ಮೊಟೊರೊಲಾ ರೇಜರ್ 5G ಫೋಲ್ಡಬಲ್ ಸ್ಮಾರ್ಟ್‌ಫೋನ್ ಬಿಡುಗಡೆ!

|

ಜನಪ್ರಿಯ ಸ್ಮಾರ್ಟ್‌ಫೋನ್‌ ತಯಾರಕ ಮೊಟೊರೊಲಾ ತನ್ನ ಹೊಸ ರೇಜರ್‌ 5G ಫೋಲ್ಡಬಲ್‌ ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್‌ ಕಳೆದ ವರ್ಷ ಬಿಡುಗಡೆ ಆಗಿದ್ದ ಮೊಟೊರೊಲಾ ರೇಜರ್‌ ಫೋಲ್ಡಬಲ್‌ ಫೋನ್‌ನ ಮುಂದುವರೆದ ಆವೃತ್ತಿಯಾಗಿದೆ. ಇನ್ನು ಈ ಹೊಸ ಫೋಲ್ಡಬಲ್ ಫೋನ್ 6.2-ಇಂಚಿನ ಪ್ಲಾಸ್ಟಿಕ್ ಒಎಲ್ಇಡಿ ವಿನ್ಯಾಸದ ಮೇನ್‌ ಡಿಸ್‌ಪ್ಲೇಯನ್ನು ಒಳಗೊಂಡಿದೆ. ಅಲ್ಲದೆ 48 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಮುಖ್ಯ ಕ್ಯಾಮೆರಾ ಹೊಂದಿದ್ದು, ಇದು ಹೊಸ ವಿನ್ಯಾಸದ ಸ್ಮಾರ್ಟ್‌ಫೋನ್‌ ಎನ್ನಲಾಗಿದೆ.

ಮೊಟೊರೊಲಾ

ಹೌದು, ಮೊಟೊರೊಲಾ ಸಂಸ್ಥೆ ತನ್ನ ಹೊಸ ರೇಜರ್‌ 5G ಫೋಲ್ಡಬಲ್‌ ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿದೆ. ಇದು ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 765G SoC ಪ್ರೊಸೆಸರ್‌ ವೇಗವನ್ನು ಪಡೆದುಕೊಂಡಿದೆ.ಜೊತೆಗೆ ಇದು 5G ಕನೆಕ್ಟಿವಿಟಿಯನ್ನು ಬೆಂಬಲಿಸಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 2,800mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದ್ದು, ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ಗಳನ್ನ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿದುಕೊಳ್ಳೋಣ ಬನ್ನಿರಿ.

ಡಿಸ್‌ಪ್ಲೇ

ಡಿಸ್‌ಪ್ಲೇ

ಮೊಟೊರೊಲಾ ರೇಜರ್ 5G ಫೋಲ್ಡಬಲ್ ಫೋನ್ 2,142x876 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್ ಸಾಮರ್ಥ್ಯ ಹೊಂದಿರುವ ಮಡಚಬಹುದಾದ 6.2-ಇಂಚಿನ ಪ್ಲಾಸ್ಟಿಕ್ OLED ಮೇನ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇದಲ್ಲದೆ ಈ ಫೋನ್ 600x800 ಪಿಕ್ಸೆಲ್‌ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 2.7-ಇಂಚಿನ ಗಾಜಿನ OLED ಸೆಕೆಂಡರಿ ಡಿಸ್‌ಪ್ಲೇಯನ್ನು ಸಹ ಹೊಂದಿದೆ. ಇಇನ್ನು ಮುಂಭಾಗದ ಫ್ಲಿಪ್ ಪ್ಯಾನೆಲ್‌ನ ಮೇಲೆ ಇರಿಸಲಾಗಿರುವ ಸೆಂಕೆಡರಿ ಡಿಸ್‌ಪ್ಲೇ ಬಳಕೆದಾರರಿಗೆ ನೊಟೀಫೀಕೇಷನ್‌ಗಳನ್ನು ತ್ವರಿತವಾಗಿ ಪರಿಶೀಲಿಸಲು, ಸಂದೇಶಗಳಿಗೆ ಪ್ರತ್ಯುತ್ತರಿಸಲು, ನ್ಯಾವಿಗೇಷನ್ ನಿರ್ದೇಶನಗಳನ್ನು ಪಡೆಯಲು ಅನುಮತಿಸುತ್ತದೆ. ಇನ್ನು ಮೇನ್‌ ಡಿಸ್‌ಪ್ಲೇ ಸ್ಕ್ರೀನ್‌ ಟು ಬಾಡಿ 21: 9 ರ ಅನುಪಾತವನ್ನು ಹೊಂದಿದೆ. ಇದು ಮಡಿಸಬಹುದಾದ ಫೋನ್ ನವೀಕರಿಸಿದ ಹಿಂಜ್ ವಿನ್ಯಾಸವನ್ನು ಹೊಂದಿದೆ.

ಪ್ರೊಸೆಸರ್‌ ಸಾಮರ್ಥ್ಯ

ಪ್ರೊಸೆಸರ್‌ ಸಾಮರ್ಥ್ಯ

ಇದು ಆಕ್ಟಾ-ಕೋರ್ ಸ್ನಾಪ್‌ಡ್ರಾಗನ್ 765G SoC ಪ್ರೊಸೆಸರ್‌ ಅನ್ನು ಹೊಂದಿದ್ದು, ಆಂಡ್ರಾಯ್ಡ್ 10 ನಲ್ಲಿ ಮೈ UX ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೇಯೇ ಇದು 8GB RAM ಮತ್ತು 256 GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಮೆಮೊರಿ ಕಾರ್ಡ್‌ ಮೂಲಕ ಸಂಗ್ರಹ ಸಾಮರ್ಥ್ಯ ವಿಸ್ತರಿಸಿಕೊಳ್ಳುವ ಯಾವುದೇ ಅವಕಾಶವನ್ನ ನೀಡಿಲ್ಲ.

ಕ್ಯಾಮೆರಾ ವಿನ್ಯಾಸ

ಕ್ಯಾಮೆರಾ ವಿನ್ಯಾಸ

ಮೊಟೊರೊಲಾ ರೇಜರ್ 5G ಸ್ಮಾರ್ಟ್‌ಫೋನ್‌ ಮುಖ್ಯ ಕ್ಯಾಮೆರಾ 48-ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಇದು ಆಪ್ಟಿಕಲ್ ಇಮೇಜ್ ಸ್ಟೆಬಿಲೈಸೇಶನ್ ಅನ್ನು ಬೆಂಬಲಿಸುತ್ತದೆ ಮತ್ತು ಲೇಸರ್ ಆಟೋಫೋಕಸ್ ಟೆಕ್ನಾಲಜಿಯನ್ನು ಸಹ ಹೊಂದಿದೆ. ಇನ್ನು ಈ ಕ್ಯಾಮೆರಾವನ್ನು ಟಾಪ್ ಫ್ಲಿಪ್ ಪ್ಯಾನೆಲ್‌ನಲ್ಲಿ ಸೆಕೆಂಡ್‌ ಡಿಸ್‌ಪ್ಲೇ ಮೇಲೆ ಇರಿಸಲಾಗಿರುವುದರಿಂದ, ಫೋನ್ ಅನ್ನು ಮಡಿಸಿದಾಗ ಅದನ್ನು ಸೆಲ್ಫಿ ಕ್ಯಾಮೆರಾದಾಗಿಯೂ ಬಳಸಬಹುದಾಗಿದೆ. ಗ್ರೂಪ್ ಸೆಲ್ಫಿ, ಪೋರ್ಟ್ರೇಟ್ ಮೋಡ್, ಸ್ಪಾಟ್ ಕಲರ್ ಕ್ಯಾಮೆರಾ ಗಳನ್ನು ಸಹ ನೀಡಲಾಗಿದೆ. ಇದಲ್ಲದೆ 20 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ನೀಡಲಾಗಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಇದು 2,800mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್ ಅನ್ನು ಹೊಂದಿದ್ದು, ಇದು 15W ಟರ್ಬೊಪವರ್ ಫಾಸ್ಟ್ ಚಾರ್ಜಿಂಗ್‌ಗೆ ಬೆಂಬಲಿಸಲಿದೆ. ಜೊತೆಗೆ ಸಿಂಗಲ್‌ ಚಾರ್ಜ್‌ನಲ್ಲಿ, 24 ಗಂಟೆಗಳವರೆಗೆ ಬ್ಯಾಟರಿ ಸಾಮರ್ಥ್ಯವನ್ನು ನೀಡಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G ಮತ್ತು 4Gಯನ್ನು ಬೆಂಬಲಿಸಲಿದೆ. ಜೊತೆಗೆ ವೈ-ಫೈ, ಜಿಪಿಎಸ್, ಬ್ಲೂಟೂತ್ 5.0, ಮತ್ತು ಚಾರ್ಜಿಂಗ್‌ಗಾಗಿ ಯುಎಸ್‌ಬಿ ಟೈಪ್-ಸಿ ಪೋರ್ಟ್ ಅನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಮೊಟೊರೊಲಾ ರೇಜರ್ 5G ಸ್ಮಾರ್ಟ್‌ಫೋನ್‌ ಯುಎಸ್‌ನಲ್ಲಿ $1,399.99 (ಸುಮಾರು 1.02 ಲಕ್ಷ ರೂ.) ಬೆಲೆಯನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಬ್ಲಶ್ ಗೋಲ್ಡ್, ಪಾಲಿಶ್ಡ್ ಗ್ರ್ಯಾಫೈಟ್ ಮತ್ತು ಲಿಕ್ವಿಡ್ ಮರ್ಕ್ಯುರಿ ಎಂಬ ಮೂರು ಬಣ್ಣ ಆಯ್ಕೆಗಳಲ್ಲಿ ಲಭ್ಯವಾಗಲಿದೆ.

Best Mobiles in India

English summary
Motorola Razr 5G has been launched as a successor to last year's Motorola Razr foldable phone. The new foldable phone comes with a 6.2-inch plastic OLED main display and a 48-megapixel primary camera.to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X