲಿದೆ ಎನ್ನುತ್ತಿವೆ ಲೀಕ್ ಮಾಹಿತಿಗಳು. ಇದರೊಂದಿಗೆ 5,000mAh ಬ್ಯಾಟರಿ ಬಾಳಿಕೆ ಪಡೆದಿರುವುದು ಮತ್ತೊಂದು ಹೈಲೈಟ್ ಆಗಿದೆ. ಇದಲ್ಲದೇ 4GB RAM + 64GB ಮತ್ತು 6GB RAM + 128GB ಸ್ಟೋರೇಜ್ ವೇರಿಯಂಟ್ ಆಯ್ಕೆಗಳನ್ನು ಹೊಂದಿರುವ ಸಾಧ್ಯತೆಗಳು ಇವೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್ ಒಳಗೊಂಡಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಮೊಟೊ G60 ಡಿಸ್‌ಪ್ಲೇ ವಿನ್ಯಾಸವೇನು
ಮೊಟೊ G60 ಸ್ಮಾರ್ಟ್‌ಫೋನ್ 1080 x 2400 ಪಿಕ್ಸಲ್ ರೆಸಲ್ಯೂಶನ್ ಸಫೋರ್ಟ್ ಪಡೆದಿರಲಿದ್ದು, 6.78 ಇಂಚಿನ ಪೂರ್ಣ ಹೆಚ್‌ಡಿ ಡಿಸ್‌ಪ್ಲೇ ಪಡೆದಿರಲಿದೆ. ಡಿಸ್‌ಪ್ಲೇಯು 120Hz ರಿಫ್ರೆಶ್ ರೇಟ್ ಅನ್ನು ಹೊಂದಿರಲಿದೆ. ಇನ್ನು ಡಿಸ್‌ಪ್ಲೇ ಅನುಪಾತವು 20:9 ಆಗಿರಲಿದೆ.

ಮೊಟೊ G60 ಪ್ರೊಸೆಸರ್ ಕಾರ್ಯವೇನು
ಮೊಟೊ G60 ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 732G ಪ್ರೊಸೆಸರ್ ವೇಗವನ್ನು ಹೊಂದಿರಲಿದೆ. ಅಲ್ಲದೆ ಆಂಡ್ರಾಯ್ಡ್ 11 ಓಎಸ್ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ ಈ ಸ್ಮಾರ್ಟ್‌ಫೋನ್ 4GB RAM + 64GB ಮತ್ತು 6GB RAM + 128GB ಸ್ಟೋರೇಜ್ ವೇರಿಯಂಟ್ ಆಯ್ಕೆಗಳನ್ನು ಹೊಂದಿರುವ ಸಾಧ್ಯತೆಗಳಿವೆ. ಹಾಗೆಯೇ ಈ ಸ್ಮಾರ್ಟ್‌ಫೋನ್ ಮೆಮೊರಿ ಕಾರ್ಡ್ ಮೂಲಕ ಸಂಗ್ರಹ ವಿಸ್ತರಣೆಗೆ ಅವಕಾಶ ನೀಡುವ ಆಯ್ಕೆ ಇರಲಿದೆ.

ಮೊಟೊ G60 ಕ್ವಾಡ್ ಕ್ಯಾಮೆರಾ ರಚನೆ
ಮೊಟೊ G60 ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿರುವುದು ಬಹುತೇಕ ಖಚಿತವಾಗಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾ ಪಿಕ್ಸಲ್ ಸೆನ್ಸಾರ್‌ನಲ್ಲಿರಲಿದೆ. ಎರಡನೇ ಕ್ಯಾಮೆರಾ 5 ಮೆಗಾ ಪಿಕ್ಸೆಲ್ ಸೆನ್ಸಾರ್‌ನಲ್ಲಿದೆ. ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಕ್ಯಾಮೆರಾ ಸೆನ್ಸಾರ್ ಅನ್ನು ಹೊಂದಿರಲಿದೆ. ಇದರೊಂದಿಗೆ ಸೆಲ್ಫಿ ಕ್ಯಾಮೆರಾವು 32 ಮೆಗಾ ಪಿಕ್ಸಲ್ ಸೆನ್ಸಾರ್‌ನಲ್ಲಿರಲಿದೆ.

ಮೊಟೊ G60 ಬ್ಯಾಟರಿ ಮತ್ತು ಇತರೆ
ಮೊಟೊ G60 ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್ ಅನ್ನು ಹೊಂದಿರಲಿದೆ. ಹಾಗೆಯೇ 20W ಸಾಮರ್ಥ್ಯದ ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ಪಡೆದಿರುವ ನಿರೀಕ್ಷೆಗಳಿವೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4 ಜಿ, ವೈ-ಫೈ, ಬ್ಲೂಟೂತ್ 5.0, ಎನ್‌ಎಫ್‌ಸಿ, ಜಿಪಿಎಸ್, 3.5 ಎಂಎಂ ಹೆಡ್‌ಫೋನ್ ಜ್ಯಾಕ್ ಮತ್ತು ಯುಎಸ್‌ಬಿ ಟೈಪ್-ಸಿ ಪೋರ್ಟ್ ಸೇರಿವೆ.


Click it and Unblock the Notifications