Motorola Razr 50 ಬಿಡುಗಡೆಗೆ ಮುಹೂರ್ತ ಫಿಕ್ಸ್!..ಕುತೂಹಲ ಮೂಡಿಸಿದ ಬೆಲೆ?
ಜನಪ್ರಿಯ ಮೊಬೈಲ್ ಬ್ರ್ಯಾಂಡ್‌ಗಳಲ್ಲಿ ಒಂದಾದ ಮೊಟೊರೊಲಾ (Motorola) ಸದ್ಯದಲ್ಲೇ ದೇಶಿಯ ಮಾರುಕಟ್ಟೆಯಲ್ಲಿ ಈಗಾಗಲೇ ರೇಜರ್ ಸರಣಿಯಲ್ಲಿ ಕೆಲವು ಫ್ಲಿಪ್ ಫೋನ್‌ಗಳನ್ನು ಪರಿಚಯಿಸಿ ಗ್ರಾಹಕರನ್ನು ಆಕರ್ಷಿಸಿದೆ. ರೇಜರ್ ಸರಣಿಯ ಮುಂದುವರಿದ ಭಾಗವಾಗಿ ಇದೀಗ ಮೊಟೊರೊಲಾ ಸಂಸ್ಥೆಯು ಮೊಟೊರೊಲಾ ರೇಜರ್ 50 (Motorola Razr 50) ಫೋನ್ ಅನ್ನು ಭಾರತದಲ್ಲಿ ಲಾಂಚ್ ಮಾಡಲು ಸಿದ್ಧತೆ ಮಾಡಿಕೊಂಡಿದೆ. ಅಂದಹಾಗೆ ಬರಲಿರುವ ಈ ಸ್ಮಾರ್ಟ್‌ಫೋನ್ ಫ್ಲಿಪ್ ಮಾದರಿಯಲ್ಲಿ ಇರಲಿದೆ.
ಹೌದು, ಮೊಟೊರೊಲಾ ಮೊಬೈಲ್ ಸಂಸ್ಥೆಯು ಮೊಟೊರೊಲಾ ರೇಜರ್ 50 (Motorola Razr 50) ಫೋನ್ ಅನ್ನು ಇದೇ ಸೆಪ್ಟೆಂಬರ್ 9 ರಂದು ಅಧಿಕೃತವಾಗಿ ದೇಶಿಯ ಮಾರುಕಟ್ಟೆಗೆ ಬಿಡುಗಡೆ ಮಾಡಲಿದೆ ಎಂದು ಮೊಟೊ ತನ್ನ ಎಕ್ಸ್ ಖಾತೆಯ ಮೂಲಕ ತಿಳಿಸಿದೆ. ಇನ್ನು ಈ ಫ್ಲಿಪ್ ಫೋನ್ ನೀರಿನ ಪ್ರತಿರೋಧಕ್ಕಾಗಿ IPX8 ರೇಟಿಂಗ್ ಆಯ್ಕೆಗಳನ್ನು ಇದು ಒಳಗೊಂಡಿರಲಿದೆ ಎಂದು ವರದಿಯಾಗಿದೆ.

ಹಾಗೆಯೇ ಈ ನೂತನ ಫೋನ್ 4,200 mAh ಡ್ಯುಯಲ್ ಸೆಲ್ ಬ್ಯಾಟರಿ ಬ್ಯಾಕ್‌ಅಪ್ ಒಳಗೊಂಡಿರಲಿದ್ದು, ಇದಕ್ಕೆ ಪೂರಕವಾಗಿ 30W ವೈರ್ಡ್ ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಕೂಡಾ ಹೊಂದಿರಲಿದೆ. ಅಲ್ಲದೇ ಈ ಫೋನ್ 50 ಮೆಗಾ ಪಿಕ್ಸಲ್ ಸಾಮರ್ಥ್ಯದ ಮುಖ್ಯ ಕ್ಯಾಮರಾ ಸೌಲಭ್ಯ ಪಡೆದಿರಲಿದೆ ಎಂದು ಹೇಳಲಾಗಿದೆ. ಹಾಗಾದರೇ ಮೊಟೊರೊಲಾ ರೇಜರ್ 50 ಫ್ಲಿಪ್ ಫೋನಿನ ನಿರೀಕ್ಷಿತ ಫೀಚರ್ಸ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಮೊಟೊರೊಲಾ ರೇಜರ್ 50 - ನಿರೀಕ್ಷಿತ ಫೀಚರ್ಸ್
ಮೊಟೊರೊಲಾ ರೇಜರ್ 50 ಫೋನ್ 6.9 ಇಂಚಿನ ಪೂರ್ಣ HD+ ಡಿಸ್‌ಪ್ಲೇ ಪಡೆದಿರಲಿದ್ದು, ಇದರ ಡಿಸ್‌ಪ್ಲೇಯು 1,080 x 2,640 ಪಿಕ್ಸೆಲ್ ರೆಸಲ್ಯೂಶನ್ ಸೌಲಭ್ಯದಲ್ಲಿ ಇರಲಿದೆ ಎನ್ನಲಾಗಿದೆ. ಹಾಗೆಯೇ pOLED ಒಳಗಿನ ಡಿಸ್‌ಪ್ಲೇ ಇರಲಿದೆ. ಇನ್ನು ಇದರ ಕವರ್ ಡಿಸ್‌ಪ್ಲೇಯು 3.6 ಇಂಚಿನ ಪೂರ್ಣ HD+ pOLED ಮಾದರಿಯಲ್ಲಿ ಇರಲಿದ್ದು, ಇದರ ಡಿಸ್‌ಪ್ಲೇಯು 1,080 x 2,640 ಪಿಕ್ಸೆಲ್ ರೆಸಲ್ಯೂಶನ್ ಸೌಲಭ್ಯದಲ್ಲಿ ಇರಲಿದೆ ಕವರ್ ಡಿಸ್‌ಪ್ಲೇ ಹೊಂದಿದೆ.
ಇನ್ನು ಈ ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 7300X ಚಿಪ್‌ಸೆಟ್ ಪ್ರೊಸೆಸರ್ ಪವರ್‌ನಲ್ಲಿ ಕೆಲಸ ಮಾಡಲಿದ್ದು, ಇದರೊಂದಿಗೆ 12 GB RAM ಮತ್ತು 512 GB ವರೆಗೆ ಸ್ಟೋರೇಜ್ ವೇರಿಯಂಟ್ ಆಯ್ಕೆಗಳನ್ನು ಪಡೆದಿರಲಿದೆ. ಹಾಗೆಯೇ ಈ ಫೋನ್ ಡ್ಯುಯಲ್ ಕ್ಯಾಮೆರಾ ರಚನೆ ಅನ್ನು ಪಡೆದಿರಲಿದ್ದು, ಪ್ರಾಥಮಿಕ ಕ್ಯಾಮೆರಾವು 50 ಮೆಗಾ ಪಿಕ್ಸೆಲ್ ಸೆನ್ಸಾರ್ ಬಲದಲ್ಲಿ ಇರಲಿದೆ. ಹಾಗೆಯೇ ಇದರ ಸೆಕೆಂಡರಿ ಕ್ಯಾಮೆರಾವು 13 ಮೆಗಾ ಪಿಕ್ಸೆಲ್ ಅಲ್ಟ್ರಾ ವೈಡ್-ಆಂಗಲ್ ಕ್ಯಾಮೆರಾವನ್ನು ಒಳಗೊಂಡಿದೆ.
ಹಾಗೆಯೇ ಈ ಫೋನಿನ ಮುಂಭಾಗದಲ್ಲಿ ಸೆಲ್ಫಿಗಳು ಮತ್ತು ವೀಡಿಯೊ ಚಾಟ್‌ಗಳಿಗಾಗಿ ಒಳಗಿನ ಸ್ಕ್ರೀನಿನಲ್ಲಿ 32 ಮೆಗಾ ಪಿಕ್ಸೆಲ್ ಸೆನ್ಸಾರ್ ಅನ್ನು ನೀಡಲಾಗುವ ನಿರೀಕ್ಷೆಗಳು ಇವೆ. ಇದು ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್ ಅನ್ನು ಪಡೆದಿದೆ. ಅಲ್ಲದೇ ಇದು 4,200 mAh ಬ್ಯಾಟರಿ ಬ್ಯಾಕ್‌ಅಪ್ ಅನ್ನು ಹೊಂದಿದ್ದು, ಇದಕ್ಕೆ ಅನುಗುಣವಾಗಿ 30W ವೈರ್ಡ್ ಮತ್ತು 15W ವೈರ್‌ಲೆಸ್ ಚಾರ್ಜಿಂಗ್ ಸಪೋರ್ಟ್ ಸಹ ಪಡೆದಿರುವುದು ಬಹುತೇಕ ಖಚಿತ ಎನ್ನಲಾಗಿದೆ.
ಇನ್ನು ಮೊಟೊರೊಲಾ ರೇಜರ್ 50 ಫೋನ್ ಬಿಡುಗಡೆ ಬಳಿಕ ಅಮೆಜಾನ್, ಮೊಟೊರೊಲಾ ಇಂಡಿಯಾ ಇ-ಸ್ಟೋರ್ ಮತ್ತು ಪ್ರಮುಖ ರಿಟೇಲ್ ಸ್ಟೋರ್‌ಗಳಲ್ಲಿ ಖರೀದಿಗೆ ಲಭ್ಯವಿರುತ್ತದೆ. ಹಾಗೆಯೇ ಈ ಫೋನ್ ಇತರ ಫ್ಲಿಪ್ ಮೊಬೈಲ್‌ಗಳಾದ ಸ್ಯಾಮ್‌ಸಂಗ್ ಗ್ಯಾಲಕ್ಸಿ Z ಫ್ಲಿಪ್ 6, ಒಪ್ಪೋ ಫೈಂಡ್ N3 ಹಾಗೂ ಇತರೆ ಕೆಲವು ಫ್ಲಿಪ್ ಫೋನ್‌ಗಳಿಗೆ ನೇರ ಪೈಪೋಟಿ ನೀಡಲಿದೆ ಎನ್ನಲಾಗಿದೆ.


Click it and Unblock the Notifications








