ಮೊಟೊರೊಲಾ ಒನ್ ಫ್ಯೂಷನ್ ಪ್ಲಸ್ ಸ್ಮಾರ್ಟ್‌ಫೋನ್ ಬಿಡುಗಡೆ!
ಮೊಟೊರೊಲಾ ಕಂಪೆನಿ ಈಗಾಗಲೇ ಸ್ಮಾರ್ಟ್‌ಫೋನ್ ವಲಯದಲ್ಲಿ ಬಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ಟೆಕ್ ವಲಯದಲ್ಲಿ ತನ್ನ ವಿಶೇಷ ವಿನ್ಯಾಸದ ಸ್ಮಾರ್ಟ್‌ಫೋನ್‌ಗಳನ್ನ ಪರಿಚಯಿಸಿ ತನ್ನದೇ ಆದ ಜನಪ್ರಿಯತೆಯನ್ನ ಪಡೆದುಕೊಂಡಿದೆ. ಇನ್ನ ಗ್ರಾಹಕರು ಕೂಡ ಮೊಟೊರೊಲಾ ಕಂಪೆನಿ ಹೊಸ ಮಾದರಿಯ ಫೀಚರ್ಸ್ ಸ್ಮಾರ್ಟ್‌ಫೋನ್‌ಗಳಿಗೆ ಫಿದಾ ಕೂಡ ಆಗಿದ್ದಾರೆ. ಸದ್ಯ ಇದೀಗ ಮೊಟೊರೊಲಾ ಕಂಪೆನಿ ತನ್ನ ಮತ್ತೊಂದು ಹೊಸ ಮಾದರಿಯ ಸ್ಮಾರ್ಟ್‌ಫೋನ್ ಅನ್ನು ಪರಿಚಯಿಸಿದೆ.

ಹೌದು, ಮೊಟೊರೊಲಾ ಕಂಪೆನಿ ತನ್ನ ಹೊಸ ಮೊಟೊರೊಲಾ ಒನ್ ಫ್ಯೂಷನ್ + ಸ್ಮಾರ್ಟ್‌ಫೋನ್ ಅನ್ನು ಅಧಿಕೃತವಾಗಿ ಬಿಡುಗಡೆ ಮಾಡಿದೆ ಎಂದು ಹೇಳಲಾಗ್ತಿದೆ. ಸದ್ಯ ಈ ಸ್ಮಾರ್ಟ್‌ಫೋನ್ ಅನ್ನು ಯುರೋಪ್ ಮಾರುಕಟ್ಟೆಯಲ್ಲಿ ಅಧಿಕೃತವಾಗಿ ಅನಾವರಣಗೊಳಿಸಿದೆ ಎನ್ನಲಾಗ್ತಿದೆಯಾದರೂ, ಮೊಟೊರೊಲಾ ಒನ್ ಫ್ಯೂಷನ್ ಮಾದರಿಯನ್ನು ಇನ್ನೂ ಅನಾವರಣಗೊಳಿಸಬೇಕಾಗಿದೆ ಎನ್ನುವ ಮಾಹಿತಿ ಕೂಡ ಇದೆ. ಇನ್ನು ಈ ಹೊಸ ಮೊಟೊರೊಲಾ ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ ಎನ್ನಲಾಗ್ತಿದೆ. ಇನ್ನು ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್ ಹೊಂದಿದೆ ಹಾಗೂ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ
ಮೊಟೊರೊಲಾ ಒನ್ ಪ್ಯೂಷನ್+ ಸ್ಮಾರ್ಟ್‌ಫೋನ್ 1,080x2,340 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.5-ಇಂಚಿನ ಫುಲ್ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇಯು 19.5: 9 ರಚನೆಯ ಅನುಪಾತವನ್ನ ಹೊಂದಿದ್ದು, ಇದು 395PPI ಪಿಕ್ಸೆಲ್ ಸಾಂದ್ರತೆಯನ್ನ ಒಳಗೊಂಡಿರುವ ಡಿಸ್‌ಪ್ಲೇ ಇದಾಗಿದೆ.

ಪ್ರೊಸೆಸರ್
ಇನ್ನು ಈ ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 730 SoC ಪ್ರೊಸೆಸರ್ ಅನ್ನು ಹೊಂದಿದ್ದು, ಆಂಡ್ರಾಯ್ಡ್ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಅಲ್ಲದೆ ಇದು ಅಡ್ರಿನೊ 618GPU ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್ 6GB RAM ಮತ್ತು 128GB ಆಂತರಿಕ ಸಂಗ್ರಹ ಸಾಮರ್ಥ್ಯವನ್ನ ಹೊಂದಿರಲಿದೆ. ಇದಲ್ಲದೆ ಹೈಬ್ರಿಡ್ ಮೈಕ್ರೊ ಎಸ್ಡಿ ಕಾರ್ಡ್ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನ ವಿಸ್ತರಣೆ ಮಾಡಬಹುದಾಗಿದೆ.

ಕ್ಯಾಮೆರಾ ವಿನ್ಯಾಸ
ಮೊಟೊರೊಲಾ ಒನ್ ಪ್ಯೂಷನ್+ ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಆಂಗಲ್ ಕ್ಯಾಮೆರಾ, ಮೂರನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್, ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಪಾಪ್-ಅಪ್ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿದೆ.

ಬ್ಯಾಟರಿ ಮತ್ತು ಇತರೆ
ಇನ್ನು ಈ ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್ ಅನ್ನು ಹೊಂದಿದ್ದು, 15W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಅಲ್ಲದೆ ಇದು ಎರಡು ದಿನಗಳವರೆಗೆ ಬ್ಯಾಟರಿ ಚಾರ್ಜಿಂಗ್ ಅನ್ನು ಹೊಂದಿರಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಬ್ಲೂಟೂತ್ ವಿ 5, ವೈ-ಫೈ ,GPS, 3.5mm ಆಡಿಯೊ ಜ್ಯಾಕ್, ಯುಎಸ್‌ಬಿ ಟೈಪ್-ಸಿ ಪೋರ್ಟ್ ಮತ್ತು ಡ್ಯುಯಲ್ 4G VOLTE ಅನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ
ಮೊಟೊರೊಲಾ ಒನ್ ಫ್ಯೂಷನ್ + ಸ್ಮಾರ್ಟ್‌ಫೋನ್ ಬೆಲೆ ಯುರೋ 299 (ಸರಿಸುಮಾರು 25,400 ರೂ.)ಯನ್ನ ಹೊಂದಿದ್ದು, ಈ ಸ್ಮಾರ್ಟ್‌ಫೋನ್ ಟ್ವಿಲೈಟ್ ಬ್ಲೂ ಮತ್ತು ಮೂನ್ಲೈಟ್ ವೈಟ್ ಬಣ್ಣದ ಆಯ್ಕೆಯಲ್ಲಿ ಲಭ್ಯವಾಗಲಿದೆ.


Click it and Unblock the Notifications




