ಫ್ಲಿಪ್‌ಕಾರ್ಟ್‌ನಲ್ಲಿ ಇಂದು ಮೊಟೊ ಒನ್ ಫ್ಯೂಶನ್ ಪ್ಲಸ್‌ ಫೋನ್‌ ಫ್ಲ್ಯಾಶ್ ಸೇಲ್!

|

ಮೊಟೊರೊಲಾ ಮೊಬೈಲ್ ಸಂಸ್ಥೆಯ ಇತ್ತೀಚಿನ ಸ್ಮಾರ್ಟ್‌ಫೋನ್‌ಗಳು ಹಲವು ಆಕರ್ಷಕ ಫೀಚರ್ಸ್‌ಗಳೊಂದಿಗೆ ಗ್ರಾಹಕರನ್ನು ಸೆಳೆದಿವೆ. ಆ ಪೈಕಿ ಮಾರುಕಟ್ಟೆಗೆ ನೂತನವಾಗಿ ಪರಿಚಿತವಾಗಿರುವ ಮೊಟೊರೊಲಾ ಒನ್ ಫ್ಯೂಶನ್ ಪ್ಲಸ್‌ ಸ್ಮಾರ್ಟ್‌ಫೋನ್‌ ಇಂದು (ಆ.10) ಮಧ್ಯಾಹ್ನ 12ಕ್ಕೆ ಫ್ಲಿಪ್‌ಕಾರ್ಟ್‌ ಇ-ಕಾಮರ್ಸ್‌ ತಾಣದಲ್ಲಿ ಫ್ಲ್ಯಾಶ್‌ ಸೇಲ್ ಆರಂಭಿಸಲಿದೆ. ಇನ್ನು ಈ ಸ್ಮಾರ್ಟ್‌ಫೋನಿನ ಆರಂಭಿಕ ಬೆಲೆಯು 17,499ರೂ. ಆಗಿದೆ.

ಮೊಟೊರೊಲಾ ಸಂಸ್ಥೆ

ಹೌದು, ಮೊಟೊರೊಲಾ ಸಂಸ್ಥೆಯ ಹೊಸ ಮೊಟೊ ಒನ್ ಫ್ಯೂಶನ್ ಪ್ಲಸ್‌ ಫೋನಿನ ಫ್ಲ್ಯಾಶ್ ಸೇಲ್ ಇಂದು ನಡೆಯಲಿದೆ. ಈ ಫೋನ್ 6GB RAM + 128GB ಸ್ಟೋರೇಜ್ ಆಯ್ಕೆ ಹೊಂದಿದ್ದು, ಜೊತೆಗೆ ಕ್ವಾಡ್‌ ಕ್ಯಾಮೆರಾ ಸೆಟ್‌ಅಪ್ ಪಡೆದಿದೆ. ಇದರೊಂದಿಗೆ 5,000mAh ಬ್ಯಾಟರಿ ಬ್ಯಾಕ್‌ಅಪ್‌ ಒಳಗೊಂಡಿರುವುದು ಪ್ಲಸ್‌ ಪಾಯಿಂಟ್‌ ಆಗಿದೆ. ಇನ್ನು ಈ ಫೋನ್ ಮೂನ್‌ಲೈಟ್ ವೈಟ್ ಹಾಗೂ ಬ್ಲೂ ಬಣ್ಣಗಳ ಆಯ್ಕೆಯನ್ನು ಹೊಂದಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನಿನ ಇತರೆ ಫೀಚರ್ಸ್‌ಗಳು ಯಾವುವು ಎಂಬುದನ್ನು ತಿಳಿಯಲು ಮುಂದೆ ಓದಿರಿ.

ಡಿಸ್‌ಪ್ಲೇ ಮತ್ತು ಡಿಸೈನ್

ಡಿಸ್‌ಪ್ಲೇ ಮತ್ತು ಡಿಸೈನ್

ಮೊಟೊರೊಲಾ ಒನ್ ಫ್ಯೂಶನ್ ಪ್ಲಸ್‌ ಸ್ಮಾರ್ಟ್‌ಫೋನ್ 1,080x2,340 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5-ಇಂಚಿನ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇಯು ಫುಲ್‌ಹೆಚ್‌ಡಿ + ಡಿಸ್‌ಪ್ಲೇ ಆಗಿದ್ದು, ಇದು 19.5: 9 ರಚನೆಯ ಅನುಪಾತವನ್ನ ಹೊಂದಿದೆ. ಅಲ್ಲದೆ 395PPI ಪಿಕ್ಸೆಲ್ ಸಾಂದ್ರತೆಯನ್ನ ಒಳಗೊಂಡಿದೆ.

ಪ್ರೊಸೆಸರ್‌ ಬಲ

ಪ್ರೊಸೆಸರ್‌ ಬಲ

ಮೊಟೊರೊಲಾ ಒನ್ ಫ್ಯೂಶನ್ ಪ್ಲಸ್‌ ಸ್ಮಾರ್ಟ್‌ಫೋನ್ ಕ್ವಾಲ್ಕಾಮ್‌ ಸ್ನ್ಯಾಪ್‌ಡ್ರಾಗನ್ 730G SoC ಪ್ರೊಸೆಸರ್ ಅನ್ನು ಹೊಂದಿದ್ದು, ಸ್ಟಾಕ್ ಆಂಡ್ರಾಯ್ಡ್ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೇಯೇ ಈ ಸ್ಮಾರ್ಟ್‌ಫೋನ್‌ 6GB RAM ಮತ್ತು 128GB ಆಂತರಿಕ ಸಂಗ್ರಹ ಸಾಮರ್ಥ್ಯವನ್ನ ಹೊಂದಿರಲಿದೆ. ಇದಲ್ಲದೆ ಹೈಬ್ರಿಡ್ ಮೈಕ್ರೊ ಎಸ್ಡಿ ಕಾರ್ಡ್ ಮೂಲಕ 1ಟಿಬಿ ವರೆಗೆ ಸಂಗ್ರಹ ಸಾಮರ್ಥ್ಯವನ್ನ ಹೊಂದಿರಲಿದೆ.

ಕ್ಯಾಮೆರಾ ರಚನೆ

ಕ್ಯಾಮೆರಾ ರಚನೆ

ಮೊಟೊರೊಲಾ ಒನ್ ಫ್ಯೂಶನ್ ಪ್ಲಸ್‌ ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್‌ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮೊದಲನೇ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಆಂಗಲ್ ಸೆನ್ಸಾರ್‌, ಮೂರನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಸೆನ್ಸಾರ್‌ ಮ್ಯಾಕ್ರೋ ಲೆನ್ಸ್ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್‌ ಸೆನ್ಸಾರ್‌ ಅನ್ನು ಹೊಂದಿರಲಿದೆ. ಇದಲ್ಲದೆ ಪಾಪ್-ಅಪ್ ಕ್ಯಾಮೆರಾ ಮಾಡ್ಯೂಲ್ ಹೊಂದಿದ್ದು 16 ಮೆಗಾಪಿಕ್ಸೆಲ್ ಸೆಲ್ಫಿ ಸೆನ್ಸಾರ್‌ ಅನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಮೊಟೊರೊಲಾ ಒನ್ ಫ್ಯೂಶನ್ ಪ್ಲಸ್‌ ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದ್ದು, 15W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಬ್ಲೂಟೂತ್ V5, ವೈ-ಫೈ, GPS, 3.5mm ಆಡಿಯೊ ಜ್ಯಾಕ್, USB ಟೈಪ್-ಸಿ ಪೋರ್ಟ್, ಮತ್ತು ಡ್ಯುಯಲ್ 4G VOLTE ಅನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಮೊಟೊರೊಲಾ ಒನ್ ಫ್ಯೂಶನ್ ಪ್ಲಸ್‌ ಸ್ಮಾರ್ಟ್‌ಫೋನ್ ಇಂದು ಫ್ಲಿಪ್‌ಕಾರ್ಟ್‌ನಲ್ಲಿ ಫ್ಲ್ಯಾಶ್‌ ಸೇಲ್ ನಡೆಯಲಿದೆ. ಈ ಫೋನಿನ ಆರಂಭಿಕ ಬೆಲೆಯು 17,499ರೂ. ಆಗಿದೆ. ಇನ್ನು ಈ ಫೋನ್ ಮೂನ್‌ಲೈಟ್ ವೈಟ್ ಹಾಗೂ ಬ್ಲೂ ಬಣ್ಣಗಳ ಆಯ್ಕೆಗಳಲ್ಲಿ ಲಭ್ಯವಾಗಲಿದೆ.

Best Mobiles in India

English summary
Motorola One Fusion+ pricein India is now set at Rs 17,499.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X