ಮೊಟೊರೊಲಾ ಒನ್ ವಿಷನ್ ಪ್ಲಸ್ ಸ್ಮಾರ್ಟ್‌ಫೋನ್ ಬಿಡುಗಡೆ! ಆಕರ್ಷಕ ಫೀಚರ್ಸ್!
ಮೊಟೊರೊಲಾ ಸಂಸ್ಥೆಯು ತನ್ನ ಮೊಟೊರೊಲಾ ಒನ್ ವಿಷನ್ ಪ್ಲಸ್ ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಿದೆ. ಸಾಕಷ್ಟು ವೈವಿಧ್ಯಮಯ ಫೀಚರ್ಸ್‌ಗಳನ್ನ ಹೊಂದಿರುವ ಈ ಸ್ಮಾರ್ಟ್‌ಫೋನ್ ಮೋಟೋ G8 ಪ್ಲಸ್‌ನ ರಿ ಬ್ರಾಂಡೆಡ್ ಆವೃತ್ತಿಯಾಗಿದೆ. ಇನ್ನು ಈಗಾಗಲೇ ಮೊಟೊರೊಲಾ ಒನ್ ವಿಷನ್ ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಿತ್ತು. ಇದೀಗ ತನ್ನ ಮುಂದುವರೆದ ಆವೃತ್ತಿಯಾಗಿ ಮೊಟೊರೊಲಾ ಒನ್ ವಿಷನ್ ಪ್ಲಸ್ ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಿದೆ. ಇನ್ನು ಈ ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 665 ಪ್ರೊಸೆಸರ್ ಅನ್ನು ಒಳಗೊಂಡಿದೆ.

ಹೌದು, ಲೆನೊವೊ ಕಂಪೆನಿ ಒಡೆತನದ ಮೊಟೊರೊಲಾ ಸಂಸ್ಥೆಯು ಹೊಸದಾಗಿ ಮೊಟೊರೊಲಾ ಒನ್ ವಿಷನ್ ಪ್ಲಸ್ ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್ 4GB RAM +128GB ಆಂತರಿಕ ಸ್ಟೋರೇಜ್ ಅನ್ನು ಒಳಗೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದ್ದು, ಇದು 4,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್ ಅನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್ ಹೊಂದಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ
ಮೊಟೊರೊಲಾ ಒನ್ ವಿಷನ್ ಪ್ಲಸ್ ಸ್ಮಾರ್ಟ್‌ಫೋನ್ 1,080x2,280 ಪಿಕ್ಸೆಲ್ ರೆಸಲ್ಯೂಶನ್ ಸಾಮರ್ಥ್ಯದ 6.3-ಇಂಚಿನ ಫುಲ್ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇಯು ಐಪಿಎಸ್ ಎಲ್ಸಿಡಿ ಡಿಸ್‌ಪ್ಲೇ ಆಗಿದೆ. ಇನ್ನು ಈ ಡಿಸ್‌ಪ್ಲೇಯು 19:9 ರಚನೆಯ ಅನುಪಾತವನ್ನು ಹೊಂದಿದೆ. ಅಲ್ಲದೆ ಇದು ವಾಟರ್‌ಡ್ರಾಪ್ ನಾಚ್ ಶೈಲಿಯನ್ನ ಒಳಗೊಂಡಿದೆ.

ಪ್ರೊಸೆಸರ್
ಇನ್ನು ಈ ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 665 SoC ಪ್ರೊಸೆಸರ್ ವೇಗವನ್ನು ಹೊಂದಿದೆ. ಆಂಡ್ರಾಯ್ಡ್ 9 ಪೈ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೇಯೇ ಈ ಸ್ಮಾರ್ಟ್‌ಫೋನ್ 4GB RAM ಮತ್ತು 128GB ಆಂತರಿಕ ಸಂಗ್ರಹ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಮೆಮೊರಿ ಕಾರ್ಡ್ ಮೂಲಕ 512GB ವರೆಗೆ ಸಂಗ್ರಹವಿ ಸಾಮರ್ಥ್ಯವನ್ನ ವಿಸ್ತರಿಸಿಕೊಳ್ಳಬಹುದಾಗಿದೆ.

ಕ್ಯಾಮೆರಾ ವಿನ್ಯಾಸ
ಮೊಟೊರೊಲಾ ಒನ್ ವಿಷನ್ ಪ್ಲಸ್ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 16 ಮೆಗಾಪಿಕ್ಸೆಲ್ ಸೆನ್ಸಾರ್ ಜೊತೆಗೆ 117-ಡಿಗ್ರಿ ವೀಕ್ಷಣೆಯ ಸಾಮರ್ಥ್ಯವನ್ನು ಹೊಂದಿದೆ. ಮೂರನೆಯ ಕ್ಯಾಮೆರಾ 5 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಸಾಮರ್ಥ್ಯವನ್ನು ಒಳಗೊಂಡಿದೆ. ಇದಲ್ಲದೆ 25 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ
ಇನ್ನು ಈ ಸ್ಮಾರ್ಟ್‌ಫೋನ್ 4000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್ ಅನ್ನು ಹೊಂದಿದ್ದು, 15W ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE, ಬ್ಲೂಟೂತ್ ವಿ 5.0, ವೈ-ಫೈ, GPS, 3.5mm ಹೆಡ್‌ಫೋನ್ ಜ್ಯಾಕ್, ಮತ್ತು ಚಾರ್ಜಿಂಗ್‌ಗಾಗಿ ಯುಎಸ್‌ಬಿ ಟೈಪ್-ಸಿ ಪೋರ್ಟ್ ಅನ್ನು ಬೆಂಬಲಿಸಲಿದೆ. ಇನ್ನು ಆನ್‌ಬೋರ್ಡ್ ಸೆನ್ಸಾರ್‌ನಲ್ಲಿ ಅಕ್ಸೆಲೆರೊಮೀಟರ್, ಆಂಬಿಯೆಂಟ್ ಲೈಟ್ ಸೆನ್ಸಾರ್, ಇ-ಕಂಪಾಸ್, ಫಿಂಗರ್‌ಪ್ರಿಂಟ್ ರೀಡರ್, ಅನ್ನು ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ
ಮೊಟೊರೊಲಾ ಒನ್ ವಿಷನ್ ಪ್ಲಸ್ ಸ್ಮಾರ್ಟ್‌ಫೋನ್ ಅನ್ನು ಮೊಟೊರೊಲಾ ಮಿಡಲ್ ಈಸ್ಟ್ ವೆಬ್‌ಸೈಟ್‌ನಲ್ಲಿ ಪಟ್ಟಿ ಮಾಡಲಾಗಿದೆ. ಅಲ್ಲದೆ ಅಮೆಜಾನ್ ಯುಎಇ ಮೂಲಕ ಖರೀದಿಸಬಹುದಾಗಿದೆ. ಸದ್ಯ ಈ ಸ್ಮಾರ್ಟ್‌ಫೋನ್ 4GB RAM + 128GB ಶೇಖರಣಾ ಮಾದರಿಗೆ AED 699 (ಸುಮಾರು ರೂ. 14,300) ಬೆಲೆಯನ್ನು ಹೊಂದಿದ್ದು, ಕಾಸ್ಮಿಕ್ ಬ್ಲೂ ಮತ್ತು ಕ್ರಿಸ್ಟಲ್ ಪಿಂಕ್ ಕಲರ್ ಆಯ್ಕೆಗಳಲ್ಲಿ ಲಭ್ಯವಾಗಲಿದೆ.


Click it and Unblock the Notifications