Just In
- 6 min ago
ಫ್ಲಿಪ್‌ಕಾರ್ಟ್‌ನಲ್ಲಿ ಐಫೋನ್ 14 ಪ್ಲಸ್ ಬೆಲೆಯಲ್ಲಿ ಭಾರಿ ಕಡಿತ! ಇದಕ್ಕಿಂತ ಒಳ್ಳೆ ಟೈಂ ಸಿಗೋದಿಲ್ಲ!
- 41 min ago
ರಾಷ್ಟ್ರಮಟ್ಟದಲ್ಲಿ ಮೆಚ್ಚುಗೆ ಗಳಿಸಿದ ಬೆಂಗಳೂರಿನ 8 ವರ್ಷದ ಆಂಡ್ರಾಯ್ಡ್ ಆಪ್ ಡೆವಲಪರ್!
- 2 hrs ago
ಭಾರತದಲ್ಲಿ ಹೊಸ ಸಂಚಲನ ಸೃಷ್ಟಿಸಿದ ಫೈರ್ಬೋಲ್ಟ್ ಕಂಪೆನಿ!..ಪ್ರತಿಸ್ಫರ್ಧಿಗಳು ಕಂಗಾಲು!
- 2 hrs ago
ಬೆಂಗಳೂರಿಗರೇ ಗಮನಿಸಿ... ಇನ್ನೇನು ಕೆಲವೇ ದಿನದಲ್ಲಿ NIMBUS ಆಪ್ ಲಾಂಚ್!
Don't Miss
- Lifestyle
ಒಣಕೆಮ್ಮಿಗೆ ಕಾರಣವೇನು? ಯಾವ ಮನೆಮದ್ದು ಒಳ್ಳೆಯದು?
- News
ಮುಂದಿನ 5-6 ತಿಂಗಳಲ್ಲಿ ಸಾವಿರಾರು ಗಂಡಂದಿರ ಬಂಧನ: ಅಸ್ಸಾಂ ಸಿಎಂ
- Sports
IND vs AUS Test : ಫೆಬ್ರವರಿ 1 ರಂದು ಭಾರತಕ್ಕೆ ಆಸ್ಟ್ರೇಲಿಯಾ ತಂಡ : ಬೆಂಗಳೂರಿನಲ್ಲಿ ಅಭ್ಯಾಸ
- Movies
ಗಾಯಕನಾಗುವ ಆಸೆಯಿಂದ ಬಂದು ನಟನಾದ ಯಶವಂತ್ ಕಿರುತೆರೆ ಪಯಣ
- Automobiles
ಭಾರತದಲ್ಲಿ ಹೊಸ ಅಧ್ಯಾಯ ಬರೆಯಲು ಸಿದ್ಧವಾಗಿವೆ ಮಾರುತಿ ಸುಜುಕಿ ಕಾರುಗಳು
- Finance
ಅದಾನಿ ಗ್ರೂಪ್ ವಿರುದ್ಧ ಆರೋಪ: 'ನಾವು ಜಾಗರೂಕರಾಗಿದ್ದೇವೆ' ಎಂದ ಭಾರತದ ಉನ್ನತ ಬ್ಯಾಂಕ್ಗಳು
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ಅಗ್ಗದ ಬೆಲೆಯಲ್ಲಿ 'ಮೊಟೊರೊಲಾ ಒನ್ ಆಕ್ಷನ್' ಸ್ಮಾರ್ಟ್‌ಫೋನ್ ಬಿಡುಗಡೆ!
ಮೊಟೊ ಎಂದೆ ಜನಪ್ರಿಯವಾಗಿರುವ 'ಮೊಟೊರೊಲಾ' ಕಂಪನಿಯು ಇತ್ತೀಚಿಗಷ್ಟೆ ಬ್ರೆಜಿಲ್‌ನಲ್ಲಿ ಬಿಡುಗಡೆ ಮಾಡಿದ್ದ 'ಮೊಟೊರೊಲಾ ಆಕ್ಷನ್' ಸ್ಮಾರ್ಟ್‌ಫೋನ್ ಅನ್ನು ಇಂದು ಭಾರತೀಯ ಮಾರುಕಟ್ಟೆಗೆ ಬಿಡುಗಡೆ ಮಾಡಿದೆ. 'ಮೊಟೊರೊಲಾ ಒನ್' ಸರಣಿಯಲ್ಲಿ ಲಾಂಚ್ ಆಗಿರುವ ಈ ಸ್ಮಾರ್ಟ್‌ಫೋನ್ 'ಗೋಪ್ರೊ ಸ್ಟೈಲ್' ಕ್ಯಾಮೆರಾ ಫೀಚರ್ ಹೊಂದಿದ್ದು, ಬಜೆಟ್ ಪ್ರೈಸ್‌ಟ್ಯಾಗ್ ರೇಂಜ್‌ನಲ್ಲಿ ಧೂಳೆಬ್ಬಿಸುವ ಸೂಚನೆ ನೀಡಿದೆ.

ಹೌದು, ಬಹುನಿರೀಕ್ಷಿತ ಮೊಟೊರೊಲಾ ಆಕ್ಷನ್ ಸ್ಮಾರ್ಟ್‌ಫೋನ್ ದೇಶಿಯ ಮಾರುಕಟ್ಟೆಗೆ ಎಂಟ್ರಿ ಕೊಟ್ಟಿದ್ದು, ಈ ಸ್ಮಾರ್ಟ್‌ಫೋನ್ 4GB RAM ಮತ್ತು 128GB ಸ್ಟೋರೇಜ್ ವೇರಿಯಂಟ್ ಮಾತ್ರ ಹೊಂದಿದೆ. ಬ್ಲೂ, ವೈಟ್ ಮತ್ತು ಟೈಲ್ ಬಣ್ಣಗಳ ಆಯ್ಕೆಗಳಲ್ಲಿ ದೊರೆಯಲಿರುವ ಮೊಟೊರೊಲಾ ಒನ್ ಆಕ್ಷನ್ ಇದೇ ಅಗಷ್ಟ್ 30 ರಂದು ಸೇಲ್ ಆರಂಭಿಸಲಿದೆ. ಗ್ರಾಹಕರು ಇ ಕಾಮರ್ಸ್ ಜಾಲತಾಣ ಫ್ಲಿಪ್‌ಕಾರ್ಟ್‌ನಲ್ಲಿ ಖರೀದಿಸಬಹುದು.

ಹಿಂಬದಿಯಲ್ಲಿ ಮೂರು ಕ್ಯಾಮೆರಾ ಆಯ್ಕೆಯನ್ನು ಹೊಂದಿರುವ ಈ ಸ್ಮಾರ್ಟ್‌ಫೋನ್ ಸ್ಯಾಮ್‌ಸಂಗ್ Exynos 9609 ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸುತ್ತದೆ. ವಿಡಿಯೊ ಗುಣಮಟ್ಟವು ಉತ್ತಮವಾಗಿದ್ದು, 1080p ರೆಸಲ್ಯೂಶನ್ ಸಾಮರ್ಥ್ಯ ಬೆಂಬಲಿಸಲಿದೆ. ಹಾಗಾದರೇ ಮೊಟೊರೊಲಾ ಒನ್ ವಿಷನ್ ಸ್ಮಾರ್ಟ್‌ಫೋನ್ ಇತರೆ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಎಂಬುದನ್ನು ತಿಳಿಯಲು ಮುಂದೆ ಓದಿರಿ.

ಡಿಸ್‌ಪ್ಲೇ ವಿನ್ಯಾಸ
2520 x 1080 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 6.3 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್ ಸಿನಿಮಾ ವಿಶನ್ ಡಿಸ್‌ಪ್ಲೇಯನ್ನು ಹೊಂದಿದ್ದು, ಡಿಸ್‌ಪ್ಲೇಯ ಅನುಪಾತವು 21:9 ಆಗಿದೆ. ಪ್ರತಿ ಇಂಚಿನ ಪಿಕ್ಸಲ್ ಸಾಂದ್ರತೆಯು 435 ppi ಆಗಿದ್ದು, ಸ್ಕ್ರೀನ್‌ನಿಂದ ಬಾಹ್ಯ ಬಾಡಿಯ ನಡುವಿನ ಅಂತರವು ಶೇ. 81.52 % ಆಗಿದೆ. ಹಾಗೆಯೇ ಡಿಸ್‌ಪ್ಲೇಯ ಸುತ್ತಳತೆಯು 160.1 mm x 71.2 mm x 9.15 mm ಆಗಿದೆ.

ಪ್ರೊಸೆಸರ್ ಸಾಮರ್ಥ್ಯ
ಮೊಟೊರೊಲಾ ಒನ್ ಆಕ್ಷನ್ ಸ್ಮಾರ್ಟ್‌ಫೋನ್ ಸ್ಯಾಮ್‌ಸಂಗ್ Exynos 9609 ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದ್ದು, ಆಂಡ್ರಾಯ್ಡ್ ಪೈ ಓಎಸ್‌ನ ಬೆಂಬಲ ಸಹ ಪಡೆದಿದೆ. ಇದಕ್ಕೆ ಪೂರಕವಾಗಿ 4GB RAM ಮತ್ತು 128GB ಆಂತರಿಕ ಸ್ಟೋರೇಜ್ ಸ್ಥಳಾವಕಾಶವನ್ನು ಹೊಂದಿದೆ. ಹಾಗೆಯೇ ಎಸ್‌ಡಿ ಕಾರ್ಡ್ ಮೂಲಕ ಬಾಹ್ಯವಾಗಿ 512GB ವರೆಗೂ ಮೆಮೊರಿ ವಿಸ್ತರಿಸಿಕೊಳ್ಳುವ ಅವಕಾಶ ಪಡೆದಿದೆ.

ಕ್ಯಾಮೆರಾ ವಿಶೇಷತೆ
ಮೊಟೊರೊಲಾ ಒನ್ ಆಕ್ಷನ್ ಸ್ಮಾರ್ಟ್‌ಫೋನ್ ತ್ರಿವಳಿ ಕ್ಯಾಮೆರಾ ಆಯ್ಕೆಯನ್ನು ಹೊಂದಿದ್ದು, ಪ್ರಾಥಮಿಕ ಕ್ಯಾಮೆರಾವು f/1.8 ಅಪರ್ಚರ್ನೊಂದಿಗೆ 12ಎಂಪಿ ಸೆನ್ಸಾರ್ ಹೊಂದಿದೆ. ಸೆಕೆಂಡರಿ ಕ್ಯಾಮೆರಾವು ಗೋಪ್ರೊ ಸ್ಟೈಲ್ ಜೊತೆಗೆ ವೈಲ್ಡ್ ಆಂಗಲ್ ಸೆನ್ಸಾರ್‌ನಲ್ಲಿದೆ. ಹಾಗೂ ಇದು 117 ಡಿಗ್ರಿ FOV ಯೊಂದಿಗೆ 1080p ವಿಡಿಯೊ ಸಪೋರ್ಟ್ ಇದೆ. ತೃತೀಯ ಕ್ಯಾಮೆರಾ 5ಎಂಪಿ ಸೆನ್ಸಾರ್ ಪಡೆದಿದೆ. ಸೆಲ್ಫಿಗಾಗಿ 12ಎಂಪಿ ಕ್ಯಾಮೆರಾ ನೀಡಲಾಗಿದೆ.

ಬ್ಯಾಟರಿ ಮತ್ತು ಓಎಸ್
ಮೊಟೊರೊಲಾ ಒನ್ ಆಕ್ಷನ್ ಸ್ಮಾರ್ಟ್‌ಫೋನ್ 3,500mAh ಸಾಮರ್ಥ್ಯದ ಬ್ಯಾಟರಿ ಶಕ್ತಿಯನ್ನು ಪಡೆದಿದ್ದು, ಯುಎಸ್‌ಬಿ ಟೈಪ್ ಸಿ ಫೋರ್ಟ್ ಚಾರ್ಜಿಂಗ್ ಸೌಲಭ್ಯ ಪಡೆದಿದೆ. ಆಂಡ್ರಾಯ್ಡ್ ಪೈ 9 ಓಎಸ್ ನೀಡಲಾಗಿದ್ದು, ಗ್ರಾಹಕರು ಮುಂದೆ ಆಂಡ್ರಾಯ್ಡ್ 10 ಮತ್ತು ಆಂಡ್ರಾಯ್ಡ್ 11 ಓಎಸ್‌ಗಳಿಗೆ ಅಪ್‌ಗ್ರೇಡ್ ಮಾಡಿಕೊಳ್ಳವ ಅವಕಾಶವನ್ನು ಒಳಗೊಂಡಿದೆ. ದೀರ್ಘಕಾಲ ಬಾಳಿಕೆ ಒದಗಿಸಲಿದೆ.

ಇತರೆ ಫೀಚರ್ಸ್‌ಗಳು
ಮೊಟೊರೊಲಾ ಒನ್ ಆಕ್ಷನ್ ಸ್ಮಾರ್ಟ್‌ಫೋನ್ ರಿಯರ್‌ಮೌಂಟ್ ಫಿಂಗರ್‌ಪ್ರಿಂಟ್ ಸೆನ್ಸಾರ್ ಆಯ್ಕೆ ಹೊಂದಿದ್ದು, 3.5mm ಆಡಿಯೊ ಜಾಕ್ ಆಯ್ಕೆಯ ಜೊತೆಗೆ ಡಾಲ್ಬಿ ಸೌಂಡ್ ಬೆಂಬಲ ಪಡೆದಿದೆ. ಇದರೊಂದಿಗೆ ಸ್ಲಾಶ್ ಪ್ರೂಫ್, ಹಾಟ್‌ಸ್ಪಾಟ್, 4G LTE, ವೈಫೈ, ಬ್ಲೂಟೂತ್, ಜಿಪಿಎಸ್, ಎನ್‌ಎಫ್‌ಸಿ, ಯುಎಸ್‌ಬಿ ಟೈಪ್-ಸಿ ಪೋರ್ಟ್ ಸೌಲಭ್ಯಗಳನ್ನು ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ
ಮೊಟೊರೊಲಾ ಒನ್ ಆಕ್ಷನ್ ಸ್ಮಾರ್ಟ್‌ಫೋನ್ 4GB RAM ಮತ್ತು 128GB ಒಂದೇ ವೇರಿಯಂಟ್ ಆಯ್ಕೆ ಹೊಂದಿದ್ದು, 13,999ರೂ.ಗಳಿಗೆ ಲಭ್ಯವಾಗಲಿದೆ. ಬ್ಲೂ, ವೈಟ್ ಮತ್ತು ಟೀಲ್ ಬಣ್ಣಗಳ ಆಯ್ಕೆಯಲ್ಲಿ ದೊರೆಯಲಿರುವ ಈ ಸ್ಮಾರ್ಟ್‌ಫೋನ್ ಇದೇ ಅಗಷ್ಟ್ 30ರಂದು ಮೊದಲ ಸೇಲ್ ಶುರುಮಾಡಲಿದೆ. ಇ ಕಾಮರ್ಸ್ ಜಾಲತಾಣ ಫ್ಲಿಪ್‌ಕಾರ್ಟ್‌ನಲ್ಲಿ ಖರೀದಿಗೆ ಲಭ್ಯವಾಗಲಿದೆ.
-
54,999
-
36,599
-
39,999
-
38,990
-
1,29,900
-
79,990
-
38,900
-
18,999
-
19,300
-
69,999
-
79,900
-
1,09,999
-
1,19,900
-
21,999
-
1,29,900
-
12,999
-
44,999
-
15,999
-
7,332
-
17,091
-
29,999
-
7,999
-
8,999
-
45,835
-
77,935
-
48,030
-
29,616
-
57,999
-
12,670
-
79,470