ಶೀಘ್ರದಲ್ಲೇ ಮೋಟೋದಿಂದ ಬರಲಿದೆ 200MP ಸೆನ್ಸಾರ್‌ ಕ್ಯಾಮೆರಾ ಸ್ಮಾರ್ಟ್‌ಫೋನ್‌!

|

ಮೊಟೊರೊಲಾ ಕಪೆನಿ ಟೆಕ್ ವಲಯದಲ್ಲಿ ತನ್ನ ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ಟೆಕ್ನಾಲಜಿ ಅಪ್ಡೇಟ್‌ ಆದಂತೆ ತನ್ನ ಸ್ಮಾರ್ಟ್‌ಫೋನ್‌ ಗಾತ್ರದಿಂದ ಹಿಡಿದು ಕ್ಯಾಮೆರಾ ಸೆಟಪ್‌ ಎಲ್ಲವನ್ನೂ ಕೂಡ ಹೊಸದಾಗಿ ನೀಡುತ್ತಾ ಬಂದಿದೆ. ಸದ್ಯ ಇದೀಗ ಸ್ಮಾರ್ಟ್‌ಫೋನ್‌ ಪ್ರಿಯರು ಕಣ್ಣರಳಿಸುವ ಸುದ್ದಿಯೊಂದು ಮೊಟೊರೊಲಾ ಕಂಪೆನಿಯಿಂದ ಬಂದಿದೆ. ಸದಾ ಹೊಸತನಕ್ಕೆ ಹೆಜ್ಜೆ ಹಾಕಿರುವ ಮೊಟೊರೊಲಾ ಕಂಪೆನಿ 200MP ಸೆನ್ಸಾರ್‌ ಕ್ಯಾಮೆರಾ ಒಳಗೊಂಡ ಫೋನ್‌ ಪರಿಚಯಿಸಲು ಮುಂದಾಗಿದೆ.

ಮೊಟೊರೊಲಾ

ಹೌದು, ಮೊಟೊರೊಲಾ ಕಂಪೆನಿ 200 ಮೆಗಾಪಿಕ್ಸೆಲ್ ಸೆನ್ಸಾರ್‌ ಕ್ಯಾಮೆರಾ ಒಳಗೊಂಡ ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಲು ಸಿದ್ಧತೆ ನಡೆಸಿದೆ. ಈಗಾಗಲೇ ಸ್ಯಾಮ್‌ಸಂಗ್ ತನ್ನ ಹೊಸ 200MP ISOCELL ಕ್ಯಾಮೆರಾ ಸೆನ್ಸಾರ್‌ ಅನ್ನು ಸೆಪ್ಟೆಂಬರ್‌ನಲ್ಲಿ ಪರಿಚಯಿಸಿದೆ. ಆದರೆ ಈ ಸೆನ್ಸಾರ್‌ ಅನ್ನು ಈಗ ಯಾವುದೇ ಸ್ಮಾರ್ಟ್‌ಫೋನ್ ಕಂಪನಿಯು ಬಳಸಿಲ್ಲ. ಆದರೆ ಇದೀಗ ಮೊಟೊರೊಲಾ ಕಂಪೆನಿ ಸ್ಯಾಮ್‌ಸಂಗ್‌ನ 200MP ISOCELL ಕ್ಯಾಮೆರಾ ಸೆನ್ಸಾರ್‌ ಬಳಸುವ ಮೊದಲ ಸ್ಮಾರ್ಟ್‌ಫೋನ್ ಕಂಪನಿಯಾಗಲಿದೆ ಎಂದು ಊಹಿಸಲಾಗಿದೆ. ಹಾಗಾದ್ರೆ 200 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿರುವ ಸ್ಮಾರ್ಟ್‌ಫೋನ್ ವಿಶೇಷತೆ ಹೇಗಿರಲಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಮೆಗಾಪಿಕ್ಸೆಲ್

ಟಿಪ್‌ಸ್ಟರ್ ಐಸ್ ಯೂನಿವರ್ಸ್ ಟ್ವಿಟ್ಟರ್‌ನಲ್ಲಿ ಮೊಟೊರೊಲಾ ಕಂಪೆನಿಯ ಬಗ್ಗೆ ಇಂತಹದೊಂದು ಸುದ್ದಿ ಹರಿದಾಡಿದೆ. 200 ಮೆಗಾಪಿಕ್ಸೆಲ್ ಸೆನ್ಸಾರ್‌ ಕ್ಯಾಮೆರಾ ಹೊಂದಿರುವ ಸ್ಮಾರ್ಟ್‌ಫೋನ್‌ ಅನ್ನು ಮೊಟೊರೊಲಾ ಬಿಡುಗಡೆ ಮಾಡಲಿದೆ ಎಂದು ಟ್ವಿಟರ್‌ ಪೋಸ್ಟ್ ಮಾಡಿದೆ. 200MP ಕ್ಯಾಮೆರಾ ಹೊಂದಿರುವ ಮೊಟೊರೊಲಾ ಸ್ಮಾರ್ಟ್‌ಫೋನ್‌ 2022ರ ಮಧ್ಯಭಾಗದಲ್ಲಿ ಬಿಡುಗಡಯಾಗುವ ಸಾದ್ಯತೆ ಇದೆ. ಮೊಟೊರೊಲಾ ಕಂಪೆನಿಯ ನಂತರ ಶಿಯೋಮಿ ಮತ್ತು ಸ್ಯಾಮ್‌ಸಂಗ್‌ ಕೂಡ 200MP ಕ್ಯಾಮೆರಾ ಫೋನ್‌ ಬಿಡುಗಡೆ ಮಾಡುವ ನಿರೀಕ್ಷೆಯಿದೆ.

ಸ್ಮಾರ್ಟ್‌ಫೋನ್‌

ಸಾಮಾನ್ಯವಾಗಿ ಸ್ಯಾಮ್‌ಸಂಗ್‌ನ ಹೊಸ ಸೆನ್ಸಾರ್‌ಗಳನ್ನು ಶಿಯೋಮಿ ಮೊದಲು ಅಳವಡಿಸಿಕೊಳ್ಳುತ್ತಿತ್ತು. ಆದರೆ ಇದೇ ಮೊದಲ ಬಾರಿಗೆ ಶಿಯೋಮಿಗಿಂತ ಮುಂಚಿತವಾಗಿ ಮೊಟೊರೊಲಾ ಹೆಜ್ಜೆ ಹಾಕಿದೆ. ಸದ್ಯ ಮುಂದಿನ ದಿನಗಳಲ್ಲಿ ಬಿಡುಗಡೆ ಆಗಲಿರುವ ಮೊಟೊರೊಲಾ ಸ್ಮಾರ್ಟ್‌ಫೋನ್‌ 50 ಮೆಗಾಪಿಕ್ಸೆಲ್ ಕ್ಯಾಮೆರಾಗಳೊಂದಿಗೆ ಬರುವ ನಿರೀಕ್ಷೆಯಿದೆ. ಆದ್ದರಿಂದ 200 ಮೆಗಾಪಿಕ್ಸೆಲ್ ಕ್ಯಾಮೆರಾ ಸೆನ್ಸಾರ್‌ ಫೋನ್‌ ನಿಮ್ಮ ಕೈ ಸೇರಬೇಕಾದರೆ 2022 ರವರೆಗೆ ಕಾಯಲೇಬೇಕು.

ಮೊಟೊರೊಲಾ

ಇದಲ್ಲದೆ ಮೊಟೊರೊಲಾ ಕಂಪೆನಿ ಕೆಲ ತಿಂಗಳ ಹಿಂದೆ ಭಾರತದಲ್ಲಿ ಮೊಟೊರೊಲಾ ಎಡ್ಜ್ 20 ಪ್ರೊ ಸ್ಮಾರ್ಟ್‌ಫೋನ್‌ ಪರಿಚಯಿಸಿದೆ. ಈ ಸ್ಮಾರ್ಟ್‌ಫೋನ್‌ 108ಮೆಗಾಪಿಕ್ಸೆಲ್‌ ಸೆನ್ಸಾರ್‌ ಕ್ಯಾಎರಾ ಹೊಂದಿದೆ. ಇನ್ನು ಮೊಟೊರೊಲಾ ಎಡ್ಜ್ 20 ಪ್ರೊ ಸ್ಮಾರ್ಟ್‌ಫೋನ್‌ 6.7-ಇಂಚಿನ ಫುಲ್-HD+ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ ಮ್ಯಾಕ್ಸ್ ವಿಷನ್ AMOLED ಡಿಸ್‌ಪ್ಲೇ ಆಗಿದ್ದು, 144Hz ರಿಫ್ರೆಶ್ ರೇಟ್‌ ಹೊಂದಿದೆ. ಇದು 576Hz ಟಚ್ ಸೆನ್ಸಾರ್‌ ಅನ್ನು ಹೊಂದಿದ್ದು, 20:9 ರಚನೆಯ ಅನುಪಾತವನ್ನು ಒಳಗೊಂಡಿದೆ. ಈ ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 870 SoC ಪ್ರೊಸೆಸರ್‌ ಹೊಂದಿದೆ. ಇದು ಆಂಡ್ರಾಯ್ಡ್ 11 ನಲ್ಲಿ ಮೈ UX ನೊಂದಿಗೆ ಕಾರ್ಯನಿರ್ವಹಿಸುತ್ತದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸೆನ್ಸಾರ್ f/1.9 ಲೆನ್ಸ್ ಹೊಂದಿದೆ.

ಮೊಟೊರೊಲಾ

ಇನ್ನು ಮೊಟೊರೊಲಾ ಎಡ್ಜ್ 20 ಪ್ರೊ ಸ್ಮಾರ್ಟ್‌ಫೋನ್‌ 4,500mAh ಬ್ಯಾಟರಿಯನ್ನು ಒದಗಿಸಿದ್ದು, 30W ಟರ್ಬೊಪವರ್ ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6, ಬ್ಲೂಟೂತ್ v5.1, GPS/ A-GPS, NFC ಮತ್ತು USB Type-C ಪೋರ್ಟ್ ಬೆಂಬಲಿಸಲಿದೆ. ಇದರ ಜೊತೆಗೆ ಪವರ್ ಬಟನ್ ಅಡಿಯಲ್ಲಿ ಸೈಡ್ ಮೌಂಟೆಡ್ ಫಿಂಗರ್ ಪ್ರಿಂಟ್ ಸೆನ್ಸಾರ್ ಅನ್ನು ಫೋನ್ ಹೊಂದಿದೆ. ಭಾರತದಲ್ಲಿ ಮೊಟೊರೊಲಾ ಎಡ್ಜ್ 20 ಪ್ರೊ ಸ್ಮಾರ್ಟ್‌ಫೋನ್‌ ಏಕೈಕ 8GB RAM + 128GB ಸ್ಟೋರೇಜ್ ರೂಪಾಂತರಕ್ಕೆ 36,999ರೂ ಬೆಲೆ ಹೊಂದಿದೆ. ಇನ್ನು ಈ ಫೋನ್ ಮಿಡ್‌ನೈಟ್ ಸ್ಕೈ ಮತ್ತು ಐರಿಡೆಸೆಂಟ್ ಕ್ಲೌಡ್ ಕಲರ್ ಆಯ್ಕೆಗಳಲ್ಲಿ ಲಭ್ಯವಿದೆ.

Best Mobiles in India

English summary
Motorola speculated to launch smartphone with 200-megapixel camera in 2022.to know more visit to kannada.gizbot.com.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X