Home
ಸುದ್ದಿಜಾಲ

ಮೊಟೊರೊಲಾ ಒನ್ ಫ್ಯೂಷನ್ ಪ್ಲಸ್‌ ಸ್ಮಾರ್ಟ್‌ಫೋನ್‌ ಬಿಡುಗಡೆ! ಆಕರ್ಷಕ ಫೀಚರ್ಸ್‌!

ಜನಪ್ರಿಯ ಸ್ಮಾರ್ಟ್‌ಫೋನ್‌ ತಯಾರಕ ಮೊಟೊರೊಲಾ ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ಈಗಾಗಲೇ ಹಲವು ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳನ್ನ ಪರಿಚಯಿಸಿ ಸ್ಮಾರ್ಟ್‌ಫೋನ್‌ ಪ್ರಿಯರಿಂದ ಸೈ ಎನಿಸಿಕೊಂಡಿದೆ. ಸದ್ಯ ಇದೀಗ ಮತ್ತೊಂದು ಹೊಸ ಮಾದರಿಯ ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿದೆ.

ಮೊಟೊರೊಲಾ

ಹೌದು, ಮೊಟೊರೊಲಾ ಕಂಪೆನಿ ತನ್ನ ಹೊಸ ಒನ್‌ಫ್ಯೂಷನ್‌+ ಸ್ಮಾರ್ಟ್‌ಫೋನ್‌ ಅನ್ನು ಭಾರತದಲ್ಲಿ ಬಿಡುಗಡೆ ಮಾಡಿದೆ. ಇನ್ನು ಈ ಸ್ಮಾರ್ಟ್‌ಫೋನ್ ಪಾಪ್-ಅಪ್ ಸೆಲ್ಫಿ ಕ್ಯಾಮೆರಾವನ್ನು ಹೊಂದಿದ್ದು, ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಹೊಂದಿದೆ. ಅಲ್ಲದೆ ಈ ಸ್ಮಾರ್ಟ್‌ಫೋನ್ 5,000mAh ದೊಡ್ಡ ಗಾತ್ರದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ವಿಶೇಷತೆ ಏನು ಹಾಗೂ ವಿನ್ಯಾಸ ಹೇಗಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ

ಡಿಸ್‌ಪ್ಲೇ

ಮೊಟೊರೊಲಾ ಒನ್ ಫ್ಯೂಷನ್ + 1,080x2,340 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5-ಇಂಚಿನ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇಯು ಫುಲ್‌ಹೆಚ್‌ಡಿ + ಡಿಸ್‌ಪ್ಲೇ ಆಗಿದ್ದು, ಇದು 19.5: 9 ರಚನೆಯ ಅನುಪಾತವನ್ನ ಹೊಂದಿದೆ. ಅಲ್ಲದೆ 395PPI ಪಿಕ್ಸೆಲ್ ಸಾಂದ್ರತೆಯನ್ನ ಒಳಗೊಂಡಿದೆ.

ಪ್ರೊಸೆಸರ್‌

ಪ್ರೊಸೆಸರ್‌

ಇನ್ನು ಈ ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನ್ಯಾಪ್‌ಡ್ರಾಗನ್ 730G SoC ಪ್ರೊಸೆಸರ್ ಅನ್ನು ಹೊಂದಿದ್ದು, ಸ್ಟಾಕ್ ಆಂಡ್ರಾಯ್ಡ್ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೇಯೇ ಈ ಸ್ಮಾರ್ಟ್‌ಫೋನ್‌ 6GB RAM ಮತ್ತು 128GB ಆಂತರಿಕ ಸಂಗ್ರಹ ಸಾಮರ್ಥ್ಯವನ್ನ ಹೊಂದಿರಲಿದೆ. ಇದಲ್ಲದೆ ಹೈಬ್ರಿಡ್ ಮೈಕ್ರೊ ಎಸ್ಡಿ ಕಾರ್ಡ್ ಮೂಲಕ 1ಟಿಬಿ ವರೆಗೆ ಸಂಗ್ರಹ ಸಾಮರ್ಥ್ಯವನ್ನ ಹೊಂದಿರಲಿದೆ.

ಕ್ಯಾಮೆರಾ ವಿನ್ಯಾಸ

ಕ್ಯಾಮೆರಾ ವಿನ್ಯಾಸ

ಮೊಟೊರೊಲಾ ಒನ್ ಫ್ಯೂಷನ್ + ಸ್ಮಾರ್ಟ್‌ಫೋನ್‌ ಕ್ವಾಡ್ ರಿಯರ್‌ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮೊದಲನೇ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಆಂಗಲ್ ಸೆನ್ಸಾರ್‌, ಮೂರನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಸೆನ್ಸಾರ್‌ ಮ್ಯಾಕ್ರೋ ಲೆನ್ಸ್ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್‌ ಸೆನ್ಸಾರ್‌ ಅನ್ನು ಹೊಂದಿರಲಿದೆ. ಇದಲ್ಲದೆ ಪಾಪ್-ಅಪ್ ಕ್ಯಾಮೆರಾ ಮಾಡ್ಯೂಲ್ ಹೊಂದಿದ್ದು 16 ಮೆಗಾಪಿಕ್ಸೆಲ್ ಸೆಲ್ಫಿ ಸೆನ್ಸಾರ್‌ ಅನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಇನ್ನು ಈ ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದ್ದು, 15W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಬ್ಲೂಟೂತ್ V5, ವೈ-ಫೈ, GPS, 3.5mm ಆಡಿಯೊ ಜ್ಯಾಕ್, USB ಟೈಪ್-ಸಿ ಪೋರ್ಟ್, ಮತ್ತು ಡ್ಯುಯಲ್ 4G VOLTE ಅನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಮೊಟೊರೊಲಾ ಒನ್ ಫ್ಯೂಷನ್ + ಸ್ಮಾರ್ಟ್‌ಫೋನ್‌ ಬೆಲೆ 16,999 ರೂ. ಆಗಿದ್ದು, ಇದು ಟ್ವಿಲೈಟ್ ಬ್ಲೂ ಮತ್ತು ಮೂನ್ಲೈಟ್ ವೈಟ್ ಎಂಬ ಎರಡು ಬಣ್ಣಗಳ ಆಯ್ಕೆಗಳಲ್ಲಿ ಲಭ್ಯವಾಗಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಇದೇ ಜೂನ್ 24 ರಿಂದ ಮಧ್ಯಾಹ್ನ 12ಕ್ಕೆ ಫ್ಲಿಪ್‌ಕಾರ್ಟ್‌ ಮೂಲಕ ಮಾರಾಟವಾಗಲಿದೆ.

Best Mobiles in India

English summary
Motorola One Fusion+ has launched in India as the latest offering from the Lenovo-owned company.to know more visit to kannada.gizbot.com
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+