Just In
Don't Miss
- Sports
ಐಪಿಎಲ್ 2021: ಔಟಾದ ಸಿಟ್ಟಿಗೆ ವಿರಾಟ್ ಕೊಹ್ಲಿ ಮಾಡಿದ್ದೇನು ನೋಡಿ! ವಿಡಿಯೋ
- News
ಹೆಚ್ಚಿನ ದರದಲ್ಲಿ ರಸಗೊಬ್ಬರ ಮಾರಾಟ ಮಾಡಿದ್ರೆ ಕಠಿಣ ಕ್ರಮ
- Automobiles
ಆಕರ್ಷಕ ಬೆಲೆಯಲ್ಲಿ ದೇಶದ ಮೊದಲ ಹೈಬ್ರಿಡ್ ಟ್ರ್ಯಾಕ್ಟರ್ ಬಿಡುಗಡೆ
- Finance
ಇನ್ಫೋಸಿಸ್ 4ನೇ ತ್ರೈಮಾಸಿಕ ವರದಿಯಂತೆ ನಿವ್ವಳ ಲಾಭ ಕುಸಿತ
- Movies
40, 50, 60ರ ಸೀಕ್ರೆಟ್ ಬಿಚ್ಚಿಟ್ಟ ಕ್ರೇಜಿಸ್ಟಾರ್ ರವಿಚಂದ್ರನ್
- Education
SSLC Exams 2021: ಸಿಬಿಎಸ್ಇ ಪರೀಕ್ಷೆ ರದ್ದು ಬೆನ್ನಲ್ಲೇ ಎಸ್ಎಸ್ಎಲ್ಸಿ ಪರೀಕ್ಷೆ ಊಹಾಪೋಹ: ಸುರೇಶ್ ಕುಮಾರ್ ಸ್ಪಷ್ಟನ
- Lifestyle
ನಿಮ್ಮ ಮಗು 10ವರ್ಷ ತಲುಪುವಾಗ ಕಲಿಸಬೇಕಾದ ಜೀವನ ಕೌಶಲ್ಯಗಳಿವು
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಮೊಟೊ G9 ಪವರ್ ಸ್ಮಾರ್ಟ್‌ಫೋನ್ ಬಿಡುಗಡೆಗೆ ಮುಹೂರ್ತ ಫಿಕ್ಸ್!
ಮೊಟೊರೊಲಾ ಸಂಸ್ಥೆಯು ಹಲವು ಭಿನ್ನ ಶ್ರೇಣಿಯ ಸ್ಮಾರ್ಟ್‌ಫೋನ್‌ಗಳ ಮೂಲಕ ಗ್ರಾಹಕರಿಂದ ಸೈ ಅನಿಸಿಕೊಂಡಿದೆ. ಅವುಗಳಲ್ಲಿ ಕಂಪನಿಯು ಇತ್ತೀಚಿಗಷ್ಟೆ G ಸರಣಿಯಲ್ಲಿ ಮೊಟೊ G9 ಪವರ್ ಸ್ಮಾರ್ಟ್‌ಫೋನ್ ಅನ್ನು ಅನ್ನು ಅನಾವರಣ ಮಾಡಿತ್ತು. ಇದೀಗ ಈ ಸ್ಮಾರ್ಟ್‌ಫೋನ್ ಭಾರತದಲ್ಲಿ ಅನಾವರಣ ಮಾಡಲು ಮುಹೂರ್ತ ನಿಗದಿ ಮಾಡಿಕೊಂಡಿದೆ.

ಹೌದು, ಮೊಟೊರೊಲಾ ಕಂಪೆನಿ ತನ್ನ ನೂತನ ಮೊಟೊ G9 ಪವರ್ ಸ್ಮಾರ್ಟ್‌ಫೋನ್ ಇದೇ ಡಿಸೆಂಬರ್ 8 ರಂದು ಅಧಿಕೃತವಾಗಿ ಭಾರತದಲ್ಲಿ ಬಿಡುಗಡೆ ಮಾಡಲಿದೆ. ಈ ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 662 SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದೆ. ಹಾಗೆಯೇ 6,000mAh ಸಾಮರ್ಥ್ಯದ ಬಿಗ್ ಬ್ಯಾಟರಿ ಬಾಳಿಕೆಯನ್ನು ಒಳಗೊಂಡಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ಫೀಚರ್ಸ್ ಯಾವೆಲ್ಲಾ ಫೀಚರ್ಸ್ ಒಳಗೊಂಡಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಡಿಸ್‌ಪ್ಲೇ ರಚನೆ
ಮೊಟೊ G9 ಪವರ್ ಸ್ಮಾರ್ಟ್‌ಫೋನ್ 720x1,640 ಪಿಕ್ಸೆಲ್ ರೆಸಲ್ಯೂಶನ್ ಸಾಮರ್ಥ್ಯವನ್ನು ಹೊಂದಿರುವ 6.8-ಇಂಚಿನ ಹೆಚ್‌ಡಿ + ಐಪಿಎಸ್ ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಡಿಸ್‌ಪ್ಲೇ ಸ್ಟ್ರೀನ್ ಟು ಬಾಡಿ ನಡುವಿನ ಅನುಪಾತ 83.1% ಹೊಂದಿದ್ದು, 263PPI ಪಿಕ್ಸೆಲ್ ಸಾಂದ್ರತೆಯನ್ನು ಹೊಂದಿದೆ.

ಪ್ರೊಸೆಸರ್ ಕಾರ್ಯ
ಮೊಟೊ G9 ಪವರ್ ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 662 SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 4GB RAM ಮತ್ತು 128GB ಆಂತರಿಕ ಸಂಗ್ರಹ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಮೈಕ್ರೊ ಎಸ್‌ಡಿ ಕಾರ್ಡ್ ಮೂಲಕ 512GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ವಿನ್ಯಾಸ
ಮೊಟೊ G9 ಪವರ್ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಸೆನ್ಸಾರ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿದೆ.

ಬ್ಯಾಟರಿ ಮತ್ತು ಇತರೆ
ಮೊಟೊ G9 ಪವರ್ ಸ್ಮಾರ್ಟ್‌ಫೋನ್ 6,000mAh ಸಾಮರ್ಥ್ಯದ ಬಿಗ್ ಬ್ಯಾಟರಿ ಪ್ಯಾಕಪ್ ಅನ್ನು ಹೊಂದಿದೆ. ಇದು 20W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಈ ಬ್ಯಾಟರಿ 60 ಗಂಟೆಗಳವರೆಗೆ ಇರುತ್ತದೆ ಎಂದು ಕಂಪನಿ ಹೇಳಿಕೊಂಡಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ವೈ-ಫೈ , ಬ್ಲೂಟೂತ್ ವಿ 5, NFC, ಯುಎಸ್‌ಬಿ ಟೈಪ್-ಸಿ, 3.5 ಎಂಎಂ ಆಡಿಯೊ ಜ್ಯಾಕ್ ಅನ್ನು ಬೆಂಬಲಿಸಲಿದೆ.
-
54,535
-
1,19,900
-
54,999
-
86,999
-
49,975
-
49,990
-
20,999
-
1,04,999
-
44,999
-
64,999
-
20,699
-
49,999
-
11,499
-
54,999
-
7,999
-
8,980
-
17,091
-
10,999
-
34,999
-
39,600
-
25,750
-
33,590
-
27,760
-
44,425
-
13,780
-
1,25,000
-
45,990
-
1,35,000
-
82,999
-
17,999