Home
ಸುದ್ದಿಜಾಲ

ಮೊಟೊರೊಲಾ ಸಂಸ್ಥೆಯ 'ಒನ್‌ ಮ್ಯಾಕ್ರೊ' ಫೋನ್ ಬಿಡುಗಡೆಗೆ ಸಜ್ಜು!

ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ತನ್ನದೇ ಛಾಪನ್ನು ಹೊಂದಿರುವ ಮೊಟೊರೊಲಾ ಸಂಸ್ಥೆಯು ಇತ್ತೀಚಿಗೆ ಮೊಟೊ ಒನ್‌ ಸರಣಿಯಲ್ಲಿ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಗ್ರಾಹಕರನ್ನು ಸೆಳೆದಿದೆ. ಆದ್ರೆ ಇದೀಗ ತ್ರಿವಳಿ ಕ್ಯಾಮೆರಾ ಸೆಟ್‌ಅಪ್‌ನ ಮತ್ತೊಂದು ಸ್ಮಾರ್ಟ್‌ಫೋನ್ ಭಾರತೀಯ ಮಾರುಕಟ್ಟೆಗೆ ಬಿಡುಗಡೆ ಮಾಡಲು ಸಜ್ಜಾಗಿದೆ. ಈ ಸ್ಮಾರ್ಟ್‌ಫೋನಿನ ಲೀಕ್ ಫೀಚರ್ಸ್‌ಗಳು ಈಗಾಗಲೇ ಗಮನಸೆಳೆದಿವೆ.

ಒನ್ ಮ್ಯಾಕ್ರೊ

ಹೌದು, ಮೊಟೊರೊಲಾ ಸಂಸ್ಥೆಯು ಹೊಸದಾಗಿ ಮೊಟೊರೊಲಾ 'ಒನ್ ಮ್ಯಾಕ್ರೊ' ಸ್ಮಾರ್ಟ್‌ಫೋನ್‌ ಅನ್ನು ಇಂದು (ಅಕ್ಟೋಬರ್‌ 9ರಂದು) ದೇಶಿಯ ಮಾರುಕಟ್ಟೆಗೆ ಬಿಡುಗಡೆ ಮಾಡುವ ಸಾಧ್ಯತೆಗಳು ಹೆಚ್ಚಿವೆ. ಈ ಫೋನ್ ಹಿಂಬದಿಯಲ್ಲಿ ಮೂರು ರಿಯರ್ ಕ್ಯಾಮೆರಾಗಳನ್ನು ಹೊಂದಿದ್ದು, ಬ್ಯಾಟರಿ ಬಲವು 4000mAh ಸಾಮರ್ಥ್ಯದಲ್ಲಿದೆ. ಹಾಗಾದರೇ ಮೊಟೊರೊಲಾ ಒನ್ ಮ್ಯಾಕ್ರೊ ಸ್ಮಾರ್ಟ್‌ಫೋನ್‌ ಇತರೆ ಯಾವೆಲ್ಲಾ ಫೀಚರ್ಸ್‌ಗಳು ಇರಲಿವೆ ಎಂಬುದನ್ನು ಮುಂದೆ ತಿಳಿಯೋಣ.

ಡಿಸ್‌ಪ್ಲೇ ರಚನೆ

ಡಿಸ್‌ಪ್ಲೇ ರಚನೆ

ಮೊಟೊರೊಲಾ 'ಒನ್‌ ಮ್ಯಾಕ್ರೊ' ಸ್ಮಾರ್ಟ್‌ಫೋನ್ 720 x 1520 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 6.2 ಇಂಚಿನ OLED ಮಾದರಿಯ ಡಿಸ್‌ಪ್ಲೇ ಒಳಗೊಂಡಿರಲಿದ್ದು, ವಾಟರ್‌ಡ್ರಾಪ್ ನಾಚ್ ಸಹ ನಿರೀಕ್ಷಿಸಲಾಗಿದೆ. ಇನ್ನು ಡಿಸ್‌ಪ್ಲೇಯ ಪ್ರತಿ ಇಂಚಿನ ಪಿಕ್ಸಲ್ ಸಾಂದ್ರತೆಯು 271ppi ಆಗಿದ್ದು, ಡಿಸ್‌ಪ್ಲೇಯು ಹೆಚ್ಚು ಪ್ರಖರತೆಯನ್ನು ಒಳಗೊಂಡಲಿರಲಿದೆ.

ಪ್ರೊಸೆಸರ್‌ ಯಾವುದು

ಪ್ರೊಸೆಸರ್‌ ಯಾವುದು

ಮೊಟೊರೊಲಾ 'ಒನ್‌ ಮ್ಯಾಕ್ರೊ' ಸ್ಮಾರ್ಟ್‌ಫೋನ್ ಆಕ್ಟಾಕೋರ್ ಮೀಡಿಯಾ ಟೆಕ್ ಹಿಲಿಯೊ P60 ಪ್ರೊಸೆಸರ್‌ ಸಾಮರ್ಥ್ಯವನ್ನು ಹೊಂದಿರಲಿದ್ದು, ಇದರೊಂದಿಗೆ ಆಂಡ್ರಾಯ್ಡ್‌ 9 ಪೈ ಓಎಸ್ ಬೆಂಬಲವನ್ನು ಒಳಗೊಂಡಿರುವ ಸಾಧ್ಯತೆಗಳಿವೆ. 4GB RAM ಮತ್ತು 6GB RAM ವೇರಿಯಂಟ್‌ ಆಯ್ಕೆಗಳಲ್ಲಿ ಬಿಡುಗಡೆ ಆಗುವ ನಿರೀಕ್ಷೆಗಳಿದ್ದು, ಎಸ್‌ಡಿ ಕಾರ್ಡ್‌ ಮೂಲಕ ಬಾಹ್ಯ ಮೆಮೊರಿ ವಿಸ್ತರಿಸುವ ಅವಕಾಶವನ್ನು ಒಳಗೊಂಡಿರಲಿದೆ.

ಕ್ಯಾಮೆರಾ ವಿಶೇಷ

ಕ್ಯಾಮೆರಾ ವಿಶೇಷ

ಮೊಟೊರೊಲಾ 'ಒನ್‌ ಮ್ಯಾಕ್ರೊ' ಸ್ಮಾರ್ಟ್‌ಫೋನ್ ಹಿಂಬದಿಯಲ್ಲಿ ತ್ರಿವಳಿ ಕ್ಯಾಮೆರಾ ಸೆಟ್‌ಅಪ್‌ ಹೊಂದಿದ್ದು, ಪ್ರಾಥಮಿಕ ಕ್ಯಾಮೆರಾವು 12ಎಂ ಸೆನ್ಸಾರ್‌ನಲ್ಲಿರಲಿದೆ. ಇನ್ನು ಸೆಕೆಂಡರಿ ಕ್ಯಾಮೆರಾವು 2ಎಂಪಿ ಸೆನ್ಸಾರ್‌ ಮತ್ತು ತೃತೀಯ ಕ್ಯಾಮೆರಾವು ಸಹ 2ಎಂಪಿ ಸೆನ್ಸಾರ್‌ ಸಾಮರ್ಥ್ಯವನ್ನು ಹೊಂದಿರಲಿವೆ. ಸೆಲ್ಫಿಗಾಗಿ 8ಎಂಪಿ ಕ್ಯಾಮೆರಾವನ್ನು ಒದಗಿಸಲಾಗಿದೆ.

ಬ್ಯಾಟರಿ ಪವರ್

ಬ್ಯಾಟರಿ ಪವರ್

ಮೊಟೊರೊಲಾ 'ಒನ್‌ ಮ್ಯಾಕ್ರೊ' ಸ್ಮಾರ್ಟ್‌ಫೋನ್ 4,000mAh ಸಾಮರ್ಥ್ಯದ ಬ್ಯಾಟರಿ ಬಾಳಿಕೆಯನ್ನು ಹೊಂದಿರಲಿದ್ದು, ಇದರೊಂದಿಗೆ ಫಾಸ್ಟ್‌ ಚಾರ್ಜಿಂಗ ತಂತ್ರಜ್ಞಾನದ ಚಾರ್ಜರ್ ಸೌಲಭ್ಯ ನೀಡುವ ಸಾಧ್ಯತೆಗಳಿವೆ. ಹಾಗೆಯೇ ವೈಫೈ, ಬ್ಲೂಟೂತ್, ಜಿಪಿಎಸ್‌, ಸೌಲಭ್ಯಗಳನ್ನು ಹೊಂದಿರಲಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಮೊಟೊರೊಲಾ 'ಒನ್‌ ಮ್ಯಾಕ್ರೊ' ಸ್ಮಾರ್ಟ್‌ಫೋನ್ ಇಂದು ಭಾರತದಲ್ಲಿ ಬಿಡುಗಡೆ ಆಗುವ ಸಾಧ್ಯತೆಗಳಿದ್ದು, ಈ ಫೋನ್ ಬ್ಲ್ಯಾಕ್‌ ಮತ್ತು ಬ್ಲೂ ಬಣ್ಣಗಳ ಆಯ್ಕೆಗಳಲ್ಲಿ ಲಭ್ಯವಾಗಲಿದೆ. ಈ ಸ್ಮಾರ್ಟ್‌ಫೋನ್ 17,000ರೂ.ಗಳ ಪ್ರೈಸ್‌ಟ್ಯಾಗ್‌ನಲ್ಲಿ ಲಾಂಚ್ ಆಗಬಹುದು ಎನ್ನಲಾಗಿದೆ.

Best Mobiles in India

English summary
Motorola is all set to launch a new smartphone, expected to be Motorola One Macro, in the Indian market today. to know more visit to kannada.gizbot.com
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+