ಭಾರತಕ್ಕೆ ಲಗ್ಗೆ ಇಟ್ಟ 'ಮೊಟೊರೊಲಾ ರೇಜರ್' ಮಡಚುವ ಸ್ಮಾರ್ಟ್‌ಫೋನ್!
ಮೊಟೊರೊಲಾ ಸಂಸ್ಥೆಯು ತನ್ನ ಬಹುನಿರೀಕ್ಷಿತ 'ಮೊಟೊರೊಲಾ ರೇಜರ್' ಫೋಲ್ಡೆಬಲ್ ಸ್ಮಾರ್ಟ್‌ಫೋನ್ ಇಂದು ಭಾರತೀಯ ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ. ಮೊಟೊರೊಲಾ ಸಂಸ್ಥೆಯು ಕಳೆದ ನವೆಂಬರ್‌ನಲ್ಲಿ ರೇಜರ್ ಫೋನ್ ಅನ್ನು ವಿಶ್ವ ಮಾರುಕಟ್ಟೆಗೆ ಲಾಂಚ್ ಮಾಡಿತ್ತು. ಮಡಚುವ ಮಾದರಿಯಲ್ಲಿರುವ ಈ ಫೋನಿನ ಸ್ಕ್ರೀನ್ ಫ್ಲೆಕ್ಸಿಬಲ್ ರಚನೆಯನ್ನು ಪಡೆದಿರುವುದು ಪ್ರಮುಖ ಆಕರ್ಷಣೆ ಆಗಿದೆ.

ಹೌದು, ಮೊಟೊರೊಲಾ ಸಂಸ್ಥೆಯು ದೇಶದಲ್ಲಿ ರೇಜರ್ ಫೋಲ್ಡೆಬಲ್ ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದೆ. ಈ ಫೋನ್ 6GB RAM ಮತ್ತು 128GB ಸ್ಟೋರೇಜ್ ವೇರಿಯಂಟ್ ಆಯ್ಕೆ ಪಡೆದಿದೆ. ಹಿಂಬದಿಯಲ್ಲಿ ಸಿಂಗಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿದ್ದು, ಮೇನ್ ಡಿಸ್‌ಪ್ಲೇ ನಾಚ್‌ನಲ್ಲಿ ಸೆಲ್ಫಿ ಕ್ಯಾಮೆರಾ ನೀಡಲಾಗಿದೆ. ಜೊತೆಗೆ OLED ಹೆಚ್‌ಡಿ ಪ್ಲಸ್, ಸ್ನ್ಯಾಪ್‌ಡ್ರಾಗನ್ 710 ಪ್ರೊಸೆಸರ್ ಸೇರಿರುವುದು ಪ್ಲಸ್ ಪಾಯಿಂಟ್ ಆಗಿದೆ.

ಇನ್ನು ಭಾರತದಲ್ಲಿ ಮೊಟೊ ರೇಜರ್ ಫೋನ್ ಬೆಲೆಯು 1,24,999ರೂ.ಆಗಿದೆ. ಸಿಟಿ ಬ್ಯಾಂಕ್ ಕ್ರೆಡಿಟ್ ಹಾಗೂ ಡೆಬಿಟ್ ಕಾರ್ಡ್ ಬಳಸಿ ಫೋನ್ ಖರೀದಿಸುವ ಗ್ರಾಹಕರಿಗೆ 10,000ರೂ. ಕ್ಯಾಶ್‌ಬ್ಯಾಕ್ ದೊರೆಯಲಿದೆ. ಅಂದಹಾಗೆ ಈ ಫೋನ್ ಇದೇ ಏಪ್ರಿಲ್ 2 ರಂದು ಫ್ಲಿಪ್‌ಕಾರ್ಟ್‌ನಲ್ಲಿ ಮೊದಲ ಸೇಲ್ ಶುರುಮಾಡಲಿದೆ. ಹಾಗಾದರೇ 'ಮೊಟೊರೊಲಾ ರೇಜರ್' ಫೋಲ್ಡೆಬಲ್ ಸ್ಮಾರ್ಟ್‌ಫೋನ್ ಇತರೆ ಫೀಚರ್ಸ್‌ಗಳೆನು ಮತ್ತು ಬೆಲೆ ಎಷ್ಟು ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಡಿಸ್‌ಪ್ಲೇ ಮತ್ತು ಡಿಸೈನ್
ಮೊಟೊರೊಲಾ ರೇಜರ್ ಫೋಲ್ಡೆಬಲ್ ಸ್ಮಾರ್ಟ್‌ಫೋನ್ 876 x 2142 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 6.2 ಇಂಚಿನ OLED ಹೆಚ್‌ಡಿ ಪ್ಲಸ್ ಫ್ಲೆಕ್ಸಿಬಲ್ ಸ್ಕ್ರೀನ್ ಹೊಂದಿದೆ. ಡಿಸ್‌ಪ್ಲೇ ಅನುಪಾತವು 21:9 ಆಗಿದ್ದು, ಮಡಚುವ ರಚನೆಯಿದೆ. ಹಾಗೆಯೇ ನೋಟಿಫಿಕೇಶನಗಾಗಿ 2.7 ಇಂಚಿನ ಕಿರು ಡಿಸ್‌ಪ್ಲೇ ಹೊಂದಿದ್ದು, 600 x 800 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದಿದೆ. ಬಾಹ್ಯ ನೋಟ್ ಹೆಚ್ಚು ಆಕರ್ಷಕವಾಗಿದೆ.

ಪ್ರೊಸೆಸರ್ ಸಾಮರ್ಥ್ಯ
ಮೊಟೊರೊಲಾ ರೇಜರ್ ಫೋಲ್ಡೆಬಲ್ ಸ್ಮಾರ್ಟ್‌ಫೋನ್ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 710 ಪ್ರೊಸೆಸರ್ ಸಾಮರ್ಥ್ಯವನ್ನು ಒಳಗೊಂಡಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 9 ಪೈ ಓಎಸ್ ಬೆಂಬಲ ಇದೆ. ಇದರೊಂದಿಗೆ 6GB RAM ಮತ್ತು 128GB ಸ್ಟೋರೇಜ್ ಸ್ಥಳಾವಕಾಶವನ್ನು ಪಡೆದಿದೆ. ಫೋನಿನ ಮಲ್ಟಿಟಾಸ್ಕ್ ಕೆಲಸಗಳಿಗೆ ಪ್ರೊಸೆಸರ್ ಕಾರ್ಯವೈಖರಿ ಸಪೋರ್ಟ್ ನೀಡಲಿದೆ.

ಕ್ಯಾಮೆರಾ ವಿಶೇಷ
ಮೊಟೊರೊಲಾ ರೇಜರ್ ಫೋಲ್ಡೆಬಲ್ ಸ್ಮಾರ್ಟ್‌ಫೋನ್ ಹಿಂಬದಿಯಲ್ಲಿ ಸಿಂಗಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಪಡೆದಿದೆ. ಆ ಕ್ಯಾಮೆರಾವು f/1.7 ಅಪರ್ಚರ್ ನೊಂದಿಗೆ 16ಎಂಪಿ ಸೆನ್ಸಾರ್ ಸಾಮರ್ಥ್ಯದಲ್ಲಿದೆ. ಹಾಗೆಯೇ ಸೆಲ್ಫಿಗಾಗಿ 5ಎಂಪಿ ಸೆನ್ಸಾರ್ ಕ್ಯಾಮೆರಾ ನೀಡಲಾಗಿದೆ. ಹಾಗೆಯೇ ನೈಟ್ ಮೋಡ್ ಆಯ್ಕೆ ಸೇರಿದಂತೆ ಅಗತ್ಯ ಕ್ಯಾಮೆರಾ ಫೀಚರ್ಸ್‌ಗಳನ್ನು ಒದಗಿಸಲಾಗಿದೆ.

ಬ್ಯಾಟರಿ ಲೈಫ್
ಮೊಟೊರೊಲಾ ರೇಜರ್ ಫೋಲ್ಡೆಬಲ್ ಸ್ಮಾರ್ಟ್‌ಫೋನ್ 2510mAh ಸಾಮರ್ಥ್ಯದ ಬ್ಯಾಟರಿ ಬಾಳಿಕೆಯನ್ನು ಪಡೆದುಕೊಂಡಿದ್ದು, ಇದರೊಂದಿಗೆ 15W ಸಾಮರ್ಥ್ಯ ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ಹೊಂದಿದೆ. ಇದರೊಂದಿಗೆ ಬ್ಲೂಟೂತ್ 5.0, ವೈ-ಫೈ 802.11, 4G LTE, ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಒದಗಿಸಲಾಗಿದೆ.

ಬೆಲೆ ಮತ್ತು ಲಭ್ಯತೆ
ಮೊಟೊರೊಲಾ ರೇಜರ್ ಫೋಲ್ಡೆಬಲ್ ಸ್ಮಾರ್ಟ್‌ಫೋನ್ ದೇಶಿಯ ಮಾರುಕಟ್ಟೆಗೆ ಇಂದು (ಮಾ.16) ಬಿಡುಗಡೆ ಆಗಿದೆ. ಈ ಸ್ಮಾರ್ಟ್‌ಫೋನ್ ಬೆಲೆಯು 1,24,999ರೂ.ಆಗಿದೆ. ಇದೇ ಏಪ್ರಿಲ್ 2 ರಂದು ಫ್ಲಿಪ್‌ಕಾರ್ಟ್‌ನಲ್ಲಿ ಮೊದಲ ಸೇಲ್ ಆರಂಭಿಸಲಿದೆ.


Click it and Unblock the Notifications








