ಇಂದು ಮತ್ತೆ ಮೊಟೊ G8 ಪವರ್ ಲೈಟ್ ಸ್ಮಾರ್ಟ್‌ಫೋನ್ ಸೇಲ್!
ಜನಪ್ರಿಯ ಮೊಟೊರೊಲಾ ಮೊಬೈಲ್ ಕಂಪೆನಿಯು ಇತ್ತೀಚಿಗಷ್ಟೆ G ಸರಣಿಯಲ್ಲಿ ಬಿಡುಗಡೆ ಮಾಡಿರುವ ಮೊಟೊರೊಲಾ G8 ಪವರ್ ಲೈಟ್ ಬಜೆಟ್ ಬೆಲೆಯಲ್ಲಿದ್ದು, ಗ್ರಾಹಕರ ಗಮನ ಸೆಳೆದಿದೆ. ಈ ಸ್ಮಾರ್ಟ್‌ಪೊನ್ ಇ ಕಾಮರ್ಸ್ ತಾಣ ಫ್ಲಿಪ್‌ಕಾರ್ಟ್‌ನಲ್ಲಿ ಇಂದು (ಜು.9) ಮಧ್ಯಾಹ್ನ 12ಕ್ಕೆ ಸೇಲ್ ಆರಂಭಿಸಲಿದೆ. ಇನ್ನು ಈ ಸ್ಮಾರ್ಟ್‌ಫೋನಿನ ಆರಂಭಿಕ ಬೆಲೆಯು 8,999ರೂ.ಗಳಾಗಿದೆ.

ಫ್ಲಿಪ್‌ಕಾರ್ಟ್‌ನಲ್ಲಿ ಇಂದು ಮಾರಾಟ ಆಗಲಿರುವ ಮೊಟೊರೊಲಾ G8 ಪವರ್ ಲೈಟ್ 4GB RAM ಮತ್ತು 64GB ಆಂತರಿಕ ಸ್ಟೋರೇಜ್ ಒಳಗೊಂಡಿದೆ. ಹಾಗೆಯೇ ಈ ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಮೀಡಿಯಾ ಟೆಕ್ ಹಿಲಿಯೊ P35 ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸುತ್ತದೆ. ಜೊತೆಗೆ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದಿಕೊಂಡಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್ ಅನ್ನು ಒಳಗೊಂಡಿದೆ ಎಂಬುದನ್ನು ತಿಳಿಯಲು ಮುಂದೆ ಓದಿರಿ.

ಡಿಸ್‌ಪ್ಲೇ ರಚನೆ
ಮೊಟೊ G8 ಪವರ್ ಲೈಟ್ ಸ್ಮಾರ್ಟ್‌ಫೋನ್ 720x1,600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.5-ಇಂಚಿನ ಡಿಸ್‌ಪ್ಲೇಯನ್ನ ಹೊಂದಿದೆ. ಇನ್ನು ಈ ಡಿಸ್‌ಪ್ಲೇಯು ಎಚ್‌ಡಿ + ಐಪಿಎಸ್ ಎಲ್‌ಸಿಡಿ ಡಿಸ್‌ಪ್ಲೇ ವಿನ್ಯಾಸವನ್ನ ಹೊಂದಿದೆ. ಈ ಡಿಸ್‌ಪ್ಲೇಯು 20: 9 ರಚನೆಯ ಅನುಪಾತವನ್ನು ಹೊಂದಿದೆ. ಇದಲ್ಲದೆ ಈ ಡಿಸ್‌ಪ್ಲೇ 269PPI ಪಿಕ್ಸೆಲ್ ಸಾಂದ್ರತೆಯನ್ನು ಹೊಂದಿದೆ.

ಪ್ರೊಸೆಸರ್ ಬಲ
ಮೊಟೊ G8 ಪವರ್ ಲೈಟ್ ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಹಿಲಿಯೊ P35 SoC ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೇಯೇ 4GB RAM ಮತ್ತು 64GB ಆಂತರಿಕ ಸಂಗ್ರಹ ಸಾಮರ್ಥ್ಯವನ್ನ ಹೊಂದಿದೆ. ಇದಲ್ಲದೆ ಮೆಮೊರಿ ಕಾರ್ಡ್ ಮೂಲಕ 256GB ವರೆಗೆ ವಿಸ್ತರಿಸಬಹುದಾಗಿದೆ.

ತ್ರಿವಳಿ ಕ್ಯಾಮೆರಾ
ಇನ್ನು ಈ ಸ್ಮಾರ್ಟ್‌ಫೋನ್ ಟ್ರಿಪಲ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 16 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಸೆನ್ಸಾರ್, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿರುವ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಬಲ
ಮೊಟೊ G8 ಪವರ್ ಲೈಟ್ ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್ ಹೊಂದಿದ್ದು, 10W ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಬ್ಲೂಟೂತ್ ವಿ 4.2, ವೈ-ಫೈ, ಮೈಕ್ರೋ-ಯುಎಸ್‌ಬಿ ಪೋರ್ಟ್, ಮತ್ತು 3.5 ಎಂಎಂ ಆಡಿಯೊ ಜ್ಯಾಕ್ ಅನ್ನು ಬೆಂಬಲಿಸಲಿದೆ. ಜೊತೆಗೆ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಅನ್ನು ಸಹ ಒಳಗೊಂಡಿದೆ.


Click it and Unblock the Notifications








