ವಿಶ್ವದ ಮೊದಲ 200MP ಸೆನ್ಸಾರ್‌ ಕ್ಯಾಮೆರಾ ಸ್ಮಾರ್ಟ್‌ಫೋನ್‌ ಬಿಡುಗಡೆ!

|

ಟೆಕ್‌ ವಲಯದಲ್ಲಿ ಮೊಟೊರೊಲಾ ಕಂಪೆನಿ ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳಿಂದ ಗುರುತಿಸಿಕೊಂಡಿದೆ. ತನ್ನ ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳ ಮೂಲಕ ಸ್ಮಾರ್ಟ್‌ಫೋನ್‌ ಪ್ರಿಯರ ಗಮನ ಸೆಳೆದಿದೆ. ಸದ್ಯ ಇದೀಗ ತನ್ನ ಬಹುನಿರೀಕ್ಷಿತ ಮೊಟೊ X30ಪ್ರೊ ಸ್ಮಾರ್ಟ್‌ಫೋನ್‌ ಲಾಂಚ್‌ ಮಾಡಿದೆ. ಈ ಸ್ಮಾರ್ಟ್‌ಫೋನ್‌ 144Hz ರಿಫ್ರೆಶ್ ರೇಟ್‌ ಬೆಂಬಲಿಸುವ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 8+ Gen 1 SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದೆ.

ಮೊಟೊರೊಲಾ

ಹೌದು, ಮೊಟೊರೊಲಾ ಕಂಪೆನಿ ತನ್ನ ಹೊಸ ಮೊಟೊ X30ಪ್ರೊ ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಜೊತೆಗೆ 4,500mAh ಸಾಮರ್ಥ್ಯ ಬ್ಯಾಟರಿಯನ್ನು ಹೊಂದಿದ್ದು, 125W ವೇಗದ ಚಾರ್ಜಿಂಗ್ ಬೆಂಬಲಿಸಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಕೇವಲ 7 ನಿಮಿಷಗಳಲ್ಲಿ ಬ್ಯಾಟರಿಯನ್ನು 50% ಚಾರ್ಜಿಂಗ್‌ ಮಾಡಲಿದೆ ಎಂದು ಹೇಳಲಾಗಿದೆ. ಹಾಗಾದ್ರೆ ಈ ಸ್ಮಾರ್ಟ್‌ಫೋನ್‌ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಮೊಟೊ X30 ಪ್ರೊ ಸ್ಮಾರ್ಟ್‌ಫೋನ್‌ 6.73 ಇಂಚಿನ ಫುಲ್‌ HD+ pOLED ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 144Hz ರಿಫ್ರೆಶ್ ರೇಟ್‌ ಹೊಂದಿದ್ದು, 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದಿದೆ. ಇನ್ನು ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಹೊಂದಿದೆ. ಜೊತೆಗೆ ಇದು ಇನ್-ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸ್ಕ್ಯಾನರ್‌ ಅನ್ನು ಕೂಡ ಒಳಗೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ನ ಸ್ಕ್ರೀನ್‌ ಎಲ್ಲಾ ಕಡೆಗಳಲ್ಲಿ ಕನಿಷ್ಠ ಬೆಜೆಲ್‌ಗಳಿಂದ ಆವೃತವಾಗಿದೆ.

ಪ್ರೊಸೆಸರ್‌ ಬಲ ಯಾವುದು?

ಪ್ರೊಸೆಸರ್‌ ಬಲ ಯಾವುದು?

ಮೊಟೊ X30 ಪ್ರೊ ಸ್ಮಾರ್ಟ್‌ಫೋನ್‌ ಸ್ನಾಪ್‌ಡ್ರಾಗನ್‌ 8+ Gen 1 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು ಆಂಡ್ರಾಯ್ಡ್ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM + 128GB, 12GB RAM + 256GB ಹಾಗೂ 12GB RAM ಮತ್ತು 512GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯದ ವೇರಿಯೆಂಟ್‌ ಆಯ್ಕೆಗಳಲ್ಲಿ ಬರಲಿದೆ. ಈ ಸ್ಮಾರ್ಟ್‌ಫೋನ್‌ ಮೆಮೊರಿ ಕಾರ್ಡ್‌ ಅನ್ನು ಬೆಂಬಲಿಸುವುದಿಲ್ಲ ಎನ್ನಲಾಗಿದೆ.

ಕ್ಯಾಮೆರಾ ಸೆಟ್‌ಅಪ್‌ ಎಷ್ಟಿದೆ?

ಕ್ಯಾಮೆರಾ ಸೆಟ್‌ಅಪ್‌ ಎಷ್ಟಿದೆ?

ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 200 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಎರಡನೇ ಕ್ಯಾಮೆರಾ 50 ಮೆಗಾಪಿಕ್ಸೆಲ್ ಅಲ್ಟ್ರಾ ವೈಡ್ ಆಂಗಲ್ ಲೆನ್ಸ್ ಹೊಂದಿದೆ. ಇನ್ನು ಮೂರನೇ ಕ್ಯಾಮೆರಾ 12 ಮೆಗಾಪಿಕ್ಸೆಲ್ ಟೆಲಿಫೋಟೋ ಲೆನ್ಸ್‌ ಅನ್ನು ಒಳಗೊಂಡಿದೆ. ಇದಲ್ಲದೆ 60 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಸಾಮರ್ಥ್ಯ ಎಷ್ಟಿದೆ? ಇತರೆ ಫೀಚರ್ಸ್‌ಗಳೇನು?

ಬ್ಯಾಟರಿ ಸಾಮರ್ಥ್ಯ ಎಷ್ಟಿದೆ? ಇತರೆ ಫೀಚರ್ಸ್‌ಗಳೇನು?

ಮೊಟೊ X30 ಪ್ರೊ ಸ್ಮಾರ್ಟ್‌ಫೋನ್‌ 125W ವೇಗದ ಚಾರ್ಜಿಂಗ್ ಬೆಂಬಲಿಸುವ 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು ಕೇವಲ 7 ನಿಮಿಷಗಳಲ್ಲಿ ಬ್ಯಾಟರಿಯನ್ನು 50% ಚಾರ್ಜ್ ಮಾಡಲಿದೆ. ಅಲ್ಲದೆ 100% ಚಾರ್ಜ್‌ ಅನ್ನು ಕೇವಲ 19 ನಿಮಿಷಗಳಲ್ಲಿ ಪೂರ್ಣಗೊಳಿಸಲಿದೆ ಎಂದು ಮೊಟೊರೊಲಾ ಕಂಪೆನಿ ಹೇಳಿಕೊಂಡಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್‌ 50W ವಾಯರ್‌ಲೆಸ್ ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ಬ್ಲೂಟೂತ್‌, ವೈಫೈ ಅನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಮೊಟೊ X30 ಪ್ರೊ ಸ್ಮಾರ್ಟ್‌ಫೋನ್‌ ಬೇಸ್‌ ಮಾಡೆಲ್‌ 8GB RAM + 128GB ಸ್ಟೋರೇಜ್ ಮಾದರಿ ಬೆಲೆ CNY 3,699 (ಸುಮಾರು 43,600ರೂ) ಆಗಿದೆ. ಇದರ 12GB RAM + 256GB ಸ್ಟೋರೇಜ್ ರೂಪಾಂತರದ ಬೆಲೆ CNY 4,199 (ಸುಮಾರು 49,500ರೂ) ಆಗಿದ್ದು, ಇದರ ಟಾಪ್‌ ಎಂಡ್‌ ಮಾಡೆಲ್‌ 12GB + 512GB ಸ್ಟೋರೇಜ್ ರೂಪಾಂತರದ ಆಯ್ಕೆಯು CNY 4,499 (ಅಂದಾಜು 53,000ರೂ) ಬೆಲೆ ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಭಾರತಕ್ಕೆ ಯಾವಾಗ ಆಗಮಿಸಲಿದೆ ಎಂಬುದರ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.

Best Mobiles in India

English summary
Motorola X30 Pro comes with a curved rear panel design along with a centre-aligned punch hole camera at the front.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X