ಶೀಘ್ರದಲ್ಲೇ ಭಾರತಕ್ಕೆ ಎಂಟ್ರಿ ನೀಡಲಿದೆ ಮೊಟೊರೊಲಾ G51 ಸ್ಮಾರ್ಟ್‌ಫೋನ್‌!

|

ಮೊಟೊರೊಲಾ ಕಂಪೆನಿ ತನ್ನ ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ಈಗಾಗಲೇ ತನ್ನ ಆಕರ್ಷಕ ಸ್ಮಾರ್ಟ್‌ಫೋನ್‌ಗಳಿಂದ ಮಾರುಕಟ್ಟೆಯಲ್ಲಿ ತನ್ನ ಸ್ಥಾನ ಭದ್ರಪಡಿಸಿಕೊಂಡಿದೆ. ಸದ್ಯ ಇದೀಗ ತನ್ನ ಹೊಸ ಮೊಟೊರೊಲಾ G51 ಸ್ಮಾರ್ಟ್‌ಫೋನ್‌ ಅನ್ನು ಭಾರತದಲ್ಲಿ ಬಿಡುಗಡೆ ಮಾಡಲು ಸಿದ್ಧತೆ ನಡೆಸಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಡಿಸೆಂಬರ್ 10 ರಂದು ಭಾರತದಲ್ಲಿ ಅನಾವರಣಗೊಳಿಸಲಿದೆ ಎಂದು ಹೇಳಲಾಗಿದೆ. ಇದು ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 480 SoC ಪ್ಲಸ್‌ ಪ್ರೊಸೆಸರ್ ಬಲವನ್ನು ಪಡೆದುಕೊಂಡಿದೆ.

ಮೊಟೊರೊಲಾ

ಹೌದು, ಮೊಟೊರೊಲಾ ಕಂಪೆನಿ ತನ್ನ ಹೊಸ ಮೊಟೊರೊಲಾ G51 ಸ್ಮಾರ್ಟ್‌ಫೋನ್‌ ಲಾಂಚ್‌ ಮಾಡಲು ವೇದಿಕೆ ಸಿದ್ಧ ಪಡಿಸಿದೆ. ಮೊಟೊರೊಲಾ ಕಂಪೆನಿ ಬಿಡುಗಡೆಯ ಬಗ್ಗೆ ಇನ್ನೂ ಅಧಿಕೃತವಾಗಿ ಸ್ಮಾರ್ಟ್‌ಫೋನ್ ಆಗಮನವನ್ನು ಘೋಷಿಸಿಲ್ಲ. ಆದರೆ ಆನ್‌ಲೈನ್‌ನಲ್ಲಿ ಬಿಡುಗಡೆ ದಿನಾಂಕದ ಬಗ್ಗೆ ಮಾಹಿತಿ ಸೋರಿಕೆಯಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 8GB ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯದೊಂದಿಗೆ ಬರಲಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ವಿಶೇಷತೆ ಹೊಂದಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಮೋಟೋ G51 ಸ್ಮಾರ್ಟ್‌ಫೋನ್‌ 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.8-ಇಂಚಿನ ಎಲ್‌ಸಿಡಿ ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಡಿಸ್‌ಪ್ಲೇ ಹೋಲ್‌ ಪಂಚ್‌ ಎಲ್‌ಸಿಡಿ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 20:9ರಚನೆಯ ಅನುಪಾತವನ್ನು ಪಡೆದಿದೆ. ಇದು 120 Hz ಮತ್ತು 240Hz ಟಚ್ ಸ್ಯಾಂಪ್ಲಿಂಗ್ ರೇಟ್‌ ಅನ್ನು ಹೊಂದಿರಲಿದೆ ಎನ್ನಲಾಗಿದೆ.

ಪ್ರೊಸೆಸರ್‌ ಯಾವುದು?

ಪ್ರೊಸೆಸರ್‌ ಯಾವುದು?

ಇನ್ನು ಸ್ಮಾರ್ಟ್‌ಫೋನ್ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 480+ SoC ಪ್ರೊಸೆಸರ್‌ ಬಲವನ್ನು ಪಡೆದಿದೆ. ಇದು ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ ಈ ಸ್ಮಾರ್ಟ್‌ಫೋನ್‌ 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿರಲಿದೆ ಎನ್ನಲಾಗಿದೆ. ಇದಲ್ಲದೆ ಮೈಕ್ರೊ SD ಕಾರ್ಡ್ ಬಳಸಿ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ವಿಶೇಷ

ಕ್ಯಾಮೆರಾ ವಿಶೇಷ

ಮೋಟೋ G51 ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್ ಅನ್ನು ಒಳಗೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ S5JKN1 ಸೆನ್ಸಾರ್‌ ಅನ್ನು ಒಳಗೊಂಡಿರುತ್ತದೆ. ಇನ್ನು ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಜೊತೆಗೆ ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಒಳಗೊಂಡಿದೆ. ಇದಲ್ಲದೆ 13 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಪಿ ಕ್ಯಾಮೆರಾವನ್ನು ಹೊಂದಿರಲಿದೆ ಎಂದು ಹೇಳಲಾಗಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಮೋಟೋ G51 ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 10W ವೇಗದ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಇದು Dolby Atmos ಬೆಂಬಲದೊಂದಿಗೆ ಬರುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G ಬೆಂಬಲ, Wi-Fi 5, ಬ್ಲೂಟೂತ್ v5.2, GPS, USB ಟೈಪ್-C ಪೋರ್ಟ್ ಮತ್ತು 3.5mm ಆಡಿಯೊ ಜ್ಯಾಕ್‌ ಅನ್ನು ಬೆಂಬಲಿಸಲಿದೆ. ಸ್ಮಾರ್ಟ್‌ಫೋನ್‌ನ ಹಿಂಭಾಗದಲ್ಲಿ ಫಿಂಗರ್‌ಪ್ರಿಂಟ್ ಸೆನ್ಸಾರ್‌ ಅನ್ನು ಕೂಡ ಹೊಂದಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಇನ್ನು ಭಾರತದಲ್ಲಿ ಮೋಟೋ G51 ಸ್ಮಾರ್ಟ್‌ಫೋನ್‌ 19,999ರೂ.ಬೆಲೆಗೆ ಬರಲಿದೆ ಎಂದು ಊಹಿಸಲಾಗಿದೆ. ಇನ್ನು ಚೀನಾದಲ್ಲಿ ಇದೆ ಸ್ಮಾರ್ಟ್‌ಫೋನ್‌ ಸಿಂಗಲ್‌ 8GB RAM + 128GB ಸ್ಟೋರೇಜ್ ರೂಪಾಂತರಕ್ಕಾಗಿ ಸ್ಮಾರ್ಟ್‌ಫೋನ್‌ನ ಬೆಲೆಯನ್ನು CNY 1,499 (ಸುಮಾರು ರೂ. 17,500) ನಲ್ಲಿ ನಿಗದಿಪಡಿಸಲಾಗಿದೆ. ಈ ಸ್ಮಾರ್ಟ್‌ಫೋನ್‌ ನೀಲಿ ಮತ್ತು ಬೂದು ಗ್ರೇಡಿಯಂಟ್ ವರ್ಣಗಳ ಕಲರ್‌ ಆಯ್ಕೆಗಳಲ್ಲಿ ಲಭ್ಯವಿದೆ.

ಮೋಟೋ E40

ಇದಲ್ಲದೆ ಇತ್ತೀಚಿಗೆ ಭಾರತದಲ್ಲಿ ಮೋಟೋ E40 ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿತ್ತು. ಇನ್ನು ಈ ಸ್ಮಾರ್ಟ್‌ಫೋನ್‌ 720x1,600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5-ಇಂಚಿನ ಮ್ಯಾಕ್ಸ್ ವಿಷನ್ ಹೆಚ್‌ಡಿ+ ಪ್ಲಸ್‌ ಡಿಸ್‌ಪ್ಲೇ ಹೊಂದಿದೆ. ಇದು ಯೂನಿಸೋಕ್ T700 SoC ಪ್ರೊಸೆಸರ್‌ ಸಾಮರ್ಥ್ಯವನ್ನು ಹೊಂದಿದ್ದು, ಆಂಡ್ರಾಯ್ಡ್‌ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಜೊತೆಗೆ 4GB RAM ಮತ್ತು 64GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಮೈಕ್ರೋ ಎಸ್‌ಡಿ ಕಾರ್ಡ್‌ ಬಳಸಿ ಸಂಗ್ರಹ ಸಾಮರ್ಥ್ಯವನ್ನು 1TB ವರೆಗೆ ವಿಸ್ತರಿಸಬಹುದಾಗಿದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಪ್ರಾಥಮಿಕ ಸೆನ್ಸಾರ್ ಜೊತೆಗೆ f/1.79 ಲೆನ್ಸ್ ಹೊಂದಿದೆ. ಜೊತೆಗೆ ಮೋಟೋ E40 ಸ್ಮಾರ್ಟ್‌ಫೋನ್‌ 5,000 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 10W ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಭಾರತದಲ್ಲಿ ಮೊಟೊರೊಲಾ ಮೋಟೋ E40 ಸ್ಮಾರ್ಟ್‌ಫೋನ್‌ 4GB RAM + 64GB ಸ್ಟೋರೇಜ್ ರೂಪಾಂತರಕ್ಕೆ 9,499.ರೂ ಬೆಲೆ ಹೊಂದಿದೆ.

Best Mobiles in India

English summary
Moto G51 was made official in the global market a couple of days ago along with the other Motorola smartphones.to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X