ಕೊರೊನಾ ಎಫೆಕ್ಟ್‌: ಮೊಟೊರೊಲಾ ರೇಜರ್ ಫೋಲ್ಡೆಬಲ್ ಫೋನ್‌ ಫಸ್ಟ್ ಸೇಲ್ ಮುಂದೂಡಿಕೆ!

|

ಇತ್ತೀಚಿಗಷ್ಟೆ ಲಾಂಚ್ ಆಗಿರುವ ಮೊಟೊರೊಲಾ ಸಂಸ್ಥೆಯು ತನ್ನ ಬಹುನಿರೀಕ್ಷಿತ 'ಮೊಟೊರೊಲಾ ರೇಜರ್' ಫೋಲ್ಡೆಬಲ್‌ ಸ್ಮಾರ್ಟ್‌ಫೋನ್‌ ಗ್ರಾಹಕರ ಕುತೂಹಲ ಹೆಚ್ಚಿಸಿದೆ. ಇದೇ ಏಪ್ರಿಲ್ 2ರಂದು ಮೊದಲ ಸೇಲ್ ಆರಂಭಿಸಲು ದಿನಾಂಕ ಫಿಕ್ಸ್ ಮಾಡಿತ್ತು. ಆದರೆ ದೇಶದಲ್ಲಿ ಕೊರೊನಾ ವೈರಸ್‌ ಸೋಂಕು ಹರಡದಂತೆ ನಿಯಂತ್ರಿಸಲು ಸರ್ಕಾರ ಲಾಕ್‌ಡೌನ್‌ ಘೋಷಿಸಿರುವುದರಿಂದ ಫಸ್ಟ್‌ ಸೇಲ್‌ ಮುಂದೂಡಿದೆ.

ಮೊಟೊರೊಲಾ ರೇಜರ್

ಹೌದು, ಇದೇ ಏಪ್ರಿಲ್ 2ರಂದು 'ಮೊಟೊರೊಲಾ ರೇಜರ್' ಫೋಲ್ಡೆಬಲ್‌ ಸ್ಮಾರ್ಟ್‌ಫೋನಿನ ಫಸ್ಟ್‌ ಫ್ಲ್ಯಾಶ್‌ ಸೇಲ್ ನಡೆಯಬೇಕಿತ್ತು. ಆದರೆ ಕೊರೊನಾ ಎಫೆಕ್ಟ್‌ನಿಂದಾಗಿ ಈ ಫ್ಲ್ಯಾಶ್‌ ಸೇಲ್ ಅನ್ನು ಇದೇ ಏಪ್ರಿಲ್ 15ನೇ ತಾರೀಖಿಗೆ ಸಂಸ್ಥೆಯು ಮುಂದೂಡಿದೆ. ಈ ಫೋನ್ 6GB RAM ಮತ್ತು 128GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆ ಪಡೆದಿದ್ದು, OLED ಹೆಚ್‌ಡಿ ಪ್ಲಸ್‌, ಸ್ನ್ಯಾಪ್‌ಡ್ರಾಗನ್‌ 710 ಪ್ರೊಸೆಸರ್‌ ಇದೆ. ಹಾಗಾದರೇ 'ಮೊಟೊರೊಲಾ ರೇಜರ್' ಫೋಲ್ಡೆಬಲ್‌ ಸ್ಮಾರ್ಟ್‌ಫೋನ್‌ ಇತರೆ ಫೀಚರ್ಸ್‌ಗಳೆನು ಮತ್ತು ಬೆಲೆ ಎಷ್ಟು ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಡಿಸ್‌ಪ್ಲೇ ಮತ್ತು ಡಿಸೈನ್

ಡಿಸ್‌ಪ್ಲೇ ಮತ್ತು ಡಿಸೈನ್

ಮೊಟೊರೊಲಾ ರೇಜರ್ ಫೋಲ್ಡೆಬಲ್‌ ಸ್ಮಾರ್ಟ್‌ಫೋನ್‌ 876 x 2142 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 6.2 ಇಂಚಿನ OLED ಹೆಚ್‌ಡಿ ಪ್ಲಸ್‌ ಫ್ಲೆಕ್ಸಿಬಲ್ ಸ್ಕ್ರೀನ್‌ ಹೊಂದಿದೆ. ಡಿಸ್‌ಪ್ಲೇ ಅನುಪಾತವು 21:9 ಆಗಿದ್ದು, ಮಡಚುವ ರಚನೆಯಿದೆ. ಹಾಗೆಯೇ ನೋಟಿಫಿಕೇಶನಗಾಗಿ 2.7 ಇಂಚಿನ ಕಿರು ಡಿಸ್‌ಪ್ಲೇ ಹೊಂದಿದ್ದು, 600 x 800 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದಿದೆ. ಬಾಹ್ಯ ನೋಟ್ ಹೆಚ್ಚು ಆಕರ್ಷಕವಾಗಿದೆ.

ಪ್ರೊಸೆಸರ್‌ ಸಾಮರ್ಥ್ಯ

ಪ್ರೊಸೆಸರ್‌ ಸಾಮರ್ಥ್ಯ

ಮೊಟೊರೊಲಾ ರೇಜರ್ ಫೋಲ್ಡೆಬಲ್‌ ಸ್ಮಾರ್ಟ್‌ಫೋನ್‌ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 710 ಪ್ರೊಸೆಸರ್‌ ಸಾಮರ್ಥ್ಯವನ್ನು ಒಳಗೊಂಡಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 9 ಪೈ ಓಎಸ್‌ ಬೆಂಬಲ ಇದೆ. ಇದರೊಂದಿಗೆ 6GB RAM ಮತ್ತು 128GB ಸ್ಟೋರೇಜ್ ಸ್ಥಳಾವಕಾಶವನ್ನು ಪಡೆದಿದೆ. ಫೋನಿನ ಮಲ್ಟಿಟಾಸ್ಕ್ ಕೆಲಸಗಳಿಗೆ ಪ್ರೊಸೆಸರ್ ಕಾರ್ಯವೈಖರಿ ಸಪೋರ್ಟ್‌ ನೀಡಲಿದೆ.

ಕ್ಯಾಮೆರಾ ವಿಶೇಷ

ಕ್ಯಾಮೆರಾ ವಿಶೇಷ

ಮೊಟೊರೊಲಾ ರೇಜರ್ ಫೋಲ್ಡೆಬಲ್‌ ಸ್ಮಾರ್ಟ್‌ಫೋನ್‌ ಹಿಂಬದಿಯಲ್ಲಿ ಸಿಂಗಲ್ ರಿಯರ್ ಕ್ಯಾಮೆರಾ ಸೆಟ್‌ಅಪ್‌ ಪಡೆದಿದೆ. ಆ ಕ್ಯಾಮೆರಾವು f/1.7 ಅಪರ್ಚರ್ ನೊಂದಿಗೆ 16ಎಂಪಿ ಸೆನ್ಸಾರ್‌ ಸಾಮರ್ಥ್ಯದಲ್ಲಿದೆ. ಹಾಗೆಯೇ ಸೆಲ್ಫಿಗಾಗಿ 5ಎಂಪಿ ಸೆನ್ಸಾರ್‌ ಕ್ಯಾಮೆರಾ ನೀಡಲಾಗಿದೆ. ಹಾಗೆಯೇ ನೈಟ್‌ ಮೋಡ್‌ ಆಯ್ಕೆ ಸೇರಿದಂತೆ ಅಗತ್ಯ ಕ್ಯಾಮೆರಾ ಫೀಚರ್ಸ್‌ಗಳನ್ನು ಒದಗಿಸಲಾಗಿದೆ.

ಬ್ಯಾಟರಿ ಲೈಫ್

ಬ್ಯಾಟರಿ ಲೈಫ್

ಮೊಟೊರೊಲಾ ರೇಜರ್ ಫೋಲ್ಡೆಬಲ್‌ ಸ್ಮಾರ್ಟ್‌ಫೋನ್‌ 2510mAh ಸಾಮರ್ಥ್ಯದ ಬ್ಯಾಟರಿ ಬಾಳಿಕೆಯನ್ನು ಪಡೆದುಕೊಂಡಿದ್ದು, ಇದರೊಂದಿಗೆ 15W ಸಾಮರ್ಥ್ಯ ಫಾಸ್ಟ್‌ ಚಾರ್ಜಿಂಗ್ ಸೌಲಭ್ಯವನ್ನು ಹೊಂದಿದೆ. ಇದರೊಂದಿಗೆ ಬ್ಲೂಟೂತ್ 5.0, ವೈ-ಫೈ 802.11, 4G LTE, ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಒದಗಿಸಲಾಗಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಮೊಟೊರೊಲಾ ರೇಜರ್ ಫೋಲ್ಡೆಬಲ್‌ ಸ್ಮಾರ್ಟ್‌ಫೋನ್‌ ಇದೇ ಏ.15ರಂದು ಫಸ್ಟ್‌ ಸೇಲ್ ಶುರು ಮಾಡಲಿದೆ. ಈ ಸ್ಮಾರ್ಟ್‌ಫೋನ್ ಬೆಲೆಯು 1,24,999ರೂ.ಆಗಿದೆ.

Best Mobiles in India

English summary
Motorola has postponed the sale of Motorola Razr foldable phone due to nation-wide Coronavirus lockdown.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X