ಮೊಟೊದ ಈ ಫೋನ್ ಬೆಲೆಯಲ್ಲಿ ಭಾರಿ ಇಳಿಕೆಯಾಗಿದೆ!..256GB ಸ್ಟೋರೇಜ್ ಆಯ್ಕೆ!
ಸ್ಮಾರ್ಟ್‌ಫೋನ್ ಪ್ರಿಯರಿಗೆ ಮೊಟೊರೊಲಾ ಕಂಪೆನಿ ಸಿಹಿಸುದ್ದಿಯನ್ನು ನೀಡಿದೆ. ಇದೇ ವರ್ಷ ಮಾರುಕಟ್ಟೆಯಲ್ಲಿ ಅನಾವರಣ ಮಾಡಿದ್ದ ಮೊಟೊರೊಲಾ ರೇಜರ್ 40 ಬೆಲೆಯನ್ನು ಕಡಿತಗೊಳಿಸಿದೆ. ಇದು ಮೊಟೊರೊಲಾ ಕಂಪೆನಿ ನಡೆಸುತ್ತಿರುವ ಮೊಟೊ ಡೇಸ್‌ನ ಪ್ರಯುಕ್ತ ಸೀಮಿತ ಅವಧಿಗೆ ಅನ್ವಯವಾಗಲಿದೆ. ಅಂದರೆ ಡಿಸೆಂಬರ್ 24 ರವರೆಗೆ ಬೆಲೆ ಕಡಿತದ ಲಾಭ ಪಡೆದುಕೊಳ್ಳಬಹುದು.
ಹೌದು, ಮೊಟೊರೊಲಾ ರೇಜರ್ 40 ಸ್ಮಾರ್ಟ್‌ಫೋನ್ ಬೆಲೆ ಕಡಿತವನ್ನು ಪಡೆದುಕೊಂಡಿದೆ. ಇದರಿಂದ ಸ್ಮಾರ್ಟ್‌ಫೋನ್ ಖರೀದಿಸಬೇಕೆಂದುಕೊಂಡವರಿಗೆ ಇದು ಉತ್ತಮ ಸಮಯವಾಗಿದೆ. ಈ ಸ್ಮಾರ್ಟ್‌ಫೋನ್ ಫೋಲ್ಡಬಲ್ ಫೋನ್ ಆಗಿರುವುದು ವಿಶೇಷ. ಇದು ಸ್ನಾಪ್‌ಡ್ರಾಗನ್ 7 Gen 1 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗಾದ್ರೆ ಮೊಟೊರೊಲಾ ರೇಜರ್ 40 ಸ್ಮಾರ್ಟ್‌ಫೋನ್ ಫೀಚರ್ಸ್ ಹೇಗಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಮೊಟೊರೊಲಾ ರೇಜರ್ 40 ಫೋನ್ ಬೆಲೆ ಕಡಿತ
ಮೊಟೊರೊಲಾ ರೇಜರ್ 40 ಸ್ಮಾರ್ಟ್‌ಫೋನ್ ಬೆಲೆಯಲ್ಲಿ ಬರೋಬ್ಬರಿ 10,000ರೂ ಬೆಲೆ ಕಡಿತವನ್ನು ಪಡೆದುಕೊಂಡಿದೆ. ಇದರಿಂದ ಈ ಫೋನ್‌ನ ಏಕೈಕ 8GB RAM ಮತ್ತು 256GB ಸ್ಟೋರೇಜ್ ಆವೃತ್ತಿಯು ಕೇವಲ 49,999ರೂ.ಬೆಲೆಯಲ್ಲಿ ಲಭ್ಯವಾಗುತ್ತಿದೆ. ಇನ್ನು ಈ ಸ್ಮಾರ್ಟ್‌ಫೋನ್ ಮೇಲೆ ವಿವಿಧ ಬ್ಯಾಂಕ್ ಕಾರ್ಡ್ ಆಫರ್‌ಗಳು ದೊರೆಯುವುದರಿಂದ ಇದರ ಬೆಲೆ ಇನ್ನಷ್ಟು ಕಡಿಮೆ ಆಗಲಿದೆ. ಈ ಸ್ಮಾರ್ಟ್‌ಫೋನ್ ಸೇಜ್ ಗ್ರೀನ್, ಸಮ್ಮರ್ ಲಿಲಾಕ್ ಮತ್ತು ವೆನಿಲ್ಲಾ ಕ್ರೀಮ್ ಬಣ್ಣಗಳಲ್ಲಿ ನೀಡಲಾಗುತ್ತದೆ.
ಮೊಟೊರೊಲಾ ರೇಜರ್ 40 ಫೀಚರ್ಸ್ ಹೇಗಿದೆ?
ಮೊಟೊರೊಲಾ ರೇಜರ್ 40 ಫೋನ್ 6.9 ಇಂಚಿನ ಮೇನ್ ಡಿಸ್‌ಪ್ಲೇ ಹೊಂದಿದೆ. ಇದು 1080 x 2640 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇನ್ನು ಡಿಸ್‌ಪ್ಲೇ 85.1% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಹೊಂದಿದೆ. ಇದಲ್ಲದೆ ಸ್ಮಾರ್ಟ್‌ಫೋನ್ 1.5 ಇಂಚಿನ ಸೆಕೆಂಡರಿ ಡಿಸ್‌ಪ್ಲೇಯನ್ನು ಸಹ ಹೊಂದಿದೆ. ಇದು 194 x 368 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದಲ್ಲಿದೆ. ಜೊತೆಗೆ ಗೊರಿಲ್ಲಾ ಗ್ಲಾಸ್ ವಿಕ್ಟಸ್ ಪ್ರೊಟೆಕ್ಷನ್ ಪಡೆದಿದೆ.
ಮೊಟೊರೊಲಾ ರೇಜರ್ 40 ಪ್ರೊಸೆಸರ್ ಯಾವುದು?
ಮೊಟೊರೊಲಾ ರೇಜರ್ 40 ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 7 ಜೆನ್ 1 ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು ಆಂಡ್ರಾಯ್ಡ್ 13 ಬೆಂಬಲದೊಂದಿಗೆ ರನ್ ಆಗಲಿದೆ. ಹಾಗೆಯೇ 8GB RAM ಮತ್ತು 256GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಈ ಫೋನ್ ಮೆಮೊರಿ ಕಾರ್ಡ್ ಅನ್ನು ಬೆಂಬಲಿಸುವುದಿಲ್ಲ ಅನ್ನೋದು ವಿಶೇಷ.
ಮೊಟೊರೊಲಾ ರೇಜರ್ 40 ಕ್ಯಾಮೆರಾ ಸೆಟಪ್ ಏನಿದೆ?
ಮೊಟೊರೊಲಾ ರೇಜರ್ 40 ಫೋನ್ ಹಿಂಭಾಗದಲ್ಲಿ ಎರಡು ಕ್ಯಾಮೆರಾ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್ ಮತ್ತು ಎರಡನೇ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್ ಅಲ್ಟ್ರಾ ವೈಡ್ ಲೆನ್ಸ್ ಹೊಂದಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಕ್ಯಾಮೆರಾ ಫೀಚರ್ಸ್‌ಗಳಲ್ಲಿ ಪನೋರಮಾ, ಹೆಚ್‌ಡಿಆರ್ ಅನ್ನು ಒಳಗೊಂಡಿದೆ.

ಮೊಟೊರೊಲಾ ರೇಜರ್ 40 ಬ್ಯಾಟರಿ ಮತ್ತು ಇತರೆ
ಮೊಟೊರೊಲಾ ರೇಜರ್ 40 ಫೋನ್ 4200mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದು 30W ವೈರ್ಡ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್, ವೈಫೈ, ಯುಎಸ್‌ಬಿ ಸಿ ಪೋರ್ಟ್ ಹೊಂದಿದೆ. ಇದರೊಂದಿಗೆ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್, ಅಕ್ಸಿಲೆರೊಮೀಟರ್, ಗೈರೊ, ಪ್ರಾಕ್ಸಿಮಿಟಿ ಸೆನ್ಸಾರ್, ಕಂಪಾಸ್, ಬ್ಯಾರೋಮೀಟರ್ ಅನ್ನು ಒಳಗೊಂಡಿದೆ.


Click it and Unblock the Notifications








