ಮೊಟೊರೊಲಾ ನಿಯೋ ಸ್ಮಾರ್ಟ್‌ಫೋನ್‌ ಫೀಚರ್ಸ್‌ ಬಹಿರಂಗ!

|

ಮೊಟೊರೊಲಾ ಕಂಪೆನಿ ತನ್ನ ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನ ಪರಿಚಯಿಸಿ ಸೈ ಎನಿಸಿಕೊಂಡಿದೆ. ಸದ್ಯ ಇದೀಗ ತನ್ನ ಹೊಸ ಮೊಟೊರೊಲಾ ನಿಯೋ ಸ್ಮಾರ್ಟ್‌ಫೋನ್‌ ಬಿಡುಗಡೆಗೆ ಸಿದ್ದತೆ ನಡೆಸಿದೆ. ಈ ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 865 SoC ಪ್ರೊಸೆಸರ್‌ ಹೊಂದಿರುವ ಸಾಧ್ಯತೆ ಇದೆ ಎಂದು ಹೇಳಲಾಗ್ತಿದೆ. ಇನ್ನು ಮೊಟೊರೊಲಾ ನಿಯೋ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್‌ ಹೊಂದಿರಲಿದ್ದು, ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್‌ ಸೆನ್ಸಾರ್‌ ಆಗಿರಲಿದೆ ಎನ್ನಲಾಗಿದೆ.

ಸ್ಮಾರ್ಟ್‌ಫೋನ್‌

ಹೌದು, ಮೊಟೊರೊಲಾ ಸಂಸ್ಥೆ ತನ್ನ ಹೊಸ ಮೊಟೊರೊಲಾ ನಿಯೋ ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡುವುದಕ್ಕೆ ವೇದಿಕೆ ಸಿದ್ದ ಪಡಿಸುತ್ತಿದೆ. ಸದ್ಯ ಈ ಸ್ಮಾರ್ಟ್‌ಫೋನ್‌ ಫೀಚರ್ಸ್‌ ಆನ್‌ಲೈನ್‌ನಲ್ಲಿ ಬಹಿರಂಗವಾಗಿದೆ. ಇನ್ನು ಈ ಫೋನ್‌ ಎರಡು RAM ಮತ್ತು ಶೇಖರಣಾ ಸಂರಚನೆಗಳನ್ನು ಹೊಂದಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ ಹೊಂದಿರಲಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ

ಡಿಸ್‌ಪ್ಲೇ

ಮೊಟೊರೊಲಾ ನಿಯೋ ಸ್ಮಾರ್ಟ್‌ಫೋನ್‌ 1,080 × 2,520 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್ ಸಾಮರ್ಥ್ಯದ ಡಿಸ್‌ಪ್ಲೇಯನ್ನು ಹೊಂದಿರಲಿದೆ. ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್‌ ಹೊಂದಿರಲಿದ್ದು, ಫುಲ್‌ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿರಲಿದೆ ಎಂದು ಹೇಳಲಾಗಿದೆ.

ಪ್ರೊಸೆಸರ್‌

ಪ್ರೊಸೆಸರ್‌

ಇದು ಸ್ನಾಪ್‌ ಡ್ರಾಗನ್‌ 865 SoC ಪ್ರೊಸೆಸರ್‌ ಬಲವನ್ನು ಪಡೆದಿರಲಿದೆ ಎನ್ನಲಾಗಿದ್ದು, ಆಂಡ್ರಾಯ್ಡ್‌ 11 ಬೆಂಬಲದೊಮದಿಗೆ ಕಾರ್ಯನಿರ್ವಹಿಸಲಿದೆ. ಹಾಗೇಯೇ 8GB + 128GB ಮತ್ತು 12GB + 256GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯದ ಆಯ್ಕೆಯಲ್ಲಿ ಲಭ್ಯವಾಗಲಿದೆ ಎಂದು ನಿರೀಕ್ಷಿಸಲಾಗಿದೆ.

ಕ್ಯಾಮೆರಾ

ಕ್ಯಾಮೆರಾ

ಮೊಟೊರೊಲಾ ನಿಯೋ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್ ಹೊಂದಿದ್ದು, ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್‌ ಸೆನ್ಸಾರ್‌, ಎರಡನೇ ಕ್ಯಾಮೆರಾ 16 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಮತ್ತು 2 ಮೆಗಾಪಿಕ್ಸೆಲ್‌ ಡೆಪ್ತ್‌ ಸೆನ್ಸಾರ್‌ ಅನ್ನು ಹೊಂದಿರಲಿದೆ. ಇದಲ್ಲದೆ 8 ಮೆಗಾಪಿಕ್ಸೆಲ್‌ ಮತ್ತು 7 ಮೆಗಾಪಿಕ್ಸೆಲ್‌ ಅಲ್ಟ್ರಾ-ವೈಡ್-ಆಂಗಲ್ ಸೆನ್ಸಾರ್‌ ಹೊಂದಿರುವ ಡ್ಯುಯೆಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಹೊಂದಿರಲಿದೆ ಎಂದು ಅಂದಾಜಿಸಲಾಗಿದೆ.
ಇನ್ನು ಈ ಸ್ಮಾರ್ಟ್‌ಫೋನ್‌ ಬ್ಯಾಟರಿ ಸಾಮರ್ಥ್ಯ, ಬೆಲೆ ಮತ್ತು ಲಭ್ಯತೆಯ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.

Best Mobiles in India

English summary
Motorola Nio is expected to have a dual selfie camera setup with a hole-punch cutout design.to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X