Home
ಸುದ್ದಿಜಾಲ

ಫ್ಲಿಪ್‌ಕಾರ್ಟ್‌ನಲ್ಲಿ ಇಂದು ಮೊಟೊ G8 ಪವರ್ ಲೈಟ್ ಫೋನ್‌ ಸೇಲ್‌!

ಮೊಟೊರೊಲಾ ಮೊಬೈಲ್ ಕಂಪೆನಿಯು ಇತ್ತೀಚಿಗಷ್ಟೆ ಬಜೆಟ್‌ ಬೆಲೆಯ ಮೊಟೊರೊಲಾ G8 ಪವರ್ ಲೈಟ್ ಸ್ಮಾರ್ಟ್‌ಫೋನ್‌ ಈಗಾಗಲೇ ಆನ್‌ಲೈನ್‌ ತಾಣಗಳ ಮೂಲಕ ಮಾರಾಟ ಕಂಡಿದೆ. ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ತಾಣದಲ್ಲಿ ಇಂದು (ಜು.16) ಮತ್ತೊಮ್ಮೆ ಸೇಲ್ ನಡೆಸಲಿದೆ. ಇಂದು ಮಧ್ಯಾಹ್ನ 12ಕ್ಕೆ ಈ ಸೇಲ್ ಆರಂಭಿಸಲಿದ್ದು, ಇನ್ನು ಈ ಸ್ಮಾರ್ಟ್‌ಫೋನಿನ ಆರಂಭಿಕ ಬೆಲೆಯು 8,999ರೂ.ಗಳಾಗಿದೆ.

ಕಾಮರ್ಸ್‌

ಜನಪ್ರಿಯ ಇ-ಕಾಮರ್ಸ್‌ ತಾಣ ಫ್ಲಿಪ್‌ಕಾರ್ಟ್‌ನಲ್ಲಿ ಇಂದು ಮಾರಾಟ ಆಗಲಿರುವ ಮೊಟೊರೊಲಾ G8 ಪವರ್ ಲೈಟ್ 4GB RAM ಮತ್ತು 64GB ಆಂತರಿಕ ಸ್ಟೋರೇಜ್‌ ವೇರಿಯಂಟ್ ಆಯ್ಕೆ ಹೊಂದಿದೆ. ಈ ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಮೀಡಿಯಾ ಟೆಕ್ ಹಿಲಿಯೊ P35 ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸುತ್ತದೆ. ಇದರೊಂದಿಗೆ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್‌ ಅನ್ನು ಒಳಗೊಂಡಿದೆ. ಇನ್ನುಳಿದಂತೆ ಮೊಟೊರೊಲಾ G8 ಪವರ್ ಲೈಟ್ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ ಅನ್ನು ಒಳಗೊಂಡಿದೆ ಎಂಬುದನ್ನು ತಿಳಿಯಲು ಮುಂದೆ ಓದಿರಿ.

ಡಿಸ್‌ಪ್ಲೇ ಡಿಸೈನ್

ಡಿಸ್‌ಪ್ಲೇ ಡಿಸೈನ್

ಮೊಟೊ G8 ಪವರ್ ಲೈಟ್ ಸ್ಮಾರ್ಟ್‌ಫೋನ್‌ 720x1,600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5-ಇಂಚಿನ ಡಿಸ್‌ಪ್ಲೇಯನ್ನ ಹೊಂದಿದೆ. ಇನ್ನು ಈ ಡಿಸ್‌ಪ್ಲೇಯು ಎಚ್‌ಡಿ + ಐಪಿಎಸ್ ಎಲ್‌ಸಿಡಿ ಡಿಸ್‌ಪ್ಲೇ ವಿನ್ಯಾಸವನ್ನ ಹೊಂದಿದೆ. ಈ ಡಿಸ್‌ಪ್ಲೇಯು 20: 9 ರಚನೆಯ ಅನುಪಾತವನ್ನು ಹೊಂದಿದೆ. ಇದಲ್ಲದೆ ಈ ಡಿಸ್‌ಪ್ಲೇ 269PPI ಪಿಕ್ಸೆಲ್ ಸಾಂದ್ರತೆಯನ್ನು ಹೊಂದಿದೆ.

ಪ್ರೊಸೆಸರ್‌ ಯಾವುದು

ಪ್ರೊಸೆಸರ್‌ ಯಾವುದು

ಮೊಟೊ G8 ಪವರ್ ಲೈಟ್ ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್ ಹಿಲಿಯೊ P35 SoC ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್‌ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೇಯೇ 4GB RAM ಮತ್ತು 64GB ಆಂತರಿಕ ಸಂಗ್ರಹ ಸಾಮರ್ಥ್ಯವನ್ನ ಹೊಂದಿದೆ. ಇದಲ್ಲದೆ ಮೆಮೊರಿ ಕಾರ್ಡ್ ಮೂಲಕ 256GB ವರೆಗೆ ವಿಸ್ತರಿಸಬಹುದಾಗಿದೆ.

ಮೂರು ಕ್ಯಾಮೆರಾ

ಮೂರು ಕ್ಯಾಮೆರಾ

ಮೊಟೊ G8 ಪವರ್ ಲೈಟ್ ಸ್ಮಾರ್ಟ್‌ಫೋನ್‌ ಟ್ರಿಪಲ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 16 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಸೆನ್ಸಾರ್‌, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್‌ ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿರುವ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಲೈಫ್

ಬ್ಯಾಟರಿ ಲೈಫ್

ಮೊಟೊ G8 ಪವರ್‌ ಲೈಟ್‌ ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಹೊಂದಿದ್ದು, 10W ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಬ್ಲೂಟೂತ್ ವಿ 4.2, ವೈ-ಫೈ, ಮೈಕ್ರೋ-ಯುಎಸ್‌ಬಿ ಪೋರ್ಟ್, ಮತ್ತು 3.5 ಎಂಎಂ ಆಡಿಯೊ ಜ್ಯಾಕ್ ಅನ್ನು ಬೆಂಬಲಿಸಲಿದೆ. ಜೊತೆಗೆ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಅನ್ನು ಸಹ ಒಳಗೊಂಡಿದೆ.

Best Mobiles in India

English summary
The smartphone, which was launched in India for Rs 8999, is Motorola’s offering in the entry-level segment.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+