Just In
- 9 hrs ago
ಮೆಸೆಂಜರ್ಗಾಗಿ ಕೆಲವು ಫೀಚರ್ಸ್ ಪರಿಚಯಿಸಿದ ಮೆಟಾ; ಬಳಕೆದಾರರಿಗೆ ಸಾಕಷ್ಟು ಅನುಕೂಲ!
- 10 hrs ago
ಟೆಲಿಗ್ರಾಮ್ನಲ್ಲಿರುವ ಈ ಆಯ್ಕೆಯು ವಾಟ್ಸಾಪ್ಗಿಂತ ಭಿನ್ನವಾಗಿದೆ! ಇದರ ಲಾಭವೇನು?
- 11 hrs ago
ಸ್ಪ್ಯಾಮ್ ಕರೆಗಳನ್ನು ನಿರ್ಬಂಧಿಸುವುದು ಹೇಗೆ ಗೊತ್ತಾ?..ಈ ಕ್ರಮಗಳನ್ನು ಅನುಸರಿಸಿ!
- 11 hrs ago
ಹೊಸ ಚಾರ್ಜರ್ ಲಾಂಚ್!..ಇದ್ರಲ್ಲಿ ಒಂದೇ ವೇಳೆ 3 ಡಿವೈಸ್ ಚಾರ್ಜ್ ಸಾಧ್ಯ!
Don't Miss
- Sports
ಈ ಪ್ರದರ್ಶನದಿಂದ ತೃಪ್ತಿಯಾಗಿದೆ: ಅದ್ಭುತ ಪ್ರದರ್ಶನದ ಬಗ್ಗೆ ಶುಬ್ಮನ್ ಗಿಲ್ ಸಂತಸ
- Movies
BBK9: ನೇಹಾ ಗೌಡ ಜೊತೆ ಬಿಗ್ ಬಾಸ್ ಸೀಸನ್ 9ರ ಸಪ್ಪೆ ಹೊಟೇಲ್ ಗ್ಯಾಂಗ್ ಪ್ರತ್ಯಕ್ಷ..!
- News
ಹೊಸ ಘಟಕ, ಪದಾಧಿಕಾರಿ ಘೋಷಣೆ, ಶೀಘ್ರವೇ ಚುನಾವಣೆ ಅಭ್ಯರ್ಥಿ ಆಯ್ಕೆ ಆರಂಭ: AAP
- Finance
Union Budget 2023: ತೆರಿಗೆದಾರರಿಗೆ ದೀರ್ಘಾವಧಿ ತೆರಿಗೆ ವಿನಾಯಿತಿ ಘೋಷಿಸಿ: KPMG
- Lifestyle
ಆ್ಯಪಲ್ ಶೇಪ್ನ ದೇಹ ಹೊಂದಿರುವವರಿಗೆ ಹೆಚ್ಚಾಗಿ ಕಾಯಿಲೆ ಬೀಳುತ್ತಾರೆ, ಏಕೆ?
- Automobiles
ವಧುವನ್ನು ಮನೆಗೆ ಕರೆದೊಯ್ಯಲು ತಂದೆಯ ಹಳೆಯ ಮಾರುತಿ 800 ಕಾರು ಬಳಿಸಿದ ಕೆನಡಾದ ಎನ್ಆರ್ಐ
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ಇಂದು 'ಮೊಟೊರೊಲಾ ಒನ್ ಆಕ್ಷನ್' ಫಸ್ಟ್ ಸೇಲ್ ಶುರು!..ಬೆಲೆ 13,999ರೂ!
ಇತ್ತೀಚಿಗೆ ದೇಶಿಯ ಮಾರುಕಟ್ಟೆಗೆ ಬಿಡುಗಡೆ ಆಗಿರುವ ಮೊಟೊ ಸಂಸ್ಥೆಯ 'ಮೊಟೊರೊಲಾ ಒನ್ ಆಕ್ಷನ್' ಸ್ಮಾರ್ಟ್‌ಫೋನ್ ಮೊದಲ ಸೇಲ್ ಇಂದು ಮಧ್ಯಾಹ್ನ 12ಕ್ಕೆ ಶುರುವಾಗಲಿದೆ. ಈ ಸ್ಮಾರ್ಟ್‌ಫೋನ್ 4GB RAM ಮತ್ತು 128GB ಒಂದೇ ವೇರಿಯಂಟ್ ಹೊಂದಿದ್ದು, 13,999ರೂ.ಗಳಿಗೆ ದೊರೆಯಲಿದೆ. ಈ ಸ್ಮಾರ್ಟ್‌ಫೋನ್ ಅನ್ನು ಗ್ರಾಹಕರು ಇ ಕಾಮರ್ಸ್ ತಾಣ ಫ್ಲಿಪ್‌ಕಾರ್ಟ್‌ನಲ್ಲಿ ಖರೀದಿಸಬಹುದಾಗಿದೆ.

ಮೊಟೊರೊಲಾ ಒನ್ ಆಕ್ಷನ್ ಸ್ಮಾರ್ಟ್‌ಫೋನ್ ಬ್ಲೂ, ವೈಟ್ ಮತ್ತು ಟೈಲ್ ಬಣ್ಣಗಳ ಆಯ್ಕೆಗಳಲ್ಲಿ ದೊರೆಯಲಿದ್ದು, ಹಿಂಬದಿಯಲ್ಲಿ ಮೂರು ಕ್ಯಾಮೆರಾ ಆಯ್ಕೆಯನ್ನು ಹೊಂದಿದೆ. ಹಾಗೆಯೇ ಈ ಫೋನ್ 'ಸ್ಯಾಮ್‌ಸಂಗ್ Exynos 9609' ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸುತ್ತದೆ. ವಿಡಿಯೊ ಗುಣಮಟ್ಟವು ಉತ್ತಮವಾಗಿದ್ದು, 1080p ರೆಸಲ್ಯೂಶನ್ ಸಾಮರ್ಥ್ಯ ಬೆಂಬಲಿಸಲಿದೆ. ಹಾಗಾದರೇ ಮೊಟೊರೊಲಾ ಒನ್ ವಿಷನ್ ಸ್ಮಾರ್ಟ್‌ಫೋನ್ ಇತರೆ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಎಂಬುದನ್ನು ತಿಳಿಯಲು ಮುಂದೆ ಓದಿರಿ.

ಡಿಸ್‌ಪ್ಲೇ ವಿನ್ಯಾಸ
2520 x 1080 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 6.3 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್ ಸಿನಿಮಾ ವಿಶನ್ ಡಿಸ್‌ಪ್ಲೇಯನ್ನು ಹೊಂದಿದ್ದು, ಡಿಸ್‌ಪ್ಲೇಯ ಅನುಪಾತವು 21:9 ಆಗಿದೆ. ಪ್ರತಿ ಇಂಚಿನ ಪಿಕ್ಸಲ್ ಸಾಂದ್ರತೆಯು 435 ppi ಆಗಿದ್ದು, ಸ್ಕ್ರೀನ್‌ನಿಂದ ಬಾಹ್ಯ ಬಾಡಿಯ ನಡುವಿನ ಅಂತರವು ಶೇ. 81.52 % ಆಗಿದೆ. ಹಾಗೆಯೇ ಡಿಸ್‌ಪ್ಲೇಯ ಸುತ್ತಳತೆಯು 160.1 mm x 71.2 mm x 9.15 mm ಆಗಿದೆ.

ಪ್ರೊಸೆಸರ್ ಸಾಮರ್ಥ್ಯ
ಮೊಟೊರೊಲಾ ಒನ್ ಆಕ್ಷನ್ ಸ್ಮಾರ್ಟ್‌ಫೋನ್ ಸ್ಯಾಮ್‌ಸಂಗ್ Exynos 9609 ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದ್ದು, ಆಂಡ್ರಾಯ್ಡ್ ಪೈ ಓಎಸ್‌ನ ಬೆಂಬಲ ಸಹ ಪಡೆದಿದೆ. ಇದಕ್ಕೆ ಪೂರಕವಾಗಿ 4GB RAM ಮತ್ತು 128GB ಆಂತರಿಕ ಸ್ಟೋರೇಜ್ ಸ್ಥಳಾವಕಾಶವನ್ನು ಹೊಂದಿದೆ. ಹಾಗೆಯೇ ಎಸ್‌ಡಿ ಕಾರ್ಡ್ ಮೂಲಕ ಬಾಹ್ಯವಾಗಿ 512GB ವರೆಗೂ ಮೆಮೊರಿ ವಿಸ್ತರಿಸಿಕೊಳ್ಳುವ ಅವಕಾಶ ಪಡೆದಿದೆ.

ಕ್ಯಾಮೆರಾ ವಿಶೇಷತೆ
ಮೊಟೊರೊಲಾ ಒನ್ ಆಕ್ಷನ್ ಸ್ಮಾರ್ಟ್‌ಫೋನ್ ತ್ರಿವಳಿ ಕ್ಯಾಮೆರಾ ಆಯ್ಕೆಯನ್ನು ಹೊಂದಿದ್ದು, ಪ್ರಾಥಮಿಕ ಕ್ಯಾಮೆರಾವು f/1.8 ಅಪರ್ಚರ್ನೊಂದಿಗೆ 12ಎಂಪಿ ಸೆನ್ಸಾರ್ ಹೊಂದಿದೆ. ಸೆಕೆಂಡರಿ ಕ್ಯಾಮೆರಾವು ಗೋಪ್ರೊ ಸ್ಟೈಲ್ ಜೊತೆಗೆ ವೈಲ್ಡ್ ಆಂಗಲ್ ಸೆನ್ಸಾರ್‌ನಲ್ಲಿದೆ. ಹಾಗೂ ಇದು 117 ಡಿಗ್ರಿ FOV ಯೊಂದಿಗೆ 1080p ವಿಡಿಯೊ ಸಪೋರ್ಟ್ ಇದೆ. ತೃತೀಯ ಕ್ಯಾಮೆರಾ 5ಎಂಪಿ ಸೆನ್ಸಾರ್ ಪಡೆದಿದೆ. ಸೆಲ್ಫಿಗಾಗಿ 12ಎಂಪಿ ಕ್ಯಾಮೆರಾ ನೀಡಲಾಗಿದೆ.

ಬ್ಯಾಟರಿ ಮತ್ತು ಓಎಸ್
ಮೊಟೊರೊಲಾ ಒನ್ ಆಕ್ಷನ್ ಸ್ಮಾರ್ಟ್‌ಫೋನ್ 3,500mAh ಸಾಮರ್ಥ್ಯದ ಬ್ಯಾಟರಿ ಶಕ್ತಿಯನ್ನು ಪಡೆದಿದ್ದು, ಯುಎಸ್‌ಬಿ ಟೈಪ್ ಸಿ ಫೋರ್ಟ್ ಚಾರ್ಜಿಂಗ್ ಸೌಲಭ್ಯ ಪಡೆದಿದೆ. ಆಂಡ್ರಾಯ್ಡ್ ಪೈ 9 ಓಎಸ್ ನೀಡಲಾಗಿದ್ದು, ಗ್ರಾಹಕರು ಮುಂದೆ ಆಂಡ್ರಾಯ್ಡ್ 10 ಮತ್ತು ಆಂಡ್ರಾಯ್ಡ್ 11 ಓಎಸ್‌ಗಳಿಗೆ ಅಪ್‌ಗ್ರೇಡ್ ಮಾಡಿಕೊಳ್ಳವ ಅವಕಾಶವನ್ನು ಒಳಗೊಂಡಿದೆ. ದೀರ್ಘಕಾಲ ಬಾಳಿಕೆ ಒದಗಿಸಲಿದೆ.

ಇತರೆ ಫೀಚರ್ಸ್‌ಗಳು
ಮೊಟೊರೊಲಾ ಒನ್ ಆಕ್ಷನ್ ಸ್ಮಾರ್ಟ್‌ಫೋನ್ ರಿಯರ್‌ಮೌಂಟ್ ಫಿಂಗರ್‌ಪ್ರಿಂಟ್ ಸೆನ್ಸಾರ್ ಆಯ್ಕೆ ಹೊಂದಿದ್ದು, 3.5mm ಆಡಿಯೊ ಜಾಕ್ ಆಯ್ಕೆಯ ಜೊತೆಗೆ ಡಾಲ್ಬಿ ಸೌಂಡ್ ಬೆಂಬಲ ಪಡೆದಿದೆ. ಇದರೊಂದಿಗೆ ಸ್ಲಾಶ್ ಪ್ರೂಫ್, ಹಾಟ್‌ಸ್ಪಾಟ್, 4G LTE, ವೈಫೈ, ಬ್ಲೂಟೂತ್, ಜಿಪಿಎಸ್, ಎನ್‌ಎಫ್‌ಸಿ, ಯುಎಸ್‌ಬಿ ಟೈಪ್-ಸಿ ಪೋರ್ಟ್ ಸೌಲಭ್ಯಗಳನ್ನು ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ
ಮೊಟೊರೊಲಾ ಒನ್ ಆಕ್ಷನ್ ಸ್ಮಾರ್ಟ್‌ಫೋನ್ 4GB RAM ಮತ್ತು 128GB ಒಂದೇ ವೇರಿಯಂಟ್ ಆಯ್ಕೆ ಹೊಂದಿದ್ದು, 13,999ರೂ.ಗಳಿಗೆ ಲಭ್ಯವಾಗಲಿದೆ. ಬ್ಲೂ, ವೈಟ್ ಮತ್ತು ಟೀಲ್ ಬಣ್ಣಗಳ ಆಯ್ಕೆಯಲ್ಲಿ ದೊರೆಯಲಿರುವ ಈ ಸ್ಮಾರ್ಟ್‌ಫೋನ್ ಇಂದು ಮಧ್ಯಾಹ್ನ 12ರ ನಂತರ ಇ ಕಾಮರ್ಸ್ ಜಾಲತಾಣ ಫ್ಲಿಪ್‌ಕಾರ್ಟ್‌ನಲ್ಲಿ ಗ್ರಾಹಕರ ಖರೀದಿಗೆ ಲಭ್ಯವಾಗಲಿದೆ.
-
54,999
-
36,599
-
39,999
-
38,990
-
1,29,900
-
79,990
-
38,900
-
18,999
-
19,300
-
69,999
-
79,900
-
1,09,999
-
1,19,900
-
21,999
-
1,29,900
-
12,999
-
44,999
-
15,999
-
7,332
-
17,091
-
29,999
-
7,999
-
8,999
-
45,835
-
77,935
-
48,030
-
29,616
-
57,999
-
12,670
-
79,470