Home
ಸುದ್ದಿಜಾಲ

ಬಿಡುಗಡೆಗೆ ಸಜ್ಜಾಗುತ್ತಿದೆ 'ಮೊಟೊರೊಲಾ ರೇಜರ್ 50 ಅಲ್ಟ್ರಾ' ಫೋನ್‌; ಫೀಚರ್ಸ್‌ ಲೀಕ್!

ಜನಪ್ರಿಯ ಮೊಟೊರೊಲಾ ಸಂಸ್ಥೆಯು ಈಗಾಗಲೇ ಮೊಟೊ ರೇಜರ್ ಸರಣಿಯಲ್ಲಿ ಹಲವು ಫೋನ್‌ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಅದರ ಮುಂದುವರಿದ ಆವೃತ್ತಿಯಾಗಿ ಕಂಪನಿಯು ಇದೀಗ ಮೊಟೊರೊಲಾ ರೇಜರ್ 50 ಅಲ್ಟ್ರಾ (Motorola Razr 50 Ultra) ಸ್ಮಾರ್ಟ್‌ಫೋನ್‌ ಬಿಡುಗಡೆಗೆ ಮಾಡಲಿದೆ ಎಂದು ನಿರೀಕ್ಷಿಸಲಾಗಿದೆ.

ಹೌದು, ಮೊಟೊರೊಲಾ ಸಂಸ್ಥೆಯ ಮೊಟೊರೊಲಾ ರೇಜರ್ 50 ಅಲ್ಟ್ರಾ ಸ್ಮಾರ್ಟ್‌ಫೋನ್‌ ಕುರಿತಾಗಿ ಯುರೋಪಿಯ ಮಾರುಕಟ್ಟೆಯಲ್ಲಿನ ಈ ಫೋನ್ ಬೆಲೆ, ಸ್ಟೋರೇಜ್‌ ಆಯ್ಕೆ ಮತ್ತು ಕಲರ್‌ ವೇರಿಯಂಟ್‌ಗಳ ಬಗ್ಗೆ ಮಾಹಿತಿ ಲೀಕ್ ಆಗಿದ್ದು, ಗ್ರಾಹಕರಲ್ಲಿ ಕುತೂಹಲ ಹೆಚ್ಚಿಸಿದೆ. ಅಂದಹಾಗೆ ಇದು ಫೋಲ್ಡಬಲ್ ಸ್ಮಾರ್ಟ್‌ಫೋನ್ ಆಗಿರಲಿದೆ.

ಬಿಡುಗಡೆಗೆ ಸಜ್ಜಾಗುತ್ತಿದೆ ಮೊಟೊರೊಲಾ ರೇಜರ್ 50 ಅಲ್ಟ್ರಾ; ಫೀಚರ್ಸ್‌ ಲೀಕ್!

ಈ ಫೋನ್‌ ಸ್ನಾಪ್ಡ್ರಾಗನ್ 8s ಜೆನ್ 3 ಪ್ರೊಸೆಸರ್‌ ಸೌಲಭ್ಯ ಪಡೆದುಕೊಂಡಿರಲಿದ್ದು, 50 ಮೆಗಾ ಪಿಕ್ಸಲ್‌ ಸೆನ್ಸಾರ್‌ನ ಪ್ರಾಥಮಿಕ ಕ್ಯಾಮೆರಾ ರಚನೆ ಪಡೆದಿರಲಿದೆ ಎಂದು ನಿರೀಕ್ಷಿಸಲಾಗಿದೆ. ಇದರ ಜೊತೆಗೆ 4,000mAh ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಪಡೆದಿರುವ ಸಾಧ್ಯತೆಗಳು ಇವೆ. ಹಾಗಾದರೇ ಮೊಟೊರೊಲಾ ರೇಜರ್ 50 ಅಲ್ಟ್ರಾ ಫೋನಿನ ಕೆಲವು ನಿರೀಕ್ಷಿತ ಫೀಚರ್ಸ್‌ ಬಗ್ಗೆ ಮುಂದೆ ನೋಡೋಣ ಬನ್ನಿರಿ.

ಮೊಟೊರೊಲಾ ರೇಜರ್ 50 ಅಲ್ಟ್ರಾ ನಿರೀಕ್ಷಿತ ಫೀಚರ್ಸ್

ಮೊಟೊರೊಲಾ ರೇಜರ್ 50 ಅಲ್ಟ್ರಾ ಮೊಬೈಲ್‌ 6.9 ಇಂಚಿನ ಸೂಪರ್ OLED ಡಿಸ್‌ಪ್ಲೇ ಅನ್ನು ಒಳಗೊಂಡಿರಲಿದ್ದು, ಇದರ ಡಿಸ್‌ಪ್ಲೇಯು 2640×1080p ಪಿಕ್ಸಲ್‌ ರೆಸಲ್ಯೂಶನ್‌ ಸೌಲಭ್ಯ ಒಳಗೊಂಡಿರಲಿದೆ. ಹಾಗೆಯೇ ಈ ಫೋನಿನ ಕವರ್‌ ಡಿಸ್‌ಪ್ಲೇ 3.6 ಇಂಚಿನಲ್ಲಿ ಇರಲಿದೆ ಎಂದು ನಿರೀಕ್ಷಿಸಲಾಗಿದೆ.

ಮೊಟೊರೊಲಾ ರೇಜರ್ 50 ಅಲ್ಟ್ರಾ ಫೋನ್‌ ಕ್ವಾಲ್ಕಮ್‌ ಸ್ನಾಪ್ಡ್ರಾಗನ್ 8s ಜೆನ್ 3 ಚಿಪ್‌ಸೆಟ್‌ ಪ್ರೊಸೆಸರ್‌ ಸೌಲಭ್ಯ ಪಡೆದಿರುವ ನಿರೀಕ್ಷೆಗಳು ಇವೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 14 ಓಎಸ್‌ ಸಪೋರ್ಟ್‌ ಸಹ ಇರಲಿದೆ ಎಂದು ಹೇಳಲಾಗುತ್ತಿದೆ. ಅಲ್ಲದೇ ಈ ಫೋನ್‌ 12 GB + 256 GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆ ಅನ್ನು ಪಡೆದಿರಲಿದೆ.

ಮೊಟೊರೊಲಾ ರೇಜರ್ 50 ಅಲ್ಟ್ರಾ ಮೊಬೈಲ್‌ ಹಿಂಭಾಗದಲ್ಲಿ ಡ್ಯುಯಲ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದ್ದು, ಇದರ ಮೊದಲ ಕ್ಯಾಮೆರಾವು 50 ಮೆಗಾ ಪಿಕ್ಸೆಲ್ ಸೆನ್ಸಾರ್ ಸೌಲಭ್ಯದಲ್ಲಿ ಪಡೆದಿರಲಿದೆ. ಎರಡನೇ ಕ್ಯಾಮೆರಾವು 50 ಮೆಗಾ ಪಿಕ್ಸೆಲ್‌ನ 2x ಟೆಲಿಫೋಟೋ ಲೆನ್ಸ್‌ ಸೌಲಭ್ಯ ಆಗಿರಲಿಲಿದೆ. ಇನ್ನು ಈ ಫೋನಿನ ಸೆಲ್ಫಿ ಕ್ಯಾಮೆರಾ 32 ಮೆಗಾ ಪಿಕ್ಸೆಲ್ ಸೆನ್ಸಾರ್ ನಲ್ಲಿ ಇರುವ ಸಾಧ್ಯತೆ ಅಧಿಕ.

ಶೀಘ್ರದಲ್ಲೇ ಲಾಂಚ್‌ ಆಗಲಿರುವ ಮೊಟೊರೊಲಾ ರೇಜರ್ 50 ಅಲ್ಟ್ರಾ ಫೋನ್‌ 4,000 mAh ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಹೊಂದಿದ್ದು, ಇದರ ಜೊತೆಗೆ ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಪಡೆದಿರಲಿದೆ. ಹಾಗೆಯೇ ಇದು 5G, GPS, Wi-Fi 6, ಬ್ಲೂಟೂತ್ 5.2, ಮತ್ತು USB 2.0 ಟೈಪ್ - C ಪೋರ್ಟ್ ಆಯ್ಕೆಗಳು ಕೂಡಾ ಇರಲಿವೆ.

ಹಾಗೆಯೇ ಇತ್ತೀಚಿನ ಕೆಲವು ಲೀಕ್‌ ಮಾಹಿತಿಯು ಮೊಟೊರೊಲಾ ರೇಜರ್ 50 ಅಲ್ಟ್ರಾ ಫೋನ್ IPX8 ನೀರು ನಿರೋಧಕ ಸೌಲಭ್ಯ, eSIM ವ್ಯವಸ್ಥೆ ಹಾಗೂ ಎಐ ಎಡಿಟಿಂಗ್ ಟೂಲ್‌ ಆಯ್ಕೆ ಸಹ ಹೊಂದಿರಲಿದೆ. ಹಾಗೆಯೇ ಮಿಡ್ನೈಟ್ ಬ್ಲೂ, ಸ್ಪ್ರಿಂಗ್ ಗ್ರೀನ್ ಹಾಗೂ ಹಾಟ್ ಪಿಂಕ್ ಕಲರ್‌ ಆಯ್ಕೆಗಳನ್ನು ಇದು ಪಡೆದಿರಲಿದೆ. ಅಂದಹಾಗೆ ಈ ಮೊಬೈಲ್‌ ಆರಂಭಿಕ ಬೆಲೆಯು 30,000ರೂ.ಗಳ ಒಳಗೆ ಇರಲಿದೆ ಎನ್ನಲಾಗಿದೆ.

Best Mobiles in India

English summary
Motorola Razr 50 Ultra will soon launch. Check out main Leak Specifications and more.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+