ಭಾರತದಲ್ಲಿ ಮೊಟೊರೊಲಾ ರೇಜರ್ 40 ಸರಣಿ ಲಾಂಚ್ ಡೇಟ್ ಬಹಿರಂಗ!
ಭಾರತದಲ್ಲಿ ಮೊಟೊರೊಲಾ ರೇಜರ್ 40 ಸರಣಿ ಸ್ಮಾರ್ಟ್‌ಫೋನ್ ಬಿಡುಗಡೆ ದಿನಾಂಕ ಇದೀಗ ಬಹಿರಂಗವಾಗಿದೆ. ಈ ಸರಣಿಯಲ್ಲಿ ಮೊಟೊರೊಲಾ ರೇಜರ್ 40 ಮತ್ತು ಮೊಟೊರೊಲಾ ರೇಜರ್ 40 ಅಲ್ಟ್ರಾ ಆಯ್ಕೆಯಲ್ಲಿ ಬರಲಿದ್ದು, ಜುಲೈ 3 ರಂದು ಭಾರತಕ್ಕೆ ಎಂಟ್ರಿ ನೀಡಲಿದೆ. ಈ ಸರಣಿ ಸ್ಮಾರ್ಟ್‌ಫೋನ್‌ಗಳು ಫೋಲ್ಡಬಲ್ ಡಿಸ್‌ಪ್ಲೇಯನ್ನು ಹೊಂದಿವೆ.
ಹೌದು, ಮೊಟೊರೊಲಾ ರೇಜರ್ 40 ಸರಣಿ ಭಾರತಕ್ಕೆ ಮುಂದಿನ ತಿಂಗಳು ಬರಲಿದೆ. ಈ ಸರಣಿಯಲ್ಲಿ ಮೊಟೊರೊಲಾ ರೇಜರ್ 40 ಅಲ್ಟ್ರಾ ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8+ Gen 1 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಆದರೆ ಮೊಟೊರೊಲಾ ರೇಜರ್ 40 ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 7 Gen 1 SoC ಪ್ರೊಸೆಸರ್‌ನಲ್ಲಿ ಬರಲಿದೆ. ಇನ್ನುಳಿದಂತೆ ಈ ಎರಡು ಸ್ಮಾರ್ಟ್‌ಫೋನ್‌ಗಳಲ್ಲಿ ಏನೆಲ್ಲಾ ಫೀಚರ್ಸ್ ಒಳಗೊಂಡಿರಲಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಮೊಟೊರೊಲಾ ರೇಜರ್ 40 ಅಲ್ಟ್ರಾ ಫೀಚರ್ಸ್
ಮೊಟೊರೊಲಾ ರೇಜರ್ 40 ಅಲ್ಟ್ರಾ ಸ್ಮಾರ್ಟ್‌ಫೋನ್ ಫೋಲ್ಡಬಲ್ ಡಿಸ್‌ಪ್ಲೇ ಹೊಂದಿದೆ. ಇದರಲ್ಲಿ ಮೇನ್ ಡಿಸ್‌ಪ್ಲೇ 6.9 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಹೊಂದಿರಲಿದೆ. ಇನ್ನು ಈ ಡಿಸ್‌ಪ್ಲೇ 165Hz ರಿಫ್ರೆಶ್ ರೇಟ್ ಬೆಂಬಲಿಸಲಿದೆ. ಇದು HDR10+ ಬೆಂಬಲಿಸಲಿದ್ದು, 1400 ನೀಟ್ಸ್ ಗರಿಷ್ಠ ಬ್ರೈಟ್‌ನೆಸ್ ಅನ್ನು ನೀಡಲಿದೆ ಎಂದು ಹೇಳಲಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್ ಕವರ್ ಡಿಸ್‌ಪ್ಲೇ 3.6 ಇಂಚಿನ ಕ್ವಿಕ್‌ವ್ಯೂ poOLED ಡಿಸ್‌ಪ್ಲೇ ಹೊಂದಿರಲಿದೆ. ಈ ಸ್ಕ್ರೀನ್ 1000 ನಿಟ್ಸ್ ಬ್ರೈಟ್‌ನೆಸ್ ಅನ್ನು ನೀಡುತ್ತದೆ ಎಂದು ಹೇಳಲಾಗಿದೆ.
ಮೊಟೊರೊಲಾ ರೇಜರ್ 40 ಅಲ್ಟ್ರಾ ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8+ Gen 1 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. 8GB RAM ಮತ್ತು 256GB ಹಾಗೂ 12GB RAM ಮತ್ತು 512GB ಇಂಟರ್ ಸ್ಟೋರೇಜ್ ಸಾಮರ್ಥ್ಯದಲ್ಲಿ ಬರಲಿದೆ ಎಂದು ವರದಿಯಾಗಿದೆ. ಈ ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 12MP ಸೆನ್ಸಾರ್ ಮತ್ತು ಎರಡನೇ ಕ್ಯಾಮೆರಾ 13MP ಅಲ್ಟ್ರಾ-ವೈಡ್ ಲೆನ್ಸ್ ಅನ್ನು ಹೊಂದಿದೆ. ಇದಲ್ಲದೆ 32MP ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಜೊತೆಗೆ 3800mAh ಸಾಮರ್ಥ್ಯದ ಬ್ಯಾಟರಿ ಹೊಂದಿದ್ದು, 33W ವೇಗದ ಚಾರ್ಜಿಂಗ್ ಬೆಂಬಲಿಸಲಿದೆ ಎಂದು ವರದಿಯಾಗಿದೆ.

ಮೊಟೊರೊಲಾ ರೇಜರ್ 40 ಫೀಚರ್ಸ್
ಮೊಟೊರೊಲಾ ರೇಜರ್ 40 ಸ್ಮಾರ್ಟ್‌ಫೋನ್ 6.9 ಇಂಚಿನ ಮೇನ್ ಡಿಸ್‌ಪ್ಲೇ ಹೊಂದಿದೆ. ಇದರ ಕವರ್ ಡಿಸ್‌ಪ್ಲೇ 1.5 ಇಂಚಿನ ಡಿಸ್‌ಪ್ಲೇ ಹೊಂದಿರಲಿದೆ. ಇನ್ನು ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 7 Gen 1 ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 256GB ಇಂಟರ್ ಸ್ಟೋರೇಜ್ ಸಾಮರ್ಥ್ಯದ ಬರಲಿದೆ ಎನ್ನಲಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್ ಮತ್ತು ಎರಡನೇ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್ ಅಲ್ಟ್ರಾ ವೈಡ್ ಲೆನ್ಸ್ ಅನ್ನು ಒಳಗೊಂಡಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್ 4200mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಜೊತೆಗೆ 30W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ ಎನ್ನಲಾಗಿದೆ.
ಬೆಲೆ ಮತ್ತು ಲಭ್ಯತೆ
ಭಾರತದಲ್ಲಿ ಮೊಟೊರೊಲಾ ರೇಜರ್ 40 ಅಲ್ಟ್ರಾ ಸ್ಮಾರ್ಟ್‌ಫೋನ್ 80,000ರೂ. ಬೆಲೆಯಲ್ಲಿ ಬರುವ ಸಾಧ್ಯತೆಯಿದೆ. ಇನ್ನು ಮೊಟೊರೊಲಾ ರೇಜರ್ 40 ಸ್ಮಾರ್ಟ್‌ಫೋನ್ ಭಾರತದಲ್ಲಿ ಸುಮಾರು 60,000ರೂ. ಬೆಲೆಯಲ್ಲಿ ಬರುವ ನಿರೀಕ್ಷೆಯಿದೆ. ಅಧಿಕೃತ ಬೆಲೆ ವಿವರಗಳನ್ನು ಜುಲೈ 3ರಂದು ಬಿಡುಗಡೆಯಾದ ನಂತರ ಬಹಿರಂಗವಾಗಲಿದೆ.


Click it and Unblock the Notifications








