ಶೀಘ್ರದಲ್ಲೇ ಬರಲಿದೆ ಮೊಟೊ ರೇಜರ್ 2023 ಫೋಲ್ಡಬಲ್ ಫೋನ್! ಪಕ್ಕಾ ಸ್ಟೈಲಿಶ್ ಲುಕ್!
ಮೊಟೊರೊಲಾ ಕಂಪೆನಿ ತನ್ನ ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ತನ್ನ ಸ್ಟೈಲಿಶ್ ಲುಕ್ ಹಾಗೂ ಡಿಸೈನ್‌ಗೆ ಹೆಸರುವಾಸಿಯಾಗಿರುವ ಮೊಟೊರೊಲಾ ಫೋನ್‌ಗಳು ಮಾರುಕಟ್ಟೆಯಲ್ಲಿ ಸಿಕ್ಕಾಪಟ್ಟೆ ಸೌಂಡ್ ಮಾಡುತ್ತಿವೆ. ಇದೀಗ ಮೊಟೊರೊಲಾ ಕಂಪೆನಿ ಹೊಸ ಫೋಲ್ಡಬಲ್ ಸ್ಮಾರ್ಟ್‌ಫೋನ್ ಪರಿಚಯಿಸಲು ಮುಂದಾಗಿದೆ.
ಹೌದು, ಮೊಟೊರೊಲಾ ಕಂಪೆನಿ ಶೀಘ್ರದಲ್ಲೇ ಮೊಟೊ ರೇಜರ್ 2023 ಫೋಲ್ಡಬಲ್ ಸ್ಮಾರ್ಟ್‌ಫೋನ್ ಪರಿಚಯಿಸಲು ಸಿದ್ಧತೆ ನಡೆಸಿದೆ. ಈ ಸ್ಮಾರ್ಟ್‌ಫೋನ್ ಬಿಗ್ ಕವರ್ ಡಿಸ್‌ಪ್ಲೇಯನ್ನು ಹೊಂದಿರಲಿದೆ ಎಂದು ವರದಿಯಾಗಿದೆ. ಹಾಗಾದ್ರೆ ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಮೊಟೊರೊಲಾ Razr 2023 ಫೀಚರ್ಸ್ ಹೇಗಿದೆ?
ಮೊಟೊರೊಲಾ Razr 2023 ಫೋಲ್ಡಬಲ್ ಫೋನ್ ಸಖತ್ ಸ್ಟೈಲಿಶ್ ಲುಕ್‌ನಲ್ಲಿ ಬರಲಿದೆ ಎನ್ನಲಾಗಿದೆ. ಇದರ ಔಟ್‌ಸೈಡ್ ಡಿಸ್‌ಪ್ಲೇ ಕೆಳಗಿನ ಬಲಭಾಗದಲ್ಲಿ ಮೂರು ಕಟೌಟ್‌ಗಳನ್ನು ಹೊಂದಿರಲಿದೆ. ಇದರಲ್ಲಿ ಡ್ಯುಯಲ್-ಕ್ಯಾಮೆರಾ ಸೆಟಪ್ ಮತ್ತು ಎಲ್ಇಡಿ ಫ್ಲ್ಯಾಷ್‌ಗಳನ್ನು ಅಳವಡಿಸಲಾಗಿರುತ್ತದೆ ಎನ್ನಲಾಗಿದೆ. ಇನ್ನು ಇದರ ಕವರ್ ಡಿಸ್‌ಪ್ಲೇ 6.73 ಇಂಚಿನ ಡಿಸ್‌ಪ್ಲೇ ಹೊಂದಿರಲಿದೆ ಎನ್ನಲಾಗಿದೆ.
ಸದ್ಯ ಬಹಿರಂಗವಾಗಿರುವ ಮಾಹಿತಿಯ ಪ್ರಕಾರ ಫೋನ್ ಮುಂಭಾಗದ ಕ್ಯಾಮರಾಕ್ಕೆ ಯಾವುದೇ ಕಟೌಟ್ ಹೊಂದಿಲ್ಲ. ಆದರೆ ಈ ಸ್ಮಾರ್ಟ್‌ಫೋನ್ ಅಂಡರ್-ಸ್ಕ್ರೀನ್ ಫ್ರಂಟ್ ಕ್ಯಾಮೆರಾದೊಂದಿಗೆ ಬರುವ ಸಾಧ್ಯತೆಯಿದೆ. ಇನ್ನು ಈ ಫೋಲ್ಡಬಲ್ ಸ್ಮಾರ್ಟ್‌ಫೋನ್‌ನ ಡಿಸ್‌ಪ್ಲೇ ಸುತ್ತಲಿನ ಬೆಜೆಲ್‌ಗಳು ಸಾಕಷ್ಟು ಕಿರಿದಾಗಿದ್ದು, ಫ್ರೇಮ್ ಕೂಡ ಬಾಗಿರುತ್ತದೆ ಎಂದು ನಿರೀಕ್ಷಿಸಲಾಗಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಅಥವಾ ಮೀಡಿಯಾಟೆಕ್‌ನ ಪ್ರಮುಖ ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ ಎಂದು ಹೇಳಲಾಗಿದೆ.

ಇನ್ನು ಈ ಸ್ಮಾರ್ಟ್‌ಫೋನಿನ ಬ್ಯಾಟರಿ ಸಾಮರ್ಥ್ಯದ ಬಗ್ಗೆ ಯಾವುದೇ ಮಾಹಿತಿ ಬಹಿರಂಗವಾಗಿಲ್ಲ. ಆದರೆ ಈ ಸ್ಮಾರ್ಟ್‌ಫೋನ್ ಶೀಘ್ರದಲ್ಲೇ ಬಿಡುಗಡೆ ದಿನಾಂಕ ಘೋಷಿಸುವ ಸಾದ್ಯತೆಯಿದ್ದು, ಸಂಪೂರ್ಣ ವಿವರಗಳು ಸದ್ಯದಲ್ಲೇ ಬಹಿರಂಗವಾಗಲಿದೆ. ಇದಲ್ಲದೆ ಈ ಫೋಲ್ಡಬಲ್ ಫೋನ್ ಜಾಗತಿಕ ಮಾರುಕಟ್ಟೆಗೆ ಎಂಟ್ರಿ ನೀಡಿದ ನಂತರ ಭಾರತಕ್ಕೆ ಬರಲಿದೆ ಎಂದು ಅಂದಾಜಿಸಲಾಗಿದೆ.
ಇದಲ್ಲದೆ ಮೊಟೊರೊಲಾ ಕಂಪೆನಿ ಇತ್ತೀಚಿಗೆ ಮೊಟೊ E13 ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿತ್ತು. ಈ ಸ್ಮಾರ್ಟ್‌ಫೋನ್ 6.5 ಇಂಚಿನ IPS LCD ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 720 x 1600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯ ಒಳಗೊಂಡಿದೆ. ಇನ್ನು ಡಿಸ್‌ಪ್ಲೇ 60Hz ರಿಫ್ರೆಶ್ ರೇಟ್ ಬೆಂಬಲಿಸಲಿದ್ದು, ವಾಟರ್‌ಡ್ರಾಪ್ ನಾಚ್ ವಿನ್ಯಾಸವನ್ನು ಪಡೆದಿದೆ. ಹಾಗೆಯೇ ಡಿಸ್‌ಪ್ಲೇ ಅನುಪಾತವು 20:9 ಆಗಿದೆ. ಇದು ಯುನಿಸಾಕ್ T606 (Unisoc T606) ಪ್ರೊಸೆಸರ್ ಬಲವನ್ನು ಪಡೆದಿದೆ. ಹಾಗೆಯೇ 2GB RAM+64GB ಮತ್ತು 4GB RAM+64GB ಸ್ಟೋರೇಜ್ ಸಾಮರ್ಥ್ಯ ಆಯ್ಕೆಗಳನ್ನು ಒಳಗೊಂಡಿದೆ. ಇದಲ್ಲದೆ ಮೆಮೊರಿ ಕಾರ್ಡ್ ಬೆಂಬಲದೊಂದಿಗೆ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವುದಕ್ಕೆ ಅವಕಾಶ ನೀಡಿದೆ.

ಇನ್ನು ಮೊಟೊ E13 ಸ್ಮಾರ್ಟ್‌ಫೋನ್ ಎಂಟ್ರಿ ಲೆವೆಲ್ ಫೋನ್ ಆಗಿದ್ದು, ಸಿಂಗಲ್ ರಿಯರ್ ಕ್ಯಾಮೆರಾ ಪಡೆದಿದೆ. ಅದು 13 ಮೆಗಾ ಪಿಕ್ಸೆಲ್ ಸೆನ್ಸಾರ್‌ದಲ್ಲಿ ಇದ್ದು, ಎಲ್‌ಇಡಿ ಫ್ಲ್ಯಾಷ್ ಅನ್ನು ಸಹ ಪಡೆದಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್ 5 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಪಡೆದುಕೊಂಡಿದೆ. ಇದು ಆಟೋ ಸ್ಮೈಲ್ ಕ್ಯಾಪ್ಚರ್, ಫೇಸ್ ಬ್ಯೂಟಿ ಮತ್ತು ಪೋರ್ಟ್ರೇಟ್ ಮೋಡ್‌ನಂತಹ ಇಂಟೆಲಿಜೆನ್ಸ್ ಫೀಚರ್ಸ್‌ಗಳನ್ನು ಒಳಗೊಂಡಿದೆ. ಜೊತೆಗೆ ಸ್ಮಾರ್ಟ್‌ಫೋನ್ 5000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಹೊಂದಿದ್ದು, ಇದಕ್ಕೆ ಪೂರಕವಾಗಿ 10W ಚಾರ್ಜಿಂಗ್ ಸೌಲಭ್ಯವನ್ನು ಪಡೆದಿದೆ.


Click it and Unblock the Notifications








