ಮೊಟೊರೊಲಾ ರೇಜರ್ 22 ಸ್ಮಾರ್ಟ್‌ಫೋನ್ ಲಾಂಚ್!..30W ವೇಗದ ಚಾರ್ಜಿಂಗ್ ವಿಶೇಷ!
ಟೆಕ್ ಜಗತ್ತಿನಲ್ಲಿ ಫೋಲ್ಡೆಬಲ್ ಸ್ಮಾರ್ಟ್‌ಫೋನ್‌ಗಳು ವಿಶೇಷ ಸ್ಥಾನವನ್ನು ಪಡೆದುಕೊಂಡಿವೆ. ಈ ನಿಟ್ಟಿನಲ್ಲಿ ಹಲವು ಕಂಪೆನಿಗಳು ಫೋಲ್ಡ್ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸುತ್ತಾ ಬಂದಿದೆ. ಇದೇ ಹಾದಿಯಲ್ಲಿ ಮೊಟೊರೊಲಾ ಕಂಪೆನಿ ಕೂಡ ಫೊಲ್ಡ್ ಸ್ಮಾರ್ಟ್‌ಫೊನ್‌ಗಳನ್ನು ಪರಿಚಯಿಸಿದೆ. ಸದ್ಯ ಇದೀಗ ತನ್ನ ಹೊಸ ಮೊಟೊರೊಲಾ ರೇಜರ್ 22 ಸ್ಮಾರ್ಟ್‌ಫೋನ್ ಪರಿಚಯಿಸಿದೆ. ಇದು ಫೋಲ್ಡ್ ಸ್ಮಾರ್ಟ್‌ಫೋನ್ ಆಗಿದ್ದು, ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ.

ಹೌದು, ಮೊಟೊರೊಲಾ ಕಂಪೆನಿ ಮಾರುಕಟ್ಟೆಯಲ್ಲಿ ಹೊಸ ಮೊಟೊರೊಲಾ ರೇಜರ್ 22 ಸ್ಮಾರ್ಟ್‌ಫೋನ್ ಪರಿಚಯಿಸಿದೆ. ಇದು ರಿಯರ್ ಪ್ಯಾನಲ್‌ನಲ್ಲಿ 2.7 ಇಂಚಿನ ಒಎಲ್‌ಇಡಿ ಡಿಸ್‌ಪ್ಲೇ ಹೊಂದಿದೆ. ಈ ಫೋನ್ 6.7 ಇಂಚಿನ ಮೇನ್ ಡಿಸ್‌ಪ್ಲೇಯನ್ನು ಒಳಗೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್ ಮುಖ್ಯ ಕ್ಯಾಮೆರಾ ಅಲ್ಟ್ರಾ ಪಿಕ್ಸೆಲ್ ಟೆಕ್ನಾಲಜಿಯನ್ನು ಬೆಂಬಲಿಸಲಿದೆ. ಇನ್ನುಳಿದಂತೆ ಈ ಹೊಸ ಸ್ಮಾರ್ಟ್‌ಫೋನ್ ಏನೆಲ್ಲಾ ವಿಶೇಷತೆ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಮುಂದೆ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ಮೊಟೊರೊಲಾ ರೇಜರ್ 22 ಸ್ಮಾರ್ಟ್‌ಫೋನ್ 6.7 ಇಂಚಿನ P OLED ಡಿಸ್‌ಪ್ಲೇಯನ್ನು ಹೊಂದಿದೆ. ಇದು ಫೋಲ್ಡ್ ಡಿಸ್‌ಪ್ಲೇ ಆಗಿದ್ದು 144Hz ರಿಫ್ರೆಶ್ ರೇಟ್ ಅನ್ನು ಬೆಂಬಲಿಸಲಿದೆ. ಇದು HDR10+ ಮತ್ತು 100% DCI-P3 ಕಲರ್ ಗ್ಯಾಮಟ್ ಅನ್ನು ಬೆಂಬಲಿಸುತ್ತದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್‌ನ ರಿಯರ್ ಪ್ಯಾನಲ್‌ನಲ್ಲಿ 2.7 ಇಂಚಿನ OLED ಇನ್ಸ್‌ಟಂಟ್ ವ್ಯೂ ಡಿಸ್‌ಪ್ಲೇ ಹೊಂದಿದೆ. ಈ ಸ್ಮಾರ್ಟ್‌ಫೋನ್ ಫ್ಲೆಕ್ಸ್ ವ್ಯೂ ಅನ್ನು ಬೆಂಬಲಿಸುತ್ತದೆ.

ಪ್ರೊಸೆಸರ್ ಯಾವುದು?
ಮೊಟೊರೊಲಾ ರೇಜರ್ 22 ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8 ಪ್ಲಸ್ Gen 1 ಪ್ರೊಸೆಸರ್ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ 12 ಒಎಸ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 256GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಪಡೆದುಕೊಂಡಿದೆ.

ಕ್ಯಾಮೆರಾ ಸೆಟ್‌ಅಪ್ ಏನಿದೆ?
ಮೊಟೊರೊಲಾ ರೇಜರ್ 22 ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಮತ್ತು ಎರಡನೇ ಕ್ಯಾಮೆರಾ 13 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಲೆನ್ಸ್ ಅನ್ನು ಹೊಂದಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಇನ್ನು ಈ ಫೋನ್‌ನ ಮುಖ್ಯ ಕ್ಯಾಮೆರಾ ಮೊಟೊರೊಲಾದ ಅಲ್ಟ್ರಾ ಪಿಕ್ಸೆಲ್ ತಂತ್ರಜ್ಞಾನವನ್ನು ಬೆಂಬಲಿಸುತ್ತದೆ.

ಬ್ಯಾಟರಿ ಮತ್ತು ಇತರೆ
ಮೊಟೊರೊಲಾ ರೇಜರ್ 22 ಸ್ಮಾರ್ಟ್‌ಫೋನ್ 3,500mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದು USB-C ಪೋರ್ಟ್ ಮೂಲಕ 30W ಟರ್ಬೋಪವರ್ ಚಾರ್ಜಿಂಗ್ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ Wi-Fi 6, ಬ್ಲೂಟೂತ್ 5.2, GPS, NFC, ಡಾಲ್ಬಿ ಅಟ್ಮೋಸ್ ಬೆಂಬಲವನ್ನು ಪಡೆದಿದೆ. ಈ ಸ್ಮಾರ್ಟ್‌ಫೋನ್ ಸೈಡ್-ಫೇಸಿಂಗ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಅನ್ನು ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ
ಮೊಟೊರೊಲಾ ರೇಜರ್ 22 ಸ್ಮಾರ್ಟ್‌ಫೋನ್ ಪ್ರಸ್ತುತ ಯುರೋಪ್‌ನಲ್ಲಿ ಬಿಡುಗಡೆಯಾಗಿದೆ. ಈ ಸ್ಮಾರ್ಟ್‌ಫೋನ್‌ನಲ್ಲಿ ಯುರೋಪ್‌ನಲ್ಲಿ ಖರೀದಿಗೆ ಲಭ್ಯವಿದ್ದು, ಇದರ 8GB RAM + 256GB ಸ್ಟೋರೇಜ್ ಆಯ್ಕೆಯ ಬೆಲೆ ಯುರೋ 1,199(ಅಂದಾಜು 97,893ರೂ) ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್ ಸ್ಯಾಟಿನ್ ಬ್ಲ್ಯಾಕ್ ಬಣ್ಣದ ಆಯ್ಕೆಯಲ್ಲಿ ಬರಲಿದೆ. ಈ ಸ್ಮಾರ್ಟ್‌ಫೋನ್ ಭಾರತದಲ್ಲಿ ಯಾವಾಗ ಬಿಡುಗಡೆಯಾಗಲಿದೆ ಅನ್ನೊದು ಇನ್ನು ಕೂಡ ಬಹಿರಂಗವಾಗಿಲ್ಲ. ಆದರೆ ಸದ್ಯದಲ್ಲೇ ಭಾರತದ ಮಾರುಕಟ್ಟೆಯಲ್ಲಿ ಬಿಡುಗಡೆಯಾಗುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.


Click it and Unblock the Notifications








