ಮೊಟೊರೊಲಾ ಸಂಸ್ಥೆಯಿಂದ ನಾಲ್ಕು ಹೊಸ ಸ್ಮಾರ್ಟ್‌ಫೋನ್‌ ಬಿಡುಗಡೆ! ವಿಶೇಷತೆ ಏನು?

|

ಜನಪ್ರಿಯ ಸ್ಮಾರ್ಟ್‌ಫೋನ್‌ ತಯಾರಕ ಮೋಟೋರೊಲಾ ಕಂಪೆನಿ ತನ್ನ ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ಈಗಾಗಲೇ ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ಗಳನ್ನ ಪರಿಚಯಿಸಿರುವ ಮೊಟೊರೊಲಾ ಕಂಪೆನಿ ಇದೀಗ ಹೊಸ ಮೋಟೋ G ಸ್ಟೈಲಸ್ (2021), ಮೋಟೋ G ಪವರ್ (2021), ಮೋಟೋ G ಪ್ಲೇ (2021), ಮತ್ತು ಮೊಟೊರೊಲಾ ಒನ್ 5G ಏಸ್ ಅನ್ನು ಬಿಡುಗಡೆ ಮಾಡಿದೆ. ಹೊಸ ವರ್ಷದ ಪ್ರಯುಕ್ತ ರಿಫ್ರೆಶ್ ಮಾಡೆಲ್‌ಗಳಾಗಿ ಬಿಡುಗಡೆ ಮಾಡಲಾಗಿದೆ.

ಮೊಟೊರೊಲಾ

ಹೌದು, ಮೊಟೊರೊಲಾ ಕಂಪೆನಿ ತನ್ನ ಹೊಸ ನಾಲ್ಕು ಸ್ಮಾರ್ಟ್‌ಫೋನ್‌ಗಳನ್ನ ಬಿಡುಗಡೆ ಮಾಡಿದೆ. ಈ ನಾಲ್ಕು ಸ್ಮಾರ್ಟ್‌ಫೋನ್‌ಗಳು ಆಂಡ್ರಾಯ್ಡ್ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇವುಗಳಲ್ಲಿ ಮೊಟೊರೊಲಾ ಮೋಟೋ G ಸ್ಟೈಲಸ್ (2021) ನಲ್ಲಿ ಎರಡು ದಿನಗಳ ಬ್ಯಾಟರಿ ಮತ್ತು ಮೋಟೋ G ಪವರ್ (2021) ಮತ್ತು ಮೋಟೋ G ಪ್ಲೇ (2021) ನಲ್ಲಿ ಮೂರು ದಿನಗಳವರೆಗೆ ಬ್ಯಾಟರಿ ಸಾಮರ್ಥ್ಯವನ್ನು ಪಡೆದುಕೊಂಡಿವೆ ಎನ್ನಲಾಗಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ವಿಶೇಷತೆ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಮೋಟೋ G ಸ್ಟೈಲಸ್ (2021)

ಮೋಟೋ G ಸ್ಟೈಲಸ್ (2021)

ಮೋಟೋ G ಸ್ಟೈಲಸ್ (2021) ಸ್ಮಾರ್ಟ್‌ಫೋನ್‌ 1,080x2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.8 ಇಂಚಿನ ಫುಲ್ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 388PP ಪಿಕ್ಸೆಲ್ ಸಾಂದ್ರತೆ ಮತ್ತು 20: 9 ರಚನೆಯ ಅನುಪಾತವನ್ನು ಹೊಂದಿದೆ. ಇದು ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 678 SoC ಪ್ರೊಸೆಸರ್‌ ಅನ್ನು ಹೊಂದಿದ್ದು, ಆಂಡ್ರಾಯ್ಡ್‌ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೇಯೆ 4GB RAM ಮತ್ತು 128GB ಸಂಗ್ರಹ ಸಾಮರ್ಥ್ಯವನ್ನು ಹೊಂದಿದೆ. ಇದರೊಂದಿಗೆ ಮೈಕ್ರೋ SD ಕಾರ್ಡ್ ಮೂಲಕ 512GB ವರೆಗೆ ವಿಸ್ತರಿಸಬಹುದಾಗಿದೆ. ಇದು ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದ್ದು, ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಇದು 4,000mAh ಬ್ಯಾಟರಿ ಹೊಂದಿದ್ದು,10W ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ.

ಮೋಟೋ G ಪವರ್ (2021)

ಮೋಟೋ G ಪವರ್ (2021)

ಮೋಟೋ G ಪವರ್ (2021) 6.6-ಇಂಚಿನ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇದು ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 662 SoC ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್‌ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೇಯೇ 4GB RAM ಮತ್ತು 64GB ಇಂಟರ್‌ ಸ್ಟೋರೇಜ್‌ ಅನ್ನು ಹೊಂದಿದೆ. ಇದಲ್ಲದೆ ಮೈಕ್ರೊ ಎಸ್ಡಿ ಕಾರ್ಡ್ ಮೂಲಕ 512GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಒಳಗೊಂಡಿದೆ, ಇದರಲ್ಲಿ ಮುಖ್ಯ 48 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಶೂಟರ್, ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸಿಯಲ್ ಡೆಪ್ತ್‌ ಸೆನ್ಸಾರ್‌ ಅನ್ನು ಹೊಂದಿದೆ. ಜೊತೆಗೆ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸೆಲ್ಫಿ ಕ್ಯಾಮೆರಾ ಹೊಂದಿದೆ. ಇದು 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 15W ಫಾಸ್ಟ್‌ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ.

ಮೋಟೋ G ಪ್ಲೇ (2021)

ಮೋಟೋ G ಪ್ಲೇ (2021)

ಮೋಟೋ G ಪ್ಲೇ (2021) ಸ್ಮಾರ್ಟ್‌ಫೋನ್‌ 6.5 ಇಂಚಿನ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇದು ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 460 SoC ಪ್ರೊಸೆಸರ್‌ ಅನ್ನು ಹೊಂದಿದೆ. ಹಾಗೇಯೆ 3GB RAM ಮತ್ತು 32 GB ಸಂಗ್ರಹ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಮೈಕ್ರೊ ಎಸ್ಡಿ ಕಾರ್ಡ್ ಮೂಲಕ ಸಂಗ್ರಹ ಸಾಮರ್ಥ್ಯವನ್ನು 512GB ವರೆಗೆ ವಿಸ್ತರಿಸಬಹುದಾಗಿದೆ. ಇದು ಡ್ಯುಯೆಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್‌ ಸೆನ್ಸಾರ್‌ ಅನ್ನು ಒಳಗೊಂಡಿದೆ. ಇದು 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 10W ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ.

ಮೊಟೊರೊಲಾ ಒನ್ 5G ಏಸ್

ಮೊಟೊರೊಲಾ ಒನ್ 5G ಏಸ್

ಮೊಟೊರೊಲಾ ಒನ್ 5G ಏಸ್ ಸ್ಮಾರ್ಟ್‌ಫೋನ್‌ 6.7-ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಕ್ವಾಲ್ಕಮ್‌ ಸ್ನಾಪ್‌ಡ್ರಾಗನ್ 750G ಪ್ರೊಸೆಸರ್‌ ಅನ್ನು ಒಳಗೊಂಡಿದೆ. ಇದು ಆಂಡ್ರಾಯ್ಡ್‌ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೇಯೆ 6GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಮೈಕ್ರೊ ಎಸ್‌ಡಿ ಕಾರ್ಡ್ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ. ಇದು ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಇದು 5,000mAh ಸಾಮರ್ಥ್ಯದ ಬ್ಯಾಟರಿ ಹೊಂದಿದ್ದು, 15W ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಮೊಟೊ G ಸ್ಟೈಲಸ್ (2021) ಏಕೈಕ 4GB + 128GB ಶೇಖರಣಾ ರೂಪಾಂತರಕ್ಕೆ $ 299 (ಸುಮಾರು 22,000 ರೂ.) ಬೆಲೆಯಿದೆ. ಇದನ್ನು ಅರೋರಾ ಬ್ಲ್ಯಾಕ್ ಮತ್ತು ಅರೋರಾ ವೈಟ್ ಬಣ್ಣದ ಆಯ್ಕೆಗಳಲ್ಲಿ ನೀಡಲಾಗುತ್ತದೆ. ಮೋಟೋ G ಪವರ್ (2021) ಅನ್ನು 3GB + 32 GB ಶೇಖರಣಾ ರೂಪಾಂತರದಲ್ಲಿ ನೀಡಲಾಗಿದ್ದು, ಇದರ ಬೆಲೆ $ 199.99 (ಸುಮಾರು ರೂ. 14,700) ಮತ್ತು 4GB + 64GB ಶೇಖರಣಾ ರೂಪಾಂತರವು $ 249 (ಸುಮಾರು ರೂ. 18,300). ಫೋನ್ ಒಂದೇ ಫ್ಲ್ಯಾಶ್ ಗ್ರೇ ಕಲರ್ ಆಯ್ಕೆಯನ್ನು ಹೊಂದಿದೆ. ಮೊಟೊ G ಪ್ಲೇ (2021) ಏಕೈಕ 3GB + 32 GB ಶೇಖರಣಾ ರೂಪಾಂತರಕ್ಕೆ $ 169.99 (ಸರಿಸುಮಾರು ರೂ. 12,500) ಮತ್ತು ಮಿಸ್ಟಿ ಬ್ಲೂ ಕಲರ್ ಆಯ್ಕೆಯಲ್ಲಿ ಬರುತ್ತದೆ. ಕೊನೆಯದಾಗಿ, ಮೊಟೊರೊಲಾ ಒನ್ 5G ಏಸ್‌ನ ಬೆಲೆ 6GB + 128 GB ಶೇಖರಣಾ ರೂಪಾಂತರಕ್ಕೆ $ 399.99 ಬೆಲೆ ಹೊಂದಿದೆ.

Best Mobiles in India

English summary
Moto G Stylus (2021) is powered by the Snapdragon 678 SoC and comes in a single 4GB + 128GB configuration.to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X